‘ನೀವೀಗಾಗಲೇ ಬೆತ್ತಲಾಗಿದ್ದೀರಿ, ಬಟ್ಟೆ ಬಿಚ್ಚಿದ್ಯಾಕೆ?’ – ಕಾಂಗ್ರೆಸ್​ಗೆ ಪ್ರಧಾನಿ ಮೋದಿ ತರಾಟೆ – Kannada News | PM Narendra Modi slams congress party’s shirtless protest, says you are already naked

ನವದೆಹಲಿ, ಫೆಬ್ರುವರಿ 22: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಕೆಲ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್​ನ ಕೊಳಕು ಮತ್ತು ಬೆತ್ತಲೆ ರಾಜಕಾರಣ, ಹಾಗೂ ಆ ಪಕ್ಷ ತಾತ್ವಿಕವಾಗಿ ಅದೆಷ್ಟು ದಿವಾಳಿ ಎದ್ದಿದೆ ಎಂಬುದನ್ನು ಈ ಪ್ರತಿಭಟನೆ ಸಾಕ್ಷ್ಯವಾಗಿದೆ ಎಂದು ಪ್ರಧಾನಿಗಳು ವಿಷಾದಿಸಿದ್ದಾರೆ. ದೆಹಲಿ ಸಮೀಪದ ಮೀರತ್ ನಗರದಲ್ಲಿ ಇಂದು ನಡೆದ ಮೆಟ್ರೋ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

‘ನೀವು ಈಗಾಗಲೇ ಬೆತ್ತಲಾಗಿದ್ದೀರಿ. ಆದರೂ ಕೂಡ ಬಟ್ಟೆ ಕಳಚುವ ಅಗತ್ಯ ಏನಿತ್ತು?’ ಎಂದು ಪ್ರಶ್ನಿಸಿದ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ತನ್ನ ದೇಶವನ್ನೇ ಹಳಿಯುವ ಕೆಲಸದಲ್ಲಿ ಮುಳುಗಿಹೋಗಿದೆ ಎಂದಿದ್ದಾರೆ.

ಇದನ್ನೂ ಓದಿ: ಭಾರತದ ಅತಿವೇಗದ ಮೆಟ್ರೋ ಮತ್ತು ನಮೋ ಭಾರತ್ ಕಾರಿಡಾರ್ ಉದ್ಘಾಟಿಸಿದ ಪಿಎಂ ಮೋದಿ

‘ಭಾರತದ ಅತ್ಯಂತ ಹಳೆಯ ಪಕ್ಷ ತಾತ್ವಿಕವಾಗಿ ದಿವಾಳಿ ಎದ್ದಿರುವ ಸ್ಥಿತಿಗೆ ಇಳಿದಿರುವುದನ್ನು ಕಾಂಗ್ರೆಸ್ ನಾಯಕರು ತೋರಿಸಿದ್ದಾರೆ. ತನ್ನದೇ ದೇಶವನ್ನು ಹೀಗಳೆಯಲು ಕಾಂಗ್ರೆಸ್ ನಿರತವಾಗಿದೆ. ಭಾರತದ ಯಶಸ್ಸನ್ನು ಸಹಿಸಿಕೊಳ್ಳಲು ಕೆಲ ರಾಜಕೀಯ ಪಕ್ಷಗಳಿಗೆ ಆಗುತ್ತಿಲ್ಲ. ವಿಶ್ವದ ಅತಿದೊಡ್ಡ ಎಐ ಸಮಾವೇಶ ನಡೆಯುತ್ತಿದ್ದರೆ, ಕಾಂಗ್ರೆಸ್ ಹಾಗೂ ಅದರ ಪಟಾಲಂನವರು ಏನು ಮಾಡುತ್ತಿದ್ದರು? ಜಾಗತಿಕ ಕಾರ್ಯಕ್ರಮವನ್ನು ಕೊಳಕು ರಾಜಕೀಯಕ್ಕೆ ಬಳಸಿದ್ದಾರೆ’ ಎಂದು ಪ್ರಧಾನಿಗಳು ಸಿಡಿಗುಟ್ಟಿದ್ದಾರೆ.

‘ಕಾಂಗ್ರೆಸ್ ನಾಯಕರು ನನ್ನನ್ನು ಧ್ವೇಷಿಸುತ್ತಾರೆ. ನನಗೆ ಸಮಾಧಿ ಕಟ್ಟಲು ಬಯಸುತ್ತಾರೆ. ನನ್ನ ತಾಯಿಯನ್ನೂ ಅವಮಾನಿಸಲು ಹಿಂದೆ ಮುಂದೆ ನೋಡೋದಿಲ್ಲ. ಆದರೆ, ಅದು ಎಐ ಜಾಗತಿಕ ಶೃಂಗಸಭೆಯಾಗಿತ್ತೇ ವಿನಃ ಬಿಜೆಪಿ ಕಾರ್ಯಕ್ರಮವಾಗಿರಲಿಲ್ಲ. ಅಲ್ಲಿ ಯಾವ ಬಿಜೆಪಿ ನಾಯಕನೂ ಇರಲಿಲ್ಲ ಎಂಬುದು ಕಾಂಗ್ರೆಸ್​ಗೆ ತಿಳಿದಿರಬೇಕಿತ್ತು. ಅದು ರಾಷ್ಟ್ರೀಯ ಕೆಲಸವಾಗಿತ್ತು. ಆ ಮಹತ್ವದ ದಿನದ ಘನತೆಗೆ ಕಾಂಗ್ರೆಸ್ ಕುಂದು ತಂದಿತ್ತು. ಕಾಂಗ್ರೆಸ್ಸಿನ ಈ ಭ್ರಷ್ಟ ನೀತಿಯನ್ನು ಇಡೀ ದೇಶವೇ ಖಂಡಿಸುತ್ತಿದೆ’ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಂಟು ಮಂದಿ ಶಂಕಿತ ಉಗ್ರರ ಬಂಧನ; ಗಾರ್ಮೆಂಟ್ಸ್ ಫ್ಯಾಕ್ಟರಿ ಮತ್ತಿತರೆಡೆಯಲ್ಲಿ ಕೆಲಸ ಮಾಡುತ್ತಿದ್ದವರಿವರು

