ಕಾರವಾರ, (ಫೆಬ್ರವರಿ 20): ಉತ್ತರ ಕನ್ನಡ(Uttara Kannada) ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ (Forest) ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇಂದು (ಫೆಬ್ರವರಿ 20) ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡಗೋಡು ಪೊಲೀಸರು ದೌಡಾಯಿಸಿದ್ದಾರೆ. ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಸಿದ್ದಾರೆ.
ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಮತ್ತು ನಟ ಕಾರ್ತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್ನಲ್ಲಿ ಬಂದಿದ್ದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ಆ ಚಿತ್ರಕ್ಕೆ ಸೀಕ್ವೆಲ್ (Kaithi 2) ಬರಲಿದೆ ಎಂದು ಹೇಳಲಾಗಿತ್ತಾದರೂ ಅಪ್ಡೇಟ್ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ‘ಕೈದಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅದರ ಜೊತೆಗೆ ಒಂದು ಟ್ವಿಸ್ಟ್ ಎದುರಾಗಿದೆ. ‘ಕೈದಿ 2’ ಬದಲು ‘ದಿಲ್ಲಿ’ (Dilli) ಎಂದು ಶೀರ್ಷಿಕೆ ಇಟ್ಟಿರುವ ಸಾಧ್ಯತೆ ಇದೆ.
ಸೆನ್ಸಾರ್ ಮಂಡಳಿಯಲ್ಲಿ ‘ದಿಲ್ಲಿ’ ಶೀರ್ಷಿಕೆ ಸದ್ದು ಮಾಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ತಮಿಳಿನ ‘ದಿಲ್ಲಿ’ ಎಂಬ ಶೀರ್ಷಿಕೆಯ ಚಿತ್ರದ ಟೀಸರ್ ಇಂದು (ಫೆಬ್ರವರಿ 20) ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದುಕೊಂಡಿದೆ. ‘ಕೈದಿ’ ಚಿತ್ರದಲ್ಲಿ ಕಾರ್ತಿ ನಿರ್ವಹಿಸಿದ್ದ ಪಾತ್ರದ ಹೆಸರು ಕೂಡ ‘ದಿಲ್ಲಿ’ ಎಂದೇ ಆಗಿರುವುದರಿಂದ, ಈ ಶೀರ್ಷಿಕೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.
ಕುತೂಹಲ ಮೂಡಿಸಿದ ಪ್ರೊಡಕ್ಷನ್ ಹೌಸ್: ಈ ಹೊಸ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುವಂತೆ, ‘ದಿಲ್ಲಿ’ ಚಿತ್ರದ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವುದು ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ನಿರ್ಮಾಣ ಸಂಸ್ಥೆ. ವಿಶೇಷವೆಂದರೆ, ‘ಕೈದಿ’ ಚಿತ್ರವನ್ನೂ ಇದೇ ಸಂಸ್ಥೆ ನಿರ್ಮಿಸಿತ್ತು. ಇದರಿಂದಾಗಿ ‘ಕೈದಿ 2’ ಚಿತ್ರವನ್ನೇ ‘ದಿಲ್ಲಿ’ ಎಂದು ಮರುನಾಮಕರಣ ಮಾಡಲಾಗಿದೆಯೇ ಅಥವಾ ಇದು ಅದೇ ಪಾತ್ರವನ್ನು ಆಧರಿಸಿದ ಮತ್ತೊಂದು ಹೊಸ ಕಥೆಯೇ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿವೆ.
ಲೋಕೇಶ್ ಕನಗರಾಜ್ ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ: ನಿರ್ದೇಶಕ ಲೋಕೇಶ್ ಕನಗರಾಜ್ ಅವರ ಎಲ್ಸಿಯು, ಅಂದರೆ ‘ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್’ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘ದಿಲ್ಲಿ’ ಶೀರ್ಷಿಕೆ ಕೇಳಿ ಫ್ಯಾನ್ಸ್ ಫುಲ್ ಖುಷಿ ಆಗಿದ್ದಾರೆ. ‘ಕೂಲಿ’ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದ್ದರೂ ಕೂಡ ಲೋಕೇಶ್ ಅವರು ‘ದಿಲ್ಲಿ’ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲಿದ್ದಾರೆ ಎಂದು ಕಾಯುತ್ತಿದ್ದಾರೆ ಅಭಿಮಾನಿಗಳು.
