‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್ – Kannada News | Pinarayi Vijayan calls The Kerala Story 2 movie as communal agenda

2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಈಗ ಆ ಸಿನಿಮಾದ ಸೀಕ್ವೆಲ್ ಬರುತ್ತಿದೆ. ಈ ಬಾರಿ ಕೂಡ ವಿವಾದಗಳು ಶುರುವಾಗಿವೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಿನಿಮಾದ ಬಗ್ಗೆ ಅವರು ಪೋಸ್ಟ್ ಮಾಡಿದ್ದಾರೆ. ‘ದಿ ಕೇರಳ ಸ್ಟೋರಿ 2’ (The Kerala Story 2) ಕುರಿತಂತೆ ಈಗಾಗಲೇ ಪರ-ವಿರೋಧದ ಚರ್ಚೆ ಶುರು ಆಗಿದೆ.

‘ದ್ವೇಷ ಹುಟ್ಟಿಸುವ ‘ದಿ ಕೇರಳ ಸ್ಟೋರಿ’ ಚಿತ್ರದ ಮುಂದುವರಿದ ಭಾಗದ ಬಿಡುಗಡೆಯ ಕುರಿತಾದ ವರದಿಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಮೊದಲ ಭಾಗದಲ್ಲಿ ಕೋಮುವಾದಿ ಅಜೆಂಡಾ ಮತ್ತು ಸ್ಪಷ್ಟ ಸುಳ್ಳುಗಳನ್ನು ಈಗಾಗಲೇ ನೋಡಿರುವ ಕೇರಳ ಜನತೆ, ನಮ್ಮ ಜಾತ್ಯತೀತ ರಚನೆಯನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುವ ಈ ಸಿನಿಮಾವನ್ನು ಮತ್ತೊಮ್ಮೆ ತಿರಸ್ಕರಿಸುತ್ತಾರೆ’ ಎಂದು ಪಿಣರಾಯಿ ವಿಜಯನ್ ಅವರು ಟ್ವೀಟ್ ಮಾಡಿದ್ದಾರೆ.

‘ಕೋಮು ವೈಷಮ್ಯವನ್ನು ಪ್ರಚೋದಿಸುವ ಗುರಿಯನ್ನು ಹೊಂದಿರುವ ಕಲ್ಪಿತ ನಿರೂಪಣೆಗಳು ಹೇಗೆ ಮುಕ್ತವಾಗಿ ಅಂಗೀಕರಿಸಲ್ಪಡುತ್ತವೆ ಮತ್ತು ಕಲೆಯ ವಿಮರ್ಶಾತ್ಮಕ ಅಭಿವ್ಯಕ್ತಿಗಳು ಬಾಯಿ ಮುಚ್ಚಲ್ಪಡುತ್ತವೆ ಎಂಬುದು ಆಘಾತಕಾರಿ. ನಮ್ಮ ಸಾಮರಸ್ಯದ ಭೂಮಿಯನ್ನು ಭಯೋತ್ಪಾದನೆಯ ಕೇಂದ್ರದಂತೆ ಚಿತ್ರಿಸುವ ಈ ಪ್ರಯತ್ನಗಳ ವಿರುದ್ಧ ನಾವು ಒಗ್ಗಟ್ಟಿನಿಂದ ನಿಲ್ಲಬೇಕು. ಸತ್ಯ ಯಾವಾಗಲೂ ಗೆಲ್ಲುತ್ತದೆ’ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ‘ದಿ ಕೇರಳ ಸ್ಟೋರಿ’ ಸಿನಿಮಾದ ಟ್ರೇಲರ್ ಬಿಡುಗಡೆ ಆಯಿತು. ಸಿನಿಮಾದ ಕಥೆ ಏನು ಎಂಬುದರ ಝಲಕ್ ಈ ಟ್ರೇಲರ್​​ನಲ್ಲಿ ಕಾಣಿಸಿದೆ. ಹಿಂದೂ ಹುಡುಗಿಯರನ್ನು ಮೋಸದಿಂದ ಪ್ರೀತಿ, ಮದುವೆಯ ಬಲೆಗೆ ಬೀಳಿಸಿ ಹೇಗೆ ಮತಾಂತರ ಮಾಡಲಾಗುತ್ತದೆ ಮತ್ತು ಹಿಂಸೆ ನೀಡಲಾಗುತ್ತದೆ ಎಂಬುದನ್ನು ಈ ಟ್ರೇಲರ್​​ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್

ಫೆಬ್ರವರಿ 27ಕ್ಕೆ ‘ದಿ ಕೇರಳ ಸ್ಟೋರಿ 2’ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಕಾಮಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ಅದಿತಿ ಭಾಟಿಯಾ, ಐಶ್ವರ್ಯಾ ಊಜಾ, ಉಲ್ಕಾ ಗುಪ್ತಾ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಟ್ರೇಲರ್ ಈಗಾಗಲೇ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

11 ವರ್ಷಗಳ ಬಳಿಕ ಫೈನಲ್​ಗೇರಿದ ಕರ್ನಾಟಕ – Kannada News | Karnataka enters the Ranji Trophy final11

ಬರೋಬ್ಬರಿ 11 ವರ್ಷಗಳ ಬಳಿಕ ಕರ್ನಾಟಕ ತಂಡ ರಣಜಿ ಟೂರ್ನಿಯ ಫೈನಲ್​ಗೇರಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಉತ್ತರಾಖಂಡ್ ಮತ್ತು ಕರ್ನಾಟಕ ನಡುವಣ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ ಮೊದಲ ಇನಿಂಗ್ಸ್​ನಲ್ಲಿನ 503 ರನ್​ಗಳ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ್ ತಂಡದ ನಾಯಕ ಕುನಾಲ್ ಚಂಡೆಲಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಕೆಎಲ್ ರಾಹುಲ್ (141) ಶತಕ ಬಾರಿಸಿದರೆ,  ನಾಯಕ ದೇವದತ್ ಪಡಿಕ್ಕಲ್ (232) ದ್ವಿಶತಕ ಸಿಡಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಸ್ಮರಣ್ ರವಿಚಂದ್ರನ್ 135 ರನ್​ಗಳ ಇನಿಂಗ್ಸ್ ಆಡಿದರು. ಹಾಗೆಯೇ ಕೃತಿಕ್ ಕೃಷ್ಣ 60 ರನ್​ ಗಳಿಸಿದರೆ, ಕೆಳ ಕ್ರಮಾಂಕದಲ್ಲಿ ವಿದ್ಯಾಧರ್ ಪಾಟೀಲ್ 54 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಕರ್ನಾಟಕ ತಂಡವು 194.4 ಓವರ್​ಗಳಲ್ಲಿ ಬರೋಬ್ಬರಿ 736 ರನ್​ಗಳಿಸಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಉತ್ತರಾಖಂಡ್ ತಂಡವು ಕೇವಲ 233 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 503 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಫಾಲೋಆನ್​ ಹೇರದ ಕರ್ನಾಟಕ:

