Apply Now: ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಆನ್‌ಲೈನ್ ಲಿಂಕ್, ಶೈಕ್ಷಣಿಕ ಅರ್ಹತೆ ಪೂರ್ಣ ವಿವರ ಇಲ್ಲಿದೆ – Kannada News | Mangalore University Guest Faculty Recruitment 2026: Apply Online for PG Teaching Posts

ಮಂಗಳೂರು ವಿಶ್ವವಿದ್ಯಾನಿಲಯವು 2026-27 ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ (PG) ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (Guest Faculty) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬೋಧನಾ ಹುದ್ದೆಗಳು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಲಭ್ಯವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಹುದ್ದೆಗಳು ಲಭ್ಯವಿರುವ ಪ್ರಮುಖ ವಿಷಯಗಳು:

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಷಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರರಿ ಆಂಡ್ ಇನ್‌ಫಾರ್ಮೇಷನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸಿಕ್ಸ್, ಕೆಮಿಸ್ಟ್ರಿ, ಎನ್ವಿರಾನ್‌ಮೆಂಟ್ ಸೈನ್ಸ್, ಇಲೆಕ್ಟ್ರಾನಿಕ್ಸ್, ಮೆಟೀರಿಯಲ್ ಸೈನ್ಸ್, ಬಾಟನಿ, ಪ್ರಾಣಿಶಾಸ್ತ್ರ, ಸೈಬರ್ ಸೆಕ್ಯೂರಿಟಿ, ಫುಡ್ ಸೈನ್ಸ್ ಆಂಡ್ ನ್ಯೂಟ್ರಿಷನ್, ಬಯೋಟೆಕ್ನಾಲಜಿ, ಹ್ಯೂಮನ್ ಕಾನ್ಷಿಯಸ್‌ನೆಸ್ ಆಂಡ್ ಯೋಗಿಕ್ ಸೈನ್ಸ್, ಇಂಡಸ್ಟ್ರಿಯಲ್ ಕೆಮಿಸ್ಟ್ರಿ, ಗಣಿತ, ಮೈಕ್ರೋಬಯಾಲಜಿ, ಕಂಪ್ಯೂಟರ್ ಸೈನ್ಸ್/MCA, M.PEd, B.PEd, MBA (ಟೂರಿಸಂ), MBA, ಸ್ಟಾಟಿಸ್ಟಿಕ್ಸ್, MBA (IB), M.Ed ಮತ್ತು ಕಾಮರ್ಸ್ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅತಿಥಿ ಉಪನ್ಯಾಸಕರಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55 ರಷ್ಟು ಅಂಕಗಳನ್ನು ಪಡೆದಿರಬೇಕು (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 50 ಅಂಕಗಳು ಇರಬೇಕಾಗುತ್ತದೆ). ಅರ್ಹ ಅಭ್ಯರ್ಥಿಗಳು ನಿಗದಿತ ವೆಬ್‌ಸೈಟ್ ಲಿಂಕ್ (14.139.155.115/guest/index.php/home/) ಮೂಲಕ ಆಗಸ್ಟ್ 1, 2026 ರೊಳಗೆ ತಮ್ಮ ಆನ್‌ಲೈನ್ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಬೇಕಾಗಿದೆ.

ಅರ್ಜಿ ಶುಲ್ಕ ಮತ್ತು ಪಾವತಿ ಮಾಡುವ ಸರಳ ವಿಧಾನ:

ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 250ರೂ. ಹಾಗೂ SC/ST/Cat-1 ಅಭ್ಯರ್ಥಿಗಳಿಗೆ 125 ರೂ. ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ವಿಷಯ ಅಥವಾ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದಲ್ಲಿ, ಪ್ರತಿ ಹೆಚ್ಚುವರಿ ಅರ್ಜಿಗೆ 100 ರೂ. ನಂತೆ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಅರ್ಜಿ ಶುಲ್ಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ಗೆ (www.mangaloreuniversity.ac.in) ಭೇಟಿ ನೀಡಿ, “Online fees collection” ವಿಭಾಗದಲ್ಲಿರುವ “005/60- Guest Faculty Application fee” ಶೀರ್ಷಿಕೆಯಡಿ ಆನ್‌ಲೈನ್ ಮೂಲಕವೇ ಪಾವತಿಸಬೇಕು. ಆ ನಂತರ ಲಭಿಸುವ ಇ-ರಶೀದಿಯನ್ನು (E-Receipt) ತಪ್ಪದೇ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಬೇಕು.

ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ

ಸಂದರ್ಶನ ಪ್ರಕ್ರಿಯೆ ಮತ್ತು ಅಗತ್ಯ ದಾಖಲೆಗಳ ವಿವರ:

ಅಭ್ಯರ್ಥಿಗಳನ್ನು ಯುಜಿಸಿ (UGC) ಯ ನಿಗದಿತ ಮಾನದಂಡಗಳು ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಯಲ್ಲಿ ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಸಂದರ್ಶನದ ಸಮಯದಲ್ಲಿ ಅಭ್ಯರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರಗಳು ಹಾಗೂ SCOPUS/WOS/UGC-CARELIST ನಲ್ಲಿ ಪ್ರಕಟವಾದ ಸಂಶೋಧನಾ ಪತ್ರಿಕೆಗಳ ಮೂಲ ದಾಖಲೆಗಳು ಮತ್ತು ಸ್ವಯಂ ದೃಢೀಕರಿಸಿದ ನಕಲುಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಸಂದರ್ಶನದ ನಿಖರ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link

ದೊಡ್ಡ ಡೆಪಾಸಿಟ್​ಗಳಿಗೆ ತಮ್ಮದೇ ಬಡ್ಡಿದರ ನಿಗದಿ ಮಾಡಲು ಬ್ಯಾಂಕುಗಳಿಗೆ ಆರ್​ಬಿಐ ಅನುಮತಿ – Kannada News | Bulk Deposits, RBI allows banks to fix differential interest rates

ನವದೆಹಲಿ, ಜುಲೈ 31: ಬ್ಯಾಂಕುಗಳ ಬಡ್ಡಿದರ ವಿಚಾರದಲ್ಲಿ ಆರ್​ಬಿಐನ ಕಟ್ಟುಪಾಡುಗಳು ಬಿಗಿಯಾಗಿವೆ. ಬ್ಯಾಂಕುಗಳು ಈ ಕಟ್ಟುಪಾಡುಗಳ ಒಳಗೆ ಬಡ್ಡಿ ನಿಗದಿ ಮಾಡಬೇಕು. ಆದರೆ, ಬಲ್ಕ್ ಡೆಪಾಸಿಟ್ (Bulk Deposits) ವಿಚಾರದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ವಲ್ಪ ನಿಯಮ ಸಡಿಲಿಸಿದೆ. ಬ್ಯಾಂಕುಗಳಿಗೆ ಬಲ್ಕ್ ಡೆಪಾಸಿಟ್‌ಗಳ (ಬೃಹತ್ ಠೇವಣಿಗಳು) ಮೇಲಿನ ಬಡ್ಡಿದರಗಳ ನಿಯಮದಲ್ಲಿ ಪ್ರಮುಖ ಬದಲಾವಣೆ ತಂದಿದೆ. ಬಲ್ಕ್ ಡೆಪಾಸಿಟ್‌ಗಳಿಗೆ ಲಿಕಿಡಿಟಿ ಕವರೇಜ್ ರೇಶಿಯೋ (LCR) ಚೌಕಟ್ಟಿನಡಿಯಲ್ಲಿ ವಿಭಿನ್ನ ಬಡ್ಡಿದರಗಳನ್ನು (Differential Rates) ನೀಡಲು ಅವಕಾಶ ಮಾಡಿಕೊಟ್ಟಿದೆ. ಠೇವಣಿದಾರರ ವರ್ಗಗಳು (Retail vs Non-Retail / Wholesale) ಮತ್ತು ಆ ಠೇವಣಿಗಳಲ್ಲಿ ಇರುವ ಲಿಕ್ವಿಡಿಟಿ ರಿಸ್ಕ್ ಅನ್ನು (Liquidity Risk / Run-off rate) ಆಧರಿಸಿ ಬ್ಯಾಂಕುಗಳು ಬೇರೆ ಬೇರೆ ಬಡ್ಡಿದರಗಳನ್ನು ನಿರ್ಧರಿಸಬಹುದು.

ಈ ಹೊಸ ತಿದ್ದುಪಡಿ ನಿರ್ದೇಶನಗಳು 2026ರ ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ. ಸ್ವದೇಶಿ ರೂಪಾಯಿ ಬಲ್ಕ್ ಡೆಪಾಸಿಟ್​ಗಳು ಹಾಗೂ ಅನಿವಾಸಿ ಭಾರತೀಯರ (Non-Resident) ರೂಪಾಯಿ ಠೇವಣಿಗಳೆರಡಕ್ಕೂ ಇದು ಅನ್ವಯಿಸುತ್ತದೆ.

ಇದನ್ನೂ ಓದಿ: ಸಂಪೂರ್ಣ ಸ್ವಂತವಾಗಿ ಟ್ರಿಲಿಯನ್ ಪ್ಯಾರಾಮೀಟರ್ ಎಐ ಮಾಡಲ್ ಕಟ್ಟುತ್ತಿರುವ ಸರ್ವಂ; ಇದು ಭಾರತಕ್ಕೆ ಹೊಸ ಶಕ್ತಿ

ಪಾರದರ್ಶಕತೆ ಮತ್ತು ಹೊಸ ನಿಯಮಗಳು

ಬ್ಯಾಂಕುಗಳು ತಮ್ಮ ವೆಬ್‌ಸೈಟ್‌ನಲ್ಲಿ ಪ್ರತಿದಿನ ಬೆಳಗ್ಗೆ 10:00ರಿಂದ 10:10ರೊಳಗೆ ಬಲ್ಕ್ ಠೇವಣಿಗಳ ಬಡ್ಡಿದರಗಳ ವೇಳಾಪಟ್ಟಿಯನ್ನು ಮುಂಚಿತವಾಗಿಯೇ ಪ್ರಕಟಿಸುವುದು ಕಡ್ಡಾಯವಾಗಿದೆ.

ಒಮ್ಮೆ ವೇಳಾಪಟ್ಟಿ ಪ್ರಕಟಿಸಿದ ನಂತರ, ಅದೇ ದಿನಾಂಕ ಮತ್ತು ಅದೇ ಮೊತ್ತದ ಠೇವಣಿಗಳಿಗೆ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿಯೂ ಯಾವುದೇ ತಾರತಮ್ಯವಿಲ್ಲದೆ ಒಂದೇ ರೀತಿಯ ಬಡ್ಡಿದರ ನೀಡಬೇಕಾಗುತ್ತದೆ.

ಇದನ್ನೂ ಓದಿ: Bank holidays in August 2026: ಆಗಸ್ಟ್ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನಗಳವರೆಗೆ ರಜೆ; ಇಲ್ಲಿದೆ ರಜಾಪಟ್ಟಿ

ಆರ್‌ಬಿಐ ನಿರ್ಧಾರದ ಉದ್ದೇಶ

ಬ್ಯಾಂಕುಗಳಲ್ಲಿ ಸಾಲದ ಬೆಳವಣಿಗೆಗೆ (Credit growth) ಹೋಲಿಸಿದರೆ ಠೇವಣಿ ಸಂಗ್ರಹಣೆಯ ವೇಗ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬ್ಯಾಂಕುಗಳಿಗೆ ಲಿಕ್ವಿಡಿಟಿ ಆಧಾರಿತವಾಗಿ ಠೇವಣಿ ಆಕರ್ಷಿಸಲು ಹೆಚ್ಚಿನ ಅವಕಾಶ (Flexibility) ನೀಡಲು ಆರ್‌ಬಿಐ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗಾಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ – Kannada News | Xi Jinping Likely to Visit India for BRICS Summit After Years of Border Tensions

