ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ – Kannada News

ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಡಿಕೆ ಶಿವಕುಮಾರ್Image Credit source: @DKShivakumar ಬೆಂಗಳೂರು, ಜೂನ್ 11: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಜಿದ್ದಾಜಿದ್ದಿ, ಪ್ರಮುಖ ಖಾತೆಗಳಿಗಾಗಿ ಸಚಿವರ ಪಟ್ಟು ಹಾಗೂ ಸಚಿವ ಸ್ಥಾನ ವಂಚಿತರ ಬೆಂಬಲಿಗರ ಭಾರಿ ಪ್ರತಿಭಟನೆಗಳ ನಡುವೆಯೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆಯೂ ಜೋರಾಗಿದೆ. ಈ ಎಲ್ಲಾ ಗೊಂದಲಗಳನ್ನು ಬಗೆಹರಿಸಿ, ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಪಡಿಸುವ ಸಲುವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ…

Read More

PM Modi on Fertilizers: ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ, ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ

ನವದೆಹಲಿ, ಮಾರ್ಚ್​ 23: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಎಲ್​ಪಿಜಿ, ಪೆಟ್ರೋಲ್ ಹಾಗೂ ರಸಗೊಬ್ಬರಗಳ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಆದರೆ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತರು ಈಗ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಮೇಲೆ ದುಷ್ಪರಿಣಾಮ ಯುದ್ಧವು ಇಡೀ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ…

Read More

Gold Rate Today: 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 23rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 23: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿವೆ. ವಾರಾಂತ್ಯದಲ್ಲಿ ಗ್ರಾಮ್​ಗೆ 285 ರೂನಷ್ಟು ಏರಿದ್ದ ಚಿನ್ನದ ಬೆಲೆ ಸೋಮವಾರ 190 ರೂ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) ಮತ್ತೆ 16,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಇಂದು ಒಂದೇ ದಿನ ಗ್ರಾಮ್​ಗೆ 25 ರೂನಷ್ಟು ಏರಿ 300 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ಸಿದ್ದರಾಮಯ್ಯ ಆಪ್ತರೇ ಸಹಿ ಸಂಗ್ರಹಿಸಿ ಬೆನ್ನಿಗೆ ಚೂರಿ ಹಾಕಿದ್ರಾ? ಜಾರಕಿಹೊಳಿ ಏನಂದ್ರು ನೋಡಿ

ಬೆಂಗಳೂರು, ಮೇ 29: ಸಿದ್ದರಾಮಯ್ಯ ಬೆನ್ನಿಗೆ ಅವರ ಆಪ್ತರು ಚೂರಿ ಹಾಕಿದ ಆರೋಪಗಳಿಗೆ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‌ನ ಪೂರ್ವ ನಿರ್ಧರಿತ ಒಪ್ಪಂದದಂತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಇದು ಯಾವುದೇ ರೀತಿಯ ಆಂತರಿಕ ರಾಜಕೀಯ ಸಂಘರ್ಷದ ಪ್ರಶ್ನೆಯೇ ಅಲ್ಲ ಎಂದು ಜಾರಕಿಹೊಳಿ ದೃಢಪಡಿಸಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆದಿರುವ ವರದಿಗಳನ್ನು, ಆರೋಪಗಳನ್ನು ಸುಳ್ಳು ಎಂದು ಜಾರಕಿಹೊಳಿ ತಳ್ಳಿಹಾಕಿದರು. ಅಂತಹ ಯಾವುದೇ ಸಹಿ ಹೈಕಮಾಂಡ್‌ಗೆ ತಲುಪಿಲ್ಲ…

Read More

ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ; 11 ನಾಯಕರಿಗೆ ಟಿಕೆಟ್ – Kannada News

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯಿ…

Read More

5 ಕೋಟಿ ಆಫರ್​​ ನೀಡಿ ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ

ಬೆಂಗಳೂರು, ಮಾರ್ಚ್​ 15: ನಗರದ ರೆಸಾರ್ಟ್​​ನಲ್ಲಿ ತಂಗಿರುವ ಒಡಿಶಾ ಶಾಸಕರನ್ನು ಅಪರಿಚಿತ ವ್ಯಕ್ತಿಗಳು ಖರೀದಿಸಲು ಪ್ರಯತ್ನಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಗೆ ಮುನ್ನ ನಡೆದ ಈ ಘಟನೆಯಲ್ಲಿ ಶಾಸಕರಿಗೆ ಐದು ಕೋಟಿ ರೂಪಾಯಿ ಮತ್ತು ಖಾಲಿ ಚೆಕ್‌ಗಳ ಆಮಿಷ ಒಡ್ಡಲಾಗಿತ್ತು. ಬೈತರಾಯನಪುರದ ಸುರೇಶ್ ಎಂಬುವರ ಸಹಾಯದಿಂದ ಆನ್‌ಲೈನ್‌ನಲ್ಲಿ ರೆಸಾರ್ಟ್‌ನಲ್ಲಿ ಕೊಠಡಿ ಕಾಯ್ದಿರಿಸಿ ಈ ವ್ಯಕ್ತಿಗಳು ಶಾಸಕರನ್ನು ಭೇಟಿ ಮಾಡಿದ್ದರು. ಶಾಸಕರು ಈ ಪ್ರಸ್ತಾಪವನ್ನು ತಿರಸ್ಕರಿಸಿ ಪಕ್ಷಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ…

Read More

ಒಟಿಟಿಯಲ್ಲಿ ‘ಧುರಂಧರ್’ ನೋಡಿ ಮೆಚ್ಚಿಕೊಂಡ ಪಾಕಿಸ್ತಾನಿ ಪ್ರೇಕ್ಷಕರು – Kannada News | Pakistani viewer review Dhurandhar after watching it on Netflix OTT

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಪಾಕಿಸ್ತಾನದ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿರಲಿಲ್ಲ. ಅಲ್ಲದೇ ಹಲವು ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಆದರೆ ಈಗ ಒಟಿಟಿಯಲ್ಲಿ ‘ಧುರಂಧರ್’ ಬಿಡುಗಡೆ ಆಗಿದೆ. ಪಾಕಿಸ್ತಾನದ (Pakistan) ಜನರು ಕೂಡ ನೆಟ್​ಫ್ಲಿಕ್ಸ್ ಮೂಲಕ ಈ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಧುರಂಧರ್’ ಸಿನಿಮಾದ ಪೂರ್ತಿ ಕಥೆ ಪಾಕಿಸ್ತಾನದ ಲಿಯಾರಿ ಪಟ್ಟಣದಲ್ಲಿ ನಡೆಯುತ್ತದೆ. ಆ ದೃಶ್ಯಗಳನ್ನು ಕಂಡು ಪಾಕ್ ಮಂದಿ ಫಿದಾ ಆಗಿದ್ದಾರೆ. 2000ನೇ ಇಸವಿಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

Video: ಇದು ಉತ್ತರ ಪ್ರದೇಶದ ಅಭಿವೃದ್ಧಿಯ ಜೀವಸೆಲೆ, ಗಂಗಾ ಎಕ್ಸ್​ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Narendra Modi Unveils Ganga Expressway Linking Uttar Pradesh End to End

ಮೀರತ್, ಏಪ್ರಿಲ್ 29: ಪ್ರಧಾನಿ ನರೇಂದ್ರ ಮೋದಿ ಇಂದು ಗಂಗಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಿದ್ದಾರೆ. ಪಶ್ಚಿಮ ಉತ್ತರ ಪ್ರದೇಶವನ್ನು ಪೂರ್ವ ಉತ್ತರ ಪ್ರದೇಶದೊಂದಿಗೆ ಸಂಪರ್ಕಿಸುವ ಈ ಎಕ್ಸ್‌ಪ್ರೆಸ್‌ವೇ ಮೀರತ್‌ನಿಂದ ಪ್ರಯಾಗ್‌ರಾಜ್‌ವರೆಗಿನ 594 ಕಿ.ಮೀ ದೂರವನ್ನು ಕಡಿಮೆ ಮಾಡುತ್ತದೆ. ಈಗ, ಕೆಲವೇ ಗಂಟೆಗಳಲ್ಲಿ, ನೀವು ಪ್ರಯಾಗ್‌ರಾಜ್‌ನಲ್ಲಿರುವ ಸಂಗಮವನ್ನು ತಲುಪಬಹುದು ಮತ್ತು ಕಾಶಿಯಲ್ಲಿ ಬಾಬಾ ವಿಶ್ವನಾಥನನ್ನು ಭೇಟಿ ಮಾಡಿ ಹಿಂತಿರುಗಬಹುದು. ಸಾವಿರಾರು ವರ್ಷಗಳಿಂದ ಗಂಗಾ ತಾಯಿ ಉತ್ತರ ಪ್ರದೇಶ ಮತ್ತು ದೇಶದ ಜೀವನಾಡಿಯಾಗಿರುವಂತೆ, ಆಧುನಿಕ ಪ್ರಗತಿಯ ಈ ಯುಗದಲ್ಲಿ ಆಕೆಯ…

Read More

NCERT ಮತ್ತು CBSE ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ – Kannada News | NCERT,CBSE Textbook Controversy: Madhu Bangarappa Alleges BJPs Ideological Imposition on Children

ಬೆಂಗಳೂರು, ಜೂನ್​​ 25: ರಾಜ್ಯದಲ್ಲಿ ಎನ್.ಸಿ.ಇ.ಆರ್.ಟಿ (NCERT) ಮತ್ತು ಸಿ.ಬಿ.ಎಸ್.ಇ (CBSE) ಪಠ್ಯಪುಸ್ತಕಗಳಲ್ಲಿ ಕೇಸರೀಕರಣದ ಆರೋಪ ಕೇಳಿಬಂದಿದೆ. ಆರನೇ ತರಗತಿಯ ಕನ್ನಡ ಪಠ್ಯದಲ್ಲಿ ಕೃಷ್ಣನಿಗ ಸಂಬಂಧಿಸಿದ ಪಾಠ ಸೇರ್ಪಡೆ, ಸಮತೋಲನ ಆಹಾರದ ವಿಚಾರದಲ್ಲಿ ಸಸ್ಯಾಹಾರಕ್ಕೆ ಮಾತ್ರ ಪ್ರೋತ್ಸಾಹ ಮತ್ತು ಕರ್ನಾಟಕದ ಪ್ರಾದೇಶಿಕ ಸೊಗಡನ್ನು ಕಡೆಗಣಿಸಿರುವ ಬಗ್ಗೆ ಹಲವರು ಧ್ವನಿ ಎತ್ತಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಜೆಪಿ ಸರಕಾರವು ಮಕ್ಕಳ ಮನಸ್ಸಿನ ಮೇಲೆ ಸೈದ್ಧಾಂತಿಕ ವಿಚಾರಗಳನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು…

Read More