ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ – Kannada News | Anti Drug Drive in Mysore: CCB Nabs 5 in Major Raids, Launches ‘Vimukthi’ Hotline
ಡ್ರಗ್ಸ್ ಕಾರ್ಯಚರಣೆಯಲ್ಲಿ ಬಂಧನವಾದ ಆರೋಪಿಗಳು ಮೈಸೂರು, ಫೆ.12: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ (CCB) ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷಾ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕರೀಂ ಮೇಲೆ ಈಗಾಗಲೇ 5 ಎನ್‌ಡಿಪಿಎಸ್ (NDPS) ಪ್ರಕರಣಗಳು ಹಾಗೂ ನಿಷಾದ್…