ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ – Kannada News | Bengaluru temperature: clear sky and cold weather in Bengaluru, Dry weather all over Karnataka
ಬೆಂಗಳೂರು, ಫೆಬ್ರುವರಿ 08: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್,…