ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand
ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…