Headlines

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ…

Read More

ಕ್ಷಮೆ ಕೇಳಿದ ಕಮಿಡಿಯನ್ ಪ್ರಣಿತ್, ಝಾಡಿಸಿದ ‘ಕಿರಿಕ್’ ಹುಡುಗಿ ಸಂಯುಕ್ತ – Kannada News | Samyuktha Hegde slams Pranit More’s apology over 370 biryani row, calling it shameful

ಕಮಿಡಿಯನ್​ಗಳು ಕೆಲವರು ಪದೇ ಪದೇ ಋಣಾತ್ಮಕ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಕೆಲ ಕಮಿಡಿಯನ್​​ಗಳು ಹಾಸ್ಯದ ಹೆಸರಲ್ಲಿ ತೀರ ಅಶ್ಲೀಲ, ನೈತಿಕವಲ್ಲದ ವಿಷಯಗಳನ್ನು ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಮತ್ತು ಕಾನೂನಿನಂದ ಹಾಗೂ ಸಮಾಜದಿಂದ ತೀವ್ರ ಟೀಕೆ ಮತ್ತು ವಿಮರ್ಶೆಗೆ ಒಳಗಾಗುತ್ತಿದ್ದಾರೆ. ಕಮಿಡಿಯನ್ ಪ್ರಣಿತ್ ಮೋರೆ (Pranit More) ಇದೀಗ ಇಂಥಹದ್ದೇ ಒಂದು ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಗ್​​ಬಾಸ್​​ಗೆ ಸಹ ಹೋಗಿ ಬಂದಿರುವ ಪ್ರಣಿತ್ ಮೋರೆ, ನಡೆಸಿಕೊಡುವ ಶೋ ಒಂದರಲ್ಲಿ ವ್ಯಕ್ತಿಯೊಬ್ಬ 370 ರೂಪಾಯಿ ಬಿರಿಯಾನಿ ಕೊಡಿಸಿ, ಯುವತಿಯನ್ನು ಹೇಗೆಲ್ಲ…

Read More

ಒಕ್ಕಲಿಗರಿಗೆ ಅವಕಾಶ ಸಿಕ್ಕಿದೆ, ದಲಿತರು, ಅಲ್ಪಸಂಖ್ಯಾತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ – Kannada News | Former Minister KN Rajanna Questions Lack of Dalit and Minority Chief Ministers

ತುಮಕೂರು, ಫೆ.19: ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರು ಕರ್ನಾಟಕದಲ್ಲಿ ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು ಎಂದು ಮತ್ತೊಮ್ಮೆ ಹೇಳಿಕೆಯನ್ನು ನೀಡಿದ್ದಾರೆ. ಈ ವಿಷಯದಲ್ಲಿ ಈಗಾಗಲೇ ಮಹದೇವಪ್ಪ ಅವರು ಮಾತನಾಡಿದ್ದು, ಇತರೆ ರಾಜ್ಯಗಳ ಉದಾಹರಣೆಗಳನ್ನು ನೀಡಿ ದಲಿತ ಸಿಎಂ ಸಾಧ್ಯತೆಯನ್ನು ಸಮರ್ಥಿಸಿದ್ದಾರೆ ಎಂದು ರಾಜಣ್ಣ ನೆನಪಿಸಿಕೊಂಡರು. ದಲಿತರು, ಅಲ್ಪಸಂಖ್ಯಾತರು, ವಾಲ್ಮೀಕಿ ಸಮುದಾಯದವರು ಅಥವಾ ಬಲಿಜ ಸಮುದಾಯದವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಲ್ಲವೇ ಎಂದು ರಾಜಣ್ಣ ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ವಿವರಿಸಿದ ರಾಜಣ್ಣ, ಕಾಂಗ್ರೆಸ್…

Read More

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ…

Read More

ಕಾಶ್ಮೀರದ ಗಡಿಯೊಳಗೆ ಬಂದ ಪಾಕಿಸ್ತಾನಿ ಡ್ರೋನ್​ಗಳು; ಭಾರತೀಯ ಸೇನೆಯಿಂದ ಗುಂಡಿನ ದಾಳಿ – Kannada News | Pakistani drones spotted flying in Kashmir Indian Army opens fire

ಶ್ರೀನಗರ, ಜನವರಿ 30: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಪ್ರದೇಶದೊಳಗೆ ನುಸುಳಲು ಯತ್ನಿಸಿದ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಭಾರತೀಯ ಸೇನೆ (Indian Army) ಇಂದು ಹಿಮ್ಮೆಟ್ಟಿಸಿದೆ ಎಂದು ಮೂಲಗಳು ತಿಳಿಸಿವೆ. ಕೇರನ್ ಸೆಕ್ಟರ್‌ನ ಜೋಧಾ ಮಕಾನ್-ಬಿರಂಡೋರಿ ಪ್ರದೇಶದ ಬಳಿ ಸುಮಾರು 15 ಡ್ರೋನ್‌ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳು ತಕ್ಷಣ ಕ್ರಮ ಕೈಗೊಂಡವು. ಈ ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿಲ್ಲ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು…

Read More

ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!