ಕೆಲ ದಿನಗಳ ಹಿಂದೆ ಭಾರತ್ ಮಂಟಪಂನಲ್ಲಿ ನಡೆಯುತ್ತಿದ್ದ ಎಐ ಶೃಂಗಸಭೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸಿನ 10 ಮಂದಿ ನಾಯಕರು ಏಕಾಏಕಿಯಾಗಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಮೋದಿ, ಟ್ರಂಪ್ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಘಟನೆಯನ್ನು ಕೆಲ ವಿಪಕ್ಷಗಳ ನಾಯಕರೇ ಖಂಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ – Kannada News | Mysuru top cop bans usage of helium gas to fill balloons

ಮೈಸೂರು, (ಫೆಬ್ರವರಿ 22): ಸಾರ್ವಜನಿಕರ ಜೀವ–ಆಸ್ತಿಗೆ ಅಪಾಯ ಉಂಟುಮಾಡುವ ಸಾಧ್ಯತೆಗಳನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ, ಮೈಸೂರು (Mysuru) ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ (helium balloons) ತುಂಬುವುದು, ಮಾರಾಟ ಮಾಡುವುದು, ಸಂಗ್ರಹ–ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS-2023 ಸೆಕ್ಷನ್ 152 ಅಡಿಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

ಇನ್ನು ಈ ಬಗ್ಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್  ಪ್ರತಿಕ್ರಿಯಿಸಿದ್ದು, ಬಹುತೇಕ ಬಲೂನ್ ಮಾರಾಟಗಾರರು ‘ಹೀಲಿಯಂ’ ಹೆಸರಿನಲ್ಲಿ ಅಪಾಯಕಾರಿ ಅನಿಲ ಬಳಸುತ್ತಾರೆ. ಎಷ್ಟು ಪ್ರಮಾಣದಲ್ಲಿ, ಹೇಗೆ ಬಳಸಬೇಕು ಅನ್ನೋ ತಿಳುವಳಿಕೆ ಅವರಿಗೆ ಇಲ್ಲ. ಅದರಿಂದಲೇ ಜನರಿಗೆ ಅಪಾಯ. ಹೀಗಾಗಿ ಹೀಲಿಯಂ ಬಲೂನ್ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಬಹಿರಂಗ

ಆದೇಶದ ಮುಖ್ಯ ಅಂಶಗಳು

  • ಹಬ್ಬ–ಜಾತ್ರೆಗಳು, ಪ್ರವಾಸಿ ಕೇಂದ್ರಗಳು, ಜನಸಂದಣಿ ಪ್ರದೇಶಗಳು, ಸಾರ್ವಜನಿಕ ಸಮಾರಂಭಗಳಲ್ಲಿ ಹೀಲಿಯಂ ಬಳಸಿ ಬಲೂನ್ ತುಂಬುವುದು/ಮಾರಾಟ ಸಂಪೂರ್ಣ ನಿಷೇಧ.
  • ಪ್ರಮಾಣಿತ ಸುರಕ್ಷತಾ ವಿಧಾನಗಳಿಲ್ಲದೆ ಹೀಲಿಯಂ ಸಿಲಿಂಡರ್ ಸಂಗ್ರಹ–ಸಾಗಣೆ–ಬಳಕೆ–ಮಾರಾಟ ಮಾಡಿದರೆ ಕಾನೂನು ಕ್ರಮ.
  • ವೈದ್ಯಕೀಯ ಹಾಗೂ ವೈಜ್ಞಾನಿಕ ಬಳಕೆಗಳಿಗೆ ನಿರ್ಬಂಧ ಇಲ್ಲ.
  • ಸಭೆ–ಸಮಾರಂಭಗಳಲ್ಲಿ ಮುಂಚಿತ ಅನುಮತಿ ಪಡೆದು ಮಾತ್ರ ಹೀಲಿಯಂ ಬಳಕೆ ಸಾಧ್ಯ.
  • ಆದೇಶ ಉಲ್ಲಂಘಿಸಿದರೆ ಪ್ರಕರಣ ದಾಖಲು ಮಾಡಿ ಕಟ್ಟುನಿಟ್ಟಿನ ಕ್ರಮಕ್ಕೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ.

ಏಕೆ ಅಪಾಯಕಾರಿ?

ಹೀಲಿಯಂ ದಹನಶೀಲವಲ್ಲ. ಆದರೆ ಅತ್ಯಧಿಕ ಒತ್ತಡದ ಸಿಲಿಂಡರ್‌ಗಳು, ಕಳಪೆ ವಾಲ್ವ್‌ಗಳು, ಅಪ್ರಮಾಣಿತ ಸಂಗ್ರಹ–ಬಳಕೆ ಸಿಲಿಂಡರ್ ಸ್ಫೋಟಕ್ಕೆ ಕಾರಣವಾಗಬಹುದು. ಜನಸಂದಣಿ ಪ್ರದೇಶಗಳಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದರೆ ಬಹಳ ಜನರಿಗೆ ಜೀವಾಪಾಯವಾಗುತ್ತದೆ.

ಜನರಿಗೆ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಅಪ್ರಮಾಣಿತ ಹೀಲಿಯಂ ಅಥವಾ ಅನಿಲ ಬಳಕೆ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ. ಆಯೋಜಕರು ಅನುಮತಿ ಸುರಕ್ಷತಾ ಪ್ರಮಾಣಪತ್ರ ಇಲ್ಲದೆ ಹೀಲಿಯಂ ಬಳಕೆ ಮಾಡಿಸಬಾರದು. ಪೋಷಕರು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ‌ ನೀಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಘಟನೆ ಹಿನ್ನೆಲೆ

ಡಿಸೆಂಬರ್ 25 2025ರಂದು ಮೈಸೂರು ಅರಮನೆ ಸಮೀಪದ ಜಯಮಾರ್ತಾಂಡ ದ್ವಾರದ ಬಳಿ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆ ನಡೆದಿತ್ತು. ಅಷ್ಟೇ ಅಲ್ಲ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿದ್ದವು. ಅಂದು ಗುರುವಾರ ರಾತ್ರಿ ಬಲೂನ್ ಮಾರಾಟಗಾರ 40 ವರ್ಷದ ಸಲೀಂ ಕೈಯಲ್ಲಿದ್ದ ಹೀಲಿಯಂ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ 42 ವರ್ಷದ ಮಂಜುಳಾ ಹಾಗೂ ಲಕ್ಷ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿತ್ತು. ಕೊಟ್ರೇಶ್, ಶಹನಾ ಷಬ್ಬೀರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು‌.

ಘಟನೆ ನಂತರ ಸ್ಪೋಟ ಆಕಸ್ಮಿಕವೇ ಅಥವಾ ಉದ್ದೇಶಿತವೇ ಎಂಬ ಬಗ್ಗೆ ತನಿಖೆ ನಡೆದಿತ್ತು. ಸಾಮಾನ್ಯವಾಗಿ ಮೂವರು ಸೇರಿ ಬಲೂನ್ ಮಾರಾಟಕ್ಕೆ ಬರುತ್ತಿದ್ದರೆ, ಆ ದಿನ ಸಲೀಂ ಒಬ್ಬನೇ ಬಂದಿದ್ದು ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿತ್ತು. ಪ್ರಕರಣದ ಗಂಭೀರತೆಯನ್ನು ಗಮನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಮಾಹಿತಿ ಸಂಗ್ರಹಿಸಿತ್ತು. ದೇವರಾಜ ಠಾಣೆ ಪೊಲೀಸರು ಗಾಯಾಳು ಕೊಟ್ರೇಶ್ ನೀಡಿದ ಮಾಹಿತಿ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:15 pm, Sun, 22 February 26

Source link

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ – Kannada News | Optical Illusion: Can you find the rabbit in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ,Image Credit source: Social Media

ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನೂರಕ್ಕೆ ನೂರರಷ್ಟು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಮೊಲವನ್ನು ಕಂಡು ಹಿಡಿಯಬೇಕು. 5 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?

ಈ ಮೋಜಿನ ಆಟಗಳ ಮೂಲಕ ಕಣ್ಣುಗಳು ಮತ್ತು ಬುದ್ಧಿಯೂ ಎಷ್ಟು ಚುರುಕಾಗಿದೆ ಎಂದು ತಿಳಿಯಲು ಸಾಧ್ಯ. ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಕಾಣಿಸುವುದೇ ಸೈಕಲ್. ಇಲ್ಲಿರುವ ಮರದ ಪಕ್ಕದಲ್ಲಿ ಸೈಕಲ್ ಬಿದ್ದಿದೆ. ಆದರೆ, ಇಲ್ಲಿ ಮೊಲವೂ ಇದೆ. ಈ ಪೋಟೋದಲ್ಲಿರುವ ಸವಾಲು ಮೊಲ ಎಲ್ಲಿದೆ ಎಂಬುದನ್ನು ಗುರುತಿಸುವುದು. ನೀವು 5 ಸೆಕೆಂಡುಗಳಲ್ಲಿ ಮೊಲವನ್ನು ಹುಡುಕಲು ಸಾಧ್ಯವಾದರೆ, ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ನೀವು ಹ್ಯಾಟ್ಸ್ ಆಫ್ ಹೇಳುತ್ತೇವೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ

ಮೊಲವು ನಿಮ್ಮ ಕಣ್ಣಿಗೆ ಕಾಣಿಸಿತೇ?

ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಗುಪ್ತ ವಸ್ತುಗಳನ್ನು ಹುಡುಕುವುದು ಅಷ್ಟು ಸುಲಭವಲ್ಲ. ಈ ಒಗಟನ್ನು ಬಿಡಿಸುವಾಗಲು ನಿಮಗೆ ಅಂತಹದ್ದೇ ಅನುಭವವಾಗಿರುತ್ತದೆ. ಈ ಚಿತ್ರದಲ್ಲಿ ನಿಮಗೆ ಮೊಲ ಕಾಣಿಸಿತೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಮೊಲ ಎಲ್ಲಿದೆ ಎಂದು ನಾವು ನಿಮಗೆ ಹೇಳುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:21 pm, Sun, 22 February 26

Source link

ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ – Kannada News | Davangere: Student commits suicide in private medical college hostel

