Headlines

ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅನಾಹುತ: ಸುತ್ತಮುತ್ತ ಕವಿದ ದಟ್ಟ ಹೊಗೆ – Kannada News | Fire Breaks Out at Plastic Godown in Nayandahalli, Bengaluru

ಬೆಂಗಳೂರು, ಮೇ 14: ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟ ಪ್ರಸಂಗ ನಡೆದಿದೆ. ವೃಷಭಾವತಿ ನದಿ ಪಕ್ಕದಲ್ಲಿರುವ ಈ ಗೋದಾಮಿನಲ್ಲಿ ಟನ್‌ಗಟ್ಟಲೆ ಸ್ಕ್ರಾಪ್ ಪ್ಲಾಸ್ಟಿಕ್, ಹಳೆಯ ಪೈಪ್‌ಗಳು ಹಾಗೂ ಇತರೆ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಇದು ಬೆಂಕಿ ಹರಡಲು ಮುಖ್ಯ ಕಾರಣವಾಗಿದೆ. ಪ್ಲಾಸ್ಟಿಕ್‌ನಿಂದಾಗಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ದಟ್ಟ ಹೊಗೆ ಇಡೀ ನಾಯಂಡಹಳ್ಳಿ ಪ್ರದೇಶವನ್ನು ಆವರಿಸಿತ್ತು. ಈ ಅಗ್ನಿ ಅನಾಹುತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ…

Read More

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು…

Read More

ಮೆಟ್ಟಿಲೇರಿಯೇ ತಿಮ್ಮಪ್ಪನ ದರ್ಶನ ಮಾಡುವುದೇಕೆ ಜಾನ್ಹವಿ: ಅದ್ಭುತ ಕಾರಣ ಕೊಟ್ಟ ನಟಿ

ಜಾನ್ಹವಿ ಕಪೂರ್ (Janhvi Kapoor), ಬಾಲಿವುಡ್​​ನ ಬಲು ಜನಪ್ರಿಯ ಮತ್ತು ಬೇಡಿಕೆಯ ಯುವನಟಿ. ಇತ್ತೀಚೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿಯೂ ಸಹ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಜಾನ್ಹವಿ ಕಪೂರ್, ಬಾಲಿವುಡ್​​ನ ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಸಿನಿಮಾಗಳಲ್ಲಿ ಮಾಡರ್ನ್ ಯುವತಿಯಾಗಿ ಕಾಣಿಸಿಕೊಳ್ಳುವ ಜಾನ್ಹವಿ, ಅಪ್ಪಟ ದೈವ ಭಕ್ತೆ. ಅದರಲ್ಲೂ ತಿರುಪತಿ ತಿಮ್ಮಪ್ಪನ ಪರಮ ಭಕ್ತೆ. ವರ್ಷದಲ್ಲಿ ಹಲವು ಭಾರಿ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡಿದ ಪ್ರತಿಬಾರಿ ಅವರು ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರಿಯೇ ದರ್ಶನ ಪಡೆಯುತ್ತಾರೆ. ತಾವು…

Read More

W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ

254 ವರ್ಷಗಳ ಕ್ರಿಕೆಟ್​ ಇತಿಹಾಸ ಹೊಂದಿರುವ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ 5 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಫಸ್ಟ್​ ಕ್ಲಾಸ್​ ಕ್ರಿಕೆಟ್​ನಲ್ಲಿ ಬೌಲರ್​ರೊಬ್ಬರು 5 ಎಸೆತಗಳಲ್ಲಿ ಸತತ 5 ವಿಕೆಟ್ ಕಬಳಿಸಿದ್ದಾರೆ. ಈ ಸಾಧನೆ ಮಾಡಿದ ಬೌಲರ್ ಹೆಸರು ಬ್ರೆಟ್ ರಾಂಡೆಲ್. ನ್ಯೂಝಿಲೆಂಡ್​ನ ಪ್ಲಂಕೆಟ್ ಶೀಲ್ಡ್  ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿಯಲ್ಲಿ ನಡೆದ ಪಂದ್ಯದಲ್ಲಿ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ಹಾಗೂ ನಾರ್ದನ್ ಡಿಸ್ಟ್ರಿಕ್ಟ್ಸ್ ತಂಡಗಳು ಮುಖಾಮುಖಿಯಾಗಿದ್ದವು….

Read More

ಹಳೆಯ ನೋವು ಮುಂದೆ ಆರ್ಥ್ರೈಟಿಸ್‌ಗೆ ಕಾರಣವಾಗುತ್ತದೆಯೇ? ಏನ್ ಹೇಳ್ತಾರೆ ತಜ್ಞರು – Kannada News | Preventing Arthritis After Injury: Orthopedic Tips For Long Term Joint Health

ಎಲುಬಿಗಾದ ಹಳೆಯ ನೋವು ಅಥವಾ ಗಾಯವನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಿದರೆ ಮುಂದೆ ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹೌದು, ಆರೋಗ್ಯ ತಜ್ಞರ ಪ್ರಕಾರ ಫ್ರ್ಯಾಕ್ಚರ್ (Fracture), ಲಿಗಮೆಂಟ್ ಹಾನಿ (Ligament injury) ಅಥವಾ ಜಾಯಿಂಟ್ ಇಂಜುರಿ (Joint injury) ಆದಾಗ ಸರಿಯಾದ ಚಿಕಿತ್ಸೆ ಪಡೆಯದೇ ಇದ್ದರೆ, ಮುಂದಿನ ದಿನಗಳಲ್ಲಿ ಆರ್ಥ್ರೈಟಿಸ್‌ (Arthritis) ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲಿಯೂ ಹಲವರು ಗಾಯವಾದ ನಂತರ ಕೆಲ ದಿನ ವಿಶ್ರಾಂತಿ ಪಡೆದು ಮತ್ತೆ ಸಾಮಾನ್ಯ ಚಟುವಟಿಕೆಗೆ…

Read More

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬವೇ ದುರಂತ ಅಂತ್ಯ – Kannada News | Three of a family dies in head on collision road accident at miraj jamkhandi highway

ಬೆಳಗಾವಿ, (ಫೆಬ್ರವರಿ 18): ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ (miraj jamkhandi highway) ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ…

Read More

ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’ – Kannada News | Dharma Keerthiraj starrer 25th Movie Nayana Manohara title and teaser launch

ನಟ ಧರ್ಮ ಕೀರ್ತಿರಾಜ್ (Dharma Keerthiraj) ಅವರು ಬಿಗ್ ಬಾಸ್ ಶೋ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಹಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಅವರು 25ನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ನಯನ ಮನೋಹರ’ (Nayana Manohara) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಆಯಿತು. ಜೊತೆಗೆ ಟೀಸರ್ ಕೂಡ ಬಿಡುಗಡೆ ಮಾಡಲಾಗಿದೆ. ಯುಬಿ ಸಿಟಿಯ ಮ್ಯಾರಿಯಟ್ ಅಪಾರ್ಟ್‌ಮೆಂಟ್ಸ್‌ನಲ್ಲಿ ಈ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಅನುಷ್ ಸಿದ್ದಪ್ಪ ಅವರು ‘ಎಕ್ಸ್ಕ್ವಿಸಿಟ್ ಎಂಟರ್‌ಟೈನ್‌ಮೆಂಟ್ಸ್’ ಮೂಲಕ…

Read More

Sarala Subbarao Review: ಜೆನ್ ಜೀ ಕಾಲಕ್ಕೆ ರೆಟ್ರೋ ಪ್ರೀತಿ ಪರಿಚಯಿಸುವ ‘ಸರಳ ಸುಬ್ಬರಾವ್’ – Kannada News | Ajay Rao starrer Sarala Subbarao movie gives you 1970s feel

ಒಂದು ಕಾಲದಲ್ಲಿ ಸಾಹಿತ್ಯ ಕೃತಿಗಳನ್ನು ಆಧರಿಸಿ ಹೆಚ್ಚು ಸಿನಿಮಾಗಳು ಮೂಡಿಬರುತ್ತಿದ್ದವು. ಕಾಲಕ್ರಮೇಣ ಅಂತಹ ಸಿನಿಮಾಗಳ ಸಂಖ್ಯೆ ಕಡಿಮೆ ಆಯಿತು. ಕನ್ನಡದ ಖ್ಯಾತ ಲೇಖಕಿ ತ್ರಿವೇಣಿ ಅವರ ಒಂದಷ್ಟು ಕಾದಂಬರಿಗಳು ಸಿನಿಮಾ ರೂಪ ಪಡೆದಿದ್ದವು. ಈಗ ಅದೇ ತ್ರಿವೇಣೆ ಅವರ ‘ವಸಂತಗಾನ’ ಕಾದಂಬರಿಯನ್ನು ಆಧರಿಸಿ ‘ಸರಳ ಸುಬ್ಬರಾವ್’ (Sarala Subbarao) ಸಿನಿಮಾ ಮಾಡಲಾಗಿದೆ. ಮಂಜು ಸ್ವರಾಜ್ ನಿರ್ದೇಶನ ಮಾಡಿದ ಈ ಚಿತ್ರಕ್ಕೆ ಲೋಹಿತ್ ನಂಜುಂಡಯ್ಯ ಅವರು ಬಂಡವಾಳ ಹೂಡಿದ್ದಾರೆ. ಅಜಯ್ ರಾವ್ (Ajay Rao), ಮಿಶಾ ನಾರಂಗ್ ಅವರು…

Read More

ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಮೇಲೆ 2 ಬಾರಿ ಮಾರಣಾಂತಿಕ ದಾಳಿ; ಇರಾನ್ ಸಂಸದ ಮಾಹಿತಿ

ವಾಷಿಂಗ್ಟನ್, ಮಾರ್ಚ್ 13: ಇರಾನ್‌ನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಇತ್ತೀಚಿನ ದಿನಗಳಲ್ಲಿ ಎರಡು ಮಾರಣಾಂತಿಕ ದಾಳಿಗಳಿಂದ ಬದುಕುಳಿದಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದಕ್ಕೆ ಇರಾನ್ ಸಂಸತ್ ಸದಸ್ಯರೊಬ್ಬರು ತಿಳಿಸಿದ್ದಾರೆ. ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಹಗೆತನದ ಮಧ್ಯೆ ಈ ದಾಳಿಗಳು ನಡೆದಿವೆ ಎಂದು ಸಂಸದ ಮೊಹಮ್ಮದ್ರೆಜಾ ರೆಝಾಯಿ ಕೌಚಿ ಹೇಳಿದ್ದಾರೆ. ಇರಾನ್‌ನ ರಾಜ್ಯ ಸುದ್ದಿ ಸಂಸ್ಥೆ ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿಯೊಂದಿಗೆ ಮಾತನಾಡಿದ ಅವರು, ದೇಶದ ಮಾಜಿ ಸುಪ್ರೀಂ ಲೀಡರ್ ಅಲಿ…

Read More

ಮೆನೋಪಾಸ್ ಎಂದರೇನು? ಈ ಹಂತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? – Kannada News | Menopause Care Guide: Protecting Bone, Heart And Mental Health

ಮೆನೋಪಾಸ್ (Menopause) ಎನ್ನುವುದು ಮಹಿಳೆಯರಲ್ಲಿ ಮಾಸಿಕ ಋತುಚಕ್ರ ಶಾಶ್ವತವಾಗಿ ನಿಲ್ಲುವ ಸಹಜ ಜೈವಿಕ ಪ್ರಕ್ರಿಯೆಯಾಗಿದೆ. ಸಾಮಾನ್ಯವಾಗಿ 45 ರಿಂದ 55 ವರ್ಷಗಳ ನಡುವೆ ಇದು ಸಂಭವಿಸುತ್ತದೆ. ಸತತ 12 ತಿಂಗಳುಗಳ ಕಾಲ ಮುಟ್ಟು ಕಾಣಿಸಿಕೊಳ್ಳದಿದ್ದರೆ ಆಕೆ ಮೆನೋಪಾಸ್‌ ತಲುಪಿದ್ದಾಳೆ ಎಂದು ಪರಿಗಣಿಸಬಹುದು. ಈ ಹಂತದ ನಂತರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೆನೋಪಾಸ್ ನಂತರ ಮಹಿಳೆಯ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಮತ್ತು ಯಾವ ರೀತಿ ಜೀವನಶೈಲಿಯಲ್ಲಿ…

Read More