World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ – Kannada News | World Saree Day 2025: What is the purpose of celebrating World Saree Day?
ಸೀರೆ (Saree) ಹೆಣ್ಣಿನ ಚೆಲುವು ಸೌಂದರ್ಯದ ಸಂಕೇತ ಅಂತಾನೇ ಹೇಳಬಹುದು. ಸೊಬಗು ಸೌಂದರ್ಯದ ಪ್ರತಿಬಿಂಬವಾಗಿರುವ ಸೀರೆ ಕೇವಲ ಉಡುಗೆಯಲ್ಲ ಇದು ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ಮೂರ್ತ ರೂಪವಾಗಿದೆ. ಶತಮಾನಗಳಿಂದಲೂ ಭಾರತದಲ್ಲಿ ಮಹಿಳೆಯರು ಸೀರೆಯನ್ನು ಧರಿಸುತ್ತಿದ್ದಾರೆ. ಎಷ್ಟೇ ಫ್ಯಾಶನ್, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್ ಮಾತ್ರ ಇಂದಿಗೂ ಕಮ್ಮಿಯಾಗಿಲ್ಲ. ಈ ಸೀರೆ ಫ್ಯಾಷನ್‌ಗೂ ಮೀರಿ ಸಾಂಸ್ಕೃತಿಕ ಹೆಮ್ಮೆಯನ್ನು ಪ್ರತಿನಿಧಿಸುವ ಒಂದು ಉಡುಪಾಗಿದ್ದು, ಇದರ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ…