ರಾಮ ಮಂದಿರ ದೇಣಿಗೆ ಹಗರಣ: ಎಣಿಕೆ ಕಾರ್ಯದಿಂದ 40 ಸಿಬ್ಬಂದಿ ವಜಾ, ಸಿಎಂ ಯೋಗಿಗೆ ಇಂದು ಎಸ್‌ಐಟಿ ವರದಿ ಸಲ್ಲಿಕೆ – Kannada News | Ram Mandir Donation Scam: 40 Staff Fired as SIT Submits Report to CM Yogi
ಅಯೋಧ್ಯೆ, ಜೂನ್ 22: ಅಯೋಧ್ಯೆಯ ಶ್ರೀ ರಾಮ ಮಂದಿರ(Ram Mandir)ದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆಯಲ್ಲಿ ಭಾರಿ ಅಕ್ರಮ ಮತ್ತು ಕಳ್ಳತನ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಲಾಗಿದೆ. ಬ್ಯಾಂಕ್ ಟ್ರಸ್ಟ್ ಈಗ ಅವರ ಜಾಗಕ್ಕೆ ಸಂಪೂರ್ಣ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಹಣ ಮತ್ತು ಆಭರಣಗಳ ಎಣಿಕೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇರಿಸಲಾಗಿದೆ. ಮತ್ತೊಂದೆಡೆ, ಆರು ದಿನಗಳ…