ಮಹಾರಾಷ್ಟ್ರ ಘಟ್ಟಪ್ರದೇಶದಲ್ಲಿ ಮಳೆ ಅಬ್ಬರ: 2 ತಿಂಗಳಿನಿಂದ ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು – Kannada News | Krishna River Recovers as Heavy Rain in Maharashtra Ghats Triggers 15000 Cusecs Inflow
ಚಿಕ್ಕೋಡಿ, ಜುಲೈ 4: ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ನದಿಗೆ ಬರೋಬ್ಬರಿ 15 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ರೈತರು ಮತ್ತು ಸಾರ್ವಜನಿಕರಲ್ಲಿ ಸಂತಸ ಮನೆ ಮಾಡಿದೆ. ಕೃಷ್ಣಾ ನದಿಯು ದಕ್ಷಿಣ ಕರ್ನಾಟಕದ ಜೀವನಾಡಿಗಳಲ್ಲಿ ಒಂದಾಗಿದೆ. ನದಿಯಲ್ಲಿ ನೀರಿಲ್ಲದೆ ನೀರಿನ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿತ್ತು. ಇದೀಗ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ…