ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ – Kannada News | Studying Developments Indias First Reaction After US Supreme Court Order On Trump Tariffs
ನವದೆಹಲಿ, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ವಿಧಿಸಿದ ಸುಂಕಗಳನ್ನು ರದ್ದುಗೊಳಿಸುವ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳನ್ನು ಭಾರತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. “ನಿನ್ನೆ ಸುಂಕಗಳ ಕುರಿತು ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಗಮನಿಸಿದ್ದೇವೆ. ಅಧ್ಯಕ್ಷ ಟ್ರಂಪ್ ಆ ನಿಟ್ಟಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುಎಸ್ ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಪ್ರಕಟಿಸಿದೆ. ಈ ಎಲ್ಲಾ ಬೆಳವಣಿಗೆಗಳ ಪರಿಣಾಮಗಳಿ ಬಗ್ಗೆ…