ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ – Kannada News | Bengaluru Police Seize 1.5 Crore Worth Drugs; Senegal National Detained in Major Bust
ಬೆಂಗಳೂರು, ಫೆಬ್ರವರಿ 17: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಡ್ರಗ್ಸ್ ದಂಧೆಕೋರರ ಹಾವಳಿ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಖಾಕಿ ಕಾರ್ಯಾಚರಣೆಗೂ ಬಗ್ಗದ ಖದೀಮರು ಪೊಲೀಸರ ಕಣ್ತಪ್ಪಿಸಿ ದಂಧೆ ಮುಂದುವರಿಸಿದ್ದಾರೆ. ನಗರದ ವಿವಿಧೆಡೆ ಡ್ರಗ್ಸ್ ಮಾರುತ್ತಿದ್ದ ಸೆನೆಗಲ್ ಮೂಲದ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಎಂಬಾತನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 29 LSD ಮಾತ್ರೆ, 546 ಗ್ರಾಂ MDMA, 152 ಗ್ರಾಂ ಹೈಡ್ರೋ ಗಾಂಜಾ, 131 ಗ್ರಾಂ ಕೊಕೇನ್, 27…