ಈ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು; ಸೇವನೆ ಮಾಡುವಾಗ ಇರಲಿ ಎಚ್ಚರ – Kannada News | Indigestion Triggers: What to Eat and Avoid

ಇತ್ತೀಚಿನ ದಿನಗಳಲ್ಲಿ, ಅನೇಕರಲ್ಲಿ ಕಂಡುಬರುತ್ತಿರುವ ಹೆಚ್ಚಿನ ಆರೋಗ್ಯ ಸಮಸ್ಯೆಗಳಲ್ಲಿ ಅಜೀರ್ಣವು (Indigestion) ಒಂದು. ವೇಗದ ಜೀವನ, ಸಮಯಕ್ಕೆ ಸರಿಯಾಗಿ ತಿನ್ನದಿರುವುದು, ಹೆಚ್ಚು ಹುರಿದ ಮತ್ತು ಕರಿದ ಆಹಾರಗಳ ಸೇವನೆಯಿಂದ ಅಜೀರ್ಣ ಉಂಟಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಾಗಿದೆ. ಇದರಿಂದ ಹೊಟ್ಟೆಯಲ್ಲಿ ಭಾರವಾದ ಭಾವನೆ, ಅನಿಲ, ಸುಡುವ ಸಂವೇದನೆ, ಉಬ್ಬುವುದು ಮತ್ತು ಅಸ್ವಸ್ಥತೆ ಕಂಡುಬರಬಹುದು. ಕೆಲವೊಮ್ಮೆ, ತಿಂದ ನಂತರ, ಹೊಟ್ಟೆ ನೋವು (Stomach Pain), ವಾಕರಿಕೆ ಅಥವಾ ಎದೆಯಲ್ಲಿ ಸುಡುವ ಸಂವೇದನೆ ಕೂಡ ಅನುಭವಕ್ಕೆ ಬರಬಹುದು. ಆದರೆ ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ಅದು ಹಸಿವು ಕಡಿಮೆಯಾಗುವುದಕ್ಕೆ ಮತ್ತು ದೇಹದಲ್ಲಿ ದೌರ್ಬಲ್ಯಕ್ಕೆ ಕಾರಣವಾಗಬಹುದು. ಹಾಗಾಗಿ ಈ ರೀತಿಯ ಲಕ್ಷಣ ಕಂಡುಬಂದಾಗ ಅದನ್ನು ಲಘುವಾಗಿ ತೆಗೆದುಕೊಳ್ಳಬಾರದು. ಹಾಗಾದರೆ ಯಾವ ರೀತಿಯ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು, ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ರೀತಿಯ ಆಹಾರಗಳು ಅಜೀರ್ಣಕ್ಕೆ ಕಾರಣವಾಗುತ್ತವೆ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ಹುರಿದ ಮತ್ತು ಹೆಚ್ಚು ಮಸಾಲೆಯುಕ್ತ ಆಹಾರಗಳು ಅಜೀರ್ಣಕ್ಕೆ ಪ್ರಮುಖ ಕಾರಣ. ಜೊತೆಗೆ ಫಾಸ್ಟ್ ಫುಡ್, ಜಂಕ್ ಫುಡ್ ಮತ್ತು ಹೆಚ್ಚಿನ ಎಣ್ಣೆಯಲ್ಲಿ ಬೇಯಿಸಿದ ಆಹಾರಗಳು ಕೂಡ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಅತಿಯಾದ ಸಿಹಿತಿಂಡಿ, ತಂಪು ಪಾನೀಯ ಮತ್ತು ಕೆಫೀನ್ ಹೊಂದಿರುವ ಪಾನೀಯಗಳು ಸಹ ಜೀರ್ಣಕ್ರಿಯೆಯನ್ನು ಅಡ್ಡಿಪಡಿಸಬಹುದು. ಅಷ್ಟೇ ಅಲ್ಲ ತಡರಾತ್ರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಊಟ ಮಾಡುವುದರಿಂದ ಹೊಟ್ಟೆಗೆ ವಿಶ್ರಾಂತಿ ಸಿಗದಿರಬಹುದು, ಇದು ಕೂಡ ಅಜೀರ್ಣ ಸಮಸ್ಯೆಗಳನ್ನು ಹೆಚ್ಚಿಸಬಹುದು. ಅತಿಯಾದ ಮಸಾಲೆ, ಸಂಸ್ಕರಿಸಿದ ಆಹಾರಗಳು ಮತ್ತು ಪ್ಯಾಕ್ ಮಾಡಿದ ತಿಂಡಿಗಳು ಸಹ ಅನಿಲ ಮತ್ತು ಆಮ್ಲೀಯತೆಯನ್ನು ಉಂಟುಮಾಡುತ್ತವೆ. ಕೆಲವರಿಗೆ ಹಾಲು ಅಥವಾ ಡೈರಿ ಉತ್ಪನ್ನಗಳ ಸೇವನೆ ಮಾಡುವುದರಿಂದಲೂ ಕೂಡ ಅಜೀರ್ಣವಾಗಬಹುದು.

ಇದನ್ನೂ ಓದಿ: ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ

ಅಜೀರ್ಣದಂತಹ ಸಮಸ್ಯೆಗಳನ್ನು ತಡೆಯುವುದು ಹೇಗೆ?

ಸಾಮಾನ್ಯವಾಗಿ ಅಜೀರ್ಣವಾಗದಂತೆ ತಡೆಯಲು, ಹಗುರವಾದ ಮತ್ತು ಸಮತೋಲಿತ ಆಹಾರ ಸೇವನೆ ಮಾಡಿ. ಸಮಯಕ್ಕೆ ಸರಿಯಾಗಿ ತಿನ್ನುವುದರ ಮೂಲಕ ದೀರ್ಘಕಾಲದ ವರೆಗೆ ಹಸಿವಿನಿಂದ ಇರುವುದನ್ನು ತಪ್ಪಿಸಿ. ಕರಿದ ಮತ್ತು ಜಂಕ್ ಆಹಾರಗಳಿಂದ ದೂರವಿರಿ. ಆಹಾರವನ್ನು ಚೆನ್ನಾಗಿ ಅಗಿಯಿರಿ ಮತ್ತು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಪ್ರತಿದಿನ ಬಿಡುವಿದ್ದಾಗ ಸ್ವಲ್ಪ ಸಮಯ ನಡೆಯುವುದು ಅಥವಾ ಲಘು ವ್ಯಾಯಾಮ ಮಾಡುವುದು ಜೀರ್ಣಕ್ರಿಯೆಗೆ ಪ್ರಯೋಜನಕಾರಿ. ಒತ್ತಡವನ್ನು ಕಡಿಮೆ ಮಾಡಲು ಪ್ರಯತ್ನಿಸಿ ಮತ್ತು ತಡರಾತ್ರಿಯಲ್ಲಿ ಆಹಾರ ಸೇವನೆ ಮಾಡುವುದನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

9ನೇ ಕ್ಲಾಸ್ ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ – Kannada News | Gujarat Teacher gets 3 years Jail sentence For Slapping Class 9 Student Leaving Her Partially Deaf