ಪ್ರಾತಿನಿಧಿಕ ಚಿತ್ರImage Credit source: deccanchronicle

ದಾವಣಗೆರೆ, ಫೆಬ್ರವರಿ 22: ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ (student) ಹಾಸ್ಟೆಲ್​ನಲ್ಲಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಎಂಸಿಸಿ ಬಿ ಬ್ಲಾಕ್​ನಲ್ಲಿ ಇರುವ ಖಾಸಗಿ ವೈದ್ಯಕೀಯ ಕಾಲೇಜಿನ ಇಂಟರ್​ನ್ಯಾಷನಲ್ ಹಾಸ್ಟೆಲ್​ನಲ್ಲಿ ನಡೆದಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿ ಸಿದ್ಧಾರ್ಥ ತ್ರಯಂಬಕೆ (30) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥ ತ್ರಯಂಬಕೆ ಡರ್ಮಾಟಾಲಾಜಿ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ. ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ಮಧ್ಯಾಹ್ನದಿಂದ ರೂಮ್​​ ಲಾಕ್​ ಆಗಿದ್ದ ಹಿನ್ನೆಲೆಯಲ್ಲಿ ಅನುಮಾನ ಬಂದು ಕೊಠಡಿ ಬಾಗಿಲು ಒಡೆದು ಒಳಗೆ ಹೋದಾಗ ಆತ್ಮಹತ್ಯೆ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಮೃತ ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ತಾಯಿ ನಿಧನದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಗನ ರಕ್ಷಣೆ

ತಾಯಿ ನಿಧನದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಗನ ರಕ್ಷಣೆ ಮಾಡಿರುವಂತ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಬಾವಿಗೆ ಬಿದ್ದಿದ್ದ ಬಾಬು ಪಾಂಡು ಸಾಂಬರೇಕರ(41)ರನ್ನು ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್​ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ: ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಮೃತರ ಸಂಬಂಧಿ ಹೇಳಿದ್ದೇನು?

ಬಾವಿಯೊಳಗೆ ಜಿಗಿಯುತ್ತಿದ್ದಂತೆ ಬಾಬು ಕೇಬಲ್ ಅಡಿ ಸಿಲುಕಿದ್ದ. ಇದನ್ನು ಗಮನಿಸಿದ್ದ ಸ್ಥಳೀಯರಿಂದ ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್ ಮುಖ್ಯಸ್ಥ ಬಸವರಾಜ್ ಹಿರೇಮಠಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣೆ ಮಾಡಿದ್ದಾರೆ. ರಕ್ಷಣೆ ವೇಳೆ ಸಾಯಲು ಬಿಡಿ ಎಂದು ಬಾಬು ಸಾಂಬರೇಕರ ಗೋಗರೆದಿದ್ದಾರೆ.

ಇದನ್ನೂ ಓದಿ: ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

15 ದಿನಗಳ ಹಿಂದೆ ಅನಾರೋಗ್ಯದಿಂದ ಬಾಬು ತಾಯಿ ಮೃತಪಟ್ಟಿದ್ದರು. ತಾಯಿ ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ – Kannada News | Here is the list of Telugu, Tamil, Malayalam and Hindi movies which won 70th Filmfare award

70ನೇ ಫಿಲ್ಮ್‌ಫೇರ್ ಪ್ರಶಸ್ತಿ (2024) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ತೆಲುಗು, ತಮಿಳು, ಮಲಯಾಳಂ ಮತ್ತು ತಮಿಳು ಸಿನಿಮಾಗಳ ಪಟ್ಟಿ ಇಲ್ಲಿದೆ. ಕನ್ನಡದಲ್ಲಿ ಯಾರು ಯಾರಿಗೆಲ್ಲ ಪ್ರಶಸ್ತಿ ನೀಡಲಾಯ್ತು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ತೆಲುಗು

ಅತ್ಯುತ್ತಮ ಸಿನಿಮಾ: ಪುಷ್ಪ 2: ದಿ ರೂಲ್
ಅತ್ಯುತ್ತಮ ನಿರ್ದೇಶಕ: ಸುಕುಮಾರ್ (ಪುಷ್ಪ 2: ದಿ ರೂಲ್)
ಅತ್ಯುತ್ತಮ ನಟ: ಅಲ್ಲು ಅರ್ಜುನ್ (ಪುಷ್ಪ 2: ದಿ ರೂಲ್)
ಅತ್ಯುತ್ತಮ ನಟಿ: ನಿವೇತಾ ಥಾಮಸ್ (35 ಚಿನ್ನ ಕಥಾ ಕಾದು)
ಅತ್ಯುತ್ತಮ ಪೋಷಕ ನಟ: ಅಮಿತಾಬ್ ಬಚ್ಚನ್ (ಕಲ್ಕಿ 2898 AD)
ಅತ್ಯುತ್ತಮ ಸಂಗೀತ ನಿರ್ದೇಶಕ: ದೇವಿ ಶ್ರೀ ಪ್ರಸಾದ್ (ಪುಷ್ಪ 2: ದಿ ರೂಲ್)

ತಮಿಳು

ಅತ್ಯುತ್ತಮ ಸಿನಿಮಾ: ಅಮರನ್
ಅತ್ಯುತ್ತಮ ನಿರ್ದೇಶಕ: ಪಿ.ಎಸ್. ವಿನೋತ್ ರಾಜ್ (ಕೊಟ್ಟುಕ್ಕಾಲಿ) ಮತ್ತು ರಾಜಕುಮಾರ್ ಪೆರಿಯಸಾಮಿ (ಅಮರನ್)
ಅತ್ಯುತ್ತಮ ನಟ: ಶಿವಕಾರ್ತಿಕೇಯನ್ (ಅಮರನ್)
ಅತ್ಯುತ್ತಮ ನಟಿ: ಸಾಯಿ ಪಲ್ಲವಿ (ಅಮರನ್)
ಅತ್ಯುತ್ತಮ ಪೋಷಕ ನಟ: ಕಾರ್ತಿ (ಮೆಯ್ಯಳಗನ್)
ಅತ್ಯುತ್ತಮ ಸಂಗೀತ: ಜಿ.ವಿ. ಪ್ರಕಾಶ್ ಕುಮಾರ್ (ಅಮರನ್)

ಮಲಯಾಳಂ

ಅತ್ಯುತ್ತಮ ಸಿನಿಮಾ: ಮಂಜುಮ್ಮೇಲ್ ಬಾಯ್ಸ್
ಅತ್ಯುತ್ತಮ ನಿರ್ದೇಶಕ: ರಾಹುಲ್ ಸದಾಶಿವನ್ (ಬ್ರಮಯುಗಂ)
ಅತ್ಯುತ್ತಮ ನಟ: ಮಮ್ಮೂಟ್ಟಿ (ಬ್ರಮಯುಗಂ)
ಅತ್ಯುತ್ತಮ ನಟಿ: ಉರ್ವಶಿ (ಉಳ್ಳೊಳುಕ್ಕು)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಪೃಥ್ವಿರಾಜ್ ಸುಕುಮಾರನ್ (ಆಡುಜೀವಿತಂ)
ಅತ್ಯುತ್ತಮ ಸಂಗೀತ: ಸುಶಿನ್ ಶ್ಯಾಮ್ (ಆವೇಶಂ)

ಇದನ್ನೂ ಓದಿ: 70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ..

ಬಾಲಿವುಡ್

ಅತ್ಯುತ್ತಮ ಸಿನಿಮಾ: ಲಾಪತಾ ಲೇಡೀಸ್
ಅತ್ಯುತ್ತಮ ನಿರ್ದೇಶಕ: ಕಿರಣ್ ರಾವ್ (ಚಿತ್ರ: ಲಾಪತಾ ಲೇಡೀಸ್)
ಅತ್ಯುತ್ತಮ ನಟ: ಕಾರ್ತಿಕ್ ಆರ್ಯನ್ (ಚಂದು ಚಾಂಪಿಯನ್) ಮತ್ತು ಅಭಿಷೇಕ್ ಬಚ್ಚನ್ (ಐ ವಾಂಟ್ ಟು ಟಾಕ್)
ಅತ್ಯುತ್ತಮ ನಟಿ: ಆಲಿಯಾ ಭಟ್ (ಜಿಗ್ರಾ)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ರಾಜ್‌ಕುಮಾರ್ ರಾವ್ (ಶ್ರೀಕಾಂತ್)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ಪ್ರತಿಭಾ ರಂತ (ಲಾಪತಾ ಲೇಡೀಸ್)
ಅತ್ಯುತ್ತಮ ಪೋಷಕ ನಟ: ರವಿ ಕಿಶನ್ (ಲಾಪತಾ ಲೇಡೀಸ್)
ಅತ್ಯುತ್ತಮ ಪೋಷಕ ನಟಿ: ಛಾಯಾ ಕದಮ್ (ಲಾಪತಾ ಲೇಡೀಸ್)
ಜೀವಮಾನ ಸಾಧನೆ ಪ್ರಶಸ್ತಿ: ಜೀನತ್ ಅಮಾನ್ ಮತ್ತು ಶ್ಯಾಮ್ ಬೆನಗಲ್ (ಮರಣೋತ್ತರ)

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್ – Kannada News | BJP MLA Chandru Lamani Arrested In Bribe Case: Swamiji Audio Goes Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬೆಂಗಳೂರಿ ಟೀಮ್ ನಿಂದ ರೇಡ್ ಎಂಬ ಬಗ್ಗೆ ಆಡಿಯೋದಲ್ಲಿ ಪ್ರಸ್ತಾಪವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆ ಸಿನಿಮಾ: ಇಲ್ಲಿದೆ ಪಟ್ಟಿ – Kannada News | Here is the list of Movies released this week on OTT

ವಿಶ್ವದ ಬಲು ಜನಪ್ರಿಯ ಮತ್ತು ಟಾಪ್ ಶೆಫ್​​​ಗಳಲ್ಲಿ ಒಬ್ಬರೆನಿಸಿಕೊಂಡಿರುವ ಗೋರ್ಡನ್ ರೇಮ್ಜಿ ಬಗೆಗೆ ಹೊಸದೊಂದು ಡಾಕ್ಯುಮೆಂಟರಿ ಬಿಡುಗಡೆ ಆಗಿದೆ. ಇದೇ ವಾರ ಬಿಡುಗಡೆ ಆಗಿರುವ ಈ ಅಪರೂಪದ ಡಾಕ್ಯುಮೆಂಟರಿಯನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

ಅನುರಾಗ್ ಕಶ್ಯಪ್ ನಿರ್ದೇಶಿಸಿ ಸನ್ನಿ ಲಿಯೋನಿ, ರಾಹುಲ್ ಭಟ್ ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿರುವ ಆಕ್ಷನ್ ಥ್ರಿಲ್ಲರ್ ಮತ್ತು ಸಸ್ಪೆನ್ಸ್ ಸಿನಿಮಾ ‘ಕೆನೆಡಿ’ ಇದೇ ವಾರ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ.

ಇದೊಂದು ಹಾಸ್ಯಮಯ ಸಸ್ಪೆನ್ಸ್ ಡ್ರಾಮಾ ಆಗಿದೆ. ಸಿನಿಮಾ, ಲಕ್ಕಿ ಹೆಸರಿನ ನಾಯಿ, ಒಬ್ಬ ಪುಟ್ಟ ಬಾಲಕಿ ಮತ್ತು ಒಬ್ಬ ಯುವಕನ ಸುತ್ತ ನಡೆಯುತ್ತದೆ. ವಿಶೇಷ ಶಕ್ತಿ ಹೊಂದಿರುವ ಲಕ್ಕಿ ನಾಯಿಯನ್ನು ಪಡೆದುಕೊಳ್ಳಲು ರಾಜಕಾರಣಿಯೊಬ್ಬ ಪ್ರಯತ್ನ ಪಟ್ಟಾಗ ನಾಯಿಯನ್ನು ಹೇಗೆ ರಕ್ಷಿಸಲಾಗುತ್ತದೆ ಎಂಬ ಕತೆ ಸಿನಿಮಾನಲ್ಲಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದು.

ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ವೆಬ್ ಸರಣಿ ‘ರಾಕ್ಷಸ’ ಈ ವಾರ ಒಟಿಟಿಗೆ ಬಂದಿದೆ. ಟ್ರೈಲರ್​​ನಿಂದ ಗಮನ ಸೆಳೆದಿರುವ ಈ ವೆಬ್ ಸರಣಿ ಸಂಪೂರ್ಣ ಉತ್ತರ ಕರ್ನಾಟಕ ಭಾಗದ ಕತೆ, ಭಾಷೆಯನ್ನು ಹೊಂದಿದ್ದು, ಇದೀಗ ಜೀ5 ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ.

ಜನಪ್ರಿಯ ಆಕ್ಷನ್ ಮತ್ತು ಥ್ರಿಲ್ಲರ್ ವೆಬ್ ಸರಣಿಗಳಲ್ಲಿ ಒಂದಾಗಿರುವ ‘ದಿ ನೈಟ್ ಏಜೆಂಟ್’ ವೆಬ್ ಸರಣಿಯ ಮೂರನೇ ಸೀಸನ್ ಇದೇ ವಾರ ಬಿಡುಗಡೆ ಆಗಿದೆ. ಆಕ್ಷನ್, ಥ್ರಿಲ್ಲರ್, ಸಸ್ಪೆನ್ಸ್ ಮತ್ತು ಡ್ರಾಮಾ ಒಳಗೊಂಡಿರುವ ಈ ವೆಬ್ ಸರಣಿಯ ಹೊಸ ಸೀಸನ್ ಅನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

ಕಾರ್ತಿಕ್ ಆರ್ಯನ್ ಮತ್ತು ಅನನ್ಯಾ ಪಾಂಡೆ ಒಟ್ಟಿಗೆ ನಟಿಸಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ತು ಮೇರಿ ಮೇ ತೇರಾ, ಮೇ ತೇರಾ, ತೂ ಮೇರಿ’ ಸಿನಿಮಾ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಅಟ್ಟರ್ ಫ್ಲಾಪ್ ಆದ ಈ ಸಿನಿಮಾ ಇದೀಗ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಣೆಗೆ ಲಭ್ಯವಿದೆ.

Published On – 2:46 pm, Sun, 22 February 26

Source link

ವಿವಾದದ ಬೆನ್ನಲ್ಲೇ ಸರಣಿ ಎಕ್ಸ್​​ ಪೋಸ್ಟ್​​ ಬಗ್ಗೆ ಸಿಎಂ ಸ್ಪಷ್ಟನೆ: ಹೆಚ್​​ಡಿಕೆಗೂ ತಿವಿದ ಸಿದ್ದರಾಮಯ್ಯ – Kannada News | CM Siddaramaiah Defends Social Justice Article Amidst Row, Counters HD Kumaraswamy’s Claims

ಬೆಂಗಳೂರು, ಫೆಬ್ರವರಿ 22: ಸಾಮಾಜಿಕ ನ್ಯಾಯದ ಬಗ್ಗೆ ಬರೆದಿದ್ದ ಲೇಖನ ವಿವಾದದ ಕೇಂದ್ರ ಬಿಂದು ಆಗುತ್ತಿದ್ದಂತೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ ನೀಡಿದ್ದಾರೆ. ಸಾಮಾಜಿಕ ದಿನದ ಆಚರಣೆ ಅಂಗವಾಗಿ ತಾನು ಪತ್ರಿಕೆಗೆ ಬರೆದ ಲೇಖನ ರಾಜಕೀಯ ವಲಯದಲ್ಲಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿ ಹೋದರೆ ಕೆಸರಾಗುತ್ತದೆ. ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡ ಹಾಗೆಯೇ, ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತೆ. ಈ ದೃಷ್ಟಿಯಿಂದ ನನ್ನ ಲೇಖನದ ಬಗ್ಗೆ ಚರ್ಚೆಯನ್ನು ಸ್ವಾಗತಿಸುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ತಿಳಿಸಿದ್ದಾರೆ.

‘ನನ್ನ ನಿಲುವು ಸಾಮಾಜಿಕ ನ್ಯಾಯದ ಪರ’

ಸಾಮಾಜಿಕ ನ್ಯಾಯದ ಬಗ್ಗೆ ನಾನು ಇದೇ ಮೊದಲ ಬಾರಿ ಮಾತನಾಡಿದ್ದಲ್ಲ. ನನ್ನ ರಾಜಕೀಯ ಜೀವನ ನೋಡುತ್ತಾ ಬಂದವರಿಗೆ ಇದು ಗೊತ್ತಿರುತ್ತದೆ. ಅಧಿಕಾರ ಇರಲಿ, ಇಲ್ಲದೆ ಇರಲಿ ಸಾಮಾಜಿಕ ನ್ಯಾಯದ ಪರ ನನ್ನ ನಿಲುವು ಇರಲಿದೆ. ಜಾತಿ ವ್ಯವಸ್ಥೆ ಬಗ್ಗೆ ಟೀಕಿಸ್ತಿರುವ ರಾಜಕಾರಣಿಗಳಿಗಿಂತ ಹೆಚ್ಚಿನ ಸ್ಪಷ್ಟತೆ ನನಗಿದ್ದು, ಈ ಬಗ್ಗೆ ನಾನು ಸಾರ್ವಜನಿಕ ಸಂವಾದಕ್ಕೆ ಸಿದ್ಧವಾಗಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ; ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ?

ಹೆಚ್​​ಡಿಕೆಗೆ ತಿರುಗೇಟು

ತಮ್ಮ ಲೇಖನದ ಬಗ್ಗೆ ಟೀಕೆ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೂ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಚಲನಶೀಲ ಸಮಾಜದ ಅಗತ್ಯವಿದೆ. ಹೆಚ್​ಡಿಡಿ, ಹೆಚ್​ಡಿಕೆ ಸ್ವಜಾತಿ ವಿರೋಧಿಗಳು ಮತ್ತು ಕುಟುಂಬವಾದಿಗಳು. ಸ್ವಾರ್ಥಕ್ಕಾಗಿ ತಮ್ಮ ಜಾತಿಯ ನಾಯಕರು ಬೆಳೆಯದಂತೆ ಅವರು ತುಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಜೆಡಿಎಸ್‌ ಬಿಟ್ಟ ಒಕ್ಕಲಿಗ ನಾಯಕರ ಪಟ್ಟಿಯನ್ನೂ ಸಿಎಂ ಬಿಡುಗಡೆ ಮಾಡಿದ್ದಾರೆ. ಒಕ್ಕಲಿಗ ನಾಯಕರನ್ನು ಗುರುತಿಸಿ ಬೆಳೆಸಿದ್ದು ಕೇವಲ ಕಾಂಗ್ರೆಸ್ ಮಾತ್ರ. ಡಿಕೆಶಿ ಸೇರಿ ಸಮರ್ಥ ಒಕ್ಕಲಿಗ ನಾಯಕರ ದಂಡೇ ಕಾಂಗ್ರೆಸ್‌ ಪಕ್ಷದಲ್ಲಿದೆ. ಒಕ್ಕಲಿಗರು ಅಥವಾ ದಲಿತರು ಸಿಎಂ ಆಗೋದು ಕಾಂಗ್ರೆಸ್‌ನಿಂದ ಮಾತ್ರ. ಜೆಡಿಎಸ್ ಅಥವಾ ಬಿಜೆಪಿಯಲ್ಲಿ ದಲಿತ ಸಿಎಂ ಮಾಡುವ ತಾಕತ್ತಿದೆಯೇ? ಎಂದವರು ಪ್ರಶ್ನಿಸಿದ್ದಾರೆ. ಅಧಿಕಾರಕ್ಕಾಗಿ ಜಾತಿ ಎಳೆದು ತಂದಿಲ್ಲ, 4 ದಶಕದಿಂದ ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಬೆನ್ನಿಗೆ ನಿಂತ ರಾಜಣ್ಣ

ಜಾತಿ ಅಸ್ತ್ರ ಬಳಸಿ ಸರಣಿ ಪೋಸ್ಟ್​​ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಮಾಜಿ ಸಚಿವ ಕೆ.ಎನ್​. ರಾಜಣ್ಣ ನಿಂತಿದ್ದಾರೆ. ಪ್ರಧಾನಿ ಮೋದಿರನ್ನು ಟೀ ಮಾರುವವ ಅಂತಾ ಮಾತನಾಡಲ್ವಾ? ಹಾಗೆ ಸಿಎಂ ಸಿದ್ದರಾಮಯ್ಯ ಕುರಿ ಕಾಯುವವನು ಅಂತಾ ಹೇಳ್ತಾರೆ. ಪತ್ರಿಕೆಯಲ್ಲಿ ಬರೆದ ಲೇಖನದ ಮಾಹಿತಿಯನ್ನು ಟ್ವೀಟ್​ ಮಾಡಿದ್ದಾರೆ. ಅದರಲ್ಲಿ ತಪ್ಪೇನು ಇದೆ ಎಂದು ರಾಜಣ್ಣ ಪ್ರಶ್ನಿಸಿದ್ದಾರೆ. 2 ವರ್ಷ ಕುರಿ, ಎಮ್ಮೆ ಕಾಯುತ್ತಿದ್ದೆ ಎಂದು ಖುದ್ದು ಸಿಎಂ ಹೇಳಿದ್ದಾರೆ. ಚರ್ಚೆ ಆಗಲಿ ಬಿಡಿ, ಎಲ್ಲವೂ ಗೊತ್ತಾಗುತ್ತೆ. ರಾಜಕೀಯ ಅಂದರೆ ಸಂಘರ್ಷ, ಕುರ್ಚಿಗಾಗಿ ಪೈಪೋಟಿ ನಡೆಯುತ್ತೆ ಎಂದವರು ತಿಳಿಸಿದ್ದಾರೆ.

ವರದಿ: ಈರಣ್ಣಾ ಬಸವ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:46 pm, Sun, 22 February 26

Source link

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​ – Kannada News | Kalaburagi: Stone pelting during Shivaji Jayanti celebrations after Bagalkot; video goes viral

ಕಲಬುರಗಿ, ಫೆಬ್ರವರಿ 22: ಬಾಗಲಕೋಟೆಯಲ್ಲಿ (Bagalkote) ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಗಲಾಟೆ ಮಾಸುವ ಮುನ್ನವೇ ನಿನ್ನೆ ಕಲಬುರಗಿಯಲ್ಲೂ (Kalaburagi) ಅಂತಹದೊಂದು ಗಲಾಟೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಕೂಡ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್‌ ವಿಚಾರಕ್ಕೆ ಎರಡು ಕೋಮುಗಳ ಮಧ್ಯೆ ಸಂಘರ್ಷವೇ ನಡೆದಿದ್ದು, ಅಕ್ಷರಶಃ ಗ್ರಾಮ ಬೂದಿ ಮುಚ್ಚಿದ ಕೆಂಡವಾಗಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿರುವ ಮತ್ತೊಂದು ವಿಡಿಯೋ ವೈರಲ್​ ಆಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಗಣೇಶ ಕಟ್ಟೆಯ ಮೇಲೆ ಶಿವಾಜಿ ಜಯಂತಿ ಆಚರಣೆ ವೇಳೆ ಗಲಾಟೆ ನಡೆದಿದೆ. ಎರಡು ಸಮುದಾಯಗಳ ನಡುವೆ ಮಾರಾಮಾರಿ ವೇಳೆ ಮಕ್ಕಳು ಕಲ್ಲಿನಿಂದ ಹಲ್ಲೆ ಮಾಡಿರುವ ಮತ್ತೊಂದು ವಿಡಿಯೋ ಇದೀಗ ಲಭ್ಯವಾಗಿದೆ. ಮನೆಯ ಮಾಳಿಗೆ ಮೇಲೆ ಬಾಲಕನೊಬ್ಬ ಕೈಯಲ್ಲಿ ಕಲ್ಲು ಹಿಡಿದು ನಿಂತಿರುವ ವಿಡಿಯೋ ಸದ್ಯ ವೈರಲ್​ ಆಗಿದೆ.

ಘಟನೆ ಹಿನ್ನಲೆ 

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಎರಡು ಕೋಮುಗಳ ಮಧ್ಯೆ ಗಲಾಟೆಯಾಗಿದೆ. ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಮೆರವಣಿಗೆ ವೇಳೆ ರಾವೂರ್ ಗ್ರಾಮದ ಗಣೇಶ ಕಟ್ಟೆ ಬಳಿ ಡಿಜೆ ಸೌಂಡ್‌ಗೆ ಬನಾಯೇಂಗೆ ಮಂದಿರ್ ಹಾಡಿಗೆ ಹಿಂದೂ ಕಾರ್ಯಕರ್ತರು ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿದ್ದರಂತೆ. ಈ ವೇಳೆ ಅಲ್ಲಿಗೆ ಬಂದ ಮುಸ್ಲಿಮರು ಕಿರಿಕ್ ಮಾಡಿದ್ದಾರೆ. ಸೌಂಡ್ ಕಡಿಮೆ ಮಾಡಿ ಅಂತಾ ಹೇಳಿದ್ದೆ ತಡ ಎರಡು ಸಮುದಾಯದ ಮಧ್ಯೆ ಗಲಾಟೆ ಆರಂಭವಾಗಿದೆ. ಈ ವೇಳೆ ಕಟ್ಟಿಗೆ, ಕಲ್ಲಿನಿಂದ ಹೊಡೆದಾಟ ಶುರುವಾಗಿದ್ದು, ನಾಲ್ಕೈದು ಜನರಿಗೆ ಗಾಯಗಳಾಗಿವೆ.

ಇದನ್ನೂ ಓದಿ: ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಸಮುದಾಯದವರಿಂದ ದೂರು, ಪ್ರತಿದೂರು ದಾಖಲಾಗದ ಹಿನ್ನಲೆಯಲ್ಲಿ ವಾಡಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ತಿರುಮಲೇಶ್ ಅವರು ಸುಮೋಟೋ ಕೇಸ್​ದಾಖಲಸಿಕೊಂಡಿದ್ದಾರೆ. ಬಿಎನ್‌ಎಸ್ 126 ಕಾಯ್ದೆಯಡಿ 8 ಜನರ ವಿರುದ್ಧ ಕೇಸ್​ ದಾಖಲಾಗಿದೆ.

ಈ ಬಗ್ಗೆ ಎಸ್​​ಪಿ ಅಡ್ಡೂರು ಶ್ರೀನಿವಾಸಲು ಪ್ರತಿಕ್ರಿಯಿಸಿದ್ದು, ಶಿವಾಜಿ ಜಯಂತ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಎರಡು ಕೋಮುಗಳ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಓರ್ವ ವ್ಯಕ್ತಿಗೆ ಗಾಯವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಎರಡು ಕೋಮುಗಳಿಂದು ಯಾವುದೇ ದೂರು, ಪ್ರತಿದೂರು ದಾಖಲಾಗದ ಹಿನ್ನಲೆಯಲ್ಲಿ ವಾಡಿ ಪೊಲೀಸ್ ಠಾಣೆಯಿಂದ ಎರಡು ಕೋಮಿನ 8 ಜನರ ವಿರುದ್ಧ ಕೇಸ್​ ದಾಖಲಿಸಿರುವುದಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಸದ್ಯ ರಾವೂರ್ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಬಗ್ಗೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಹಿತಕರ ಘಟನೆಗಳು ಜರುಗದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:14 pm, Sun, 22 February 26

Source link

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್ – Kannada News | Congress MLA KN Rajanna Bats on BJP MLA Chandru Lamani caught taking bribe

ನವದೆಹಲಿ,(ಫೆಬ್ರವರಿ 22): ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ ಹೇಳಿ ನೋಡೋಣ. ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ. ಇವನ್ಯಾರೋ ಬಡಪಾಯಿ ಸಿಕ್ಕಿ ಹಾಕಿಕೊಂಡಿದ್ದಾನೆ ಅಷ್ಟೇ ಎಂದು ಲಂಚ ಸ್ವೀಕರಿಸಿದ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.

Source link

Exit mobile version