Daily Devotional: ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ? – Kannada News | Why a Gurus Guidance is Essential for Human Existence
ಜೀವನ ಪೂರ್ತಿ ಮನುಷ್ಯನಿಗೆಗುರುವಿನ ಅನುಗ್ರಹ ಬೇಕಾ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆಗೆ, ಗುರುವಿನ ಅನುಗ್ರಹವು ಅತ್ಯಂತ ಮಹತ್ವದ್ದಾಗಿದೆ. “ಹರ ಮುನಿದರೂ ಗುರು ಕಾಯುವನು” ಎಂಬ ನುಡಿಯು ಗುರುವಿನ ಸರ್ವೋಚ್ಚ ಸ್ಥಾನವನ್ನು ಸಾರುತ್ತದೆ. ತಂದೆ-ತಾಯಿಗಳು ಮೊದಲ ಗುರುಗಳಾದರೆ, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉದ್ಯೋಗದಲ್ಲಿ ಮಾರ್ಗದರ್ಶನ ನೀಡುವವರು ಸಹ ಗುರುಗಳೇ. ಪರಿಪೂರ್ಣ ಜೀವನ ಮತ್ತು ಮಾನಸಿಕ ನೆಮ್ಮದಿಗಾಗಿ ಗುರುವಿನ ಆಶ್ರಯ…