ನವದೆಹಲಿ, ಜುಲೈ 31: ಭಾರತದ ಆತಿಥ್ಯದಲ್ಲಿ ನಡೆಯಲಿರುವ 18ನೇ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್(Xi Jinping) ಅವರು ಸೆಪ್ಟೆಂಬರ್​​ನಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. 2020 ರ ಗಾಲ್ವಾನ್ ಕಣಿವೆ ಭೀಕರ ಸಂಘರ್ಷ ಹಾಗೂ ವಾಸ್ತವ ನಿಯಂತ್ರಣ ರೇಖೆಯ (LAC) ಮಿಲಿಟರಿ ಬಿಕ್ಕಟ್ಟಿನ ನಂತರ ಚೀನಾ ಅಧ್ಯಕ್ಷರು ಭಾರತಕ್ಕೆ ಆಗಮಿಸುತ್ತಿರುವುದು ಇದೇ ಮೊದಲ ಬಾರಿಯಾಗಿದ್ದು, ಈ ಭೇಟಿಯು ದ್ವಿಪಕ್ಷೀಯ ರಾಜತಾಂತ್ರಿಕತೆಯಲ್ಲಿ ಅತ್ಯಂತ ಐತಿಹಾಸಿಕ ಎಂದೇ ವಿಶ್ಲೇಷಿಸಲಾಗಿದೆ.

ಸೆಪ್ಟೆಂಬರ್ 12-13ರಂದು ನವದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆ:2026 ರ ಬ್ರಿಕ್ಸ್ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಕ್ಸಿ ಜಿನ್‌ಪಿಂಗ್ ಅವರಿಗೆ ಅಧಿಕೃತ ಆಹ್ವಾನ ಕಳುಹಿಸಿದ್ದಾರೆ. ಈ ಬಾರಿಯ ಶೃಂಗಸಭೆಯು ಸೆಪ್ಟೆಂಬರ್ 12 ಮತ್ತು 13 ರಂದು ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯಲಿದ್ದು, ಕ್ಸಿ ಜಿನ್‌ಪಿಂಗ್ ಹೊರತಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಕೂಡ ಭಾಗವಹಿಸಲಿದ್ದಾರೆ.

ಮಾಮಲ್ಲಾಪುರಂ ಶೃಂಗಸಭೆ: ಕ್ಸಿ ಜಿನ್‌ಪಿಂಗ್ ಅವರು ಕೊನೆಯದಾಗಿ ಅಕ್ಟೋಬರ್ 2019 ರಲ್ಲಿ ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ನಡೆದ ದ್ವಿತೀಯ ಅನೌಪಚಾರಿಕ ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದರು.
ಸಂಬಂಧಗಳ ಏರಿಳಿತ: ಆ ಭೇಟಿಯ ಕೇವಲ 6 ತಿಂಗಳಲ್ಲೇ ಲಡಾಖ್ ಗಡಿಯಲ್ಲಿ ಚೀನಾ ಸೇನೆಯ ಅತಿಕ್ರಮಣ ಹಾಗೂ ಗಾಲ್ವಾನ್ ಘರ್ಷಣೆಯಿಂದಾಗಿ ಉಭಯ ದೇಶಗಳ ಬಾಂಧವ್ಯ ಕಳೆದ ಆರು ದಶಕಗಳಲ್ಲೇ ಅತ್ಯಂತ ತಳಮಟ್ಟಕ್ಕೆ ಕುಸಿದಿತ್ತು.

ಶಾಂತಿ ಹಾದಿಯಲ್ಲಿ ಹೆಜ್ಜೆ: ಅಕ್ಟೋಬರ್ 2024 ರಲ್ಲಿ ರಷ್ಯಾದ ಕಜಾನ್‌ನಲ್ಲಿ ಹಾಗೂ ಆಗಸ್ಟ್ 2025 ರಲ್ಲಿ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ (SCO) ಶೃಂಗಸಭೆಯ ವೇಳೆ ಪ್ರಧಾನಿ ಮೋದಿ ಮತ್ತು ಷಿ ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ ನಡೆಸಿ ಗಡಿ ಬಿಕ್ಕಟ್ಟು ಶಮನಗೊಳಿಸಲು ಸಮ್ಮತಿಸಿದ್ದರು.

ಚೀನಾ ಅಧ್ಯಕ್ಷರ ಭೇಟಿಗೆ ಮುನ್ನ ಸಿದ್ಧತೆ ನಡೆಸಲು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಜುಲೈ ಅಂತ್ಯದಲ್ಲಿ ಬೀಜಿಂಗ್‌ಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚೀನಾದ ಹಿರಿಯ ಭದ್ರತಾ ಅಧಿಕಾರಿಗಳ ತಂಡವೂ ನವದೆಹಲಿಗೆ ಆಗಮಿಸಿ ಭದ್ರತಾ ಪರಿಶೀಲನೆ ನಡೆಸಿದೆ. 2024 ರಲ್ಲಿ ಇರಾನ್, ಯುಎಇ, ಈಜಿಪ್ಟ್ ಮತ್ತು ಇಥಿಯೋಪಿಯಾ ಸೇರ್ಪಡೆಯಾದ ನಂತರ ವಿಸ್ತೃತ ಸ್ವರೂಪದಲ್ಲಿ ನಡೆಯುತ್ತಿರುವ ಪ್ರಮುಖ ಶೃಂಗಸಭೆ ಇದಾಗಿದೆ. ಮಧ್ಯಪ್ರಾಚ್ಯ ಸಂಘರ್ಷ ಹಾಗೂ ಜಾಗತಿಕ ವಾಣಿಜ್ಯ ಬಿಕ್ಕಟ್ಟುಗಳ ನಡುವೆ ಈ ಶೃಂಗಸಭೆಯು ಜಾಗತಿಕ ಗಮನ ಸೆಳೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 1:42 pm, Fri, 31 July 26

Source link

ಕಾವೇರಿ ಜಲ ವಿವಾದ: ಆ.13ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು – Kannada News | Cauvery Water Dispute: Pro Kannada Outfits Call for Total Karnataka Bandh on August 13 Against CWMA Order

ವಾಟಾಳ್​​ ನಾಗರಾಜ್​​ ಸುದ್ದಿಗೋಷ್ಠಿImage Credit source: Tv9 Kannada

ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿಯೇ ನೀರಿಲ್ಲದಿರುವಾಗ ನೆರೆ ರಾಜ್ಯ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ CWMA ನಿರ್ಧಾರ ಖಂಡಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13ರ ಗುರುವಾರ ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಗ್ಗೆ ಕನ್ನಡ ಪರ ಸಂಘಟನೆಗಳ ಜೊತೆ ಚರ್ಚೆ ನಂತರ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​​ಗೆ ತೀರ್ಮಾನಿಸಲಾಗಿದೆ.

ಬಂದ್​​ಗೆ ಯಾವೆಲ್ಲ ಸಂಘಟನೆಗಳ ಬೆಂಬಲ?

  • ರಾಜ್ಯ ಸರ್ಕಾರಿ ನೌಕರರ ಸಂಘ
  • ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
  • ಲಾರಿ ಮಾಲೀಕರು ಮತ್ತು ಚಾಲಕರ ಸಂಘ
  • ಆಟೋ ಚಾಲಕರ ಸಂಘಟನೆ
  • ಓಲಾ & ಉಬರ್ ಸಂಘಟನೆ
  • ಕಾರ್ಮಿಕರ ಸಂಘಟನೆಗಳು
  • ಬೀದಿ ಬದಿ ವ್ಯಾಪಾರಿಗಳು

ಇದನ್ನೂ ಓದಿ: ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರಿಂದ ಬೃಹತ್​​ ಪ್ರತಿಭಟನೆ

ಬೆಂಗಳೂರಿನ ವುಡ್​ಲ್ಯಾಂಡ್ ಹೋಟೆಲ್​ನಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ವಾಟಾಳ್​​ ನಾಗರಾಜ್​​, ಇಂತಹ ಸಂದರ್ಭ ನಮಗೆ ಬರಬಾರದಿತ್ತು. ತಮಿಳುನಾಡಿನವರ ಜೊತೆ ಯುದ್ಧ ಮಾಡಬೇಕೆಂದ ಉದ್ದೇಶವಿರಲಿಲ್ಲ. ಆದರೆ ಅವರು ಮೊದಲಿನಿಂದ ನಮಗೆ ತೊಂದರೆ ಕೊಡುತ್ತಿದ್ದಾರೆ. 1967ರಲ್ಲಿ ನಾನು ವಿಧಾನಸಭಾ ಸದಸ್ಯನಾಗಿದ್ದೆ. ಈ ಹಿಂದೆ ತಮಿಳುನಾಡು ಸಿಎಂ ಕರುಣಾನಿಧಿ ಬೆಂಗಳೂರಿಗೆ ಬರುತ್ತಿದ್ದರು. ಅಂದಿನ ಸಿಎಂ ನಿಜಲಿಂಗಪ್ಪ ಜೊತೆ ಸೌಹಾರ್ದಯುತವಾಗಿ ಸಭೆ ನಡೆಸಿ ನೀರು ಹರಿಸುವಂತೆ ಕೇಳುತ್ತಿದ್ದರು ಎಂಬುದನ್ನೂ ಅವರು ಈ ವೇಳೆ ನೆನಪಿಸಿಕೊಂಡಿದ್ದಾರೆ.

ಏರ್​ಪೋರ್ಟ್​ಗೆ ಮುತ್ತಿಗೆ ಎಚ್ಚರಿಕೆ

ರಾಜ್ಯದಲ್ಲಿ ಪ್ರಸ್ತುತ ಮಳೆ ಅಭಾವದಿಂದ ನೀರಿನ ಕೊರತೆಯಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶಿಸಿದೆ. ಸಿಎಂ ಡಿಕೆಶಿ ತಮಿಳುನಾಡು ಸಿಎಂ ವಿಜಯ್​ರನ್ನು ಆಹ್ವಾನಿಸಿದ್ದಾರೆ. ವಿಜಯ್ ರಾಜ್ಯಕ್ಕೆ ಬರುವುದನ್ನು ವಿರೋಧಿಸಲ್ಲ. ಬದಲಾಗಿ ತಮಿಳುನಾಡಿಗೆ ನೀರು ಹರಿಸುವುದು ಬೇಡವೆಂದರೆ ಸ್ವಾಗತಿಸುತ್ತೇವೆ. ಸಿಡಬ್ಲ್ಯುಎಂಎ ಆದೇಶದಂತೆ ನೀರು ಹರಿಸಿ ಎಂದು ಹೇಳುವುದಾದರೆ ವಿಜಯ್ ಬಂದಾಗ ಏರ್​ಪೋರ್ಟ್​ಗೆ ಮುತ್ತಿಗೆ ಹಾಕುತ್ತೇವೆ ಎಂದು ವಾಟಾಳ್​​ ಎಚ್ಚರಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?: ವಕೀಲ ಸುನೀಲ್ ಹೇಳಿದ್ದೇನು? – Kannada News | Karnataka High Court Suspends Vinay Kulkarnis Conviction, Granting Bail and Reviving His MLA Position

ಬೆಂಗಳೂರು, ಜು.31: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ. ಬಸವರಾಜ ಅವರಿದ್ದ ಪೀಠವು ಈ ಆದೇಶ ನೀಡಿದೆ. ಕುಲಕರ್ಣಿ ಅವರಿಗೆ ಕೆಳಹಂತದ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯನ್ನು ನೀಡಿದ್ದು, ಜೀವಾವಧಿ ಶಿಕ್ಷೆಯ ತೀರ್ಪಿಗೆ ತಡೆಯಾಜ್ಞೆ ನೀಡಲಾಗಿದೆ. ವಕೀಲ ಸುನೀಲ್ ಅವರು ಈ ಕುರಿತು ಮಾತನಾಡಿ, ಇದು ಕಾನೂನು ಹೋರಾಟದ ಒಂದು ಮಧ್ಯಂತರ ಜಯ ಎಂದು ಹೇಳಿದ್ದಾರೆ. ಅವರ ವಾದದ ಪ್ರಕಾರ, ವಿನಯ್ ಕುಲಕರ್ಣಿಯವರಿಗೂ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಅವರನ್ನು ಸಿಬಿಐ ಇನ್ವೆಸ್ಟಿಗೇಶನ್ ನಡೆಸಿ ನಂತರ ಸಿಲುಕಿಸಲಾಯಿತು ಎಂಬುದು ಅವರ ಪ್ರಮುಖ ವಾದವಾಗಿತ್ತು. ಸೆಷನ್ಸ್ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸುವಾಗ ಅಪ್ರೂವರ್ ಮಾಫಿ ಸಾಕ್ಷಿಯ ಆಧಾರದ ಮೇಲೆ ಮಾತ್ರ ಅವಲಂಬಿತವಾಗಿತ್ತು ಎಂದು ವಕೀಲ ಸುನೀಲ್ ತಿಳಿಸಿದ್ದಾರೆ. ಕೆಳಹಂತದ ನ್ಯಾಯಾಲಯ ಮತ್ತು ಸಿಬಿಐ ಸಲ್ಲಿಸಿದ ಎರಡು ಸಾಕ್ಷ್ಯಾಧಾರಗಳನ್ನು ಸೂಕ್ತವಾಗಿ ಪರಿಶೀಲಿಸದೆ, ಕೇವಲ ಸಿಬಿಐ ಸಲ್ಲಿಸಿದ ಚಾರ್ಜ್‌ಶೀಟ್ ಆಧರಿಸಿ ಶಿಕ್ಷೆ ನೀಡಿರುವುದು ತಪ್ಪು ಎಂದು ಅವರು ವಾದಿಸಿದ್ದರು.

ಉಚ್ಚ ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿ, ವಿನಯ್ ಕುಲಕರ್ಣಿ ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಿದೆ. ಜಾಮೀನು ಮಂಜೂರು ಮಾಡಲು 5 ಲಕ್ಷ ರೂಪಾಯಿ ಬಾಂಡ್ ಮತ್ತು ಶ್ಯೂರಿಟಿ ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ವಿನಯ್ ಕುಲಕರ್ಣಿ ಜೊತೆಗೆ ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಚನ್ನಕೇಶವ ಟಿಂಗರಿಕರ್‌ ಸೇರಿದಂತೆ ಒಟ್ಟು ಹತ್ತು ಆರೋಪಿಗಳಲ್ಲಿ ಕೆಲವರಿಗೆ ಜಾಮೀನು ಮಂಜೂರಾಗಿದ್ದು, ಎಲ್ಲರಿಗೂ ಇನ್ನೂ ಜಾಮೀನು ಸಿಕ್ಕಿಲ್ಲ ಎಂದು ವಕೀಲರು ಸ್ಪಷ್ಟಪಡಿಸಿದ್ದಾರೆ. ಸ್ಪೀಕರ್ ಅವರು ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅಮಾನತು ಮಾಡಿದ ಸಂದರ್ಭದಲ್ಲಿ ಹೊರಡಿಸಿದ್ದ ಆದೇಶದಲ್ಲಿ, ಶಾಸಕ ಸ್ಥಾನದ ಅನರ್ಹತೆಯು ಹೈಕೋರ್ಟ್‌ನ ಅಂತಿಮ ಆದೇಶವನ್ನು ಅವಲಂಬಿಸಿರುತ್ತದೆ ಎಂದು ಹೇಳಲಾಗಿತ್ತು. ಇದೀಗ ಉಚ್ಚ ನ್ಯಾಯಾಲಯವು ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿ, ಜಾಮೀನು ಮಂಜೂರು ಮಾಡಿರುವ ಕಾರಣ, ಅವರ ಶಾಸಕ ಸ್ಥಾನಕ್ಕೆ ಮರಳಿ ಜೀವ ಬಂದಿದೆ. ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಶ್ಯೂರಿಟಿ ಒದಗಿಸಿದ ನಂತರ ಕುಲಕರ್ಣಿ ಅವರು ಜೈಲಿನಿಂದ ಹೊರಬರಲಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ಕಿಯಾರಾ – Kannada News | Kiara Advani explains why she choose to act in Toxic movie

ಕಿಯಾರಾ ಅಡ್ವಾಣಿ (Kiara Advani), ಬಾಲಿವುಡ್​​ನ ಸ್ಟಾರ್ ನಟಿ. ಕಿಯಾರಾ ಅವರು ಸಿನಿಮಾಗಳಲ್ಲಿ ಅತಿಯಾಗಿ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದು ಬಹಳ ಕಡಿಮೆ. ಮದುವೆಯಾದ ಬಳಿಕವಂತೂ ಗ್ಲಾಮರಸ್ ಪಾತ್ರಗಳಿಗೆ ನೋ ಎಂದಿದ್ದೇ ಹೆಚ್ಚು. ಆದರೆ ‘ಟಾಕ್ಸಿಕ್’ ಸಿನಿಮಾನಲ್ಲಿ ಮಾತ್ರ ಯಾವುದೇ ಮುಜುಗರಗಳಿಲ್ಲದೆ ಗ್ಲಾಮರಸ್ ಪಾತ್ರವನ್ನು ಒಪ್ಪಿಕೊಂಡಿರುವುದು ಮಾತ್ರವಲ್ಲದೆ, ಕೆಲವು ಹಸಿ-ಬಿಸಿ ದೃಶ್ಯಗಳಲ್ಲಿಯೂ ಸಹ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಕಿಯಾರಾ, ‘ಟಾಕ್ಸಿಕ್’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ಅವರೇ ವಿವರಿಸಿದ್ದಾರೆ.