ಮೊದಲ ಇನಿಂಗ್ಸ್​ನಲ್ಲಿ 503 ರನ್​ಗಳ ಮುನ್ನಡೆ ಪಡೆದರೂ ಕರ್ನಾಟಕ ತಂಡ ಫಾಲೋ ಹೇರದೆ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ ಕರ್ನಾಟಕ ಪರ ಕೃತಿಕ್ ಕೃಷ್ಣ 52, ಸ್ಮರಣ್ ರವಿಚಂದ್ರನ್ 127 ಹಾಗೂ ಕೆಎಲ್ ರಾಹುಲ್ 86 ರನ್ ಬಾರಿಸಿದರು. ಈ ಮೂಲಕ ಸೆಕೆಂಡ್ ಇನಿಂಗ್ಸ್​ನಲ್ಲಿ 323 ರನ್​ಗಳಿಸಿ ಆಲೌಟ್ ಆಗಿದೆ.

827 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 827 ರನ್​ಗಳ ಗುರಿ ಪಡೆದ ಉತ್ತರಾಖಂಡ್ ತಂಡವು 5ನೇ ಕೊನೆಯ ದಿನದಾಟದ ಅಂತ್ಯಕ್ಕೆ ಕಲೆಹಾಕಿದ್ದು 260 ರನ್​ಗಳು ಮಾತ್ರ. ಇದರೊಂದಿಗೆ ಕರ್ನಾಟಕ-ಉತ್ತರಾಖಂಡ್ ನಡುವಣ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ.

ಅತ್ತ ಮೊದಲ ಇನಿಂಗ್ಸ್​ನಲ್ಲಿನ  ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡವು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಫೆಬ್ರವರಿ 24 ರಿಂದ ಶುರುವಾಗಲಿರುವ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜುಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿದೆ.

ಉತ್ತರಾಖಂಡ್ ಪ್ಲೇಯಿಂಗ್ 11: ಪ್ರಶಾಂತ್ ಚೋಪ್ರಾ , ಅವನೀಶ್ ಸುಧಾ , ಭೂಪೇನ್ ಲಾಲ್ವಾನಿ , ಕುನಾಲ್ ಚಂಡೆಲಾ (ನಾಯಕ) , ಲಕ್ಷ್ಯ ರಾಜೇಶ್ ರಾಯ್‌ಚಂದಾನಿ , ಜಗದೀಶ ಸುಚಿತ್ , ಸೌರಭ್ ರಾವತ್ (ವಿಕೆಟ್ ಕೀಪರ್) , ಅಭಯ್ ನೇಗಿ , ಮಾಯಾಂಕ್ ಮಿಶ್ರಾ , ಆದಿತ್ಯ ರಾವತ್ , ಜನಮೇಜಯ್ ಜೋಶಿ.

ಇದನ್ನೂ ಓದಿ: ಈ ಒಂದು ತಪ್ಪು ಸರಿಪಡಿಸದಿದ್ದರೆ ಟೀಮ್ ಇಂಡಿಯಾಗೆ ಅಪಾಯ ಕಟ್ಟಿಟ್ಟ ಬುತ್ತಿ!

ಕರ್ನಾಟಕ ಪ್ಲೇಯಿಂಗ್ 11: ಕೆಎಲ್ ರಾಹುಲ್ , ಮಾಯಾಂಕ್ ಅಗರ್ವಾಲ್ , ದೇವದತ್ ಪಡಿಕ್ಕಲ್ (ನಾಯಕ) , ಕರುಣ್ ನಾಯರ್ , ಸ್ಮರಣ್ ರವಿಚಂದ್ರನ್ , ಶ್ರೇಯಸ್ ಗೋಪಾಲ್ , ಕೃತಿಕ್ ಕೃಷ್ಣ (ವಿಕೆಟ್ ಕೀಪರ್ ), ವಿದ್ಯಾಧರ ಪಾಟೀಲ್ , ವಿಜಯಕುಮಾರ್ ವೈಶಾಕ್ , ಶಿಖರ್ ಶೆಟ್ಟಿ , ಪ್ರಸಿದ್ಧ್ ಕೃಷ್ಣ.

Source link

3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ – Kannada News | 3 year old child sexually assaulted by her fathers friend in Visakhapatnam case registered

ವಿಶಾಖಪಟ್ಟಣಂ, ಫೆಬ್ರವರಿ 19: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಡಗಂಟ್ಯಾಡ ಮಂಡಲದಲ್ಲಿ 3 ವರ್ಷದ ಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ (Sexually Harassment) ಎಸಗಿದ್ದಾನೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು.

ಆಕೆಯನ್ನು ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ನಂತರ ಏನೂ ಆಗಿಯೇ ಇಲ್ಲವೆಂಬಂತೆ ಅವನು ಅವಳನ್ನು ವಾಪಾಸ್ ಕರೆದುಕೊಂಡು ಬಂದು ಅವಳ ಮನೆಯಲ್ಲಿ ಬಿಟ್ಟು ಓಡಿಹೋಗಿದ್ದಾನೆ. ಮನೆಯಲ್ಲಿ ಆ ಮಗು ನೋವಿನಿಂದ ನಿರಂತರವಾಗಿ ಅಳುತ್ತಲೇ ಇದ್ದುದರಿಂದ ಆ ಮಗುವಿನ ತಾಯಿ ಅವಳನ್ನು ಪರೀಕ್ಷಿಸಿದಾಗ ರಕ್ತದ ಕಲೆಗಳು ಕಂಡುಬಂದವು. ಏನಾಯಿತೆಂದು ಕೇಳಿದಾಗ ಆಕೆ ನಡೆದ ವಿಚಾರ ಹೇಳಿದಳು. ಆರೋಪಿಯ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಈ ಘಟನೆಯ ಬಗ್ಗೆ ರಾಜ್ಯ ಮಹಿಳಾ ಆಯೋಗವು ತನ್ನ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಆಯೋಗದ ಅಧ್ಯಕ್ಷೆ ರಾಯಪತಿ ಶೈಲಜಾ ಅವರು ವಿಶಾಖಪಟ್ಟಣ ಸಿಪಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಅವರು ಮಗುವಿನ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದ್ದು, ಆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಆಯೋಗ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಚಿಕ್ಕ ಮಕ್ಕಳಿಗೆ ಮನೆಯಲ್ಲೂ ಸುರಕ್ಷತೆ ಇಲ್ಲದಂತಾಗಿರುವುದು ಆತಂಕ ಸೃಷ್ಟಿಸಿದೆ. ಆಗಾಗ ಮನೆಗೆ ಬಂದು ಹೋಗುತ್ತಿದ್ದ, ತಮ್ಮ ಮನೆಯವನಂತೆಯೇ ಇದ್ದ ವ್ಯಕ್ತಿ ಚಿಕ್ಕ ಮಗುವಿನ ಮೇಲೆ ತನ್ನ ಕಾಮತೃಷೆ ತೀರಿಸಿಕೊಂಡಿರುವುದು ಆ ಕುಟುಂಬಕ್ಕೆ ಆಘಾತ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು – Kannada News | Deadly Blast in Karachi Claims 16 Lives, Children Among Victims