ಲೋಕೇಶ್ ಕನಗರಾಜ್ ಅವರ ಸಿನಿಮಾಗಳಲ್ಲಿ ಯಾವಾಗಲೂ ನಿರೀಕ್ಷೆಗೂ ಮೀರಿದ ಟ್ವಿಸ್ಟ್‌ಗಳು ಇರುತ್ತವೆ. ಹಾಗಾಗಿ, ಅಧಿಕೃತ ಘೋಷಣೆ ಹೊರಬೀಳುವವರೆಗೂ ಈ ‘ದಿಲ್ಲಿ’ ರಹಸ್ಯ ಹೀಗೆಯೇ ಮುಂದುವರಿಯಲಿದೆ. ಒಂದು ವೇಳೆ ‘ಕೈದಿ 2’ ಚಿತ್ರವೇ ‘ದಿಲ್ಲಿ’ ಆಗಿದ್ದರೆ, ದಕ್ಷಿಣ ಭಾರತದ ಚಿತ್ರರಂಗದಲ್ಲಿ ಇದು ಹೊಸ ದಾಖಲೆ ಬರೆಯುತ್ತದೆ ಎಂಬುದು ಅಭಿಮಾನಿಗಳ ನಂಬಿಕೆ.
ವಾಷಿಂಗ್ಟನ್, ಫೆಬ್ರವರಿ 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶಾಂತಿ ಮಂಡಳಿ ಸಭೆಯಲ್ಲಿ ಮಾತನಾಡುವಾಗ ಭಾರತ-ಪಾಕಿಸ್ತಾನದ ಸಮಘರ್ಷವನ್ನು ಕೂಡ ಪ್ರಸ್ತಾಪಿಸಿದ್ದಾರೆ. ಈ ವೇಳೆ ಆ ಸಭೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನ ಪ್ರಧಾನಿಗೆ ‘ಸ್ಟಾಂಡ್ಅಪ್’ ಎಂದು ಹೇಳಿದ್ದಾರೆ. ಟ್ರಂಪ್ ಮಾತಿನಂತೆ ಎದ್ದುನಿಂತ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ನಿಂತೇ ಇರಬೇಕೋ, ಕುಳಿತುಕೊಳ್ಳಬೇಕೋ ಎಂದು ಗೊತ್ತಾಗದೆ ಮುಜುಗರಕ್ಕೀಡಾಗಿದ್ದಾರೆ. ಈ ವೇಳೆ ಟ್ರಂಪ್ ಭಾರತದ ಪ್ರಧಾನಿ ಮೋದಿಯ ಹೆಸರನ್ನು ಪ್ರಸ್ತಾಪಿಸಿ ಮೋದಿ ಅದ್ಭುತ ವ್ಯಕ್ತಿ ಎಂದು ಹೊಗಳಿದ್ದಾರೆ. ಇದರಿಂದ ಶೆಹಬಾಜ್ ಷರೀಫ್ಗೆ ತೀವ್ರ ಮುಖಭಂಗವಾಗಿದೆ. ಟ್ರಂಪ್ ಹೇಳುತ್ತಿದ್ದಂತೆ ಕೀಲಿ ಕೊಟ್ಟ ಗೊಂಬೆಯಂತೆ ಎದ್ದುನಿಂತ ಪಾಕ್ ಪ್ರಧಾನಿಯ ಈ ‘ಸ್ಟಾಂಡ್ಅಪ್’ ಕಾಮಿಡಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಮತ್ತು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟಿಸಿರುವ ‘ಸೀತಾಪಯಣ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಪ್ರೀಮಿಯರ್ ಶೋ ಅನ್ನು ಅರ್ಜುನ್ ಸರ್ಜಾ ದಂಪತಿಗಳು ಒಟ್ಟಿಗೆ ನೋಡಿದರು. ಅವರು ಮಾತ್ರವೇ ಅಲ್ಲದೆ ಶಿವರಾಜ್ ಕುಮಾರ್ ಸೇರಿದಂತೆ ಕನ್ನಡದ ಕೆಲವು ಪ್ರಮುಖ ಸೆಲೆಬ್ರಿಟಿಗಳು ಸಿನಿಮಾ ನೋಡಿದರು. ಸಿನಿಮಾ ಬಳಿಕ ಅರ್ಜುನ್ ಸರ್ಜಾ ದಂಪತಿ ಮಾಧ್ಯಮಗಳ ಮುಂದೆ ಮಾತನಾಡಿದ್ದು, ಸಿನಿಮಾವನ್ನು ಕೊಂಡಾಡಿದ್ದಾರೆ. ಅಂದಹಾಗೆ ಸಿನಿಮಾ ನಿರ್ದೇಶನ ಮಾಡಿರುವುದು ಅರ್ಜುನ್ ಸರ್ಜಾ ಅವರೇ.
ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ನಟನೆ ಮತ್ತು ಗ್ಲಾಮರ್ನಿಂದ ದಕ್ಷಿಣ ಭಾರತ ಚಿತ್ರರಂಗ ಮಾತ್ರವೇ ಅಲ್ಲದೆ ಬಾಲಿವುಡ್ನಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ರಶ್ಮಿಕಾ ಮೊದಲೆಲ್ಲ ಸೀದಾ-ಸಾದಾ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದರು. ಆದರೆ ಅನುಭವ ಹೆಚ್ಚಾದಂತೆ ತುಸು ಬೋಲ್ಡ್ ಆದ ಪಾತ್ರಗಳಲ್ಲಿಯೂ ನಟಿಸಲು ಆರಂಭಿಸಿದರು. ‘ಪುಷ್ಪ’ ಸಿನಿಮಾದ ಅವರ ಪಾತ್ರ ಅಲ್ಲಲ್ಲಿ ತುಸು ಬೋಲ್ಡ್ ಆಗಿತ್ತು. ಕೆಲ ತಿಂಗಳುಗಳ ಹಿಂದೆ ಬಿಡುಗಡೆ ಆದ ‘ಥಮ’ ಸಿನಿಮಾನಲ್ಲಿ ತುಸು ಹೆಚ್ಚೇ ಬೋಲ್ಡ್ ಆಗಿ ನಟಿಸಿದ್ದರು. ಒಂದು ಐಟಂ ಹಾಡಿನಲ್ಲೂ ಕಾಣಿಸಿಕೊಂಡಿದ್ದರು. ಆದರೆ ಇದೀಗ ರಶ್ಮಿಕಾ ಎಲ್ಲ ಗಡಿಗಳನ್ನು ಮುರಿದು ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ.
ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ‘ಗರ್ಲ್ಫ್ರೆಂಡ್’ ಹೆಸರಿನ ಮಹಿಳಾ ಪ್ರಧಾನ ಸಿನಿಮಾನಲ್ಲಿ ನಟಿಸಿದ್ದರು. ಪುರುಷ ಅಹಂ ಅನ್ನು ಎದುರಿಸುವ, ಪ್ರಶ್ನೆ ಮಾಡುವ ಗಟ್ಟಿಯಾದ ಪಾತ್ರದಲ್ಲಿ ನಟಿಸಿದ್ದರು ರಶ್ಮಿಕಾ. ಆದರೆ ಇದೀಗ ರಶ್ಮಿಕಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಸಲಿಂಗಕಾಮಿಯ (ಲೆಸ್ಬಿಯನ್) ಪಾತ್ರದಲ್ಲಿ ನಟಿಸಿದ್ದಾರೆ. ಬಹಳ ಬೋಲ್ಡ್ ಆದ ಪಾತ್ರ ಇದಾಗಿರುವ ಜೊತೆಗೆ ಸಖತ್ ಗ್ಲಾಮರಸ್ ಆಗಿಯೂ ಸಿನಿಮಾನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ರಶ್ಮಿಕಾ ಮಂದಣ್ಣ ಹಿಂದಿಯ ‘ಕಾಕ್ಟೇಲ್ 2’ ಸಿನಿಮಾನಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈ ಸಿನಿಮಾನಲ್ಲಿ ರಶ್ಮಿಕಾ ಜೊತೆಗೆ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೃತಿ ಸನೊನ್ ಮತ್ತು ಶಾಹಿದ್ ಕಪೂರ್ ಸಹ ಇದ್ದಾರೆ. ಇದೊಂದು ತ್ರಿಕೋನ ಪ್ರೇಮಕಥೆ ಹೊಂದಿರುವ ಸಿನಿಮಾ ಆಗಿದೆ ಎನ್ನಲಾಗಿತ್ತು. ಆದರೆ ಇದೀಗ ಹೊರಬಿದ್ದಿರುವ ಸುದ್ದಿಯಂತೆ ಈ ಸಿನಿಮಾನಲ್ಲಿ ರಶ್ಮಿಕಾ ಮತ್ತು ಕೃತಿ ಸನೊನ್ ಲೆಸ್ಬಿಯನ್ ಕಪಲ್ ಪಾತ್ರ ನಿರ್ವಹಿಸಿದ್ದಾರಂತೆ.
