ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Swamiji heart attack prasannananda puri shifted to hyderabad for treatment update
ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…