ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್ – Kannada News | Prohibitory Orders Imposed at Harihar Panchamasali Mutt; Gates Shut
ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್‌ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್‌ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು…