ಸ್ವಪಕ್ಷೀಯರ ವಿರೋಧಕ್ಕೂ ಡೋಂಟ್ಕೇರ್: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್
ಬೆಂಗಳೂರು, ಮಾರ್ಚ್ 13: ಕರ್ನಾಟಕ ಬಜೆಟ್ ಕುರಿತು ತಮ್ಮ ಹೇಳಿಕೆಗೆ ಸ್ವಪಕ್ಷ ನಾಯಕರ ಆಕ್ರೋಶದ ನಡುವೆಯೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಾವು ಆಡಿದ್ದ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬಜೆಟ್ ಸಮಾಧಾನ ತಂದಿಲ್ಲ ಮತ್ತು ತಮ್ಮ ನಂಬಿಕೆ ಹುಸಿಯಾಗಿದೆ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ನಾನು ಐಎಎಸ್ ಅಥವಾ ಕೆಎಎಸ್ ಅಧಿಕಾರಿ ಅಲ್ಲ. ಬದಲಿಗೆ ಜನರ ಮತದಿಂದ ಆಯ್ಕೆಯಾದ ಜನಪ್ರತಿನಿಧಿ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯವಾಗಿದೆ. ನನ್ನ ಕ್ಷೇತ್ರವಾದ ರಾಮನಗರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ಹಲವಾರು ಬಾರಿ…