ಕರಾಚಿ, ಫೆಬ್ರವರಿ 19: ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಹುತೇಕ ಮನೆಗಳಲ್ಲಿ ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಿಲಿಂಡರ್‌ಗಳನ್ನು ಅವಲಂಬಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸ್ಥಳದಿಂದ ಇದುವರೆಗೆ 14 ಶವಗಳನ್ನು ಆಸ್ಪತ್ರೆಗಳಿಗೆ ತರಲಾಗಿದೆ ಎಂದು ದೃಢಪಡಿಸಿದ್ದಾರೆ, ಆದರೆ 14 ಗಾಯಾಳುಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಸ್ಫೋಟದ ಪರಿಣಾಮವಾಗಿ ಕಟ್ಟಡದ ಒಂದು ಭಾಗ ಶಿಥಿಲಗೊಂಡಿದ್ದರಿಂದ ಕುಸಿದು ಬಿದ್ದಿದೆ. ಇನ್ನೂ ಶವಗಳು ಅಥವಾ ಬದುಕುಳಿದವರು ಇದ್ದಾರೆಯೇ ಎಂದು ನೋಡಲು ನಾವು ಇನ್ನೂ ಹುಡುಕುತ್ತಿದ್ದೇವೆ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಹುಮಾಯೂನ್ ಖಾನ್ ಹೇಳಿದ್ದಾರೆ. ಮೃತರಲ್ಲಿ ಎರಡರಿಂದ 17 ವರ್ಷದೊಳಗಿನ ಕನಿಷ್ಠ ಒಂಬತ್ತು ಮಕ್ಕಳು ಸೇರಿದ್ದಾರೆ, ಗಾಯಗೊಂಡವರಲ್ಲಿ ಏಳು ಮಕ್ಕಳಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ಸಿಸಿಟಿವಿ ವಿಡಿಯೋ ವೈರಲ್

ಕರಾಚಿಯಲ್ಲಿ ಇತ್ತೀಚೆಗೆ ಸಂಭವಿಸಿದ ಎರಡನೇ ಪ್ರಮುಖ ದುರಂತ ಇದಾಗಿದೆ. ಕಳೆದ ತಿಂಗಳು, ಸದ್ದಾರ್ ಪ್ರದೇಶದ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಾದ ಗುಲ್ ಶಾಪಿಂಗ್ ಪ್ಲಾಜಾದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 79 ಜನರು ಸಾವನ್ನಪ್ಪಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ? – Kannada News | Shiva Rajkumar wants to act in Bakta Kumbara character

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್ (Shiva Rajkumar) ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಈಗ ಯಶಸ್ವಿ 40 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣದಲ್ಲಿ ಅವರು ಹಲವಾರು ರೀತಿಯ ಪಾತ್ರಗಳು, ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಆನಂದ್’ ಇಂದ ಆರಂಭಿಸಿ ಇತ್ತೀಚೆಗಿನ ‘45’ ಸಿನಿಮಾದ ವರೆಗೆ ನಾನಾ ರೀತಿಯ ಪಾತ್ರಗಳಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ಆದರೆ ಶಿವಣ್ಣ ಅವರಿಗೆ ಆ ಒಂದು ಪಾತ್ರದಲ್ಲಿ ನಟಿಸುವ ಆಸೆ ಇದ್ದು, ಆ ಆಸೆ ಇನ್ನೂ ಈಡೇರಿಲ್ಲವಂತೆ. ಅಂದಹಾಗೆ ಶಿವಣ್ಣನ ಆ ನೆಚ್ಚಿನ ಪಾತ್ರದಲ್ಲಿ ಡಾ ರಾಜ್​​ಕುಮಾರ್ ಅವರು ಈಗಾಗಲೇ ನಟಿಸಿದ್ದಾಗಿದೆ. ಯಾವುದು ಆ ಪಾತ್ರ? ತಿಳಿಯಲು ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

AI Professional Courses: AI ಕೌಶಲ್ಯ ಹೆಚ್ಚಿಸಲು ಗೂಗಲ್​​ನಿಂದ ಹೊಸ ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮ – Kannada News | Google Launches 7 AI Professional Certificate Courses: Sundar Pichai’s India Announcement

ಗೂಗಲ್ ಕೃತಕ ಬುದ್ಧಿಮತ್ತೆ (AI) ಕುರಿತು ಪ್ರಮುಖ ಘೋಷಣೆ ಮಾಡಿದೆ. ಗೂಗಲ್ AI ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದು, ಈ ಕಾರ್ಯಕ್ರಮದಡಿಯಲ್ಲಿ, ಗೂಗಲ್ ಒಟ್ಟು 7 AI ಪ್ರಮಾಣಪತ್ರ ಕೋರ್ಸ್‌ಗಳನ್ನು ನಡೆಸಲಿದೆ. ಗೂಗಲ್ ಸಿಇಒ ಸುಂದರ್ ಪಿಚೈ ಬುಧವಾರ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಜಾಗತಿಕ AI ಸಮ್ಮೇಳನದಲ್ಲಿ ಈ ಘೋಷಣೆ ಮಾಡಿದರು. ಗೂಗಲ್ ಸಿಇಒ ಸುಂದರ್ ಪಿಚೈ ಭಾರತ-ಅಮೆರಿಕಾ ಸಂಪರ್ಕ ಉಪಕ್ರಮವನ್ನು ಘೋಷಿಸುವಾಗ ಈ ಕಾರ್ಯಕ್ರಮವನ್ನು ಘೋಷಿಸಿದರು.

ಭಾರತ್ ಮಂಟಪದಲ್ಲಿ ನಡೆದ AI ಸಮ್ಮೇಳನದಲ್ಲಿ, ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತ-ಯುಎಸ್ ಕನೆಕ್ಟ್ ಇನಿಶಿಯೇಟಿವ್ ಅನ್ನು ಘೋಷಿಸಿದರು. ಈ ಉಪಕ್ರಮವು ಭಾರತ ಮತ್ತು ಯುಎಸ್ ನಡುವೆ ಮತ್ತು ದಕ್ಷಿಣ ಗೋಳಾರ್ಧದ ಅನೇಕ ಸ್ಥಳಗಳಿಗೆ AI ಸಂಪರ್ಕವನ್ನು ವಿಸ್ತರಿಸಲು ಹೊಸ ಸಬ್ ಸೀ ಕೇಬಲ್ ಮಾರ್ಗಗಳನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಈ ಉಪಕ್ರಮದಿಂದ ಒದಗಿಸಲಾದ ಅವಕಾಶಗಳನ್ನು ಬಳಸಿಕೊಳ್ಳಲು, ನಾವು ಕೌಶಲ್ಯಗಳಲ್ಲಿಯೂ ಹೂಡಿಕೆ ಮಾಡಬೇಕು, ಆದ್ದರಿಂದ ನಾವು ಇಲ್ಲಿ ನಮ್ಮ ಅತಿದೊಡ್ಡ ಕೌಶಲ್ಯ ಕಾರ್ಯಕ್ರಮವನ್ನು ಘೋಷಿಸುತ್ತಿದ್ದೇವೆ ಎಂದು ಅವರು ಹೇಳಿದರು. ಇದರಲ್ಲಿ AI ಅನ್ನು ಕರಗತ ಮಾಡಿಕೊಳ್ಳಲು ಹೊಸ Google AI ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮವೂ ಸೇರಿದೆ.

AI ಮೂಲಭೂತ ಅಂಶಗಳು:

ಗೂಗಲ್ ತನ್ನ AI ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮದಡಿಯಲ್ಲಿ ಏಳು ಕೋರ್ಸ್‌ಗಳನ್ನು ಪ್ರಾರಂಭಿಸಿದೆ. ಇದರಲ್ಲಿ AI ಫಂಡಮೆಂಟಲ್ಸ್ ಸರ್ಟಿಫಿಕೇಟ್ ಕೋರ್ಸ್ ಕೂಡ ಸೇರಿದೆ. ಈ ಕೋರ್ಸ್ AI ಮೂಲಭೂತ ಅಂಶಗಳು, ಅದರ ಸಾಮರ್ಥ್ಯಗಳು ಮತ್ತು ದೌರ್ಬಲ್ಯಗಳನ್ನು ಒಳಗೊಂಡಿದೆ. ಈ ಕೋರ್ಸ್ ಅಭ್ಯರ್ಥಿಗಳಿಗೆ 25 ಅಧ್ಯಾಯಗಳಲ್ಲಿ ಪ್ರಾಂಪ್ಟ್‌ಗಳು ಎಂದು ಕರೆಯಲ್ಪಡುವ ಸ್ಪಷ್ಟ ಮತ್ತು ಪರಿಣಾಮಕಾರಿ ಸೂಚನೆಗಳನ್ನು ಹೇಗೆ ನೀಡಬೇಕೆಂದು ಕಲಿಸುತ್ತದೆ.

ಬುದ್ದಿಮತ್ತೆ ಮತ್ತು ಯೋಜನೆಗಾಗಿ AI:

ಗೂಗಲ್‌ನ ಈ ವೃತ್ತಿಪರ ಪ್ರಮಾಣಪತ್ರ ಕೋರ್ಸ್ ಸೃಜನಶೀಲ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಅಮೂರ್ತ ವಿಚಾರಗಳನ್ನು ವಿವರವಾದ, ಕಾರ್ಯಸಾಧ್ಯ ಯೋಜನೆಗಳಾಗಿ ಪರಿವರ್ತಿಸುವಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ, AI ಬಳಸಿಕೊಂಡು ಹೊಸ ವಿಚಾರಗಳನ್ನು ಹೇಗೆ ಬುದ್ದಿಮತ್ತೆ ಮಾಡುವುದು ಮತ್ತು ಅವುಗಳನ್ನು ಸಾಮಾನ್ಯ ಚೌಕಟ್ಟಿನ ವಿರುದ್ಧ ಮೌಲ್ಯಮಾಪನ ಮಾಡುವುದು ಎಂಬುದನ್ನು ನೀವು ಕಲಿಯಬಹುದು.

ಸಂಶೋಧನೆ ಮತ್ತು ಒಳನೋಟಗಳಿಗಾಗಿ AI:

ಈ ಕೋರ್ಸ್ ಪೂರ್ಣಗೊಳಿಸಿದ ನಂತರ, ಯಾರಾದರೂ AI ಅನ್ನು ಕಾರ್ಯತಂತ್ರದ ಸಂಶೋಧನಾ ಪಾಲುದಾರರಾಗಿ ಬಳಸಬಹುದು. ಉದಾಹರಣೆಗೆ, ಜೆಮಿನಿ ಡೀಪ್ ರಿಸರ್ಚ್ ಬಳಸಿ, ನಿಮಿಷಗಳಲ್ಲಿ ಡಜನ್ಗಟ್ಟಲೆ ಮೂಲಗಳನ್ನು ಸ್ಕ್ಯಾನ್ ಮಾಡಬಹುದು ಮತ್ತು ಮೆಟಾ-ಪ್ರಾಂಪ್ಟಿಂಗ್ ತಂತ್ರಗಳನ್ನು ಬಳಸಿಕೊಂಡು ಕಸ್ಟಮ್ ಜೆಮ್ ಸಹ ರಚಿಸಬಹುದು.

ಬರವಣಿಗೆ ಮತ್ತು ಸಂವಹನಕ್ಕಾಗಿ AI:

ಗೂಗಲ್‌ನ ಈ ಪ್ರಮಾಣೀಕರಣ ಕೋರ್ಸ್ ಬರವಣಿಗೆ ಪಾಲುದಾರರಾಗಿ AI ಅನ್ನು ಬಳಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅಭ್ಯರ್ಥಿಗಳು Google Meet ನಲ್ಲಿ ಜೆಮಿನಿಯನ್ನು ಬಳಸಿಕೊಂಡು ಕಚ್ಚಾ ಸಭೆಯ ಪ್ರತಿಲೇಖನವನ್ನು ಸ್ಪಷ್ಟವಾದ ಕ್ರಿಯಾ ಪಟ್ಟಿಯೊಂದಿಗೆ ಸಂಕ್ಷಿಪ್ತ ಸಾರಾಂಶವಾಗಿ ಪರಿವರ್ತಿಸಬಹುದು.

