ಪರೀಕ್ಷೆಯಲ್ಲಿ ಕಾಪಿ ಮಾಡುವ ವೇಳೆ ಸಿಕ್ಕಿಬಿದ್ದ ವಿದ್ಯಾರ್ಥಿ: ಪ್ರಶ್ನಿಸಿದ್ದಕ್ಕೆ ಮೇಲ್ವಿಚಾರಕರ ಮೇಲೆ ಹಲ್ಲೆ – Kannada News | Kalaburagi: Student Assaults Professor for Preventing Malpractice During Exam
ವಿದ್ಯಾರ್ಥಿಯಿಂದ ಮೇಲ್ವಿಚಾರಕರ ಮೇಲೆ ಹಲ್ಲೆImage Credit source: tv9 kannada ಕಲಬುರಗಿ, ಫೆಬ್ರವರಿ 20: ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ (Student) ಹಲ್ಲೆ (attacks) ಮಾಡಿರುವಂತಹ ಘಟನೆಯೊಂದು ನಗರದ ಡಾ. ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿ ಶಹಬಾಜ್ ಎಂಬಾತನಿಂದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ನಡೆದಿದ್ದೇನು? ಡಾ.ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಇಂದು ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್…