ನವದೆಹಲಿ, ಫೆಬ್ರವರಿ 10: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಹೋಂ ವರ್ಕ್ ಪೂರ್ಣಗೊಳಿಸದ ಕಾರಣದಿಂದಾಗಿ ಶಿಕ್ಷಕರೊಬ್ಬರು ಕಪಾಳಮೋಕ್ಷ ಮಾಡಿದ್ದರು. ಹೀಗಾಗಿ ಗುಜರಾತ್ ನ್ಯಾಯಾಲಯವು ಆ ಶಾಲಾ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಹಲ್ಲೆಯಿಂದಾಗಿ ಬಾಲಕಿಯ ಕಿವಿಯೋಲೆ ಕಿತ್ತುಬಂದು ಒಂದು ಕಿವಿಯೇ ಕೇಳದಂತಾಗಿದೆ. ಜನವರಿ 30ರಂದು ನೀಡಿದ ತೀರ್ಪಿನಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹಿಮಾಂಶು ಚೌಧರಿ ಈ ಅಪರಾಧದ ಮೂಲಕ ಶಿಕ್ಷಕಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ ಎಂದು ಹೇಳಿದ್ದಾರೆ.

14 ವರ್ಷದ ಬಾಲಕಿಯ ಎಡ ಕಿವಿಯೋಲೆಯ ರಂಧ್ರ ಹರಿದುಬಂದಿದ್ದು, ಅದಕ್ಕಾಗಿ ಹಲವು ದಿನಗಳವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಯಿತು ಎಂದು ನ್ಯಾಯಾಲಯ ಹೇಳಿದೆ. ಈ ಘಟನೆ ಜನವರಿ 1, 2020ರಂದು ಗಾಂಧಿನಗರದ ಖಾಸಗಿ ಶಾಲೆಯಾದ ಬಾ ಶ್ರೀ ವಸಂತಕುವರ್ಬಾ ಶಾಲೆಯಲ್ಲಿ ನಡೆದಿತ್ತು. ಶಿಕ್ಷಕಿ ಪರುಲ್ಬೆನ್ ಪಟೇಲ್ ತನ್ನ ವಿದ್ಯಾರ್ಥಿನಿ ಹೋಂ ವರ್ಕ್ ಪೂರ್ಣಗೊಳಿಸಿಲ್ಲ ಎಂದು ಕೋಪಗೊಂಡು ಅವಳ ಎಡ ಕಿವಿಗೆ 3 ಬಾರಿ ಹೊಡೆದಿದ್ದರು. ಈ ಹೊಡೆತಗಳಿಂದ ಕಿವಿಗೆ ತೀವ್ರ ಗಾಯವಾಗಿತ್ತು.

ಇದನ್ನೂ ಓದಿ: 2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ!

ಆ ಬಾಲಕಿಯ ಕುಟುಂಬ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಈ ಘಟನೆ ನಡೆದ 2 ದಿನಗಳ ನಂತರ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಿದರು. ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೈದ್ಯಕೀಯ ಪುರಾವೆಗಳು ಗಾಯದ ಸ್ವರೂಪ ಮತ್ತು ಗಂಭೀರತೆಯನ್ನು ದೃಢಪಡಿಸಿದವು. ಹಲ್ಲೆ ನಡೆದು ನಾಲ್ಕೂವರೆ ವರ್ಷಗಳ ನಂತರವೂ ಆ ಬಾಲಕಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ನ್ಯಾಯಾಲಯ ಗಮನಿಸಿದೆ.

ಹೀಗಾಗಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 325 ಮತ್ತು ಮಗುವಿನ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಆ ಶಿಕ್ಷಕಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆಕೆಗೆ 3 ವರ್ಷ ಮತ್ತು 3 ತಿಂಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತವನ್ನು ಆ ಬಾಲಕಿಗೆ ಪರಿಹಾರವಾಗಿ ಪಾವತಿಸಲು ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ನಟ ರಣವೀರ್ ಸಿಂಗ್​ಗೆ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು – Kannada News | Dhurandhar actor Ranveer Singh receives threat from Lawrence Bishnoi gang

ಕೆಲವೇ ದಿನಗಳ ಹಿಂದೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ (Deepika Padukone) ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಬೆದರಿಕೆ ಬಂದಿರುವುದರಿಂದ ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಮೊದಲು ಬಾಲಿವುಡ್​​ನ ಹಲವು ಸೆಲೆಬ್ರಿಟಿಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಬೆದರಿಕೆ ಹಾಕಿದ್ದರು. ಈಗಲೂ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರೇ ಬೆದರಿಕೆ ಸಂದೇಶ ಕಳಿಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬೆದರಿಕೆ ಸಂದೇಶ ಬಂದ ಬಳಿಕ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರು ಮನೆಯ ಸುತ್ತಮುತ್ತ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಭದ್ರತೆ ನೀಡುವ ದೃಷ್ಟಿಯಿಂದ ರಣವೀರ್ ಸಿಂಗ್ ನಿವಾಸದ ಬಳಿ ಶಸ್ತ್ರಾಸ್ತ್ರ ಹಿಡಿದ ಭದ್ರತಾ ಸಿಬ್ಬಂದಿ ಒಡಾಡುತ್ತಿದ್ದಾರೆ. ಇದರಿಂದಾಗಿ ನೆರೆಹೊರೆಯವರಿಗೆ ಆತಂಕ ಹೆಚ್ಚಾಗಿದೆ. ಅಪಾರ್ಟ್​​ಮೆಂಟ್​​ನಲ್ಲಿ ಇರುವ ಇನ್ನುಳಿದ ನಿವಾಸಿಗಳು ಈ ಬಗ್ಗೆ ಪೊಲೀಸರ ಬಳಿ ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ರಣವೀರ್ ಸಿಂಗ್ ಅವರಿಗೆ ಬೆದರಿಕೆ ಹಾಕಿರುವ ಕಿಡಿಗೇಡಿಗಳು ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ವಾಟ್ಸಪ್ ವಾಯ್ಸ್ ನೋಟ್ ಮೂಲಕ ಅವರಿಗೆ ಬೆದರಿಕೆ ಹಾಕಲಾಗಿದೆ. ಬೆದರಿಕೆ ಸಂದೇಶ ಬಂದ ಕೂಡಲೇ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರಿಗೆ ಮಾಹಿತಿ ತಿಳಿಸಿದರು. ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿದ್ದಾರೆ.

ಇದನ್ನೂ ಓದಿ: ‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಕಳೆದ ವರ್ಷ ಬಿಡುಗಡೆ ಆದ ‘ಧುರಂಧರ್’ ಸಿನಿಮಾದಿಂದ ರಣವೀರ್ ಸಿಂಗ್ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಚಿತ್ರರಂಗದಲ್ಲಿ ಅವರಿಗೆ ಇರುವ ಬೇಡಿಕೆ ಹೆಚ್ಚಾಯಿತು. ಅದಕ್ಕೆ ತಕ್ಕಂತೆ ಅವರ ಸಂಭಾವನೆ ಕೂಡ ಜಾಸ್ತಿ ಆಗಿದೆ. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ರಣವೀರ್ ಸಿಂಗ್ ಬಳಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಸಂದೇಶ ಕಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೆಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು – Kannada News | The Viral Laugh That Changed a Life: Arun’s Inspiring Story from Poverty to Fame

ಸೋಶಿಯಲ್​​ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಈ ಹುಡುಗನ ವಿಡಿಯೋ ಸಖತ್​​​ ವೈರಲ್​ ಆಗುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿಕ್ಕ ವಿಷಯವು ದೊಡ್ಡದಾಗಿ ವೈರಲ್​ ಆಗುತ್ತದೆ. ಎಲ್ಲ ಮೀಮ್ಸ್​​​​​​ಗಳಲ್ಲಿ ಈ ಹುಡುಗನ ವಿಡಿಯೋವನ್ನು ನೋಡಿರಬಹುದು. ಟೀ ಹಿಡಿದುಕೊಂಡು ನಗುವ ನಗು ಇದೀಗ ದೇಶದಲ್ಲಿ ದೊಡ್ಡ ಸದ್ದು ಮಾಡಿದೆ. ಅಷ್ಟಕ್ಕೂ ಈ ಹುಡುಗ ಯಾರು ಗೊತ್ತಾ? ಸೋಷಿಯಲ್ ಮೀಡಿಯಾದಲ್ಲಿ ಇಂದು ಪ್ರತಿಯೊಂದು ಮೀಮ್ (Meme) ಅಥವಾ ಟ್ರೋಲ್ ವಿಡಿಯೋಗಳಲ್ಲಿ ಕಾಣಿಸಿಕೊಳ್ಳುವ ಆ ಪ್ರಸಿದ್ಧ ನಗುಮೊಗದ ಚಹಾ ಹುಡುಗನ ಕಥೆ ನಿಜಕ್ಕೂ ಸ್ಫೂರ್ತಿದಾಯಕ. ಆತನ ಬಗ್ಗೆ  ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

ಈ ವೈರಲ್ ಹುಡುಗನ ಹೆಸರು ಅರುಣ್. ಈತ ನಮ್ಮ ಪಕ್ಕದ ತೆಲಂಗಾಣ ರಾಜ್ಯದ ಜಯಶಂಕರ್ ಬೊಪ್ಪಳಪಲ್ಲಿ ಜಿಲ್ಲೆಯ ನಾಲಪ್ಪುಚಟುವಲ್ಲಿ ಗ್ರಾಮದವನು. ಅತ್ಯಂತ ಬಡತನದ ಕುಟುಂಬದಿಂದ ಬಂದ ಅರುಣ್, ಜೀವನೋಪಾಯಕ್ಕಾಗಿ ಲಾರಿಯಲ್ಲಿ ಕ್ಲೀನರ್ (ಸಹಾಯಕ) ಆಗಿ ಕೆಲಸ ಮಾಡುತ್ತಿದ್ದಾನೆ. ಈ ವಿಡಿಯೋ ಯಾವುದೇ ಪ್ಲಾನಿಂಗ್ ಮಾಡಿ ಮಾಡಿದ್ದಲ್ಲ, ಬದಲಾಗಿ ಅದೊಂದು ಆಕಸ್ಮಿಕ ಸುಂದರ ಕ್ಷಣ, ಲಾರಿ ಚಾಲಕ ನೆಹರು ಅವರು ಚಹಾ ಕುಡಿಯುವಾಗ ಒಂದು ಜೋಕ್ ಹೇಳುತ್ತಾರೆ. ಅದನ್ನು ಕೇಳಿ ಅರುಣ್ ತನ್ನ ಮುಗ್ಧತೆಯಿಂದ ಗಹಗಹಿಸಿ ನಗುತ್ತಾನೆ.

ಅರುಣ್ ನಗುವನ್ನು ನೆಹರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಅಪ್‌ಲೋಡ್ ಆದ ಕೇವಲ ಒಂದೂವರೆ ತಿಂಗಳಲ್ಲೇ ಈ ವಿಡಿಯೋ 40 ಮಿಲಿಯನ್ (4 ಕೋಟಿ) ವೀಕ್ಷಣೆಗಳನ್ನು ದಾಟಿ ದಾಖಲೆ ಬರೆಯಿತು. ಅರುಣ್ ಬಡತನದ ಕಾರಣದಿಂದ ಕೇವಲ 4ನೇ ತರಗತಿಗೆ ಶಾಲೆಯನ್ನು ಅರ್ಧಕ್ಕೆ ಬಿಟ್ಟಿದ್ದನು. ಆದರೆ, ಈ ವಿಡಿಯೋ ವೈರಲ್ ಆದ ನಂತರ ಚಾಲಕ ನೆಹರು ಅವರ ಬೆಂಬಲದಿಂದ ಅರುಣ್ ಮತ್ತೆ ಓದಿನತ್ತ ಮುಖ ಮಾಡಿದ್ದಾನೆ. ಇತ್ತೀಚಿನ ವರದಿಗಳ ಪ್ರಕಾರ, ಅರುಣ್ 10ನೇ ತರಗತಿ ಪರೀಕ್ಷೆ ಬರೆದು ಉತ್ತೀರ್ಣನಾಗಿದ್ದಾನೆ. ರಾತ್ರೋರಾತ್ರಿ ಪ್ರಸಿದ್ಧಿ ಪಡೆದ ಅರುಣ್ ಈಗ ತೆಲಂಗಾಣದಲ್ಲಿ ಸೆಲೆಬ್ರಿಟಿ. ಅನೇಕ ದೊಡ್ಡ ದೊಡ್ಡ ಯೂಟ್ಯೂಬ್ ಚಾನೆಲ್‌ಗಳು ಈತನನ್ನು ಸಂದರ್ಶನ ಮಾಡಿವೆ.

ಇಲ್ಲಿದೆ ನೋಡಿ ವಿಡಿಯೋ:

ಈಗ ಅರುಣ್ ತಾನೇ ಒಂದು ಇನ್‌ಸ್ಟಾಗ್ರಾಂ ಖಾತೆ ತೆರೆದು ಕಾಮಿಡಿ ವಿಡಿಯೋಗಳನ್ನು ಮಾಡುತ್ತಾ ಸಾವಿರಾರು ಫಾಲೋವರ್ಸ್ ಹೊಂದಿದ್ದಾನೆ. ನಗುವಿಗೆ ಜಾತಿ, ಧರ್ಮ ಅಥವಾ ಭಾಷೆಯ ಹಂಗಿಲ್ಲ ಎಂಬುದು ಅರುಣ್ ವಿಷಯದಲ್ಲಿ ಸಾಬೀತಾಗಿದೆ. ಆತನ  ಮುಗ್ಧ ನಗು ಎಂತಹ ಒತ್ತಡದಲ್ಲಿರುವವರಿಗೂ ಒಂದು ಕ್ಷಣ ನಗು ತರಿಸುತ್ತದೆ. ಅದಕ್ಕಾಗಿಯೇ ಇಂದಿಗೂ ಟ್ರೋಲಿಗರು ಯಾವುದೇ ಕಾಮಿಡಿ ವಿಡಿಯೋ ಎಡಿಟ್ ಮಾಡುವಾಗ ಅರುಣ್ ನಗುವಿನ ಕ್ಲಿಪ್ ಇಲ್ಲದೆ ಪೂರ್ಣಗೊಳಿಸುವುದಿಲ್ಲ. ಈ ಬಗ್ಗೆ ಸಂದರ್ಶನವೊಂದರಲ್ಲಿ ಅರುಣ್​​ ಹೀಗೆ ಹೇಳಿದ್ದಾನೆ. ಅರುಣ್ ಹೇಳುವಂತೆ, ಆತ ನಗುವಾಗ ಆತನಿಗೆ ತಾನು ಒಬ್ಬ ಬಡ ಲಾರಿ ಕ್ಲೀನರ್ ಎಂಬ ನೆನಪೇ ಇರಲಿಲ್ಲ. “ನನ್ನ ನಗು ಇಷ್ಟೊಂದು ಜನರಿಗೆ ಇಷ್ಟವಾಗುತ್ತದೆ ಎಂದು ನಾನು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಬಡತನದ ನೋವಿನ ನಡುವೆಯೂ ಆ ಒಂದು ಕ್ಷಣದ ನಗು ನನ್ನ ಜೀವನವನ್ನೇ ಬದಲಿಸಿತು” ಎಂದು ಭಾವುಕನಾಗಿ ಹೇಳಿದ್ದಾನೆ.

ಇದನ್ನೂ ಓದಿ: “ಅಯ್ಯೋ So Cute​​ ದೀದಿ”: ಬೆಂಗಳೂರಿನ ದಂಪತಿಗಳ ವಿವಾಹ ವಾರ್ಷಿಕೋತ್ಸವಕ್ಕೆ ಅದ್ಭುತ ಗಿಫ್ಟ್​​​ ಕೊಟ್ಟ ಮನೆಗೆಲಸದಾಕೆ

ನನ್ನ ಜೀವನದಲ್ಲಿ ನೆಹರು ಅಣ್ಣ (ಲಾರಿ ಡ್ರೈವರ್) ದೇವರಿಗಿಂತ ಕಡಿಮೆ ಇಲ್ಲ. ಅವರು ಆ ವಿಡಿಯೋ ಮಾಡದಿದ್ದರೆ. ನಾನು ಓದಬೇಕು ಎಂದು ಹಠ ಹಿಡಿಯದಿದ್ದರೆ ನಾನು ಇಂದಿಗೂ ಕೇವಲ ಕ್ಲೀನರ್ ಆಗಿಯೇ ಇರುತ್ತಿದ್ದೆ. ನಾನು 10ನೇ ತರಗತಿ ಓದಲು ಅವರೇ ಕಾರಣ. ವೈರಲ್ ಆದ ಮೇಲೆ ದೊಡ್ಡ ದೊಡ್ಡ ತೆಲುಗು ನಟರು ಮತ್ತು ಯೂಟ್ಯೂಬರ್‌ಗಳು ತನ್ನನ್ನು ಗುರುತಿಸಿ ಮಾತನಾಡಿಸಿದಾಗ ಆರಂಭದಲ್ಲಿ ತುಂಬಾ ಭಯವಾಗಿತ್ತು ಎಂದು ಅರುಣ್ ನೆನಪಿಸಿಕೊಂಡಿದ್ದಾನೆ. “ಈಗ ಜನರು ನನ್ನ ಜೊತೆ ಸೆಲ್ಫಿ ಕೇಳಿದಾಗ ವಿಚಿತ್ರ ಎನಿಸಿದರೂ ಖುಷಿಯಾಗುತ್ತದೆ. ಕೇವಲ ವಿಡಿಯೋ ಮಾಡುವುದು ಮಾತ್ರವಲ್ಲ, ಚೆನ್ನಾಗಿ ಓದಿ ಗೌರವಯುತವಾದ ಕೆಲಸ ಮಾಡಬೇಕು ಮತ್ತು ತನ್ನಂತೆಯೇ ಬಡತನದಲ್ಲಿರುವ ಮಕ್ಕಳಿಗೆ ಸಹಾಯ ಮಾಡಬೇಕು ಎಂದು ಹೇಳಿದರು.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ: ತನಿಖೆ ವೇಳೆ ಸ್ಫೋಟಕ ಅಂಶ ಬಯಲಿಗೆ – Kannada News | Bengalru DCP Yatish Talks about Woman Sent Mother’s Private Photos To Boyfriend case

ಬೆಂಗಳೂರು, (ಫೆಬ್ರವರಿ 10): ನಗರದ ಬ್ಯಾಟರಾಯನಪುರದಲ್ಲಿ (Byatarayanapura) ಯುವತಿಯೋರ್ವಳು ತನ್ನ ಹೆತ್ತ ತಾಯಿ ಹಾಗೂ ದೊಡ್ಡಮ್ಮಳ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಹಾಗೂ ಪೊಲೀಸರೇ ಶಾಕ್ ಆಗಿದ್ದಾರೆ.  ತಮ್ಮ ಹಾಗೂ ಅಕ್ಕನ ಖಾಸಗಿ ಫೋಟೋಗಳನ್ನು ಮಗಳು ಆಕೆಯ ಪ್ರಿಯಕರನಿಗೆ ಕಳಿಸಿದ್ದಾಳೆ ಎಂದು ತಾಯಿ ನೀಡಿದ್ದು, ಈ ಸಂಬಂಧ ಯುವತಿ ಹಾಗೂ ಆಕೆಯ ಪ್ರಿಯಕರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೆಲ ಅಂಶಗಳು ಬಯಲಿಗೆ ಬಂದಿವೆ. ಕುಟುಂಬಸ್ಥರು ಮದುವೆಗೆ ಒಪ್ಪದಿದ್ದರೆ ಈ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುವಂತೆ ಯುವತಿಗೆ ತಿಳಿಸಿದ್ದಾಗಿ ಪ್ರಿಯಕರ ಸತ್ಯ ಬಾಯ್ಬಿಟ್ಟಿದ್ದಾನೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ.

ಫೋಟೋ ಕಳುಹಿಸಿರುವುದು ಗೊತ್ತಾಗಿದ್ಹೇಗೆ?

ಪ್ರಿಯಕರನಿಗೆ ತಾಯಿ ಮತ್ತು ದೊಡ್ಡಮ್ಮನ ಖಾಸಗಿ ಫೋಟೋ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್.ಎನ್ ಪ್ರತಿಕ್ರಿಯಿಸಿದ್ದು, ಮಗಳೇ ತನ್ನ ತಾಯಿ ಹಾಗೂ ದೊಡ್ಡಮ್ಮಳ ಖಾಸಗಿ ಫೋಟೋಗಳನ್ನು ಲವರ್ ಗೆ ಕಳುಹಿಸಿರುವುದು ಹೇಗೆ ಬೆಳಕಿಗೆ ಬಂದಿದೆ ಎಂದು ಎಳೆ ಎಳೆಯಾಗಿಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ!

ಬ್ಯಾಟರಾಯನಪುರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು. ಓರ್ವ ಮಹಿಳೆ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನಲ್ಲಿ ಅವರು ಸ್ವತಃ ಅವರ ಮಗಳ ವಿರುದ್ಧ ಆರೋಪ ಮಾಡಿದ್ದರು. ಅವರ ಹಾಗೂ ಅವರ ಅಕ್ಕನ ಖಾಸಗಿ ಫೋಟೋ ತೆಗೆದು ಇನ್ನೊಬ್ಬ ವ್ಯಕ್ತಿಗೆ ಕಳಿಸಿದ್ದಾಗಿ ಹೇಳಿದ್ದಾರೆ. ಮಹಿಳೆಯ ಎರಡನೇ ಮಗಳು ಮನೆಬಿಟ್ಟು ಹೋಗಿ ಪ್ರೀತಿಸಿದ ಹುಡಗನನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದ್ರೆ, ಹುಡುಗಿ ಮನೆಯಲ್ಲಿ ತನ್ನ ಮೊಬೈಲ್ ಮತ್ತು ಲ್ಯಾಪ್ ಟಾಪ್ ಬಿಟ್ಟು ಹೋಗಿದ್ದಳು. ಆಗ ಮನೆಯವರು ಮಗಳ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಚೆಕ್ ಮಾಡಿದಾಗ ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋ ಕಳಿಸಿರುವುದು ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.

ಮಗಳು ಆಕೆಯ ಪತಿಗೆ ತಾಯಿ‌ ಹಾಗೂ ಸಂಬಂಧಿಕರ ಫೋಟೋ ಕಳಿಸಿದ್ದಾಳೆ. ಯಾವ ಉದ್ದೇಶಕ್ಕಾಗಿ ಈ‌ ಕೃತ್ಯ ಆಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಮೊಬೈಲ್ ಅನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಿ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಒಟ್ಟಿನಲ್ಲಿ ಯುವತಿ ಹೆತ್ತಮ್ಮನ ಖಾಸಗಿ ಫೋಟೋಗಳನ್ನು ಏಕೆ ತನ್ನ ಬಾಯ್​ ಫ್ರೆಂಡ್ ಗೆ ಕಳುಹಿಸಿದ್ದಳು? ಇದರ ಹಿಂದಿನ ಉದ್ದೇಶ ಏನಾಗಿತ್ತು ಎನ್ನುವ ಅಸಲಿ ಕಾರಣ ಪೊಲೀಸ್ ತನಿಖೆಯಲ್ಲಿ ಗೊತ್ತಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ – Kannada News | French President Emmanuel Macron to visit India on February 17

ನವದೆಹಲಿ, ಫೆಬ್ರವರಿ 10: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಭಾರತಕ್ಕೆ ಫೆಬ್ರವರಿ 17ರಿಂದ 3 ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿಯ ಸಮಯದಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.

ಇಬ್ಬರೂ ನಾಯಕರು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರ ಸೇರಿದಂತೆ ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಪ್ರಧಾನಿ ಮೋದಿ ಮತ್ತು ಮ್ಯಾಕ್ರನ್ ‘ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ’ವನ್ನು ಜಂಟಿಯಾಗಿ ಉದ್ಘಾಟಿಸಲು ಮುಂಬೈಗೆ ತೆರಳಲಿದ್ದಾರೆ. ಇದರ ಜೊತೆಗೆ ಹಾರಿಜಾನ್ 2047 ಮಾರ್ಗಸೂಚಿಯಲ್ಲಿ ಪಟ್ಟಿ ಮಾಡಲಾದ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಟ್ರಂಪ್​ಗಾಗಿ ಫ್ರೆಂಚ್ ಅಧ್ಯಕ್ಷರನ್ನೇ ನಡುರಸ್ತೆಯಲ್ಲಿ ನಿಲ್ಲಿಸಿದ ನ್ಯೂಯಾರ್ಕ್​ ಪೊಲೀಸರು

ಹಾರಿಜಾನ್ 2047 ಮಾರ್ಗಸೂಚಿಯು ರಕ್ಷಣೆ, ಬಾಹ್ಯಾಕಾಶ, ತಂತ್ರಜ್ಞಾನ ಮತ್ತು ಸುಸ್ಥಿರತೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ವಿನ್ಯಾಸಗೊಳಿಸಲಾದ ಎರಡು ದೇಶಗಳ ನಡುವಿನ 25 ವರ್ಷಗಳ (2023-2047) ಕಾರ್ಯತಂತ್ರದ ನೀಲನಕ್ಷೆಯಾಗಿದೆ. ಇದಲ್ಲದೆ, ಇಂಡೋ-ಪೆಸಿಫಿಕ್ ಅನ್ನು ಸ್ಥಿರತೆ ಮತ್ತು ಸುಸ್ಥಿರ ಅಭಿವೃದ್ಧಿಯ ಪ್ರದೇಶವನ್ನಾಗಿ ಮಾಡಲು ಪರಿಹಾರಗಳನ್ನು ಒದಗಿಸುವ ಚೌಕಟ್ಟನ್ನು ಇದು ಒಳಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಮೆಟ್ರೋ ಟಿಕೆಟ್​​ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ – Kannada News | Bengaluru Metro Ticketing Woes: Bank Server Glitch Causes UPI/Card Payment Failure

ಬೆಂಗಳೂರು, ಫೆ.10: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಒಂದು ಕಹಿ ಅನುಭವ ಆಗಿದೆ. ಬ್ಯಾಂಕ್ ಸರ್ವರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಿಕೆಟ್ ಪಡೆಯಲು ಸಾಧ್ಯವಾಗದೆ ಸಾವಿರಾರು ಜನರು ಪರದಾಡುವಂತಾಗಿದೆ. ಇತ್ತೀಚೆಗಷ್ಟೇ ಮೆಟ್ರೋ ದರ ಏರಿಕೆ ಮಾಡಿ ಮೆಟ್ರೋ ಪ್ರಯಾಣಿಕರ ಅಕ್ರೋಶಕ್ಕೆ ಒಳಗಾಗಿತ್ತು, ಇದೀಗ ಇದರ ಬೆನ್ನಲ್ಲೇ ಬ್ಯಾಂಕ್ ಸರ್ವರ್‌ನಲ್ಲಿ ಡೌನ್​ ಆಗಿರುವುದು ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಇಂದು (ಫೆ. 10) ಸಂಜೆ 6 ಗಂಟೆಯಿಂದ ಬ್ಯಾಂಕ್ ಸರ್ವರ್ ಸಮಸ್ಯೆ ಆರಂಭವಾಗಿದೆ. ಯುಪಿಐ (UPI) ಪೇಮೆಂಟ್ ಅಥವಾ ಬ್ಯಾಂಕ್ ಕಾರ್ಡ್‌ಗಳ ಮೂಲಕ ಟಿಕೆಟ್ ಖರೀದಿಸುವ ಪ್ರಕ್ರಿಯೆಯಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದೆ.

ಕಚೇರಿ ಕೆಲಸ ಮುಗಿಸಿ ಮನೆಗೆ ಮರಳುವ ಅವಸರದಲ್ಲಿದ್ದ ಪ್ರಯಾಣಿಕರು ಟಿಕೆಟ್ ಕೌಂಟರ್ ಹಾಗೂ ಎಟಿಎಂಗಳ (ATMs) ಮುಂದೆ ಗಂಟೆಗಟ್ಟಲೆ ನಿಲ್ಲುವಂತಾಯಿತು. ಸರ್ವರ್ ಸಮಸ್ಯೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಪ್ರಯಾಣಿಕರು ಒಂದಕ್ಕೆ ಎರಡರಷ್ಟು ಬಾರಿ ಯುಪಿಐ ಪೇಮೆಂಟ್ ಮಾಡಿದ್ದಾರೆ. ಅಕೌಂಟ್‌ನಿಂದ ಹಣ ಕಟ್ ಆಗಿದ್ದರೂ ಕ್ಯೂಆರ್ ಕೋಡ್ (QR Code) ಜನರೇಟ್ ಆಗಿಲ್ಲ.ಸ್ಯಾಂಡಲ್ ಸೋಪ್ ಫ್ಯಾಕ್ಟರಿ, ಯಶವಂತಪುರ ಸೇರಿದಂತೆ ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಬಿಎಂಆರ್‌ಸಿಎಲ್ (BMRCL) ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಇಲ್ಲಿದೆ ನೋಡಿ ವಿಡಿಯೋ:

ಕಟ್ ಆಗಿರುವ ಹಣ ವಾಪಸ್ ಬರುತ್ತದೆಯೇ ಎಂಬ ಆತಂಕದಲ್ಲಿ ಜನರು ಕಸ್ಟಮರ್ ಕೇರ್ ಮುಂದೆ ಜಮಾಯಿಸಿದ್ದಾರೆ. ಇಂತಹ ತುರ್ತು ಸಂದರ್ಭಗಳಲ್ಲಿ ಸಣ್ಣ ಮೊತ್ತದ ನಗದು (Cash) ಇಟ್ಟುಕೊಳ್ಳುವುದು ಉತ್ತಮ. ಕೌಂಟರ್‌ಗಳಲ್ಲಿ ನಗದು ನೀಡಿ ಟೋಕನ್ ಪಡೆಯಬಹುದು. ಯುಪಿಐಗಿಂತ ಮೆಟ್ರೋ ಸ್ಮಾರ್ಟ್ ಕಾರ್ಡ್‌ಗಳು ಇಂತಹ ಸಮಯದಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ. ಒಮ್ಮೆ ಹಣ ಕಟ್ ಆಗಿ ಟಿಕೆಟ್ ಬರದಿದ್ದರೆ, ಪದೇ ಪದೇ ಪೇಮೆಂಟ್ ಮಾಡಬೇಡಿ. ಸಾಮಾನ್ಯವಾಗಿ ಕಟ್ ಆದ ಹಣ 24-48 ಗಂಟೆಗಳಲ್ಲಿ ನಿಮ್ಮ ಖಾತೆಗೆ ಮರುಪಾವತಿಯಾಗುತ್ತದೆ ಎಂಬುದು ಬ್ಯಾಂಕ್​​​ಗಳ ಸಲಹೆ ಕೂಡ ನೀಡಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ – Kannada News | Producer K Manju urges Government to give more subsidy for Kannada movies

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (KFCC) ಸುದ್ದಿಗೋಷ್ಠಿ ನಡೆಸಲಾಗಿದೆ. ಈ ವೇಳೆ ನಿರ್ಮಾಪಕ ಕೆ. ಮಂಜು ಅವರು ಮಾತನಾಡಿದರು. ‘ಇಂದು ಹಲವು ನಿರ್ಮಾಪಕರು ವಾಣಿಜ್ಯ ಮಂಡಳಿಗೆ ಮನವಿ ಪತ್ರ ನೀಡಿದ್ದಾರೆ. ಚಿತ್ರರಂಗ ಇರುವವರೆಗೂ ಸಬ್ಸಿಡಿ ನೀಡಬೇಕು ಎಂಬುದು ನಮ್ಮೆಲ್ಲರ ಉದ್ದೇಶ. ಯಾವ ಕಾರಣಕ್ಕೂ ಸಬ್ಸಿಡಿ ನಿಲ್ಲಬಾರದು. ಇನ್ನೂ ಜಾಸ್ತಿ ಕೊಡಿ ಅಂತ ಕೇಳುತ್ತೇವೆ. 10 ಲಕ್ಷ ರೂಪಾಯಿ ಇರುವುದನ್ನು 15 ಲಕ್ಷ ರೂಪಾಯಿ ಮಾಡಿ ಎನ್ನುತ್ತೇವೆ. 125 ಸಿನಿಮಾಗಳಿಗೆ ಕೊಡುತ್ತಾರೆ. 200 ಸಿನಿಮಾಗಳಿಗೆ ಕೊಡಿ ಅಂತ ಕೇಳುತ್ತಿದ್ದೇವೆ. ಚಿತ್ರೋದ್ಯಮದ ಹಿತದೃಷ್ಟಿಯಿಂದ ಮನವಿ ಮಾಡುತ್ತಿದ್ದೇನೆ’ ಎಂದು ಕೆ. ಮಂಜು (K Manju) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ? – Kannada News | Squat or Sit? The Best Toilet Position for Your Gut

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳು ಎಲ್ಲಾ ರೀತಿಯ ಅಭ್ಯಾಸಗಳನ್ನು ಬದಲಿಸುತ್ತಿದೆ. ಅಷ್ಟೇಅಲ್ಲ ಮನೆ, ನಾವು ಬಳಸುವ ವಸ್ತುಗಳು ಜೊತೆಗೆ ಶೌಚಾಲಯಗಳು ಕೂಡ ಬದಲಾಗುತ್ತಿದೆ. ಹಿಂದೆ ಪ್ರತಿ ಮನೆಯಲ್ಲೂ ಇಂಡಿಯನ್ ಟಾಯ್ಲೆಟ್ (Indian toilet) ಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಪಾಶ್ಚಿಮಾತ್ಯ ಕಮೋಡ್‌ ಅಥವಾ ವೆಸ್ಟರ್ನ್ ಟಾಯ್ಲೆಟ್ (Western Toilet) ಗಳನ್ನು ಎಲ್ಲರೂ ಹೆಚ್ಚಾಗಿ ಬಳಕೆ ಮಾಡಲು ಆರಂಭಿಸಿದ್ದಾರೆ. ಅದಕ್ಕಾಗಿಯೇ ಪ್ರತಿ ಮನೆಯಲ್ಲಿಯೂ ಇವು ಕಾಣಲು ಸಿಗುತ್ತಿದೆ. ಈ ಬದಲಾವಣೆ ಅನುಕೂಲಕರವಾಗಿದ್ದರೂ ಕೂಡ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಗೆ (Digestive Health) ಹಾನಿ ಮಾಡುತ್ತದೆಯೇ ಎಂಬ ಅನುಮಾನ ಹೆಚ್ಚಿನವರಲ್ಲಿ ಕಾಡುತ್ತಿದೆ. ಅದರಲ್ಲಿಯೂ ಇತ್ತೀಚೆಗೆ ಮಲಬದ್ಧತೆ ಮತ್ತು ಮೂಲವ್ಯಾಧಿ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಶೌಚಾಲಯದಲ್ಲಿ ಕುಳಿತುಕೊಳ್ಳುವ ಭಂಗಿಯಿಂದ ಈ ರೀತಿಯಾಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾದರೆ ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇಂಡಿಯನ್ ಟಾಯ್ಲೆಟ್ ಒಳ್ಳೆಯದೇ?

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ತಜ್ಞ ಡಾ. ಸೋನಿಯಾ ರಾವತ್ ಹೇಳುವ ಪ್ರಕಾರ, ಇಂಡಿಯನ್ ಟಾಯ್ಲೆಟ್ ನಲ್ಲಿ ಕುಳಿತುಕೊಳ್ಳುವುದರಿಂದ ಅನೇಕ ಪ್ರಯೋಜನಗಳಿವೆ. ಈ ಸ್ಥಾನದಲ್ಲಿ ಕುಳಿತಾಗ, ಗುದನಾಳವು ನೇರವಾಗುತ್ತದೆ. ಇದು ಯಾವುದೇ ರೀತಿಯ ಅಡಚಣೆಯಿಲ್ಲದೆ ಮಲವನ್ನು ಸುಲಭವಾಗಿ ಹೊರಹಾಕಲು ಅನುವು ಮಾಡಿಕೊಡುತ್ತದೆ. ಇದು ಕರುಳಿನ ಮೇಲಿನ ಅನಗತ್ಯ ಒತ್ತಡವನ್ನು ಕಡಿಮೆ ಮಾಡುತ್ತದೆ. ಕರುಳನ್ನು ಸಂಪೂರ್ಣವಾಗಿ ಖಾಲಿ ಮಾಡುವುದರಿಂದ ಮಲಬದ್ಧತೆ ಸಮಸ್ಯೆಗಳನ್ನು ತಡೆಯುತ್ತದೆ.

ವೆಸ್ಟರ್ನ್ ಟಾಯ್ಲೆಟ್ ಉಪಯೋಗ ಮಾಡುವುದರಿಂದಾಗುವ ಸಮಸ್ಯೆಗಳು?

ಸಾಮಾನ್ಯವಾಗಿ ವೆಸ್ಟರ್ನ್ ಟಾಯ್ಲೆಟ್‌ಗಳ ಬಳಕೆ ಅನುಕೂಲಕರವಾಗಿರಬಹುದು, ಆದರೆ ಇದು ಕೆಲವು ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಭಂಗಿಯಲ್ಲಿ, ಗುದನಾಳವು ಸ್ವಲ್ಪ ಬಾಗುತ್ತದೆ. ಇದರಿಂದ ದೇಹಕ್ಕೆ ಕರುಳನ್ನು ಸಂಪೂರ್ಣವಾಗಿ ಖಾಲಿ ಮಾಡಲು ಕಷ್ಟವಾಗುತ್ತದೆ. ಕಾಲಾನಂತರದಲ್ಲಿ ಇದು ಮಲಬದ್ಧತೆ, ಅನಿಲ ಮತ್ತು ಮೂಲವ್ಯಾಧಿಗಳಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ

ಯಾರಿಗೆ ಯಾವುದು ಒಳ್ಳೆಯದು?

ಇದರರ್ಥ ಎಲ್ಲರೂ ಭಾರತೀಯ ಶೌಚಾಲಯ ಅಥವಾ ಇಂಡಿಯನ್ ಟಾಯ್ಲೆಟ್ ಬಳಕೆ ಮಾಡಬೇಕು ಎಂದಲ್ಲ. ಮೊಣಕಾಲು ನೋವು, ಕೀಲು ಸಮಸ್ಯೆ ಇರುವವರಿಗೆ ಅಥವಾ ವೃದ್ಧರಿಗೆ ಪಾಶ್ಚಿಮಾತ್ಯ ಶೌಚಾಲಯಗಳು ಸುರಕ್ಷಿತ. ನೀವು ಪಾಶ್ಚಿಮಾತ್ಯ ಶೌಚಾಲಯವನ್ನು ಬಳಸುತ್ತಿದ್ದರೆ, ನಿಮ್ಮ ಪಾದಗಳ ಕೆಳಗೆ ಸಣ್ಣ ಸ್ಟೂಲ್ ಇಡುವುದರಿಂದ ನಿಮ್ಮ ಮೊಣಕಾಲುಗಳು ಮೇಲಕ್ಕೆತ್ತಲ್ಪಡುತ್ತವೆ ಮತ್ತು ನಿಮ್ಮನ್ನು ಭಾರತೀಯ ಶೌಚಾಲಯದ ಭಂಗಿಗೆ ತರುತ್ತದೆ. ಇದು ಕರುಳಿನ ಚಲನೆಯನ್ನು ಸುಲಭಗೊಳಿಸುತ್ತದೆ. ಜಂಕ್ ಫುಡ್ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ ಜೀರ್ಣಕಾರಿ ಸಮಸ್ಯೆಗಳು ಈಗಾಗಲೇ ಹೆಚ್ಚುತ್ತಿವೆ. ಅಂತಹ ಸಂದರ್ಭಗಳಲ್ಲಿ, ಸರಿಯಾದ ಶೌಚಾಲಯದ ಭಂಗಿಯನ್ನು ಆಯ್ಕೆ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ – Kannada News | I Know Officials: Hassan Husband Claims Wifes Harassment and Threats

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ದಾಂಪತ್ಯ ಕಲಹದ ಪ್ರಕರಣವೊಂದು ಈಗ ಸಾರ್ವಜನಿಕ ಗಮನ ಸೆಳೆದಿದೆ. ಪತಿ ಶಶಿಕುಮಾರ್ ಅವರು ತಮ್ಮ ಪತ್ನಿ ಅರ್ಪಿತಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಆಸ್ತಿಗಾಗಿ ಪತ್ನಿ ತಮ್ಮ ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಶಶಿಕುಮಾರ್ ಮತ್ತು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದು, ಮದುವೆಯ ನಂತರ ಮೊದಲ ಎರಡು ವರ್ಷಗಳು ಸಂತೋಷದಿಂದ ಕಳೆದಿದ್ದವು ಎಂದು ಶಶಿಕುಮಾರ್ ಹೇಳಿದ್ದಾರೆ. ಆದರೆ, ಪತ್ನಿ ಅರ್ಪಿತಾ ತನ್ನ ತಂದೆ-ತಾಯಿಯ ಮನೆಗೆ ಭೇಟಿ ನೀಡಿ ಬಂದ ನಂತರ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಯಿತು. ಪತ್ನಿಯ ಪೋಷಕರು ಪ್ರತ್ಯೇಕವಾಗಿರಲು ಸಲಹೆ ನೀಡಿದ ನಂತರ, ಅರ್ಪಿತಾ ಮನೆಗೆ ಬಂದು ಪ್ರತ್ಯೇಕ ಸಂಸಾರ ನಡೆಸುವಂತೆ ಪೀಡಿಸಲು ಪ್ರಾರಂಭಿಸಿದರು ಎಂದು ಶಶಿಕುಮಾರ್ ಆರೋಪಿಸಿದ್ದಾರೆ. “ನಾನು ನನ್ನ ಅಪ್ಪ-ಅಮ್ಮನನ್ನು ನೋಡಿಕೊಳ್ಳಬೇಕು ಮತ್ತು ನಿನ್ನನ್ನೂ ನೋಡಿಕೊಳ್ಳಬೇಕು ಎಂದಾಗ ಬೇರೆ ಕಡೆ ಪ್ರತ್ಯೇಕವಾಗಿ ಹೋಗಿ ವಾಸಿಸೋಣ ಎಂದು ಹೇಳುತ್ತಿದ್ದಾಳು, ಇದಕ್ಕೆ ನಾನು ಒಪ್ಪಿಲ್ಲ, ಮೇಲ್ಮಹಡಿಯಲ್ಲಿ ರೂಮ್​​​​ ಮಾಡುವಂತೆ ಬೇಡಿಕೆ ಇಟ್ಟಿದ್ದರು. ಹಣಕಾಸಿನ ತೊಂದರೆಯಿಂದ ತಕ್ಷಣ ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದಾಗ, ಸಾಲ ಮಾಡಿ ಸಣ್ಣದಾಗಿ ರೂಮ್​​​​ ಮಾಡಿಕೊಡುವಂತೆ ಒತ್ತಾಯಿಸಿದ್ದರು ಎಂದು ಶಶಿಕುಮಾರ್ ವಿವರಿಸಿದ್ದಾರೆ.

ಈ ಎಲ್ಲದರ ನಡುವೆ, ಅರ್ಪಿತಾ ಅವರ ಕಿರುಕುಳ ಹೆಚ್ಚಾಯಿತು. ಅರ್ಪಿತಾ ಅವರು “ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು, ಎಸ್ಪಿ ಕಚೇರಿಯವರು ಗೊತ್ತು, ಬೆಂಗಳೂರಿನಿಂದಲೂ ನನಗೆ ಸಂಪರ್ಕಗಳಿವೆ” ಎಂದು ಹೇಳಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ಏನೇ ತೊಂದರೆಯಾದರೂ ನಾನೇ, ನೀವೆಲ್ಲ ಇಡೀ ಕುಟುಂಬವನ್ನು ಜೈಲಿಗೆ ಕಳಿಸುತ್ತೇನೆ, ಕೋರ್ಟಿಗೆ ಕಳಿಸುತ್ತೇನೆ, ನಮಗೆ ಏನು ಮಾಡಕ್ಕಾಗಲ್ಲ” ಎಂದು ನಿರಂತರವಾಗಿ ಬೆದರಿಸುತ್ತಿದ್ದಾರೆ. ಅಲ್ಲದೆ, “ಡೆತ್ ನೋಟ್ ಬರೆಯುತ್ತೇನೆ” ಎಂದು ಹೇಳಿ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಈ ಪ್ರಕರಣ ಹಲವಾರು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ನ್ಯಾಯಾಲಯದಲ್ಲೂ ವಿಚಾರಣೆ ನಡೆಯುತ್ತಿದೆ. ನ್ಯಾಯಾಧೀಶರು ಸಹ ಅರ್ಪಿತಾ ಅವರನ್ನು ಕರೆದುಕೊಂಡು ಹೋಗಲು ಹಲವಾರು ಬಾರಿ ಸೂಚಿಸಿದ್ದರೂ, ನ್ಯಾಯಾಲಯದಲ್ಲಿ ಒಪ್ಪಿಗೆ ನೀಡಿ ಮನೆಗೆ ಬಂದ ನಂತರ ಜಗಳ ಮಾಡುತ್ತಾಳೆ ಎಂದು ಶಶಿಕುಮಾರ್ ಹೇಳಿದ್ದಾರೆ. ತಮ್ಮ ತಂದೆ-ತಾಯಿ ಮತ್ತು ಅಕ್ಕ-ತಂಗಿಯರಿಗೂ ಸಹ ಅರ್ಪಿತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಚಪ್ಪಲಿಯಿಂದ ಹೊಡೆಯಲು ಪ್ರಯತ್ನಿಸಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ. ತಾಯಿಗೆ ಚಪ್ಪಲಿಯಿಂದ ಹೊಡೆಯಲು ಹೋಗಿ, ಗಲಾಟೆ ಸೃಷ್ಟಿಸಿ ಪತ್ರಕರ್ತರನ್ನು ಕರೆಯಿಸಿರುವುದಾಗಿಯೂ ಹೇಳಿದ್ದಾಳೆ ಎಂದು ಶಶಿಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: “ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ

ಈ ಎಲ್ಲಾ ಘಟನೆಗಳು ಉದ್ದೇಶಪೂರ್ವಕವಾಗಿದ್ದು, ಹಣ ಮತ್ತು ಆಸ್ತಿಗಾಗಿ ಅರ್ಪಿತಾ ನಾಟಕ ಮಾಡುತ್ತಿದ್ದಾಳೆ ಎನ್ನುವುದು ಶಶಿಕುಮಾರ್ ಅವರ ಪ್ರಮುಖ ಆರೋಪ. ನನ್ನ ಬಳಿ ಪತ್ನಿಯ ಬೆದರಿಕೆಗಳು, ಅವಾಚ್ಯ ಮಾತುಗಳು ಮತ್ತು ಕಿರುಕುಳದ ವಿಡಿಯೋ ಹಾಗೂ ಆಡಿಯೋ ಕ್ಲಿಪ್‌ಗಳಿವೆ ಎಂದು ಅವರು ತಿಳಿಸಿದ್ದಾರೆ. ಈ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧರಿರುವುದಾಗಿ ಶಶಿಕುಮಾರ್ ಹೇಳಿದ್ದಾರೆ. ಕುಟುಂಬವು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಸಮಾಜದಲ್ಲಿ ತಮ್ಮನ್ನು ಕೀಳಾಗಿ ಕಾಣಿಸುವ ಉದ್ದೇಶದಿಂದ ಈ ಎಲ್ಲಾ ಸನ್ನಿವೇಶಗಳನ್ನು ಅರ್ಪಿತಾ ಸೃಷ್ಟಿಸುತ್ತಿದ್ದಾರೆ ಎಂದು ಶಶಿಕುಮಾರ್ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:53 pm, Tue, 10 February 26

Source link

Exit mobile version