ಇದನ್ನೂ ಓದಿ: ಬಡ ಮಕ್ಕಳಿಗೆ ವಿದ್ಯಾ ದೇವತೆಯಾದ ಭಾರತೀಯ ಶಿಕ್ಷಕಿಗೆ ವಿಶ್ವ ಮನ್ನಣೆ: ‘ಜಾಗತಿಕ ಶಿಕ್ಷಕ ಪ್ರಶಸ್ತಿ’ ಪಡೆದ ರೂಬಲ್ ನಾಗಿ

ಡೇಟಾ ವಿಶ್ಲೇಷಣೆಗಾಗಿ AI:

Google ನ ಈ ಕೋರ್ಸ್ ನಿಮಗೆ AI ವಿಶ್ಲೇಷಣಾತ್ಮಕ ಪಾಲುದಾರನಾಗಿ ಬಳಸಲು ಸಹಾಯ ಮಾಡುತ್ತದೆ. ಈ ಕೋರ್ಸ್ ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಗಳು ರಚನೆಯಿಲ್ಲದ ಡೇಟಾವನ್ನು ಸ್ಪಷ್ಟ, ಕಾರ್ಯಸಾಧ್ಯವಾದ ಒಳನೋಟಗಳಾಗಿ ಪರಿವರ್ತಿಸಲು ಮತ್ತು ಸಂಕೀರ್ಣ ಡೇಟಾವನ್ನು ರಚನಾತ್ಮಕ ಕೋಷ್ಟಕಗಳಾಗಿ ಪರಿವರ್ತಿಸಲು ಸಾಧ್ಯವಾಗುತ್ತದೆ.

ಕಾರ್ಯಕ್ರಮದ ವೈಶಿಷ್ಟ್ಯಗಳು:

  • AI ಯುಗದಲ್ಲಿ ಅಗತ್ಯವಿರುವ ಪ್ರಾಯೋಗಿಕ ಕೌಶಲ್ಯಗಳ ಮೇಲೆ ಗಮನ.
  • Google ತಜ್ಞರಿಂದ ನೇರ ತರಬೇತಿ.
  • 20 ಕ್ಕೂ ಹೆಚ್ಚು ಪ್ರಾಯೋಗಿಕ ಬಳಕೆ ಪ್ರಕರಣಗಳು.
  • Google ಮಾನ್ಯತೆ ಪಡೆದ ಪ್ರಮಾಣಪತ್ರ.
  • 7 ದಿನಗಳ ಉಚಿತ ಪ್ರಯೋಗಾವಧಿ.

ಒಟ್ಟಾರೆ, ಈ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ AI ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಮುನ್ನಡೆ ಪಡೆಯಲು ಸಹಾಯಕವಾಗಲಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾವು ಭಾರತವನ್ನು ಸೋಲಿಸಿದ್ದೇವೆ: ಪಾಕ್ ಆಟಗಾರನ ತಿರುಗೇಟು! – Kannada News | We beat India in the World Cup: Shadab Khan

T20 World Cup 2026: ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡದ ಪರಾಜಯ ಮುಂದುವರೆದಿದೆ. ಈ ಪರಾಜಯದ ಬೆನ್ನಲ್ಲೇ ಪಾಕ್ ತಂಡದ ಪ್ರದರ್ಶನದ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಅದರಲ್ಲೂ ಬಾಸಿತ್ ಅಲಿ, ಶಾಹಿದ್ ಅಫ್ರಿದಿ, ಮೊಹಮ್ಮದ್ ಯೂಸುಫ್ ಸೇರಿದಂತೆ ಕೆಲ ಮಾಜಿ ಆಟಗಾರರು ಹಿರಿಯ ಆಟಗಾರರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗಳಿಗೆ ಪಾಕ್ ಆಲ್​ರೌಂಡರ್ ಶಾದಾಬ್ ಖಾನ್ ತಿರುಗೇಟು ನೀಡಿದ್ದಾರೆ.

ನಮೀಬಿಯ ವಿರುದ್ಧದ ಪಂದ್ಯದ ಬಳಿಕ ಸುದ್ದಿಗೋಷ್ಠಿ ಮಾತನಾಡಿದ ಶಾದಾಬ್ ಖಾನ್, ನೀವು ಶ್ರೇಷ್ಠ ಆಟಗಾರರೇ ಇರಬಹುದು. ಆದರೆ ನಿಮ್ಮ ಕಾಲದಲ್ಲಿ ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ ಎಂಬುದು ನೆನಪಿರಲಿ. ಆದರೆ ನಾವು ಭಾರತ ತಂಡವನ್ನು ಸೋಲಿಸಿದ್ದೇವೆ. ಈ ವಿಷಯ ಕೂಡ ನಿಮಗೆ ನೆನಪಲ್ಲಿರಬೇಕು ಎಂದಿದ್ದಾರೆ.

2021ರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಇದು ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸಿಕ್ಕ ಏಕೈಕ ಜಯವಾಗಿದೆ. ಈ ವೇಳೆ ಶಾದಾಬ್ ಖಾನ್ ಕೂಡ ಪಾಕ್ ತಂಡದಲ್ಲಿದ್ದರು. ಇದನ್ನೇ ಪ್ರಸ್ತಾಪಿಸಿ ಇದೀಗ ಪಾಕ್ ಆಲ್​ರೌಂಡರ್ ಟೀಕಿಸಿದ ಮಾಜಿ ಆಟಗಾರರಿಗೆ ತಿರುಗೇಟು ನೀಡಿದ್ದಾರೆ.

ಶಾದಾಬ್ ಹೇಳಿಕೆಗೆ ಆಕ್ರೋಶ:

ಶಾದಾಬ್ ಖಾನ್ ಅವರ ಈ ಹೇಳಿಕೆಗೆ ಮಾಜಿ ಕ್ರಿಕೆಟಿಗ ಬಾಸಿತ್ ಅಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾದಾಬ್  ಅವರ ಈ ಹೇಳಿಕೆಯು ಅವರ ಮಾವನಿಗೆ ಮಾಡಿದ ಅವಮಾನ. ಏಕೆಂದರೆ ಅವರು ಮಾವ ಪಾಕಿಸ್ತಾನ್ ತಂಡದ ದಂತಕಥೆ. ಇದೀಗ ನಿಮ್ಮಿಂದ ಆಗದಿರುವುದನ್ನು ನಾವು ಮಾಡಿ ತೋರಿಸಿದ್ದೇವೆ ಅಂದಿರುವುದು ಸಕ್ಲೇನ್​ ಮುಷ್ತಾಕ್​ಗೆ ಮಾಡಿದ ಅವಮಾನವೆಂದು ಪರಿಗಣಿಸಬಹುದು ಎಂದು ಬಾಸಿತ್ ಅಲಿ ಹೇಳಿದ್ದಾರೆ.

ಪಾಕಿಸ್ತಾನದ ಮಾಜಿ ಸ್ಪಿನ್ ಲೆಜೆಂಡ್ ಸಕ್ಲೇನ್ ಮುಷ್ತಾಕ್ ಅವರ ಪುತ್ರಿಯನ್ನು ಶಾದಾಬ್ ಖಾನ್ ಮದುವೆಯಾಗಿದ್ದಾರೆ. ಇದೀಗ ವಿಶ್ವಕಪ್​ನಲ್ಲಿ ನಾವು ಮಾತ್ರ ಭಾರತದ ವಿರುದ್ಧ ಗೆದ್ದಿರುವುದು ಅಂದಿರುವುದು ಶಾದಾಬ್ ಮಾವನಿಗೆ ಮಾಡಿದಂತಹ ಅತೀ ದೊಡ್ಡ ಅವಮಾನ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ಶಾದಾಬ್ ಹೇಳಿಕೆಯನ್ನು ತೆಗೆದುಕೊಂಡರೆ, ಸಕ್ಲೇನ್ ಮ್ಯಾಚ್ ವಿನ್ನರ್ ಆಗಿರಲಿಲ್ಲವೇ? ಶಾದಾಬ್ ಖಾನ್​ನಂತ 10 ಬೌಲರ್​ಗಳಿಗೆ ಒಬ್ಬ ಸಕ್ಲೇನ್ ಸಮ. ಇದಾಗ್ಯೂ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರೀತಿಯ ಹೇಳಿಕೆಗಳ ಬದಲಿಗೆ ಮೈದಾನದಲ್ಲಿ ನಿಮ್ಮ ಪ್ರದರ್ಶನ ತೋರಿಸಿ ಎಂದು ಬಾಸಿತ್ ಅಲಿ ಆಕ್ರೋಶ ಹೊರಹಾಕಿದ್ದಾರೆ.

Source link

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ – Kannada News | Do Nandini Products Cause Cancer; KMF Debunks Cancer Claims as Fake News

ಕೆಎಂಎಫ್‌ ಉತ್ಪನ್ನಗಳುImage Credit source: deccanherald

ಬೆಂಗಳೂರು, ಫೆಬ್ರವರಿ 19: ಕೆಎಂಎಫ್​​ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್. ಕೆಎಂಎಫ್​​​ ಉತ್ಪನ್ನಗಳು (KMF Products) ದೇಶ-ವಿದೇಶಗಳಿಗೆ ಸರಬರಾಜು ಆಗುತ್ತದೆ. ಇದೀಗ ಈ ಬ್ರ್ಯಾಂಡ್​​ ಮೇಲೆ ಕಿಡಿಗೇಡಿಗಳ ಕಣ್ಣು ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಂದಿನ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ ಹರಿಬಿಡಲಾಗುತ್ತಿದೆ. ಆ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಕೆಎಂಎಫ್​​ ಸಜ್ಜಾಗಿದ್ದು, ಸುಳ್ಳು ಸುದ್ದಿ ಹರಿಬಿಡುತ್ತಿರುವವರ ಮೇಲೆ ಕ್ರಿಮಿನಲ್ ಕೇಸ್​​ ದಾಖಲಿಸಲು ಮುಂದಾಗಿದೆ.

ಇದು ಶುದ್ಧ ಸುಳ್ಳು ಎಂದ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ

ಕೆಎಂಎಫ್‌ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತೆ ಅಂತಾ ಡಾ.ಶರಣ್ಯ ಸಂತೋಷ್‌ ಎಂಬುವವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಇನ್ನು ಈ ಬಗ್ಗೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಮಾತನಾಡಿದ್ದು, ಇದು ಶುದ್ಧ ಸುಳ್ಳು ಕೆಎಂಎಫ್‌ ಉತ್ಪನ್ನ ನೈಸರ್ಗಿಕವಾಗಿ ತಯಾರಿಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್​ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್

ಇದುವರೆಗೂ ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಕೆಎಂಎಫ್‌ ಉತ್ಪನ್ನಗಳಿಗೆ ಯಾವುದೇ ಕೆಮಿಕಲ್ ಹಾಕಲ್ಲ. ಈಗಾಗಲೇ ಡಾ.ಶರಣ್ಯ ಸಂತೋಷ್‌ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ, ಜನರ ದಿಕ್ಕು ತಪ್ಪಿಸುವ ಕೆಲಸಬೇಡ. ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರೆ ಕ್ರಮಕೈಗೊಳ್ಳಲಾಗುತ್ತದೆ. ಕೆಎಂಎಫ್‌ ಉತ್ಪನ್ನಗಳು ತುಂಬಾ ಸೇಫ್‌, ಯಾವುದೇ ಭಯವಿಲ್ಲದೆ ಬಳಸುವಂತೆ ಗ್ರಾಹಕರಿಗೆ ಬಿ.ಶಿವಸ್ವಾಮಿ ಮನವಿ ಮಾಡಿದ್ದಾರೆ.

ಕೆಎಂಎಫ್​​ನ ಎಲ್ಲಾ ಉತ್ಪನ್ನಗಳು ಸೇಫ್​ ಎಂದ ಆರೋಗ್ಯ ಇಲಾಖೆ

ಇನ್ನು ಕೆಎಂಎಫ್ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಪರೀಕ್ಷೆ ಮಾಡಲಾಗಿದ್ದು, ಎಲ್ಲಾ ಉತ್ಪನ್ನಗಳು ಸೇಫ್​​ ಎಂಬ ವರದಿ ಬಂದಿದೆ. ಮೈಸೂರು ಪಾಕ್, ಮಿಲ್ಕ್ ಪೇಡಾ, ಪನ್ನೀರ್, ವೆನಿಲಾ ಮಿಲ್ಕ್ ಸೇಕ್​​ ಸೇರಿದಂತೆ ಎಲ್ಲಾ ಉತ್ಪನ್ನಗಳು ಸುರಕ್ಷಿತ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತೀಯ ಸಿನಿಮಾ ಬಗ್ಗೆ ತನಗಿರುವ ಕನಸು ಹಂಚಿಕೊಂಡ ರಾಜಮೌಳಿ – Kannada News | SS Rajamouli shared his dream about Indian Cinema

ರಾಜಮೌಳಿ (Rajamouli) ಪ್ರಸ್ತುತ ಭಾರತೀಯ ಚಿತ್ರರಂಗದ ಟಾಪ್ ನಿರ್ದೇಶಕ. ಇತ್ತೀಚೆಗಿನ ವರ್ಷಗಳಲ್ಲಿ ಭಾರತದ ಸಿನಿಮಾಗಳಿಗೆ ವಿಶ್ವ ಮಟ್ಟದಲ್ಲಿ ಮಾರುಕಟ್ಟೆ, ಗೌರವ, ಪ್ರೇಕ್ಷಕರನ್ನು ತಂದುಕೊಟ್ಟ ಶ್ರೇಯ ಎಸ್​​ಎಸ್ ರಾಜಮೌಳಿ ಅವರಿಗೆ ಸಲ್ಲಬೇಕು. ಅವರ ನಿರ್ದೇಶನದ ‘ಆರ್​​ಆರ್​​ಆರ್’ ಸಿನಿಮಾ ವಿದೇಶಗಳಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ಹಾಲಿವುಡ್​ನ ಕೆಲವು ಲಿಜೆಂಡರಿ ನಿರ್ದೇಶಕರುಗಳು ಸಹ ರಾಜಮೌಳಿಗೆ ಹಾಲಿವುಡ್ ಸಿನಿಮಾ ಮಾಡುವಂತೆ ಆಫರ್ ಮಾಡಿದ್ದರು. ಆದರೆ ನಯವಾಗಿ ಆಫರ್ ಅನ್ನು ನಿರಾಕರಿಸಿದ್ದಾರೆ ರಾಜಮೌಳಿ. ಆದರೆ ರಾಜಮೌಳಿ ಅವರಿಗೆ ಭಾರತೀಯ ಸಿನಿಮಾಗಳ ಬಗ್ಗೆ ಒಂದು ಕನಸಿದೆ. ಅದನ್ನು ಸಾಕಾರಗೊಳಿಸುವುದಕ್ಕಾಗಿ ಅವರು ಶ್ರಮಿಸುತ್ತಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ರಾಜಮೌಳಿ, ಭಾರತೀಯ ಚಿತ್ರರಂಗದ ಬಗ್ಗೆ ತಮಗಿರುವ ಕನಸಿನ ಬಗ್ಗೆ ಹೇಳಿಕೊಂಡಿದ್ದಾರೆ. ‘ನನಗೆ ಒಂದು ಆಸೆಯಿದೆ, ಭಾರತೀಯ ಸಿನಿಮಾಕ್ಕೆ ವಿಶ್ವದಾದ್ಯಂತ ಬೇಡಿಕೆ ರೂಪುಗೊಳ್ಳಬೇಕು ಎಂಬುದು ನನ್ನ ಆಸೆ. ಈಗ ಕೆ-ಪಾಪ್​​ಗೆ ಹೇಗೆ ವಿಶ್ವದಾದ್ಯಂತ ಬೇಡಿಕೆ ಇದೆಯೋ, ಜಪಾನಿನ ಅನಿಮೇಷನ್​​ಗೆ ಹೇಗೆ ವಿಶ್ವದಾದ್ಯಂತ ಅಭಿಮಾನಿಗಳು ಇದ್ದಾರೆಯೋ ಹಾಗೆಯೇ ಭಾರತೀಯ ಸಿನಿಮಾಕ್ಕೆ ವಿಶ್ವದಾದ್ಯಂತ ಅಭಿಮಾನಿಗಳು, ಬೇಡಿಕೆ ಮೂಡಬೇಕು ಎಂಬುದು ನನ್ನ ಬಯಕೆ’ ಎಂದಿದ್ದಾರೆ ರಾಜಮೌಳಿ.

ಇತ್ತೀಚೆಗೆ ಬಿಡುಗಡೆ ಆದ ‘ಡೀಮನ್ ಸ್ಲೇಯರ್’ ಸಿನಿಮಾವನ್ನು ಉದಾಹರಣೆಯಾಗಿ ನೀಡಿದ ರಾಜಮೌಳಿ, ‘ಇತ್ತೀಚೆಗೆ ‘ಡೀಮನ್ ಸ್ಲೇಯರ್’ ಅನಿಮೇಷನ್ ಸಿನಿಮಾ ಭಾರತದಲ್ಲಿ ಬಿಡುಗಡೆ ಆಯ್ತು. ಭಾರತದಲ್ಲಿಯೇ ಅನಿಮೇಷನ್ ಸಿನಿಮಾಕ್ಕೆ ಬೇಡಿಕೆ ಕಡಿಕೆ, ಅದನ್ನು ನೋಡುವವರ ಸಂಖ್ಯೆಯೂ ಕಡಿಮೆ ಆದರೆ ‘ಡೀಮನ್ ಸ್ಲೇಯರ್’ ಸಿನಿಮಾ ದೊಡ್ಡ ಹಿಟ್ ಆಯ್ತು. ಅದರಂತೆ ಭಾರತೀಯ ಸಿನಿಮಾಗಳು ತಮ್ಮ ಭಾವುಕ ಕತೆ, ಸಂಗೀತದಿಂದ ವಿಶ್ವದಾದ್ಯಂತ ಅಭಿಮಾನಕ್ಕೆ ಒಳಗಾಗಬೇಕು’ ಎಂದು ರಾಜಮೌಳಿ ಹೇಳಿದ್ದಾರೆ.

ಇದನ್ನೂ ಓದಿ:ಬ್ಲಾಕ್ ಬಸ್ಟರ್ ಸಿನಿಮಾಗಳ ನಿರ್ದೇಶಕ ರಾಜಮೌಳಿಗೆ ಇಷ್ಟವಾದ ಸಿನಿಮಾ ಯಾವುದು?

‘ಇಡೀ ವಿಶ್ವಕ್ಕೆ ಒಗ್ಗುವ ಕತೆ ಮಾಡಿ, ಅದರಲ್ಲಿ ನಿಜವಾದ ಭಾವುಕತೆಯನ್ನು ಹಿಡಿದಿಟ್ಟರೆ ಖಂಡಿತ ಎಲ್ಲ ಭಾಗದ ಜನರು ನೋಡುತ್ತಾರೆ, ಇಷ್ಟಪಡುತ್ತಾರೆ ಎಂಬುದು ನನ್ನ ನಂಬಿಕೆ. ಆದರೆ ನಂಬಿಕೆ ಬೇರೆ, ಆ ನಂಬಿಕೆ ನಿಜವಾಗುದು ಬೇರೆ. ಆದರೆ ‘ಆರ್​​ಆರ್​​ಆರ್’ ಸಿನಿಮಾನಲ್ಲಿ ಅದು ನಿಜವಾಯ್ತು. ನಾನು ಅಂದುಕೊಂಡ ಫಲವನ್ನು ಆ ಸಿನಿಮಾ ನೀಡಿತು’ ಎಂದಿದ್ದಾರೆ ರಾಜಮೌಳಿ.

ಇದೀಗ ‘ವಾರಣಾಸಿ’ ಹೆಸರಿನ ಸಿನಿಮಾವನ್ನು ರಾಜಮೌಳಿ ನಿರ್ದೇಶನ ಮಾಡುತ್ತಿದ್ದು, ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ. ಈ ಸಿನಿಮಾವನ್ನು ಹಾಲಿವುಡ್​ ಲೆವೆಲ್​​ನಲ್ಲಿ ರಾಜಮೌಳಿ ನಿರ್ದೇಶಿಸುತ್ತಿದ್ದಾರೆ. ಸಿನಿಮಾಕ್ಕೆ ಭಾರಿ ದೊಡ್ಡ ಬಜೆಟ್ ಹೂಡಿಕೆ ಮಾಡಲಾಗಿದೆ. ಸಿನಿಮಾದ ಬಿಡುಗಡೆ ಇನ್ನೂ ಒಂದು ವರ್ಷವಿದೆ. ಏಪ್ರಿಲ್ 07, 2027ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವಾರಾಂತ್ಯಕ್ಕೆ ಜೀ5ನಲ್ಲಿ ನೋಡಿ ‘ರಾಕ್ಷಸ’; ಉತ್ತರ ಕರ್ನಾಟಕದ ಕಥೆಯಲ್ಲಿ ಕ್ರೈಮ್​ ಥ್ರಿಲ್ಲರ್ ಸರಣಿ – Kannada News | Rakshasa Web Series: Vijay Raghavendra’s Kannada Thriller on Zee5 North Karnataka Story

