Headlines

Breaking Engagement: ಶಾಸ್ತ್ರೋಕ್ತವಾಗಿ ಎಂಗೇಜ್​ಮೆಂಟ್ ಆಗಿ ಮದುವೆಯಾಗದಿದ್ರೆ ದೋಷ ಕಾಡುತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Nischaya Tambula: The Spiritual Impact of Breaking an Engagement in Sanatana Dharma

“ಮ್ಯಾರೇಜಸ್ ಆರ್ ಮೇಡ್ ಇನ್ ಹೆವೆನ್” ಎಂಬ ನುಡಿಯಂತೆ, ವಿವಾಹ ಬಂಧವು ಕೇವಲ ಮಾನವ ಸಂಬಂಧವಲ್ಲ, ಅದೊಂದು ದೈವಿಕ ಸಂಪರ್ಕ. ಮನುಷ್ಯನ ಜೀವನದಲ್ಲಿ ವಿವಾಹವು ಒಂದು ಪ್ರಮುಖ ಪರಿವರ್ತನೆಯ ಕಾಲವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿವಾಹ ಮತ್ತು ಅದರ ಪೂರ್ವಭಾವಿ ಸಂಸ್ಕಾರಗಳಿಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದಾಗಿ ವಾಗ್ದಾನಗಳ ಮಹತ್ವವನ್ನು ಮರೆಯಲಾಗುತ್ತಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ. ಸ್ನೇಹಿತರ ಜೊತೆಗೆ…

Read More

ದೇಶಕ್ಕೆ ಅಪ್ಪಳಿಸುತ್ತಿದೆ ಆರ್ಥಿಕ ಚಂಡಮಾರುತ; ಕುಸಿಯಲಿದೆ ಅರ್ಥ ವ್ಯವಸ್ಥೆ: ರಾಹುಲ್ ಗಾಂಧಿ ಆತಂಕ – Kannada News | Rahul Gandhi Warns India of “Economic Storm” Amid Fuel Price Hikes, Blames Modi Govt

ನವದೆಹಲಿ, ಮೇ 19: ಐದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತವು ಹಿಂದೆಂದೂ ಕಾಣದ ದೊಡ್ಡ “ಆರ್ಥಿಕ ಚಂಡಮಾರುತ” (Economic Storm) ಎದುರಿಸುವ ಹಂತದಲ್ಲಿದೆ ಎಂದು ಎಚ್ಚರಿಸಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ರಾಯ್‌ಬರೇಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೂಪಿಸಿರುವ ಆರ್ಥಿಕ ನೀತಿಗಳು…

Read More

ಶುಲ್ಕ ಬಾಕಿ ಆರೋಪ: ವಿದ್ಯಾರ್ಥಿನಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಲ್ ಟಿಕೆಟ್ ನಿರಾಕರಿಸಿದ ಕಾಲೇಜು – Kannada News | BAGSS College Denies 2nd PUC Exam Hall Ticket Over Unpaid Fees in Ranebennur

ಹಾವೇರಿ, ಫೆಬ್ರವರಿ 28: ಶುಲ್ಕ ಬಾಕಿ ಇರುವ ಕಾರಣ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿರುವ ಆರೋಪ ಕೇಳಿಬಂದಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಸಾರಾ, 30 ಸಾವಿರ ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿದ್ದಾರೆ. ಶುಲ್ಕ ಪಾವತಿಸಿದರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಕಾಲೇಜು ಆಡಳಿತ ಮಂಡಳಿ ಹೇಳಿದೆ. ಈ ನಿರ್ಧಾರದಿಂದ ವಿದ್ಯಾರ್ಥಿನಿಯ ಭವಿಷ್ಯ ಅತಂತ್ರಗೊಂಡಿದ್ದು, ಒಂದು ವರ್ಷ ನಷ್ಟವಾಗುವ ಭೀತಿ ಎದುರಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಪಶ್ಚಿಮ ಬಂಗಾಳದ ಬಳಿಕ ಮಹಾರಾಷ್ಟ್ರದಲ್ಲೂ ರಾಜಕೀಯ ಹೈಡ್ರಾಮ, ಏಕನಾಥ್ ಶಿಂಧೆ ಬಣದ ಸಂಪರ್ಕದಲ್ಲಿದ್ದಾರಾ ಶಿವಸೇನೆಯ 7 ಸಂಸದರು – Kannada News

ಮುಂಬೈ, ಜೂನ್ 11: ಮಹಾರಾಷ್ಟ್ರ(Maharashtra) ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ ಬರೋಬ್ಬರಿ ಏಳು ಮಂದಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದ ಶಿವಸೇನೆ ಬಣದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಮತ್ತೊಂದು ದೊಡ್ಡ ರಾಜಕೀಯ ಹೈಡ್ರಾಮಕ್ಕೆ ಮುನ್ನುಡಿ ಬರೆದಿದೆ. ಮಾಹಿತಿಗಳ ಪ್ರಕಾರ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಪುತ್ರ, ಲೋಕಸಭಾ ಸಂಸದ ಶ್ರೀಕಾಂತ್ ಶಿಂಧೆ ಅವರು ಕಳೆದ…

Read More

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ…

Read More

ಕೊಲ್ಕತ್ತಾದ ಗೋದಾಮು ಕುಸಿತದ 6 ಆರೋಪಿಗಳ ಬಂಧನ; ಆರ್ಕಿಟೆಕ್ಟ್ ಕಪ್ಪುಪಟ್ಟಿಗೆ ಸೇರಿಸಲು ಸಿಎಂ ಆದೇಶ – Kannada News | CM Suvendu Adhikari says 6 arrested in Kolkata warehouse collapse case

ಕೊಲ್ಕತ್ತಾ, ಜೂನ್ 26: ಪಶ್ಚಿಮ ಬಂಗಾಳದ ಕೊಲ್ಕತ್ತಾದ ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮು ಕುಸಿತಗೊಂಡು 5 ಜನ ಬಲಿಯಾದ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಪ್ರಕರಣದ ಪರಾಮರ್ಶೆ ನಡೆಸಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಮುಖ ಪ್ರಕರಣದ ತನಿಖೆಯನ್ನು ಲಾಲ್‌ಬಜಾರ್ ಅಪರಾಧ ವಿಭಾಗ ಕೈಗೆತ್ತಿಕೊಂಡಿದ್ದು, ಕೊಲ್ಕತ್ತಾ ಪೊಲೀಸ್ ಕಮಿಷನರ್ ಅವರೇ ಖುದ್ದಾಗಿ ಇದರ…

Read More

ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ – Kannada News | A Young Woman Commits Suicide Who Loves Muslim youth at Bagalkot

ಬಾಗಲಕೋಟೆ, (ಏಪ್ರಿಲ್ 15): ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ (Love) ಯುವತಿ ಆತ್ಮಹತ್ಯೆಗೆ(Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದ (Bagalkote) ಸೆಕ್ಟರ್ ನಂಬರ್ 48ರ ಮನೆಯಲ್ಲಿ ನಡೆದಿದೆ. ಟೈರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ತಿಪ್ಪಣ್ಣವರ್ (19) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಾಫ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಯುವತಿ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಇನ್ನೊಂದಡೆ ಇದೊಂದು ಪಕ್ಕಾ ಲವ್ ಜಿಹಾದ್ ಎಂದು ಹಿಂದೂಪರ ಸಂಘಟನೆಗಳ ಆರೋಪವಾಗಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಟಯರ್‌ ಅಂಗಡಿಗೆ…

Read More

‘ಓನ್ಲಿ ಇನ್ ನಮ್ಮ ಬೆಂಗಳೂರು’: ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್ – Kannada News | AI Guru: Bengaluru Auto Driver Uses ChatGPT for Book Writing, Goes Viral

ಬೆಂಗಳೂರು, ಜೂ.24: ಸಿಲಿಕಾನ್ ಸಿಟಿ ಬೆಂಗಳೂರಿನ ಆಟೋ ಚಾಲಕರು ಮತ್ತು ಅವರ ವಿಶಿಷ್ಟ ಕತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸದ್ದು ಮಾಡುತ್ತಿರುತ್ತವೆ. ಆದರೆ, ಈ ಬಾರಿ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಆಟೋ ಚಾಲಕರೊಬ್ಬರ ವಿಡಿಯೋ ನೋಡಿದರೆ ನೀವು ನಿಜಕ್ಕೂ ಅಚ್ಚರಿಪಡುತ್ತೀರಿ! ಹೌದು, ಸಾಮಾನ್ಯ ಆಟೋ ಚಾಲಕರೊಬ್ಬರು ಚಾಟ್‌ಜಿಪಿಟಿ (ChatGPT) ಮತ್ತು ಕೃತಕ ಬುದ್ಧಿಮತ್ತೆ (AI) ಬಗ್ಗೆ ತಜ್ಞರಂತೆ ಮಾತನಾಡಿ ನೆಟ್ಟಿಗರ ಮನಗೆದ್ದಿದ್ದಾರೆ. ಗಗನ್ ಸಾಯಿ ಪ್ರಸಾದ್ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ…

Read More

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More