‘ಫೆಮಿನಾ’ ಜೊತೆಗೆ ಮಾತನಾಡಿದ್ದ ಕಿಯಾಂಡಾ ಅಡ್ವಾಣಿ ತಾವು ‘ಟಾಕ್ಸಿಕ್’ ಸಿನಿಮಾ ಒಪ್ಪಿಕೊಳ್ಳಲು ಕಾರಣ ಏನೆಂಬುದನ್ನು ವಿವರಿಸಿದ್ದಾರೆ. ‘ನಾನು ಕಥೆಯನ್ನು ಕೇಳಿದಾಗ, ಈ ಪಾತ್ರವನ್ನು ಎಷ್ಟು ಚೆಂದವಾಗಿ ರೂಪಿಸಲಾಗಿದೆ ಎಂದು ನೋಡಿ ಬೆರಗಾದೆ. ಇದು ಓರ್ವ ನಟ ಅಥವಾ ನಟಿ ಬಯಸುವ ಎಲ್ಲ ರೀತಿಯ ಅಂಶಗಳನ್ನು, ಆಳವಾದ ಅಭಿನಯದ ಅವಕಾಶವನ್ನು ಹೊಂದಿತ್ತು. ಇಂತಹ ಪಾತ್ರವನ್ನು ನಿರ್ವಹಿಸಲು ನನ್ನಲ್ಲಿ ಆತ್ಮವಿಶ್ವಾಸ ಮೂಡುವಂತಹ ಹಂತವನ್ನು ನನ್ನ ವೃತ್ತಿಜೀವನದಲ್ಲಿ ತಲುಪಿದ್ದೇನೆ ಎಂದು ನನಗೆನಿಸಿತು, ಹಾಗಾಗಿ ಆ ಪಾತ್ರ ಒಪ್ಪಿಕೊಂಡೆ ಎಂದಿದ್ದಾರೆ’ ಎಂದಿದ್ದಾರೆ.

ಮುಂದುವರೆದು ಮಾತನಾಡಿ, ‘ಮಹಿಳೆಯರನ್ನು ನಿರ್ದಿಷ್ಟ ಚೌಕಟ್ಟಿನಲ್ಲಿ ಸೀಮಿತಗೊಳಿಸಿ ತೋರಿಸುವ ಪಾತ್ರಗಳು ನನಗೆ ಇಷ್ಟ ಆಗುವುದಿಲ್ಲ. ವೈಯಕ್ತಿಕವಾಗಿ ನನಗೆ ಮಹಿಳಾ ಶಕ್ತಿಯಲ್ಲಿ ನಂಬಿಕೆ ಇದೆ, ಹಾಗಿದ್ದಮೇಲೆ ನಮ್ಮ ಪಾತ್ರಗಳು ಯಾಕೆ ಹಾಗೆ ಇರಬಾರದು? ಎಂದು ಪ್ರಶ್ನಿಸಿ, ಮಹಿಳಾ ಪಾತ್ರಗಳು ಬಲವಾದ, ವಾಸ್ತವಿಕ ಹಾಗೂ ಸಂಕೀರ್ಣವಾಗಿರಬೇಕು, ಆ ಅಂಶಗಳು ‘ಟಾಕ್ಸಿಕ್’ ಸಿನಿಮಾದ ಪಾತ್ರದಲ್ಲಿ ನನಗೆ ಕಾಣಿಸಿತು ಎಂದು ಅಭಿಪ್ರಾಯಪಟ್ಟಿದ್ದಾರೆ ಕಿಯಾರಾ.

ಇದನ್ನೂ ಓದಿ:

‘ಟಾಕ್ಸಿಕ್’ ಚಿತ್ರವನ್ನು ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದಾರೆ. ಸಿನಿಮಾನಲ್ಲಿ ಕಿಯಾರಾ ಮಾತ್ರವೇ ಅಲ್ಲದೆ ತಾರಾ ಸುತಾರಿಯಾ, ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಯಶ್ ಈ ಸಿನಿಮಾನಲ್ಲಿ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಈಗ ಬಿಡುಗಡೆ ಆಗಿರುವ ಹಾಡು, ಟೀಸರ್ ನೋಡಿದರೆ ಯಶ್ ‘ಪ್ಲೇ ಬಾಯ್’ ರೀತಿಯ ಪಾತ್ರದಲ್ಲಿ ನಟಿಸಿರುವುದು ಖಾತ್ರಿ. ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಶ್ಚಿಮ ಬಂಗಾಳದಲ್ಲಿ ಜೈಶ್ ಉಗ್ರ ಹಮೀದ್ ಮಂಡಲ್ ಬಂಧನ: ಸಿಎಂ ಸುವೇಂದು ಕಾರ್ಯಕ್ರಮಗಳ ಮೇಲೆ ಕಣ್ಣು – Kannada News | West Bengal: JeM Terrorist Hamid Mondal Arrested, Monitored CM, Huge Explosives Seized

ಕೋಲ್ಕತ್ತಾ, ಜುಲೈ 31: ಪಶ್ಚಿಮ ಬಂಗಾಳದ ಬರ್ಧಮಾನ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ (STF) ನಡೆಸಿದ ಕಾರ್ಯಾಚರಣೆಯಲ್ಲಿ ‘ಜೈಶ್-ಎ-ಮೊಹಮ್ಮದ್’ (JeM) ಉಗ್ರ ಸಂಘಟನೆಯ ಸಕ್ರಿಯ ಸದಸ್ಯ ಹಮೀದ್ ಮಂಡಲ್ ಎಂಬುವವನನ್ನು ಶುಕ್ರವಾರ ಬಂಧಿಸಲಾಗಿದೆ. ಬಂಧಿತ ಉಗ್ರನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ಮತ್ತು ಪ್ರಮುಖ ದಾಖಲೆಗಳನ್ನು ವಿಶ್ಲೇಷಿಸಿರುವ ಎಸ್‌ಟಿಎಫ್ ಪಡೆಗಳು, ಆತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳ ಕಾರ್ಯಕ್ರಮಗಳನ್ನು ಲಕ್ಷ್ಯವಿಟ್ಟು ವಿಐಪಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂಬ ಭಾರಿ ಶಂಕೆ ವ್ಯಕ್ತಪಡಿಸಿವೆ.

ಬರ್ಧಮಾನ್‌ನ ನವೋದಯ ಟೌನ್‌ಶಿಪ್ ಪ್ರದೇಶದ ಬಾಡಿಗೆ ಫ್ಲಾಟ್‌ ಒಂದರ ಮೇಲೆ ಎಸ್‌ಟಿಎಫ್ ಪೊಲೀಸರು ದಾಳಿ ನಡೆಸಿ ಹಮೀದ್ ಮಂಡಲ್‌ನನ್ನು ವಶಕ್ಕೆ ಪಡೆದಿದ್ದಾರೆ. ಈತ ತನಿಖಾ ಸಂಸ್ಥೆಗಳ ಕಣ್ಣು ತಪ್ಪಿಸಲು ಕಳೆದ 2-3 ತಿಂಗಳುಗಳಿಂದ ರಹಸ್ಯವಾಗಿ ಈ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಮಂಡಲ್ 2019 ರ ಭೀಕರ ಪುಲ್ವಾಮಾ ಆತ್ಮಾಹುತಿ ದಾಳಿಯ ಮುಖ್ಯ ರೂವಾರಿಗಳಲ್ಲೊಬ್ಬನಾಗಿದ್ದ ಸಜ್ಜದ್ ಭಟ್ ನ ತೀರಾ ಆಪ್ತ ಸಹಚರನಾಗಿದ್ದಾನೆ.

