RCB vs LSG: 4,4,4,4,4,4.. ಅರ್ಧಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಂದೊಳ್ಳೆ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ನೋ ನೀಡಿದ 147 ರನ್ಗಳ ಗುರಿ ಬೆನ್ನಟ್ಟಿದ ಆರ್ಸಿಬಿ ಪರ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಲಕ್ನೋ ಬ್ಯಾಟರ್ಗಳು ರನ್ ಗಳಿಸಲು ಹೆಣಗಾಡಿದ ಪಿಚ್ನಲ್ಲಿ ಬೌಂಡರಿಗಳ ಮಳೆಗರೆದರು. ತಮ್ಮ ಇನ್ನಿಂಗ್ಸ್ನಲ್ಲಿ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಹಾಗೂ 1 ಭರ್ಜರಿ…