ಒಟಿಟಿ ವ್ಯಾಪ್ತಿ ತುಂಬಾನೇ ಹಿರಿದಾಗಿದೆ. ಸಾಕಷ್ಟು ಸಿನಿಮಾಗಳು, ಸರಣಿಗಳು ರಿಲೀಸ್ ಆಗುತ್ತಿವೆ. ಪರಭಾಷೆಗೆ ಹೋಲಿಕೆ ಮಾಡಿದರೆ ಕನ್ನಡದಲ್ಲಿ ವೆಬ್ ಸರಣಿಗಳ ಸಂಖ್ಯೆ ಕಡಿಮೆ. ಆದರೆ, ಜೀ5 ಹಲವು ವೆಬ್​ ಸೀರಿಸ್​​ಗಳನ್ನು ಕನ್ನಡಿಗರ ಮಡಿಲಿಗೆ ಹಾಕುತ್ತಾ ಇದೆ. ಈಗ ಉತ್ತರ ಕರ್ನಾಟಕ ಭಾಷೆಯಲ್ಲಿ ಸಿದ್ಧವಾದ ವೆಬ್ ಸೀರಿಸ್​​​ನ ವೀಕ್ಷಕರ ಮುಂದಿಡುತ್ತಿದೆ. ವೀಕೆಂಡ್​​​ನಲ್ಲಿ ಈ ಸರಣಿ ವೀಕ್ಷಣೆಗೆ ಒಂದೊಳ್ಳೆಯ ಆಯ್ಕೆ ಆಗಲಿದೆ. ಇದಕ್ಕಾಗಿ ವೀಕ್ಷಕರು ಕಾದಿದ್ದಾರೆ.

ವಿಜಯ್ ರಾಘವೇಂದ್ರ ಅವರು ಬಾಲ ಕಲಾವಿದನಾಗಿ, ಹೀರೋ ಆಗಿ ಮಿಂಚಿದ್ದಾರೆ. ಅವರ ವೃತ್ತಿ ಜೀವನದಲ್ಲಿ ಈವರೆಗೆ ಯಾವುದೇ ವೆಬ್ ಸರಣಿ ಮಾಡಿರಲಿಲ್ಲ. ‘ರಾಕ್ಷಸ’ ಅವರ ಮೊದಲ ವೆಬ್ ಸರಣಿ ಆಗಿದೆ. ಮಲಪ್ರಭಾ ನದಿ ತೀರದ ನಿಗೂಢ ಮೊಸಳೆ ದಾಳಿಗಳ ಸುತ್ತ ಈ ಕಥೆಯನ್ನು ಹೆಣೆಯಲಾಗಿದೆ. ಈ ಸರಣಿ ಸಾಕಷ್ಟು ಥ್ರಿಲ್ ನೀಡುವ ನಿರೀಕ್ಷೆ ಇದೆ.

ಈ ವೆಬ್ ಸರಣಿಯನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಅವರು ಉತ್ತರ ಕರ್ನಾಟಕ ಭಾಷೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಟ್ರೇಲರ್ ನೋಡಿದವರಿಗೆ ವಿಜಯ್ ರಾಘವೇಂದ್ರ ಹಾಗೂ ಮಯೂರಿ ಪಾತ್ರಕ್ಕೆ ಸರಿಯಾದ ಆಯ್ಕೆ ಎಂದು ಅನಿಸಿದೆ.

ಜೀ5 ಬಿಸ್ನೆಸ್ ಹೆಡ್ ದೀಪಕ್ ದೀಪಕ್ ಶ್ರೀರಾಮುಲು ಈ ಸರಣಿ ಬಗ್ಗೆ ಮಾಹಿತಿ ನೀಡಿದ್ದಾರೆ, ‘ವೆಬ್ ಸರಣಿ ಜರ್ನಿ ಶುರು ಮಾಡಿದಾಗ, ಶೃತಿ ನಾಯ್ಡು ‌ಪ್ರೊಡಕ್ಷನ್, ಪಿಆರ್ ಕೆ, ಕೆಆರ್​ಜಿ ಹಾಗೂ ತರುಣ್ ಸುಧೀರ್ ಅವರು ಸಾಥ್ ಕೊಟ್ಟಿದ್ದಾರೆ. ನಾವು ಕೇಳಿದಾಗ ಸಿರೀಸ್ ಮಾಡಲು ಮುಂದೆ ಬಂದರು. ಈ ಸರಣಿಯಲ್ಲಿ 22ರಿಂದ 25 ನಿಮಿಷದ ಏಳು ಎಪಿಸೋಡ್ ಇರಲಿವೆ ಎಂದಿದ್ದಾರೆ.

ಇದನ್ನೂ ಓದಿ: ಈ ವಾರವೂ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

ನಿರ್ಮಾಪಕ ತರುಣ್ ಸುಧೀರ್ ಮಾತನಾಡಿ, ‘89 ಪಾತ್ರಗಳು ಈ ಸಿರೀಸ್​ ಅಲ್ಲಿ ಇವೆ. ‌ಅವರೆಲ್ಲವೂ ಉತ್ತರ ಕರ್ನಾಟಕ ಭಾಗದವರು. ಉತ್ತರ ಕರ್ನಾಟಕದ ಶೈಲಿಯಲ್ಲೇ ಸರಣಿ ಇದೆ ಎಂಬುದೇ ವಿಶೇಷ’ ಎಂದರು ಅವರು. ರಾಕ್ಷಸ, ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ಮೊದಲ ವೆಬ್ ಸಿರೀಸ್. ಸೈಕಲಾಜಿಕಲ್ ಕ್ರೈಂ ಥ್ರಿಲ್ಲರ್ ಜಾನರ್ ಒಳಗೊಂಡಿರುವ ಸರಣಿಯಲ್ಲಿ ವಿಜಯ ರಾಘವೇಂದ್ರ,ಮಯೂರಿ, ಅವಿನಾಶ್, ಮಾಳವಿಕ, ಅಪ್ಪಣ್ಣ ಮತ್ತು ಅಭಿಜಿತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಕ್ಷಸ ವೆಬ್ ಸೀರಿಸ್‌ಗೆ ಸುಹಾನ್ ಪ್ರಸಾದ್ ಮತ್ತು ಅಪೂರ್ವ ಕಥೆ ಒದಗಿಸಿದ್ದಾರೆ. ಹಾಗೇ ಸುಹಾನ್ ಪ್ರಸಾದ್ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version