ಸರ್ಕಾರಿ ಗೌರವಕ್ಕೆ ತಗುಲಿದ ವೆಚ್ಚ ಪಾವತಿಸುವಂತೆ ದಿ ರಾಮಯ್ಯ ಕುಟುಂಬಕ್ಕೆ ಸರ್ಕಾರ ಬಿಲ್? ಅಶೋಕ್ ಕಿಡಿ – Kannada News | Did Karnataka Government Send Bill to Late Journalist Ramaiah Family for State Funeral Expenses; Ashoka sparks
ಸಿಎಂ ಸಿದ್ದರಾಮಯ್ಯ, ಆರ್ ಅಶೋಕ್Image Credit source: deccanherald ಬೆಂಗಳೂರು, ಫೆಬ್ರವರಿ 14: ರಾಜ್ಯ ಕಾಂಗ್ರೆಸ್ (congress) ಸರ್ಕಾರ ಒಂದು ಸಾವಿರ ದಿನ ಪೂರೈಸಿದ ಸಂಭ್ರಮದಲ್ಲಿದೆ. ಸರ್ಕಾರದ ಘಟಾನುಘಟಿಗಳು ಇಂದು ಹಾವೇರಿಯಲ್ಲಿ ಅಬ್ಬರಿಸಿದರು. ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹೆಸರಿನಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಮಧ್ಯೆ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ…