Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು! – Kannada News | Daily Horoscope for February​ 22nd 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ,ಪಂಚಮಿಯ ಈ ದಿನ, ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ.

ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಫಲ, ಆದಾಯ ವೃದ್ಧಿ ಮತ್ತು ಆಸ್ತಿ ಕಲಹ ನಿವಾರಣೆಯಾಗಲಿದೆ. ವೃಷಭ ರಾಶಿಯವರಿಗೆ ಆತ್ಮವಿಶ್ವಾಸ, ಪಾಲುದಾರಿಕೆಯಿಂದ ಲಾಭ ಹಾಗೂ ಮೇಲಧಿಕಾರಿಗಳಿಂದ ಸಹಕಾರ ಸಿಗಲಿದೆ. ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಕುಟುಂಬ ಸೌಖ್ಯ ಮತ್ತು ಮಕ್ಕಳಿಂದ ಶುಭ ಸಮಾಚಾರವಿದೆ. ಕರ್ಕಾಟಕ ರಾಶಿಯವರು ಆರೋಗ್ಯದಲ್ಲಿ ಚೇತರಿಕೆ ಕಾಣಲಿದ್ದು, ಸಾಲ ಮುಕ್ತರಾಗುವ ಯೋಗವಿದೆ ಎಂದಿದ್ದಾರೆ.

 

Source link

‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ – Kannada News | Dhurandhar 2 star Ranveer Singh gets threat call demanding Rs 10 Cr

ನಟ ರಣವೀರ್ ಸಿಂಗ್ ಅವರು ಕಳೆದ ವರ್ಷ ‘ಧುರಂಧರ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಈಗ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಿಡುಗಡೆಯ ತಯಾರಿಯಲ್ಲಿ ಇರುವಾಗಲೇ ಒಂದು ಆತಂಕ ಎದುರಾಗಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗುತ್ತಿದೆ. ಆ ಮೂಲಕ ಹಣ ದೋಚಲು (Extortion) ಖದೀಮರು ಸಂಚು ರೂಪಿಸಿದ್ದಾರೆ. ಈ ಬಾರಿ ಬರೋಬ್ಬರಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವರದಿಗಳ ಪ್ರಕಾರ, ರಣವೀರ್ ಸಿಂಗ್ ಅವರ ಮ್ಯಾನೇಜರ್ ವಾಟ್ಸಪ್​​ಗೆ ಬೆದರಿಕೆ ಸಂದೇಶ ಬಂದಿದೆ. ಅಮೆರಿಕ ಮೂಲದ ಮೊಬೈಲ್ ಸಂಖ್ಯೆಯಿಂದ ಸಂದೇಶ ಕಳಿಸಿ ಬೆದರಿಕೆ ಹಾಕಲಾಗಿದೆ. ಮುಂಬೈ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ತೀವ್ರಗೊಳಿಸಿದ್ದಾರೆ. ಇಂಥ ಪ್ರಕರಣಗಳು ಆಗಾಗ ನಡೆಯುತ್ತಿರುವುದರಿಂದ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ.

ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ಈ ಮೊದಲು ಅನೇಕ ಸೆಲೆಬ್ರಿಟಿಗಳಿಗೆ ಬೆದರಿಕೆ ಕರೆ ಬಂದಿತ್ತು. ಈ ಬಾರಿ ಕೂಡ ಅದೇ ಗ್ಯಾಂಗ್​​ನ ಸದಸ್ಯರಿಂದಲೇ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶ ಕಳಿಸಲಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಂದೇಶ ಕಳಿಸಿದ ಮೊಬೈಲ್ ಸಂಖ್ಯೆಯ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ರಣವೀರ್ ಸಿಂಗ್ ಅವರ ಮನೆ ಎದುರು ಭದ್ರತೆ ಹೆಚ್ಚಿಸುವ ಸಾಧ್ಯತೆ ಇದೆ. ಕೆಲವೇ ದಿನಗಳ ಹಿಂದೆ ಕೂಡ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶ ಬಂದಿತ್ತು. ಆ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಅದಾಗಿ 12 ದಿನ ಕಳೆಯುವುದರೊಳಗೆ ಮತ್ತೆ ಬೆದರಿಕೆ ಸಂದೇಶ ಕಳಿಸಲಾಗಿದೆ. 10 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ.

ಇದನ್ನೂ ಓದಿ: ರಣವೀರ್​ಗೆ ನೀಡಿದ ಭದ್ರತೆಯಿಂದ ನೆರೆಯವರಿಗೆ ತೊಂದರೆ; ಬದಲಾಗುತ್ತಾ ದಂಪತಿ ಮನೆ?

ಹಲವು ವರ್ಷಗಳಿಂದ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಬಾಲಿವುಡ್​​ನಲ್ಲಿ ಸ್ಟಾರ್ ಕಲಾವಿದರಾಗಿ ಮಿಂಚುತ್ತಿದ್ದಾರೆ. ಅವರ ಬಳಿ ಸಾವಿರಾರು ಕೋಟಿ ರೂಪಾಯಿ ಹಣ ಇದೆ. ‘ಧುರಂದರ್’ ಗೆದ್ದ ಬಳಿಕ ರಣವೀರ್ ಸಿಂಗ್ ಅವರ ಡಿಮ್ಯಾಂಡ್ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡಲು ಕಿಡಿಗೇಡಿಗಳು ಸಂಚು ರೂಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು! – Kannada News | Daily Devotional: Benefits of Applying Homa Tilaka

ಬೆಂಗಳೂರು, ಫೆಬ್ರವರಿ​ 22​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಹೋಮ ತಿಲಕಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಕೇಸರಿ, ಚಂದನ, ವಿಭೂತಿ, ಗಂಧ ಇತ್ಯಾದಿಗಳನ್ನು ಹಣೆಗೆ ಧರಿಸುವ ಪದ್ಧತಿಯಲ್ಲಿ ಹೋಮದ ತಿಲಕ ಅತ್ಯಂತ ವಿಶೇಷವಾಗಿದೆ. ಗಣಹೋಮ, ಚಂಡಿ ಹೋಮ, ಮೃತ್ಯುಂಜಯ ಹೋಮ, ಸುದರ್ಶನ ಹೋಮ ಸೇರಿದಂತೆ ಯಾವುದೇ ಹೋಮದ ಬಳಿಕ ದೊರೆಯುವ ತಿಲಕವನ್ನು ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ತನಕ ಧರಿಸಬಹುದು. ಇದು ಸುಮಾರು ಒಂದು ತಿಂಗಳ ಅವಧಿಯಾಗಿರುತ್ತದೆ. ನಂತರ ಇದನ್ನು ನೀರಿಗೆ ಅರ್ಪಿಸಬಹುದು ಅಥವಾ ತುಳಿಯದ ಜಾಗದಲ್ಲಿ ಇಡಬಹುದು.

ತಿಲಕವನ್ನು ಹಣೆಗೆ ಧರಿಸುವುದರಿಂದ ಆಜ್ಞಾ ಚಕ್ರ ಜಾಗೃತಗೊಳ್ಳುತ್ತದೆ. ಇದು ದೈವಿಕ ಶಕ್ತಿಯ ಸಂಕೇತವಾಗಿದ್ದು, ಸಾತ್ವಿಕ ಗುಣಗಳನ್ನು ಹೆಚ್ಚಿಸುತ್ತದೆ. ಹೋಮದ ಭಸ್ಮದಲ್ಲಿರುವ ತುಪ್ಪ, ಗಿಡಮೂಲಿಕೆಗಳು ಮತ್ತು ಸವಿತ್ತುಗಳು ಔಷಧೀಯ ಗುಣಗಳನ್ನು ಹೊಂದಿರುತ್ತವೆ. ಈ ಭಸ್ಮವನ್ನು ಹಣೆಗೆ ಇಟ್ಟುಕೊಳ್ಳುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗಿ, ಆಲೋಚನಾ ಶಕ್ತಿ ವೃದ್ಧಿಯಾಗುತ್ತದೆ ಹಾಗೂ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ. ಇದು ಧನಾತ್ಮಕ ಶಕ್ತಿಯನ್ನು ನೀಡಿ, ನಮ್ಮ ಜೀವನದ ವಿವಿಧ ಕ್ಷೇತ್ರಗಳಲ್ಲಿ ಶುಭ ಫಲಗಳನ್ನು ನೀಡಲು ಸಹಕರಿಸುತ್ತದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Source link

ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ: ಹೈಕೋರ್ಟ್​​ ಮಹತ್ವದ ಆದೇಶ – Kannada News | Karnataka High Court: No Officer Transfers Without Posting; Department Heads Accountable

ಬೆಂಗಳೂರು. ಫೆಬ್ರವರಿ 22: ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ. ಈ ರೀತಿಯ ಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಕರ್ನಾಟಕ ಹೈಕೋರ್ಟ್​​ನ​​ ವಿಭಾಗೀಯ ಪೀಠ ಮಹತ್ವದ ಆದೇಶ ಮಾಡಿದೆ. ಈ ರೀತಿಯ ವರ್ಗಾವಣೆಗಳಿಂದ ತೆರಿಗೆದಾರರ, ಸಾರ್ವಜನಿಕರ ಹಣ ದುರ್ವಿನಿಯೋಗವಾದಂತಾಗಲಿದೆ. ಕೆಲಸ ಪಡೆಯದೇ ಮನೆಯಲ್ಲಿ ಕುಳಿತವರಿಗೆ ಸಂಬಳ ನೀಡಿದಂತಾಗುತ್ತದೆ. ಹೀಗಾಗಿ ಹುದ್ದೆ ತೋರಿಸುವವರೆಗೆ ಹಿಂದಿನ ಹುದ್ದೆಯಿಂದ ಬಿಡುಗಡೆ ಮಾಡದಂತೆ ಆದೇಶಿಸಿದೆ.

ಅಲ್ಲದೆ, ಹುದ್ದೆ ತೋರಿಸದೇ ವರ್ಗಾವಣೆ ಮಾಡಿದರೆ ಇಲಾಖೆಯ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ. ಕಾಯುವಿಕೆಯ ಅವಧಿಯ ವೇತನವನ್ನು ಕಾರಣಕರ್ತ ಅಧಿಕಾರಿಯಿಂದಲೇ ವಸೂಲು ಮಾಡಿ ಎಂದು ನ್ಯಾ. ಎಸ್.ಜಿ. ಪಂಡಿತ್ ಮತ್ತು ನ್ಯಾ. ಕೆ.ವಿ. ಅರವಿಂದ್ ಅವರಿದ್ದ ಪೀಠ ಆದೇಶಿಸಿದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರನ್ನು ಹುದ್ದೆ ತೋರಿಸದೇ 2025ರ ಜ.29ರಂದು ವರ್ಗಾವಣೆ ಮಾಡಲಾಗಿತ್ತು. ಅಂದಿನಿಂದಲೂ ಹುದ್ದೆಯಿಲ್ಲದ ಕಾರಣ ಅವರು ಪೋಸ್ಟಿಂಗ್‌ಗಾಗಿ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ

ಜೈಲು ಅಧಿಕಾರಿಗಳ ವರ್ತನೆಗೆ ಹೈಕೋರ್ಟ್ ಅಸಮಾಧಾನ

4 ವರ್ಷಗಳಿಂದ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸದ ಜೈಲು ಅಧಿಕಾರಿಗಳ ವರ್ತನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸದಿದ್ದರೆ ಟ್ರಯಲ್ ನಡೆಯುವುದು ಹೇಗೆ? ನಿಮ್ಮ ಜೈಲನ್ನು ವ್ಯವಸ್ಥಿತವಾಗಿಡಿ ಎಂದು ಕೋರ್ಟ್​​ಗೆ ಹಾಜಾರಾಗಿದ್ದ ಕಾರಾಗೃಹ ಇಲಾಖೆ ಡಿಐಜಿಗೆ ಪೀಠ ಸೂಚಿಸಿದೆ. 6 ತಿಂಗಳಿನಿಂದ ಕೋರ್ಟ್‌ಗೆ ಹಾಜರುಪಡಿಸದ ಕೈದಿಗಳ ವಿವರ ಮತ್ತು ಕಾಲಕಾಲಕ್ಕೆ ಕೋರ್ಟ್‌ಗೆ ಹಾಜರುಪಡಿಸಲು ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಹೇಳಿದೆ. ಕಳ್ಳತನ ಪ್ರಕರಣದ ಆರೋಪಿ ಇಮ್ರಾನ್ ಎಂಬಾತ ಶ್ಯೂರಿಟಿ ಸಿಗದೇ ಜೈಲಿನಲ್ಲಿದ್ದ. ಕೋರ್ಟ್ ವಾರಂಟ್‌ ಹೊರಡಿಸಿದರೂ ಜಾರಿಗೊಳಿಸದ ಪೊಲೀಸರು, ಆರೋಪಿ ಜೈಲಿನಲ್ಲೇ ಇದ್ದರೂ ಸಿಕ್ಕಿಲ್ಲ ಎಂದು ಉತ್ತರಿಸಿದ್ದರು. ಹೀಗಾಗಿ ಮುಖ್ಯ ಪೇದೆ ವಿರುದ್ಧ ಇಲಾಖಾ ವಿಚಾರಣೆಗೆ ಸೂಚನೆ ನೀಡಿರುವ ಹೈಕೋರ್ಟ್​​, ವಿಚಾರಣೆ ಮಾರ್ಚ್ 6ಕ್ಕೆ ಮುಂದೂಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:10 am, Sun, 22 February 26

Source link

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು – Kannada News | Horoscope 22 Sunday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ನೀವು ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸಬಹುದು. ಭಯವು ನಿಮ್ಮ ಮನಸ್ಸನ್ನು ಕಟ್ಟಿಹಾಕುವುದು.

ವೃಷಭ ರಾಶಿ:

ದೂರಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಮಕ್ಕಳ ಜೊತೆಗಿದ್ದು ಸಂತೋಷವನ್ನು ಪಡೆಯುವಿರಿ. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಆಗದು. ನಿಮ್ಮ ಮನೋಬಲದ ಪ್ರದರ್ಶನವನ್ನು ತೋರಿಸಬೇಕಾದೀತು. ಸುಮ್ಮನೇ ವಾಗ್ವಾದವನ್ನು ಮಾಡಲು ಹೋಗಿ ಸಮಯವನ್ನು ಹಾಗೂ ಇತರರ ಸಮಯವನ್ನೂ ಹಾಳು ಮಾಡುವಿರಿ.

ಮಿಥುನ ರಾಶಿ:

ಯಶಸ್ಸಿನ ಗುಟ್ಟನ್ನು ನೀವು ಯಾರಿಗೂ ಹೇಳಲಾರಿರಿ. ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವರು. ಸರಳವಾದ ನಿಮ್ಮ ವ್ಯಕ್ತಿತ್ವಕ್ಕೆ ಯಾರೂ ಮನಸೋಲುವರು. ನಿಮ್ಮನ್ನು ಅಬಲಂಬಿಸಿದವರಿಗೆ ನಿಮ್ಮ ಬಿಸಿ ತಟ್ಟಬಹುದು. ಕರ್ತವ್ಯವನ್ನು ನಿಷ್ಠೆಯಿಂದ ಮಾಡುವಿರಿ. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ಕೆಲಸ ಕೆಟ್ಟರೂ ಮನಸ್ಸು ಕೆಡದಿರಲಿ. ದುರಭ್ಯಾಸವು ನಿಮಗೆ ಬೇಡವೆನಿಸುವುದು. ಪ್ರೇಮಿಗಳು ಪರಸ್ಪರ ಒಪ್ಪಂದವನ್ನು ಮಾಡಿಕೊಂಡು ಮುಂದುವರಿಯುವರು.

ಕರ್ಕಾಟಕ ರಾಶಿ:

ನಿಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಂಕೋಚವಾಗಬಹುದು. ಅಮೂಲ್ಯ ವಸ್ತುಗಳ ಖರೀದಿಯಿಂದ ವಂಚನೆಯಾಗಬಹುದು. ನಿರಂತರ ಕೆಲಸದಿಂದ ಸಮಾಧಾನವು ಬೇಕಾಗುವುದು. ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದ್ದರೆ ಲಾಭವು ಇರುವುದು. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ಉಪಕಾರದ ಸ್ಮರಣೆಯನ್ನು ನೀವು ಮಾಡಿಕೊಳ್ಳುವುದಿಲ್ಲ. ವರ್ತನೆಯಲ್ಲಿ ಆಗುವ ಬದಲಾವಣೆಯನ್ನು ಯಾರೂ ಊಹಿಸಲಾರರು. ಎಲ್ಲದರ ಮೇಲೂ ನಂಬಿಕೆಯನ್ನು ಕಳೆದುಕೊಳ್ಳುವಿರಿ.

ಸಿಂಹ ರಾಶಿ:

ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಎಲ್ಲ ಕಡೆಯಿಂದ ನಿಮಗೆ ಅನುಕೂಲವಾಗಬೇಕು ಎಂದುಕೊಳ್ಳುವುದು ಬೇಡ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆಯು ಸಿಗಲಿದೆ. ನಿಮ್ಮ ಜವಾಬ್ದಾರಿಯನ್ನು ನಿರ್ವಹಣೆ ಮಾಡುವಾಗ ಕಷ್ಟ. ಮಕ್ಕಳ ಸ್ವಭಾವವು ಇಷ್ಟವಾಗದೇ ಹೋಗುವುದು. ಖಾಸಗಿ ಸಂಸ್ಥೆಯೊಂದು ನಿಮ್ಮನ್ನು ಮುಖ್ಯಸ್ಥರನ್ನಾಗಿ ಮಾಡುವ ಯೋಚನೆಯನ್ನು ಇಟ್ಟುಕೊಂಡಿದೆ.

ಕನ್ಯಾ ರಾಶಿ:

ನಿಮ್ಮ ಮಹತ್ತ್ವಾಕಾಂಕ್ಷೆಯು ಸಿದ್ಧಿಸುವುದು. ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ. ನಿಮ್ಮ ಮಕ್ಕಳ ಬಾಂಧವ್ಯದಿಂದೆ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ವಿಯೋಗದ ನೋವನ್ನು ನಿಯಂತ್ರಿಸುವ ಕ್ಷಮತೆ ಇರಲಿದೆ. ತಾಯಿಯ ಪ್ರೀತಿಯನ್ನು ಅನುಭವಿಸುವಿರಿ. ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಗಾತಿಯು ನಿಮ್ಮಿಂದ ಏನನ್ನೋ ಮುಚ್ಚಿಡುವರು.

ತುಲಾ ರಾಶಿ:

ನಿಮ್ಮ ವ್ಯಾಪಾರ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಿ. ನೋವನ್ನೂ ಸಕಾರಾತ್ಮಕವಾಗಿ ಮಾಡಿಕೊಳ್ಳುವುದು ನೆಮ್ಮದಿಯ ಸೂತ್ರ. ದ್ವಿಚಕ್ರ ವಾಹನವನ್ನು ಚಲಾಯಿಸುವಾಗ ಎಚ್ಚರಿಕೆ ಬೇಕು. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಋಣಬಾಧೆಗೆ ನಿಮ್ಮ ಉತ್ತರದಾಯಿತ್ವ ಬರಲಿದೆ. ಆರೋಗ್ಯವು ಚೆನ್ನಾಗಿ ಇರಲಿದ್ದು ಮಾನಸಿಕವಾದ ನೆಮ್ಮದಿಯು ಇರುವುದು. ತಾಳ್ಮೆ ಕಡಿಮೆ ಆದಂತೆ ತೋರುವುದು. ನಿಮ್ಮ ಉದಾರಗುಣವು ದುರುಪಯೋಗ ಆಗಬಹುದು.

ವೃಶ್ಚಿಕ ರಾಶಿ:

ಮಂಗಲ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ಸ್ನೇಹಿತರ ಮಾತಿನಿಂದ ನಿಮಗೆ ನೋವಾಗಬಹುದು. ಹಣಕಾಸಿನ ವಿಚಾರಕ್ಕೆ ತಂದೆಯ ನಡುವೆ ವಾಗ್ವಾದವು ಆಗಬಹುದು. ನೆರ ಮನೆಯವರ ವರ್ತನೆಯಿಂದ ನೀವು ಸಿಟ್ಟಾಗುವಿರಿ. ಪರೋಪಕಾರದಿಂದ ನಿಮಗೆ ಸಂತೋಷವಾಗಲಿದೆ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ಸಜ್ಜನರ ಸಂಗವು ಅಪೇಕ್ಷಿಸದೇ ಇದ್ದರೂ ಸಿಗುತ್ತದೆ. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ.

ಧನು ರಾಶಿ:

ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದಂತೆ ಮನಸ್ತಾಪವು ಬರಬಹುದು. ದಿಢೀರ್ ಬದಲಾವಣೆಯನ್ನು ನಿರೀಕ್ಷಿಸಿ ಹತಾಶರಾಗಬಹುದು. ತುರ್ತು ಹಣವು ಬೇಕಿದ್ದರಿಂದ ಸ್ನೇಹಿತರನ್ನು ಕೇಳುವಿರಿ. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ಸ್ವಂತ ವಾಹನ ಖರೀದಿಗೆ ಯೋಜನೆಯನ್ನು ತಯಾರು ಮಾಡುವಿರಿ.

ಮಕರ ರಾಶಿ:

ನಿರಂಕುಶವಾಗಿ ವರ್ತಿಸುವುದು ಇತರರಿಗೆ ಇಷ್ಟವಾಹದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಪಂಡಿತರ ಸಹವಾಸ ತೊರೆಯುವುದು. ವಿದೇಶೀ ವ್ಯಕ್ತಿಯ ಜೊತೆಗಿನ ಸಂಬಂಧ ಹೆಚ್ಚಾಗುವುದು. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು. ಹಣದ ರಕ್ಷಣೆಗೆ ಅನ್ಯ ಉಪಾಯ ಮಾಡುವಿರಿ.

ಕುಂಭ ರಾಶಿ:

ನಿವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಜೀವನಶೈಲಿಯನ್ನು ಸುಧಾರಿಸಿಕೊಳ್ಳಿ. ಆರೋಗ್ಯದ ಬಾಧೆಯ ಜೊತೆ ಶತ್ರುಬಾಧೆಯಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗುವುದು. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ನಿಮ್ಮ ಬಳಿ ಇರುವ ಸಂಪತ್ತನ್ನು ಎಲ್ಲರಿಗೂ ಹೇಳಬೇಕಾದೀತು. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ.

ಮೀನ ರಾಶಿ:

ಭೂಮಿಯ ವ್ಯವಹಾರವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ಧಾರ್ಮಿಕ ಕಾರ್ಯಗಳಿಗೆ ಖರ್ಚು ಮಾಡುವ ಸಾಧ್ಯತೆಯಿದೆ, ಇದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಶುಕ್ಲ, ಕರಣ : ಬಾಲವ, ಸೂರ್ಯೋದಯ – 06 – 46 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭ ಕಾಲ : ರಾಹು 17:02 – 18:30, ಯಮಗಂಡ ಕಾಲ 12:38 – 14:06, ಗುಳಿಕ ಕಾಲ 15:34 – 17:02

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 22ರ ದಿನಭವಿಷ್ಯ

ಸ್ವಯಂವರ ಪಾರ್ವತಿ ಮಂತ್ರದ ಶ್ರವಣ, ಪಠಣವನ್ನು ಮಾಡಿ. ಯಾರು ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಥವಾ ದಂಪತಿ ಮಧ್ಯೆ ವಿರಸ ಇದೆ ಅಂಥವರಿಗೆ ಸಮಸ್ಯೆಯಿಂದ ಹೊರಬರುವ ಮಾರ್ಗೋಪಾಯ ಗೋಚರಿಸುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮಿಂದ ಹಲವರಿಗೆ ಈ ದಿನ ಅನುಕೂಲ- ಸಹಾಯ ಒದಗಿಬರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ವ್ಯಕ್ತಿಯೊಬ್ಬರ ಬಳಿ ಶಿಫಾರಸು ಮಾಡಿದರೆ ತನಗೆ ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ನಿಮ್ಮನ್ನು ಹುಡುಕಿಕೊಂಡು ಬಂದು ಸಹಾಯ ಕೇಳಬಹುದು. ಅಥವಾ ಇದೊಂದು ವಿಚಾರವನ್ನು ಹೇಳಬೇಡಿ ಎಂದು ಮನವಿ ಮಾಡುವ ಸಾಧ್ಯತೆ ಕೂಡ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಸಾಮಾಜಿಕ ಮಾಧ್ಯಮಗಳಲ್ಲಿ ಬರುವಂಥ ಜಾಹೀರಾತು ನೋಡಿ, ಯಾವುದೇ ವಸ್ತುವನ್ನು ಖರೀದಿ ಮಾಡಬೇಡಿ. ಏಕೆಂದರೆ ಆ ನಂತರ ಪರಿತಪಿಸುವಂತೆ ಆಗುತ್ತದೆ. ಇನ್ನು ನವ ವಿವಾಹಿತರಿದ್ದಲ್ಲಿ ಹಣಕಾಸು ವಿಷಯಗಳಲ್ಲಿ ಪಾರದರ್ಶಕವಾಗಿ ಇರುವುದು ಬಹಳ ಉತ್ತಮ ಹಾಗೂ ಕ್ಷೇಮ. ತಾತ್ಕಾಲಿಕವಾಗಿ ಅಂದುಕೊಂಡಿದ್ದ ಜವಾಬ್ದಾರಿಯೊಂದು ಕಾಯಂ ಆಗಿ ನಿಮ್ಮ ಮೇಲೇ ಬರುವ ಎಲ್ಲ ಅವಕಾಶಗಳು ಇವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮ ಸಮಯ, ಶ್ರಮ, ಹಣ, ಪ್ರಯತ್ನ ಹೀಗೆ ಮುಖ್ಯವಾದದ್ದನ್ನು ತಮ್ಮ ಅನುಕೂಲಕ್ಕಾಗಿ ಇತರರು ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಬಲವಾಗಿ ನಿಮಗೆ ಅನಿಸುವುದಕ್ಕೆ ಶುರುವಾಗಲಿದೆ. ನಿಮ್ಮಲ್ಲಿ ಯಾರು ಟ್ಯೂಷನ್ ಹೇಳಿಕೊಡುವುದರ ಮೂಲಕ ಆದಾಯವನ್ನು ಗಳಿಸುತ್ತಿದ್ದೀರೋ ಅಂಥವರಿಗೆ ಕೆಲವು ಸಮಯ ಪಾಠ ಮಾಡುವುದು ಅಸಾಧ್ಯ ಎಂಬ ಸನ್ನಿವೇಶ ನಿರ್ಮಾಣ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ

ಈ ದಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ, ಹತ್ತು ನಿಮಿಷವಾದರೂ ದೇವಾಲಯದಲ್ಲಿ ಕೂತಿದ್ದು ಬನ್ನಿ. ಆರೋಗ್ಯ ಸಮಸ್ಯೆ, ವಿರಸ- ಮನಸ್ತಾಪಗಳು. ದೂರವಾಗಿ ಮಾನಸಿಕ ನೆಮ್ಮದಿ ಸಿಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ವಾಹನ ಸ್ವಂತಕ್ಕೆ ಇಟ್ಟುಕೊಂಡು, ಚಾಲನೆಯನ್ನೂ ಮಾಡುತ್ತಿರುವವರು ಒಂದೋ ಹೊಸ ವಾಹನವನ್ನು ಖರೀದಿಸಬಹುದು ಅಥವಾ ಈಗಿರುವುದರ ಜೊತೆಗೆ ಇನ್ನೊಂದನ್ನು ಖರೀದಿಸಿ, ಬಾಡಿಗೆಗೆ ಬಿಡುವ ಬಗ್ಗೆ ಆಲೋಚಿಸಬಹುದು. ತುಂಬ ಆತುರವಾಗಿ ಮಾಡಿ ಮುಗಿಸಬೇಕಾದ ಕೆಲಸವೊಂದು ಕಾರ್ಪೆಂಟರ್ ಗಳು, ರೇಲಿಂಗ್, ಪೇಂಟಿಂಗ್ ಅಥವಾ ಎಲೆಕ್ಟ್ರಿಕ್ ಕೆಲಸ ಮಾಡುವಂಥವರನ್ನು ಹುಡುಕಿಕೊಂಡು ಬರುವ ಸಾಧ್ಯತೆಗಳು ಹೆಚ್ಚಿವೆ. ಇದರಿಂದ ಖಂಡಿತವಾಗಿ ಒಳ್ಳೆಯ ಆದಾಯವಂತೂ ಬರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿರೀಕ್ಷಿತವಾದ ಆದಾಯಗಳು ಈ ದಿನ ನಿಮ್ಮ ಕೈ ಸೇರಲಿವೆ. ಮನಸ್ಸಿಗೆ ಒಂದು ಬಗೆಯ ಸಮಾಧಾನ- ಸಂತೋಷ ಇರಲಿದ್ದು, ನಿಮ್ಮಲ್ಲಿ ಕೆಲವರು ಪ್ರೀತಿಯನ್ನು ನಿವೇದಿಸಿಕೊಳ್ಳುವಂಥ ಅವಕಾಶಗಳಿವೆ. ಹಣ್ಣು- ತರಕಾರಿಗಳ ಹೋಲ್ ಸೇಲ್ ವ್ಯಾಪಾರ ಮಾಡುವವರಿಗೆ ಆದಾಯದಲ್ಲಿ ಹೆಚ್ಚಳ ನಿರೀಕ್ಷೆ ಮಾಡಬಹುದು. ಯಾವ ಕಾರಣಕ್ಕೂ ಈಗಿರುವ ಗ್ರಾಹಕರನ್ನು ಕಳೆದುಕೊಳ್ಳಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ದೂರ ಪ್ರಯಾಣದ ಬಗ್ಗೆ ಯೋಜನೆ ಹಾಕಿಕೊಂಡವರು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ರದ್ದು ಮಾಡಬೇಕಾದ ಸನ್ನಿವೇಶ ಎದುರಾಗಬಹುದು. ಬೇರೆಯವರನ್ನು ಜೊತೆಗೆ ಬರಲೇಬೇಕೆಂದು ಒತ್ತಡ ಹಾಕಿ, ಕೊನೆ ಕ್ಷಣದಲ್ಲಿ ನೀವೇ ತೆರಳದಿದ್ದರೆ ಹೇಗಾಗಬಹುದು ಎಂಬ ಬಗ್ಗೆ ಮೊದಲೇ ಆಲೋಚನೆ ಮಾಡುವುದು ಉತ್ತಮ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 22ರ ದಿನಭವಿಷ್ಯ

ಓಂ ನಮೋ ಭಗವತೇ ವಾಸುದೇವಾಯ ಎಂದು ನೂರಾ ಎಂಟು ಬಾರಿ ಜಪ ಮಾಡಿ. ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಾ ಇರುವವರಲ್ಲಿನ ಆತಂಕ ದೂರವಾಗಿ, ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮದೇ ಬದುಕಿನಲ್ಲಿ ಆಗುವಂಥ ಕೆಲವು ಬದಲಾವಣೆಗಳಿಂದ ಮುಖ್ಯ ತೀರ್ಮಾನವನ್ನು ಮಾಡಲಿದ್ದೀರಿ. ಆನ್ ಲೈನ್ ಮೂಲಕ ಖರೀದಿ ಮಾಡಿದ್ದ ವಸ್ತುಗಳು ಕೆಲವನ್ನು ಕಳಪೆ ಗುಣಮಟ್ಟ ಎಂಬ ಕಾರಣಕ್ಕೋ ಅಥವಾ ಮನಸ್ಸಿಗೆ ಹಿಡಿಸಲಿಲ್ಲ ಎಂಬ ಕಾರಣಕ್ಕೋ ಹಿಂತಿರುಗಿಸುವುದಕ್ಕೆ ನಿರ್ಧರಿಸುವ ಸಾಧ್ಯತೆಗಳು ಹೆಚ್ಚಿವೆ. ಇನ್ನು ನಿಮ್ಮಲ್ಲಿ ಯಾರಿಗೆ ಈಗಾಗಲೇ ಗ್ಯಾಸ್ಟ್ರಿಕ್ ಸಮಸ್ಯೆ ಇದೆಯೋ ಅಂಥವರಿಗೆ ತೊಂದರೆ ಉಲ್ಬಣಿಸಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಬಂಡವಾಳ ಹೂಡಿಕೆ ಮಾಡಬೇಕು ಎಂದು ಆಲೋಚಿಸುತ್ತಿರುವವರಿಗೆ ಎಲ್ಲಿ ಮಾಡಬೇಕು ಹಾಗೂ ಯಾರನ್ನು ಜತೆಗೆ ಸೇರಿಸಿಕೊಳ್ಳಬೇಕು ಎಂಬಿತ್ಯಾದಿ ವಿಚಾರಗಳನ್ನು ಈ ದಿನ ಆಖೈರು ಮಾಡಿಕೊಳ್ಳುವ ಸಾಧ್ಯತೆಗಳು ಇವೆ. ಸಿನಿಮಾ ಅಥವಾ ಧಾರಾವಾಹಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ದೀರ್ಘಾವಧಿಗೆ ಪ್ರಾಜೆಕ್ಟ್ ಒಂದು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಜ್ಯೋತಿಷ್ಯ, ಪೌರೋಹಿತ್ಯ, ಅಧ್ಯಾತ್ಮ ಪ್ರವಚನ ಇವುಗಳನ್ನು ವೃತ್ತಿಯಾಗಿ ಸ್ವೀಕರಿಸಿದ್ದಾರೋ ಅಂಥವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕುಟುಂಬಕ್ಕಾಗಿ ಯೋಜನೆಯನ್ನು ರೂಪಿಸುವ ಸಾಧ್ಯತೆ ಸಹ ಇದೆ. ಈ ದಿನ ನೀವು ಎಚ್ಚರಿಕೆ ಅಂತ ವಹಿಸಬೇಕಾಗಿರುವುದು ಕಣ್ಣಿನ ಬಗ್ಗೆ. ಕಣ್ಣಿನ ಪವರ್ ಸಮಸ್ಯೆ ಉದ್ಭವಿಸಬಹುದು ಅಥವಾ ಈಗಾಗಲೇ ಇದ್ದಲ್ಲಿ ಅದು ಉಲ್ಬಣಿಸುವ ಸಾಧ್ಯತೆಗಳಿವೆ. ಹೊಸ ಬಟ್ಟೆ ಅಥವಾ ಬ್ರ್ಯಾಂಡೆಡ್ ವಸ್ತುಗಳನ್ನು ಖರೀದಿಸುತ್ತೀರಿ ಎಂದಾದಲ್ಲಿ ಬಜೆಟ್ ಮೇಲೆ ಗಮನವಿಟ್ಟುಕೊಳ್ಳಿ.

ಲೇಖನ- ಸ್ವಾತಿ ಎನ್.ಕೆ.

Source link

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – Kannada News | Man lures 4 year old Child with chocolates rapes her at Pune Railway station

ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ ಮಾಡಿದ್ದ ಅಪ್ಪ-ಮಗಳು ರೈಲಿಗಾಗಿ ಕಾಯುತ್ತಿದ್ದರು. ಆಗ ಅಪ್ಪ ಟಾಯ್ಲೆಟ್​​ಗೆ ಹೋಗಿ ಬರುವಾಗ ಮಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿತು. ಮಗಳು ಎಲ್ಲೂ ಕಾಣದಿದ್ದಾಗ ಇಂದು ಬೆಳಗಿನ ಜಾವ 3 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ರೈಲ್ವೆ ನಿಲ್ದಾಣದ ಸಿಸಿಟಿವಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿ ಆ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವುದು ರೆಕಾರ್ಡ್ ಆಗಿತ್ತು. ಆಕೆ ಆತನ ಕೈ ಹಿಡಿದುಕೊಂಡು ಹೋಗುತ್ತಿದ್ದಳು. ಆದರೆ, ಆತ ಯಾರೆಂದು ಆ ಮಗುವಿನ ಅಪ್ಪ-ಅಮ್ಮನಿಗೆ ಗೊತ್ತಿರಲಿಲ್ಲ. ಕೊನೆಗೂ ಆಕೆ ಸಿಕ್ಕಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಆರೋಪಿಯು ಬಾಲಕಿಯನ್ನು ರೈಲ್ವೆ ನಿಲ್ದಾಣದ ಆವರಣದೊಳಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗು ನೀಡಿದ ವಿವರಣೆಯ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನು ಗುರುತಿಸಿದರು. ಪೊಲೀಸರು ಈ ಘಟನೆ ನಡೆದ 4 ಗಂಟೆಗಳಲ್ಲಿ ಆತನನ್ನು ಬಂಧಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ! – Kannada News | Karnataka Suicides: Police Harassment and False Complaints Spark Tragedies

ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ ಜೀವನ ಸುಗಮವಾಗಿಯೇ ಸಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಪತ್ನಿ ಹರಿಣಿಗೆ ಪಕ್ಕದ ಮನೆಯ ಅಶೋಕ್ ಎಂಬಾತನ ಜೊತೆ ಸಲುಗೆ ಬೆಳೆದಿತ್ತು.

ಕಳೆದ ರಾತ್ರಿ ಮನು ತನ್ನ ಪತ್ನಿಯ ಮೊಬೈಲ್‌ನಲ್ಲಿ ಅಶೋಕ್ ಕಳುಹಿಸಿದ್ದ ಸಂದೇಶಗಳನ್ನು ನೋಡಿದ್ದನು. ಇದೇ ವಿಚಾರವಾಗಿ ಮನು ಮತ್ತು ಅಶೋಕ್ ನಡುವೆ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಅಶೋಕ್, “ನಿನ್ನ ಹೆಂಡತಿ ಜೊತೆ ನನಗೆ ಸಂಬಂಧ ಇರುವುದು ನಿಜ” ಎಂದು ಹೇಳಿ ಮನುಗೆ ಅವಮಾನ ಮಾಡಿದ್ದಾನೆ ಎನ್ನಲಾಗಿದೆ. ಈ ಗಲಾಟೆಯ ಬೆನ್ನಲ್ಲೇ ಪತ್ನಿ ಹರಿಣಿ, ಗಂಡ ಮನು ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಗಂಡ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಳು. ಪೊಲೀಸರು ವಿಚಾರಣೆಗೆ ಕರೆದಾಗ, ಇಡೀ ಊರಿನ ಮುಂದೆ ತನ್ನ ಮರ್ಯಾದೆ ಹೋಯಿತು ಎಂದು ಮನು ತೀವ್ರವಾಗಿ ನೊಂದಿದ್ದನು.

ಇದನ್ನೂ ಓದಿ: ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ?

ಮರ್ಯಾದೆಗೆ ಹೆದರಿದ ಮನು ಅಂತಿಮವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. “ನನ್ನ ಮಗನ ಸಾವಿಗೆ ಆತನ ಪತ್ನಿ ಹರಿಣಿ ಮತ್ತು ಅಶೋಕ್ ಅವರೇ ನೇರ ಕಾರಣ. ಅವರಿಬ್ಬರ ಅಕ್ರಮ ಸಂಬಂಧವೇ ಈ ದುರಂತಕ್ಕೆ ನಾಂದಿ ಹಾಡಿದೆ” ಎಂದು ಮನುವಿನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೋಷಕರ ದೂರಿನ ಮೇರೆಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:08 pm, Sat, 21 February 26

Source link

Exit mobile version