ಮಂಡ್ಯ, ಮಾ.11: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲದಲ್ಲಿ ಬೆಳಕಿಗೆ ಬಂದಿದೆ. ಅರ್ಚಕ ಸಿದ್ದಲಿಂಗಪ್ಪ (46) ಹತ್ಯೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶಾಲಿನಿ, ಪ್ರಿಯಕರ ಹರೀಶ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮಾ.6ರಂದು ಸಿಡಿಎಸ್ ನಾಲೆಯಲ್ಲಿ ಸಿದ್ದಲಿಂಗಪ್ಪ ಶವವಾಗಿ ಪತ್ತೆಯಾಗಿದ್ದರು. ಚಪ್ಪಲಿ ಸಿಕ್ಕ ಸ್ಥಳದಲ್ಲಿ ರಕ್ತದ ಕಲೆ ಇದ್ದ ಹಿನ್ನೆಲೆ ಪೊಲೀಸರಿಗೆ ಅನುಮಾನ ಮೂಡಿ…

Read More

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ – Kannada News | Puducherry Rangasamy meets Lieutenant Governor stakes claim to form government

ಪುದುಚೇರಿ, ಮೇ 8: ಪುದುಚೇರಿಯಲ್ಲಿ ಎನ್‌ಡಿಎ ನಾಯಕರಾಗಿ ಆಯ್ಕೆಯಾದ ಎಐಎನ್‌ಆರ್‌ಸಿ ಮುಖ್ಯಸ್ಥ ಎನ್. ರಂಗಸಾಮಿ ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಸನಾಥನ್ ಅವರನ್ನು ಭೇಟಿ ಮಾಡಿ ಯುಟಿಯಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿದೆ. ಈ ವೇಳೆ ರಂಗಸಾಮಿ ಅವರೊಂದಿಗೆ ಮೈತ್ರಿ ಪಕ್ಷಗಳ ಹೊಸದಾಗಿ ಆಯ್ಕೆಯಾದ ಶಾಸಕರು ಕೂಡ ಇದ್ದರು. ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ಬಂದಿರುವ ಮಾಹಿತಿ ಪ್ರಕಾರ, ರಂಗಸಾಮಿ ಸಲ್ಲಿಸಿದ ಪತ್ರವನ್ನು ಅನುಮೋದನೆಗಾಗಿ ರಾಷ್ಟ್ರಪತಿ…

Read More

ಅಂದಿನ ಗೊರಜು ಭೂಮಿಗೆ ಇಂದು ಬಂಗಾರದ ಬೆಲೆ: ಏನಿದು ನೂರಾರು ಕೋಟಿ ಬೆಲೆಬಾಳುವ ಭೂಮಿಯ ಕಥೆ

ಕೋಲಾರ, ಮಾರ್ಚ್​​ 06: ಅದು ಬೆಟ್ಟಗುಡ್ಡಗಳಿರುವ ಭೂಮಿ (land). ಅಲ್ಲಿ ಕೃಷಿ ಮಾಡಲು ಯೋಗ್ಯವಲ್ಲ, ಹಾಗಾಗಿ ಅದನ್ನು ರೈತರಿಗೆ ಮಂಜೂರು ಮಾಡುವುದು ಬೇಡ ಎಂದು ಅಧಿಕಾರಿಗಳೇ ತಿರಸ್ಕರಿಸಿದ್ದರು. ಆದರೆ ಇಂದು ಆ ಭೂಮಿಗೆ ಬಂಗಾರದ ಬೆಲೆ ಬಂದ ಹಿನ್ನಲೆ ಅಧಿಕಾರಿಗಳೇ ಶಾಮೀಲಾಗಿ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ರಾತ್ರೋರಾತ್ರಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಮಾಲೂರು ಬಹುತೇಕ ಬೆಂಗಳೂರಿಗೆ ಹೊಂದಿಕೊಂಡಿರುವ ತಾಲ್ಲೂಕು. ಹಾಗಾಗಿ ಮಾಲೂರು ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ….

Read More

ಬಗೆದಷ್ಟು ಕೌತಕ: ಲಕ್ಕುಂಡಿಯಲ್ಲಿ 4ನೇ ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ – Kannada News | Gadag: What Was Discovered on the Fourth Day of Excavations at Lakkundi; Here Are the Details

ಲಕ್ಕುಂಡಿ ಗ್ರಾಮದಲ್ಲಿ 4ನೇ ‌ದಿನದ ಉತ್ಖನನ ಕಾರ್ಯ ಗದಗ, ಜನವರಿ 19: ಲಕ್ಕುಂಡಿ (Lakkundi) ಶಿಲ್ಪಕಲೆಗಳ, ದೇವಾಲಯಗಳ ಸ್ವರ್ಗ, ಚಿನ್ನದ ನಾಡು. ಇಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭವಾಗಿದೆ. ಕೋಟೆ ಗೋಡೆಯಲ್ಲಿ ಹುದುಗಿ ಹೋಗಿರುವ ರಾಶಿ ರಾಶಿ ಶಿಲ್ಪಕಲೆಗಳು ಟಿವಿ9 ಕ್ಯಾವೆರಾದಲ್ಲಿ ಸೆರೆಯಾಗಿವೆ. ಈ ನಡುವೆ ಉತ್ಖನ ನಡೆಯುತ್ತಿರುವ ಜಾಗದಲ್ಲಿ ಇಂದು ಕೂಡ ಪುರಾತನ ಶಿಲೆಗಳು ಪತ್ತೆಯಾಗಿವೆ. ಪುರಾತನ ಕಾಲದ ಕೊಡಲಿ, ಗಂಟೆ, ನಾಗರ ಮೂರ್ತಿ, ಶಿವಲಿಂಗದ ಪಾನಿ ಪೀಠ ಸೇರಿದಂತೆ ಹಲವು…

Read More

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ…

Read More