2012 ರಲ್ಲಿ ಬಿಡುಗಡೆ ಆಗಿದ್ದ ‘ಕಾಕ್ಟೇಲ್’ ಸಿನಿಮಾನಲ್ಲಿ ಸೈಫ್ ಅಲಿ ಖಾನ್, ದೀಪಿಕಾ ಪಡುಕೋಣೆ ಮತ್ತು ದಿಯಾನಾ ಪೆಂಟಿ ನಟಿಸಿದ್ದರು. ಅದು ಪಕ್ಕಾ ತ್ರಿಕೋನ ಪ್ರೇಮಕಥೆಯನ್ನು ಹೊಂದಿತ್ತು. ಸಿನಿಮಾ ದೊಡ್ಡ ಹಿಟ್ ಸಹ ಆಗಿತ್ತು. ಅದೇ ಫಾರ್ಮುಲಾ ಇರಿಸಿಕೊಂಡು ಇದೀಗ ‘ಕಾಕ್ಟೇಲ್ 2’ ಮಾಡಲಾಗಿದೆ. ಆದರೆ ಇಲ್ಲಿ ಕತೆಯಲ್ಲಿ ಟ್ವಿಸ್ಟ್ ಕೊಡಲಾಗಿದ್ದು, ರಶ್ಮಿಕಾ ಮತ್ತು ಕೃತಿ ಸನೊನ್ ಅವರನ್ನು ಜೋಡಿ ಮಾಡಲಾಗಿದೆ.
‘ಕಾಕ್ಟೇಲ್ 2’ ನಿರ್ದೇಶಕ ಹೋಮಿ ಅದ್ಜಾಯಿನ್ ಹೇಳಿದ್ದಂತೆ ಜನವರಿ 31 ರಂದು ಸಿನಿಮಾದ ಶೂಟಿಂಗ್ ಮುಗಿಸಲಾಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಸಹ ಬಹುತೇಕ ಮುಗಿದಿದೆ. ಆದರೆ ಶಾಹಿದ್ ಕಪೂರ್ ನಟನೆಯ ‘ಓ ರೋಮಿಯೊ’ ಸಿನಿಮಾ ಬಿಡುಗಡೆ ಆಗಬೇಕಿದ್ದ ಕಾರಣ ‘ಕಾಕ್ಟೇಲ್ 2’ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಮುಂದಿನ ತಿಂಗಳು ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.
ವಿದ್ಯಾರ್ಥಿಯಿಂದ ಮೇಲ್ವಿಚಾರಕರ ಮೇಲೆ ಹಲ್ಲೆImage Credit source: tv9 kannada
ಕಲಬುರಗಿ, ಫೆಬ್ರವರಿ 20: ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ (Student) ಹಲ್ಲೆ (attacks) ಮಾಡಿರುವಂತಹ ಘಟನೆಯೊಂದು ನಗರದ ಡಾ. ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿ ಶಹಬಾಜ್ ಎಂಬಾತನಿಂದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.
ನಡೆದಿದ್ದೇನು?
