Headlines

ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ: ಪೊಲೀಸ್​​ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು; 7 ಜನರ ಬಂಧನ – Kannada News | Mentally Ill girl physical Assault: Police Investigation Reveals Shocking Details, 7 Arreste

ಗದಗ, ಆಗಸ್ಟ್​​ 15: ಮಾನಸಿಕ ಅಸ್ವಸ್ಥ ಯುವತಿಯನ್ನು (Mentally challenged girl) ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಎಸಗಿ, ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆಯೊಂದು ಗದಗದಲ್ಲಿ (gadag) ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಎಸಗಿದ ಮತ್ತು ಅಕ್ರಮವಾಗಿ ಗರ್ಭಪಾತ ಮಾಡಿಸಿದ ಆರ್‌ಎಂಪಿ ವೈದ್ಯ ಹಾಗೂ ಸ್ಟಾಫ್ ನರ್ಸ್ ಸೇರಿದಂತೆ ಒಟ್ಟು ಏಳು ಜನರನ್ನು ಗದಗ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಣದ ಆಮಿಷ: ದೂರು ನೀಡದಂತೆ ಜೀವಬೆದರಿಕೆ ಗದಗದ ಬೆಟಗೇರಿ ನಿವಾಸಿಗಳಾದ ಸಿಕಂದರ್…

Read More

IND vs SL: ದೇವದತ್ ಪಡಿಕ್ಕಲ್ ಶತಕ, ರಾಹುಲ್ ಅರ್ಧಶತಕ; ಭಾರತಕ್ಕೆ ಮೊದಲ ದಿನದ ಗೌರವ – Kannada News | India vs SL Test Day 1: Devdutt Padikkal’s Unbeaten 131 Dominates Galle Match

ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡು 288 ರನ್ ಕಲೆಹಾಕಿದೆ. ತಂಡದ ಪರ ದೇವದತ್ ಪಡಿಕ್ಕಲ್ 178 ಎಸೆತಗಳಲ್ಲಿ ಅಜೇಯ131 ರನ್ ಬಾರಿಸಿದರೆ, ವಿಕೆಟ್ ಕೀಪರ್ ರಿಷಭ್ ಪಂತ್ 36 ಎಸೆತಗಳಲ್ಲಿ 27 ರನ್ ಕಲೆಹಾಕಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಮೊದಲ ದಿನ ಸಂಪೂರ್ಣ 90…

Read More

ಡಬ್ಬಗಳಲ್ಲಿ ಶೇಖರಿಸಿಡುವ ಅಕ್ಕಿಯಲ್ಲಿ ಹುಳಗಳಾಗಂತೆ ತಡೆಯಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | How to prevent Weevils in rice

ಸಾಮಾನ್ಯವಾಗಿ ಒಂದೆರಡು ತಿಂಗಳಿಗೆ ಬೇಕಾಗುವ ಅಕ್ಕಿ (Rice), ಬೇಳೆ, ದ್ವಿಧಳ ಧಾನ್ಯಗಳನ್ನು ಒಂದೇ ಬಾರಿಗೆ ಖರೀದಿಸಿ, ಡಬ್ಬಗಳಲ್ಲಿ ಭದ್ರವಾಗಿ ಶೇಖರಿಸಿಡುತ್ತಾರೆ. ಅಕ್ಕಿ, ಕಾಳುಗಳು, ಹಿಟ್ಟುಗಳನ್ನು ಎಷ್ಟೇ ಭದ್ರವಾಗಿ ಸ್ಟೋರ್‌ ಮಾಡಿಟ್ಟರೂ ಡಬ್ಬದೊಳಗೆ ಹುಳುಗಳು ಆವರಿಸಿಬಿಡುತ್ತವೆ. ಅದರಲ್ಲೂ ಮಳೆಗಾಲದ ಸಮಯದಲ್ಲಿ ಈ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಹುಳುಗಳು ಅವರಿಸುವುದರಿಂದ ಅಕ್ಕಿ, ಕಾಳುಗಳು ಮತ್ತು ಹಿಟ್ಟಿನ ರುಚಿ, ಗುಣಮಟ್ಟ ಎರಡೂ ಕಡಿಮೆಯಾಗುತ್ತದೆ. ನೀವು ಮನೆಯಲ್ಲಿ ಡಬ್ಬದಲ್ಲಿ ಶೇಖರಿಸಿಟ್ಟ ಅಕ್ಕಿಯಲ್ಲೂ ಇದೇ ರೀತಿ ಹುಳುಗಳಾಗಿದ್ಯಾ? ಹಾಗಿದ್ರೆ ಈ ಸಮಸ್ಯೆಗೆ ಪರಿಹಾರವನ್ನು…

Read More

ದಕ್ಷಿಣದ ನಟರ ಬಗ್ಗೆ ಶ್ರೆಯಾ ಸರನ್ ಮಾತು, ಪವನ್, ರಜನಿ, ಮಹೇಶ್ ಬಗ್ಗೆ ಹೇಳಿದ್ದೇನು? – Kannada News | Shriya Saran talks about South movie stars

ಶ್ರೆಯಾ ಸರನ್ (Shriya Saran), ಒಂದು ಸಮಯದಲ್ಲಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸ್ಟಾರ್ ನಟಿಯಾಗಿ ಮೆರೆದವರು. ರಜನೀಕಾಂತ್, ಪವನ್ ಕಲ್ಯಾಣ್, ಮಹೇಶ್ ಬಾಬು, ಜೂ ಎನ್​​ಟಿಆರ್ ಇನ್ನೂ ಹಲವಾರು ಸೂಪರ್ ಸ್ಟಾರ್ ನಟರುಗಳೊಟ್ಟಿಗೆ ಅವರು ನಟಿಸಿದ್ದಾರೆ. ಆದರೆ ಕಳೆದ ಕೆಲ ವರ್ಷಗಳಿಂದಲೂ ಶ್ರೆಯಾ ಸರನ್ ಅವರಿಗೆ ಅವಕಾಶಗಳು ತುಸು ಕಡಿಮೆ ಆಗಿವೆ. ಶ್ರೆಯಾ, ಮದುವೆಯಾಗಿ ಒಬ್ಬ ಮಗಳ ತಾಯಿ ಆಗಿದ್ದಾರೆ. ಇದೀಗ ಶ್ರೆಯಾ ಸರನ್ ಅವರು ಪಾಡ್​​ಕಾಸ್ಟ್ ಒಂದರಲ್ಲಿ ಭಾಗಿ ಆಗಿದ್ದು, ತಮ್ಮ ಸಿನಿಮಾ ಜರ್ನಿಯ ಬಗ್ಗೆ…

Read More

IND vs SL: ಕೈಗೆ ಗಾಯ, ನಡೆಯಲೂ ಆಗುತ್ತಿಲ್ಲ! ಬ್ಯಾಟಿಂಗ್‌ ನಿಲ್ಲಿಸಿ ಡಗೌಟ್​ಗೆ ತೆರಳಿದ ರಾಹುಲ್ – Kannada News | KL Rahul Suffers Muscle Strain, Retires Hurt in Galle Test vs Sri Lanka

ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (India vs Sri Lanka) ಉತ್ತಮ ಪ್ರದರ್ಶನ ನೀಡುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಪರ ಬ್ಯಾಟರ್​ಗಳು ತಾಳ್ಮೆಯ ಇನ್ನಿಂಗ್ಸ್ ಕಟ್ಟುತ್ತಿದ್ದಾರೆ. ಆದರೆ ಮೊದಲ ದಿನದಾಟದ ಎರಡನೇ ಸೆಷನ್ ಅಂದರೆ ಚಹಾ ವಿರಾಮ ಮುಗಿದ ಬಳಿಕ ಕಂಡಬಂದ ದೃಶ್ಯ ಟೀಂ ಇಂಡಿಯಾವನ್ನು ಹಾಗೂ ಅದರ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ. ತಂಡದ ಅನುಭವಿ ಆರಂಭಿಕ ಆಟಗಾರ ಕೆಎಲ್ ರಾಹುಲ್…

Read More

ಸೋಮಾವತಿ ನದಿಗೆ ಬಿದ್ದ ಕಾರು: ಕೊಚ್ಚಿಕೊಂಡು ಹೋಗುತ್ತಿದ್ದ ದಂಪತಿಯನ್ನ ಉಳಿಸಿದ ಬಂಡೆ – Kannada News | Car falls into somavati river, locals rescued Bengaluru Couple from Water at Kalasa

ಚಿಕ್ಕಮಗಳೂರು, (ಆಗಸ್ಟ್ 15): ಜಿಲ್ಲೆಯ ಕಳಸ (Kalasa) ತಾಲೂಕಿನ ಗಣಪತಿ ಕಟ್ಟೆ ಬಳಿ ಕಾರೊಂದು ಸೋಮಾವತಿ ನದಿಗೆ (Somavati River) ಉರುಳಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು (Bengaluru) ಮೂಲದ ದಂಪತಿ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಭಸದಿಂದ ಹರಿಯುತ್ತಿದ್ದ ನೀರಿನಲ್ಲಿ ಕಾರಿಗೆ ಬಂಡೆಯೊಂದು ಅಡ್ಡ ಸಿಕ್ಕಿದ್ದರಿಂದ ದಂಪತಿಯ ಜೀವ ಉಳಿದಿದೆ. ಬಂಡೆ ಅಡ್ಡ ಸಿಗದೇ ಇದ್ದಿದ್ದರೆ ಕಾರಿನ ಸಮೇತ ದಂಪತಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇನ್ನೂ ಕಾರು ನದಿಗೆ ಬೀಳುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ಕಾರಿಗೆ…

Read More

ಕೋಲಾರ: ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ; ಓರ್ವನ ಬಂಧನ – Kannada News | Kolar Independence Day: Man Arrested for Sword Display and Alleged Disrespect to National Flag

ಕೋಲಾರ, ಆಗಸ್ಟ್​​​ 15: ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಮಹಾಲಕ್ಷ್ಮೀ ಬಡಾವಣೆ ನಿವಾಸಿ ಮೊಹಮ್ಮದ್ ಪೀರ್ ಅಲಿಯಾಸ್ ಜಾವಾ ಎಂಬಾತನನ್ನು ಕೋಲಾರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧ್ವಜಾರೋಹಣದ ಸಂದರ್ಭದಲ್ಲಿ ಮುಸ್ತಫಾ ಎಂಬುವರಿಗೆ ಉಡುಗೊರೆಯಾಗಿ ನೀಡಲು ಆರೋಪಿ ಈ ಖಡ್ಗವನ್ನು ತಂದಿದ್ದ ಎನ್ನಲಾಗಿದ್ದು, ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿ ಧ್ವಜಕ್ಕೆ ಅಪಚಾರ ಎಸಗಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ಮತ್ತಷ್ಟು…

Read More

Varamahalakshmi festival 2026: ವರಮಹಾಲಕ್ಷ್ಮಿ ಹಬ್ಬಕ್ಕೂ ಮುನ್ನ ಮನೆಯನ್ನು ಈ ರೀತಿ ಸ್ವಚ್ಛಗೊಳಿಸಿ – Kannada News | Clean your house like this before Varamahalakshmi festival

ಪ್ರತಿವರ್ಷ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಅಥವಾ ಶ್ರಾವಣ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯ ದಿನಕ್ಕಿಂತ ಬರುವ ಶುಕ್ರವಾರದಂದು ವರಮಹಾಲಕ್ಷ್ಮಿ (Varamahalakshmi) ಹಬ್ಬವನ್ನು ಆಚರಿಸಲಾಗುತ್ತದೆ. ಇದು ಸಂಪತ್ತು, ಸಮೃದ್ಧಿ ಮತ್ತು ಅದೃಷ್ಟದ ಅಧಿದೇವತೆಯಾದ ಲಕ್ಷ್ಮಿಯನ್ನು ಆರಾಧಿಸುವ ಹಬ್ಬ. ಈ ಹಬ್ಬದ ದಿನ ಅನೇಕರು ಲಕ್ಷ್ಮೀದೇವಿಯನ್ನು ಮನೆಯಲ್ಲಿ ಕೂರಿಸಿ ಪೂಜಿಸುತ್ತಾರೆ. ಲಕ್ಷ್ಮೀ ದೇವಿಯನ್ನು ಮನೆಯೊಳಗೆ ಬರಮಾಡಿಕೊಳ್ಳುವ ಮುನ್ನ ಪ್ರತಿಯೊಬ್ಬರೂ ಮನೆಯನ್ನು ಸ್ವಚ್ಛಗೊಳಿಸುತ್ತಾರೆ, ಹೌದು ವರಮಹಾಲಕ್ಷ್ಮಿ ಹಬ್ಬ ಬಂದರೆ ಸಾಕು, ಪ್ರತಿಯೊಬ್ಬರೂ ಸಹ ಮನೆಯನ್ನು ಡೀಪ್‌ ಕ್ಲೀನ್‌ ಮಾಡುತ್ತಾರೆ. ಆದರೆ…

Read More

ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ, ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆ ಆಗಲ್ಲ ಎಂದು ಖಾದರ್ – Kannada News | Will Not Withdraw Gutka Ban Order Says Minister UT Khader

ಬೆಂಗಳೂರು, (ಆಗಸ್ಟ್ 15): ಕರ್ನಾಟಕದಲ್ಲಿ ನಿಕೋಟಿನ್​​​​ ಯುಕ್ತ ಗುಟ್ಕಾ, ಪಾನ್​​​ ಮಸಾಲ (Gutka And Pan Masala) ನಿಷೇಧಿಸುವ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆದಿವೆ. ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ ಎಂದು ಕೆಲ ಶಾಸಕರು, ಸಿಎಂ ಡಿಕೆ ಶಿವಕುಮಾರ್​​​​​​​ (DK Shivakumar) ಅವರನ್ನ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಸಿಎಂ, ಆದೇಶ ವಾಪಸ್​ ತೆಗೆದುಕೊಳ್ಳಲು ಆರೋಗ್ಯ ಇಲಾಖೆ ಆಯುಕ್ತರಿಗೆ ಸೂಚಿಸಿದ್ದರು. ಆದ್ರೆ, ಇದೀಗ ಆರೋಗ್ಯ ಸಚಿವ ಯುಟಿ ಖಾದರ್ (UT Khader), ನಾನು ಆದೇಶ…

Read More

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ: ಘಟನೆಯ ಸ್ಫೋಟಕ ಅಂಶ ಬಿಚ್ಚಿಟ್ಟ ಅರಣ್ಯ ಸಚಿವ ರಾಮಲಿಂಗಾರೆಡ್ಡಿ – Kannada News | Three Killed in Forest Staff Firing: Forest Minister Ramalinga Reddy Reveals Shocking Details of Incident

ಬೆಂಗಳೂರು, ಆಗಸ್ಟ್​​ 15: ಚಾಮರಾಜನಗರದಲ್ಲಿ (chamarajanagar) ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಬಲಿಯಾಗಿದ್ದಾರೆ. ಹನೂರು ತಾಲೂಕಿನ ಹೊಳೆದಟ್ಟಿ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ, ಮೂವರು ಸಾವನ್ನಪ್ಪಿದ್ದು (death), ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಸಿಎಂ ಡಿಕೆ ಶಿವಕುಮಾರ್​ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಘಟನೆಯ ಸಮಗ್ರ ತನಿಖೆಯ ಬಳಿಕವೇ ಸಂಪೂರ್ಣ ಸತ್ಯಾಂಶ ಹೊರಬರಲಿದೆ’ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ವರದಿ ಕೈಸೇರಿದ ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ಧ ಕ್ರಮ:…

Read More