ಆತ ಜುಲೈ 9 ರಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳ ಪ್ರವಾಸ ಹಾಗೂ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ತೀವ್ರವಾಗಿ ಗಮನಿಸುತ್ತಿದ್ದದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನೊಂದೆಡೆ, ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ನಲ್ಹತಿ ಪ್ರದೇಶದ ಪಾಳುಬಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಅಕ್ರಮ ಸ್ಫೋಟಕಗಳನ್ನು ಜಪ್ತಿ ಮಾಡಿದ್ದಾರೆ:

ವಶಪಡಿಸಿಕೊಂಡ ಸ್ಫೋಟಕಗಳು

800ಕೆಜಿಗೂ ಹೆಚ್ಚು ಅಮೋನಿಯಂ ನೈಟ್ರೇಟ್

1,200 ಕ್ಕೂ ಹೆಚ್ಚು ಜೆಲಾಟಿನ್ ಸ್ಟಿಕ್‌ಗಳು

105 ಡಿಟೋನೇಟರ್‌ಗಳು

36 ಸ್ಫೋಟಕ ಫ್ಯೂಸ್ ಕಾಯಿಲ್‌ಗಳು

ಅಷ್ಟು ದೊಡ್ಡ ಪ್ರಮಾಣದ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದರ ಉದ್ದೇಶವೇನು ಹಾಗೂ ಉಗ್ರ ಹಮೀದ್ ಮಂಡಲ್‌ಗೂ ಈ ಸ್ಫೋಟಕಗಳಿಗೂ ಲಿಂಕ್ ಇದೆಯೇ ಎಂಬುದರ ಕುರಿತು ಎಸ್‌ಟಿಎಫ್ ಮತ್ತು ಸ್ಥಳೀಯ ಪೊಲೀಸರು ಜಂಟಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಜಮ್ಮು-ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಉಗ್ರರ ಗುಂಡಿನ ದಾಳಿ; ಪೋಲೀಸ್ ಕಾನ್​ಸ್ಟೆಬಲ್ ಹುತಾತ್ಮ

2019 ರ ಪುಲ್ವಾಮಾ ಭೀಕರ ದಾಳಿ: ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ ಕಾರನ್ನು ಸಿಆರ್‌ಪಿಎಫ್ (CRPF) ಯೋಧರ ಬಸ್‌ಗೆ ಡಿಕ್ಕಿ ಹೊಡೆಸಿದ್ದನು. ಈ ಭೀಕರ ದಾಳಿಯಲ್ಲಿ 40 ಭಾರತೀಯ ಯೋಧರು ವೀರಮರಣ ಅಪ್ಪಿದ್ದರು.

ಮುಂಬರುವ ಹಬ್ಬದ ಸೀಸನ್ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಬಂಗಾಳದಲ್ಲಿ ಜೈಶ್ ಜಾಲ ಪತ್ತೆಯಾಗಿರುವುದು ಹಾಗೂ ಭಾರಿ ಪ್ರಮಾಣದಲ್ಲಿ ಸ್ಫೋಟಕ ಸಿಕ್ಕಿರುವುದು ಇಡೀ ಪೂರ್ವ ಭಾರತದಲ್ಲಿ ಹೈ ಅಲರ್ಟ್‌ಗೆ ಕಾರಣವಾಗಿದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದ ಹೋರಾಟಗಾರ ಬಸವರಾಜ್ ಕೊರವರ್ – Kannada News | Vinay Kulkarni Bail: Yogesh Gowda Case Activist Basavaraj Koravar Says Will Move Supreme Court

ಧಾರವಾಡ, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್‌ನಿಂದ ತಡೆಯಾಜ್ಞೆ ದೊರೆತಿರುವ ಬಗ್ಗೆ ಹೋರಾಟಗಾರ ಬಸವರಾಜ್ ಕೊರವರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಹೈ ಪ್ರೊಫೈಲ್ ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು, ತಡೆಯಾಜ್ಞೆ ಕೂಡ ಸಿಗಬಾರದು ಎಂದು ಅವರು ಅಭಿಪ್ರಾಯಪಟ್ಟರು. ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ಹೇಳಿದ ಅವರು, ಆದೇಶದ ಸಂಪೂರ್ಣ ಪ್ರತಿ ಬಂದ ನಂತರ, ಯಾವ ಅಂಶಗಳ ಆಧಾರದ ಮೇಲೆ ಹೈಕೋರ್ಟ್ ಈ ತಡೆಯಾಜ್ಞೆ ನೀಡಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದರು. ಈಗಾಗಲೇ ಗುರುನಾಥ್ ಗೌಡ ಅವರೊಂದಿಗೆ ಚರ್ಚಿಸಿ, ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ವಿನಯ್ ಕುಲಕರ್ಣಿ ಅವರು ರಾಜಕೀಯವಾಗಿ ಪ್ರಭಾವಶಾಲಿ ಮತ್ತು ಹಣವಂತ ವ್ಯಕ್ತಿಯಾಗಿರುವುದರಿಂದ ಈ ಹೋರಾಟ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವರೆಗೂ ಮುಂದುವರೆಯುವುದು ಅನಿವಾರ್ಯ ಎಂದು ಕೊರವರ್ ಹೇಳಿದರು. ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದರೂ, ಈ ತಡೆಯಾಜ್ಞೆ ನೀಡಿರುವುದು ಬೇಸರ ತಂದಿದೆ ಎಂದು ಅವರು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ರಾಮಾಯಣ’ ಟ್ರೇಲರ್​​ ಬೆನ್ನಲ್ಲೇ ರಾವಣನ ಪ್ರತಿಮೆ ಎದುರು ಪೋಸ್​ ಕೊಟ್ಟ ರಾಧಿಕಾ ಪಂಡಿತ್ – Kannada News | Radhika Pandit Shares Striking Picture With Ravana Idol After Husband Yash Ramayana Trailer Creates Record

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೇಲರ್ ಜುಲೈ 30ರಂದು ಬಿಡುಗಡೆಯಾಗಿ ವಿಶ್ವಾದ್ಯಂತ ಧೂಳೆಬ್ಬಿಸುತ್ತಿದೆ. ಚಿತ್ರದಲ್ಲಿ ಲಂಕಾಧಿಪತಿ ರಾವಣನಾಗಿ ಯಶ್ ಕಾಣಿಸಿಕೊಂಡಿರುವ ಅಬ್ಬರದ ಝಲಕ್ ಅಭಿಮಾನಿಗಳಲ್ಲಿ ಭಾರಿ ರೋಮಾಂಚನ ಸೃಷ್ಟಿಸಿದೆ. ಈ ಸಂಭ್ರಮದ ನಡುವೆಯೇ ಯಶ್ ಪತ್ನಿ, ನಟಿ ರಾಧಿಕಾ ಪಂಡಿತ್ (Radhika Pandit) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೊಸ ಫೋಟೋವೊಂದು ಈಗ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದೆ.

ರಾವಣನ ಮೂರ್ತಿ ಮುಂದೆ ನಿಂತ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ಹಂಚಿಕೊಂಡಿರುವ ಫೋಟೋದಲ್ಲಿ ಸಮುದ್ರದ ಹಿನ್ನೆಲೆಯಲ್ಲಿರುವ ಬೃಹತ್ ರಾವಣನ ಮೂರ್ತಿಯ ಮುಂದೆ ನಿಂತು ಪೋಸ್ ನೀಡಿದ್ದಾರೆ. ಕತ್ತಿ ಮತ್ತು ಗುರಾಣಿ ಹಿಡಿದು ನಿಂತಿರುವ ದಶಕಂಠ ರಾವಣನ ಮೂರ್ತಿ ಮುಂದೆ ರಾಧಿಕಾ ಸ್ಟೈಲಿಶ್ ಆಗಿ ನಿಂತಿದ್ದಾರೆ. ‘ಗೊತ್ತಿರೋರಿಗೆ ಮಾತ್ರ ಗೊತ್ತು’ ಎಂದು ಕ್ಯಾಪ್ಶನ್ ಬರೆದಿದ್ದಾರೆ. ಪತಿಯ ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ರಾವಣನ ಮೂರ್ತಿಯೊಂದಿಗಿನ ಫೋಟೋವನ್ನು ಅವರು ಪೋಸ್ಟ್ ಮಾಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.

ಲಂಕಾಧಿಪತಿಯ ಪತ್ನಿ ಮಂಡೋದರಿ ಎಂದ ಅಭಿಮಾನಿಗಳು

‘ರಾಮಾಯಣ’ ಟ್ರೇಲರ್‌ನಲ್ಲಿ ಯಶ್ ಅವರ ರಾವಣನ ಲುಕ್ ನೋಡಿ ಫಿದಾ ಆಗಿರುವ ಸಿನಿರಸಿಕರು, ರಾಧಿಕಾ ಅವರ ಈ ಪೋಸ್ಟ್‌ಗೆ ಬಗೆಬಗೆಯಾಗಿ ಕಮೆಂಟ್ ಮಾಡುತ್ತಿದ್ದಾರೆ. ‘ನಮ್ಮ ರಾವಣನ ನಿಜವಾದ ಮಂಡೋದರಿ ಇವರೇ’ ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.

ಇದನ್ನೂ ಓದಿ: ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್

ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಲುಕ್ ವೈರಲ್

ಫೋಟೋದಲ್ಲಿ ರಾಧಿಕಾ ಪಂಡಿತ್ ಅವರು ಸುಂದರವಾದ ಬಿಳಿ ಬಣ್ಣದ ಪ್ರಿಂಟೆಡ್ ಲಾಂಗ್ ಫ್ರಾಕ್ ಧರಿಸಿದ್ದು, ಕಪ್ಪು ಕನ್ನಡಕ ಹಾಕಿ ಸಖತ್ ಕ್ಲಾಸಿಯಾಗಿ ಕಾಣುತ್ತಿದ್ದಾರೆ. ಯಶ್ ಅವರ ಸಿನಿಮಾಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲುವ ರಾಧಿಕಾ, ಈಗ ರಾವಣನ ಫೋಟೋ ಹಂಚಿಕೊಳ್ಳುವ ಮೂಲಕ ‘ರಾಮಾಯಣ’ ಚಿತ್ರದ ಹೈಪ್ ಅನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

KEA Recruitment 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ! – Kannada News | KEA Village Administrative Officer Recruitment 2026: Application Last Date Extended, Check New Dates

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (Village Administrative Officer – VA) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಈ ಪ್ರಮುಖ ಪ್ರಕಟಣೆಯನ್ನು ಹೊರಡಿಸಲಾಗಿದೆ.

ವಿಸ್ತರಿಸಲಾದ ಹೊಸ ದಿನಾಂಕಗಳ ವಿವರ:

ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು 30.07.2026 ಮತ್ತು ಶುಲ್ಕ ಪಾವತಿಸಲು 31.07.2026 ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅಭ್ಯರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡಲಾಗಿದ್ದು, ವಿಸ್ತರಿಸಲಾದ ದಿನಾಂಕಗಳು ಕೆಳಗಿನಂತಿವೆ:

  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.08.2026
  • ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10.08.2026

ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ

ಮುಖ್ಯ ಸೂಚನೆ:

ದಿನಾಂಕ 10.07.2026 ರಂದು ಬಿಡುಗಡೆ ಮಾಡಲಾದ ಮೂಲ ಅಧಿಸೂಚನೆಯಲ್ಲಿನ ಉಲ್ಲೇಖಿತ ಇತರೆ ಯಾವುದೇ ನಿಯಮಗಳು ಮತ್ತು ಷರತ್ತುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಈ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ cetonline.karnataka.gov.in ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source link

Exit mobile version