ಡಾ.ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಇಂದು ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆದಿತ್ತು. ಈ ವೇಳೆ ವಿದ್ಯಾರ್ಥಿ ಶಹಬಾಜ್ ಮೊಬೈಲ್ ಬಳಸಿಕೊಂಡು ಕಾಪಿ ಮಾಡಲು ಮುಂದಾಗಿದ್ದ. ಇದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್, ಪ್ರಶ್ನಿಸಿ ಉತ್ತರ ಪತ್ರಿಕೆ ಪಡೆದುಕೊಂಡಿದ್ದರು.
ವಿದ್ಯಾರ್ಥಿ ಹಲ್ಲೆ ಮಾಡುತ್ತಿರುವ ವಿಡಿಯೋ
Kalaburagi: Student Assaults Assistant Professor After Being Caught Cheating During Exam
Kalaburagi
A disturbing incident of violence against an educator has been reported from a local homeopathy college in #Kalaburagi, where a student allegedly assaulted an assistant… pic.twitter.com/781wfI6mVp
ವಿದ್ಯಾರ್ಥಿಯನ್ನು ತಕ್ಷಣವೇ ಪರೀಕ್ಷಾ ಹಾಲ್‌ನಿಂದ ಹೊರಹೋಗುವಂತೆ ಸೂಚಿಸಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿ ತಕ್ಷಣ ಪ್ರಾಧ್ಯಾಪಕ ಶಿವರಾಜಕುಮಾರ್ ಅವರ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ. ಈ ಆಕಸ್ಮಿಕ ಘಟನೆಯಿಂದ ಕೆಲಕಾಲ ಕಾಲೇಜು ಆವರಣದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು.
ಇನ್ನು ವಿದ್ಯಾರ್ಥಿ ಶಹಬಾಜ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಿದ್ಯಾರ್ಥಿಯ ನಡುವಳಿಕೆ ಬಗ್ಗೆ ಆಡಳಿತ ಮಂಡಳಿ ಪಾಲಕರಿಗೆ ಮಾಹಿತಿ ನೀಡಿದ್ದಾರೆ. ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿರಲು ಕಾಲೇಜು ಮಂಡಳಿ ನಿರ್ಧರಿಸಿದೆ.
ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಮಾರ್ಚ್ 19ರಂದು ಈ ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ. ಚಿತ್ರದ ಬಿಡುಗಡೆಗೆ ಒಂದು ತಿಂಗಳು ಬಾಕಿ ಇದೆ ಎನ್ನುವಾಗ ಟೀಸರ್ ಅನಾವರಣ ಮಾಡಲಾಗಿದೆ. ಈ ಟೀಸರ್ ನೋಡಿ ಯಶ್ (Yash) ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ಒಂದು ಕೊರತೆ ಕಾಣಿಸಿದೆ. ಇಡೀ ಟೀಸರ್ನಲ್ಲಿ ಯಾವುದೇ ನಟಿಯರ ಮುಖ ಕಾಣಿಸಿಲ್ಲ! ನಯನತಾರಾ, ರುಕ್ಮಿಣಿ ವಸಂತ್ ಮುಂತಾದ ಸ್ಟಾರ್ ನಟಿಯರು ‘ಟಾಕ್ಸಿಕ್’ ಚಿತ್ರದಲ್ಲಿ ಅಭಿನಯಿಸಿದ್ದರೂ ಕೂಡ ಟೀಸರ್ನಲ್ಲಿ ಅವರು ದರ್ಶನ ನೀಡಿಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.
ಒಟ್ಟಾರೆ ‘ಟಾಕ್ಸಿಕ್’ ಸಿನಿಮಾದ ಕಥೆ ಬಗ್ಗೆ ಜನರಿಗೆ ಭಾರಿ ಕುತೂಹಲ ಇದೆ. ಯಾಕೆಂದರೆ, ಇದು ಭರ್ಜರಿ ಮಾಸ್ ಸಿನಿಮಾ ಆಗಿದ್ದರೂ ಕೂಡ ಮಹಿಳೆಯರ ಪಾಲ್ಗೊಳ್ಳುವಿಕೆ ಜಾಸ್ತಿ ಇದೆ. ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುವುದು ನಿರ್ದೇಶಕಿ ಗೀತು ಮೋಹನ್ದಾಸ್. ಪಾತ್ರವರ್ಗದಲ್ಲಿ ನಟಿಯರಾದ ರುಕ್ಮಿಣಿ ವಸಂತ್, ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಅವರಂತಹ ಸ್ಟಾರ್ ಕಲಾವಿದೆಯರು ನಟಿಸಿದ್ದಾರೆ.
ಪಾತ್ರವರ್ಗದಲ್ಲಿ ಮಹಿಳೆಯರ ಸಂಖ್ಯೆ ಜಾಸ್ತಿ ಇದ್ದರೂ ಕೂಡ ಟೀಸರ್ನಲ್ಲಿ ಯಾರನ್ನೂ ತೋರಿಸಿಲ್ಲ. ಆದ್ದರಿಂದ ಈ ನಟಿಯರ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಹಾಗಂತ ಜಾಸ್ತಿ ಬೇಸರ ಮಾಡಿಕೊಳ್ಳುವ ಅಗತ್ಯ ಇಲ್ಲ. ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಆಗಲಿದೆ. ಅದರಲ್ಲಾದರೂ ನಟಿಯರ ಪಾತ್ರದ ಬಗ್ಗೆ ಮಾಹಿತಿ ಬಿಟ್ಟುಕೊಡುವ ಸಾಧ್ಯತೆ ಇದೆ. ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೂ ನ್ಯಾಯ ಒದಗಿಸಲಾಗುತ್ತದೆ ಎಂಬ ನಂಬಿಕೆ ಪ್ರೇಕ್ಷಕರಿಗೆ ಇದೆ.
ಟಾಕ್ಸಿಕ್ ಟೀಸರ್:
ಬಹಳ ಅದ್ದೂರಿಯಾಗಿ ‘ಟಾಕ್ಸಿಕ್’ ಸಿನಿಮಾ ಮೂಡಿಬಂದಿದೆ ಎಂಬುದು ಟೀಸರ್ ನೋಡಿದರೆ ತಿಳಿಯುತ್ತದೆ. ಕನ್ನಡ, ಹಿಂದಿ, ಮಲಯಾಳಂ, ತೆಲುಗು ವರ್ಷನ್ಗಳಲ್ಲಿ ಟೀಸರ್ ಬಿಡುಗಡೆ ಆಗಿದೆ. ಟೀಸರ್ನಲ್ಲಿ ಸಿಕ್ಕಾಪಟ್ಟೆ ಕ್ರೌರ್ಯ ಕಾಣಿಸಿದೆ. ಸಿನಿಮಾದಲ್ಲಿ ಅದು ಡಬಲ್ ಆಗಿರುವ ಸಾಧ್ಯತೆ ಕೂಡ ಇದೆ.
ನಟಿಯರನ್ನು ‘ಟಾಕ್ಸಿಕ್’ ಟೀಸರ್ನಲ್ಲಿ ಯಾಕೆ ತೋರಿಸಿಲ್ಲ ಎಂದು ಕೆಲವರು ಸೋಶಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ. ‘ಡೈರೆಕ್ಟರ್ ಮಹಿಳೆ ಆಗಿದ್ದರೂ ಕೂಡ ನಟಿಯರು ಪಾತ್ರವನ್ನು ಹೈಲೈಟ್ ಮಾಡುತ್ತಿಲ್ಲ’ ಎಂದು ನೆಟ್ಟಿಗರು ತಕರಾರು ತೆಗೆದಿದ್ದಾರೆ. ಈ ಎಲ್ಲ ಟೀಕೆಗಳಿಗೆ ಸಿನಿಮಾದಲ್ಲಿ ಖಂಡಿತಾ ಉತ್ತರ ಸಿಗಲಿದೆ.
ನವದೆಹಲಿ, ಫೆಬ್ರುವರಿ 20: ಎಐನಿಂದ ಒಳಿತೂ ಇದೆ, ಕೆಡಕೂ ಇದೆ. ದೂರಗಾಮಿಯಾಗಿ ಎಐನಿಂದ ಮನುಕುಲಕ್ಕೆ ಸಾಕಷ್ಟು ಪ್ರಯೋಜನಗಳಾಗಬಹುದು ಎಂದು ಅನೇಕರು ಹೇಳುತ್ತಿದ್ದಾರೆ. ಐಎಂಎಫ್ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಕ್ರಿಸ್ಟಾಲಿನಾ ಜಾರ್ಜಿಯೆವಾ (Kristalina Georgieva) ಅವರು ಎಐನಿಂದ ಸದ್ಯೋಭವಿಷ್ಯದಲ್ಲಿ ಆಗಬಹುದಾದ ಒಳಿತು ಮತ್ತು ಅಪಾಯಗಳೆರಡನ್ನೂ ಪ್ರಸ್ತಾಪಿಸಿದ್ದಾರೆ.
ಉದ್ಯೋಗ ಮಾರುಕಟ್ಟೆಯಲ್ಲಿ ಎಐ ಸುನಾಮಿಯಂತೆ ಅಪ್ಪಳಿಸಲಿದೆ ಎಂದು ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಉದಯೋನ್ಮುಖ ಆರ್ಥಿಕತೆಯ ದೇಶಗಳಲ್ಲಿ ಶೇ. 40ರಷ್ಟು ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ. ಶ್ರೀಮಂತ ದೇಶಗಳಲ್ಲಂತೂ ಇದರ ಪರಿಣಾಮ ಇನ್ನೂ ಭಿಕರವಾಗಿರುತ್ತದೆ. ಅಲ್ಲಿ ಶೇ 60ರಷ್ಟು ಉದ್ಯೋಗನಷ್ಟ ಆಗಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಹಿರಿಯ ಅಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.
ಎಐನಿಂದ ಜಾಗತಿಕ ಆರ್ಥಿಕ ಬೆಳವಣಿಗೆಗೆ ಪುಷ್ಟಿ ಸಿಗುತ್ತದೆ ಎಂದೂ ಐಎಂಎಫ್ನ ಎಂಡಿ ತಿಳಿಸಿದ್ದಾರೆ. ‘ನಾವು ಕೆಲ ಸಂಶೋಧನೆ ಮೂಕ ಉತ್ತರ ಕಂಡುಕೊಂಡಿದ್ದೇವೆ. ನಮಗೆ ಗೊತ್ತಾದಂತೆ, ಎಐನಿಂದ ಜಾಗತಿಕ ಬೆಳವಣಿಗೆಯಲ್ಲಿ ಒಂದು ಪ್ರತಿಶತ ಅಂಕ ಹೆಚ್ಚಬಹುದು. ಶೇ 0.8ರಷ್ಟು ಪ್ರಗತಿ ಹೆಚ್ಚಬಹುದು. ಕೋವಿಡ್ಗೆ ಮುಂಚಿನದಕ್ಕಿಂತ ಹೆಚ್ಚು ವೇಗವಾಗಿ ಜಗತ್ತು ಬೆಳೆಯಬಹುದು’ ಎಂದು ಎಐ ಇಂಪ್ಯಾಕ್ಟ್ ಸಮಿಟ್ನಲ್ಲಿ ನಡೆದ ಪ್ಯಾನಲ್ ಚರ್ಚೆಯ ವೇಳೆ ಆಕೆ ಮಾಹಿತಿ ನೀಡಿದ್ದಾರೆ.
ಭಾರತಕ್ಕೆ ವಿಕಸಿತ ದೇಶವಾಗಲು ಅವಕಾಶ
ಎಐನಿಂದಾಗಿ ಭಾರತವು ಹೆಚ್ಚು ವೇಗದಲ್ಲಿ ಬೆಳವಣಿಗೆ ದಾಖಲಿಸಲು ಅವಕಾಶ ಇರುತ್ತದೆ. ಭಾರತದ ವಿಕಸಿತ ಭಾರತದ ಗುರಿ ಈಡೇರಿಕೆ ಅಸಾಧ್ಯವೇನೂ ಆಗುವುದಿಲ್ಲ ಎಂದು ಕ್ರಿಸ್ಟಾಲಿನಾ ಜಾರ್ಜಿಯೆವಾ ಅಭಿಪ್ರಾಯಪಟ್ಟಿದ್ಧಾರೆ. ಭಾರತವು 2047ರೊಳಗೆ ವಿಕಸಿತ ದೇಶವಾಗುವ ಮತ್ತು 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿ ಹೊಂದಲಾಗಿದೆ. ಈ ಸಾಧ್ಯತೆ ಬಗ್ಗೆ ಐಎಂಎಫ್ ಎಂಡಿ ಮಾತನಾಡುತ್ತಿದ್ದರು.
ಐಟಿ ಸೆಕ್ಟರ್ನಲ್ಲಿ ಕೋಡಿಂಗ್ ಬದಲು ಈ ಕೆಲಸ ಮಾಡಬೇಕು: ನಂದನ್ ನಿಲೇಕಣಿ
ಎಐ ಕ್ರಾಂತಿ ನಡೆಯುತ್ತಿರುವಾಗ ಕೋಡಿಂಗ್ ರಚಿಸುವುದು ಗುರಿಯಾಗಿರಬಾರದು. ಕೋಡಿಂಗ್ ಬದಲು, ಎಐ ಸಿಸ್ಟಂಗಳನ್ನು ನಿರ್ವಹಿಸುವ ಕೆಲಸಗಳಿಗೆ ವರ್ಗಾವಣೆ ಆಗಬೇಕು ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಮೊನ್ನೆಮೊನ್ನೆ (ಫೆ. 17) ಹೇಳಿದ್ದಾರೆ. ಅವರ ಪ್ರಕಾರ ಎಐ ತಂತ್ರಜ್ಞಾನವು ಜಾಗತಿಕವಾಗಿ 17 ಕೋಟಿ ಹೊಸ ಪ್ರಬಲ ಉದ್ಯೋಗಗಳನ್ನು ಸೃಷ್ಟಿಸಬಲ್ಲುದು.
ಬಾಗಲಕೋಟೆ, (ಫೆಬ್ರವರಿ 20): ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ.
ಇದೇ ವೇಳೆ ಟಿವಿ9ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಕೇವಲ ನಮ್ಮನ್ನ ಮಾತ್ರ ಶಾಂತಿ ಸಭೆಗೆ ಕರೆದಿದ್ದಾರೆ. ಮುಸ್ಲಿಂ ಸುಮುದಾಯದ ಮುಖಂಡರು ಸಭೆಗೆ ಹಾಜಾರಾಗಿಲ್ಲ. ಶಾಂತಿ ಸಭೆ ಅಂದರೆ ಎರಡು ಕಡೆಯವರು ಇರಬೇಕು. ಅವರಿಗೆ ಶಾಂತಿ ಬೇಕಿಲ್ಲ. ಹಾಗಾಗಿ ಅವರು ಬಂದಿಲ್ಲ. ಡಿಸಿ,ಎಸ್ ಪಿ ಎಲ್ಲರೂ ಕರೆದ ಸಭೆಗೆ ಅವರು ಬರೋದಿಲ್ಲ ಅಂದರೆ ಎಷ್ಟಿರಬೇಕು? ಅದಕ್ಕೆ ಹೇಳೋದು ಇದು ಕಾಂಗ್ರೆಸ್ ಓಲೈಕೆಯ ಪರಿಣಾಮ ಅಂತ. ನಾವು ಯಾವುದಕ್ಕೂ ಸುಮ್ಮನೆ ಇರುವುದಿಲ್ಲ. ಎಲ್ಲಿ ಶಿವಾಜಿ ಮೂರ್ತಿಗೆ ಕಲ್ಲು ಹೊಡೆದಿದ್ದಾರೆ ಅದೇ ಜಾಗದಿಂದ ಪುಷ್ಪಗಳ ವೃಷ್ಟಿಗೈದು ಶಿವಾಜಿ ಮೆರವಣಿಗೆ ಮಾಡುತ್ತೇವೆ. ಯಾವಾಗ ಶಿವಾಜಿ ಮೆರವಣಿಗೆ ಮಾಡುತ್ತೇವೆ ಎನ್ನುವುದನ್ನು ನಂತರ ತಿಳಿಸುತ್ತೇವೆ ಎಂದರು.
ಬಾಗಲಕೋಟೆ, (ಫೆಬ್ರವರಿ 20): ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಎದುರು ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಗರಂ ಆಗಿದ್ದು, ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ.