ಮಂಡ್ಯ: ಕೊನೆಗೂ ಬಯಲಾಯ್ತು ರಕ್ತ ರಹಸ್ಯ! ಮನೆಯಿಡೀ ನಿಗೂಢವಾಗಿ ಹರಿದಿದ್ದ ನೆತ್ತರು ಯಾರದ್ದು ಗೊತ್ತೇ? – Kannada News | Maddur Blood Stain Mystery Solved: FSL Confirms House Owner’s Blood in Mandya’s Village
ಮಂಡ್ಯ, ಡಿಸೆಂಬರ್ 20: ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ಹಾಗೂ ಸೌಮ್ಯ ದಂಪತಿಯ ಮನೆಯಲ್ಲಿ ಪತ್ತೆಯಾಗಿದ್ದ ನಿಗೂಢ ರಕ್ತದ ಕಲೆಗಳ ಪ್ರಕರಣದ ಸತ್ಯಾಸತ್ಯತೆ ಕೊನೆಗೂ ಬಯಲಾಗಿದೆ. ಎಫ್‌ಎಸ್‌ಎಲ್ (Forensic Science Laboratory) ವರದಿ ಬಹಿರಂಗಗೊಂಡಿದ್ದು, ಮನೆಯೊಳಗೆ ಹರಿದಿದ್ದ ರಕ್ತವು ಮನೆ ಮಾಲೀಕ ಸತೀಶ್ ಅವರದ್ದೇ ಎಂಬುದು ದೃಢಪಟ್ಟಿದೆ! ಅಕ್ಟೋಬರ್ 28ರಂದು ಸತೀಶ್ ದಂಪತಿಯ ಮನೆಯ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡು ಗ್ರಾಮದೆಲ್ಲೆಡೆ ಆತಂಕ…