KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್ ಬಿಕರಿ? – Kannada News | KPSC Recruitment Scam: Over 50 Candidates Rush to Police Station Alleging Veterinary Officer Posts Sold for 80 Lakh Rupees Each
KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? ಬೆಂಗಳೂರು, ಜುಲೈ 23: ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಗಂಭೀರ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ದೂರಲಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸುವಂತೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ. ನೇಮಕಾತಿಯಲ್ಲಿ ಶೇ.60ರಷ್ಟು ಅಕ್ರಮ ಆಗಿರುವ ಬಗ್ಗೆ ಆರೋಪಿಸಲಾಗಿದ್ದು, ಇದರಲ್ಲಿಯೂ ಇತ್ತೀಚೆಗಷ್ಟೇ ಅಮಾನತ್ತಾಗಿರುವ ಶಿವಶಂಕರಪ್ಪ ಸಾಹುಕಾರ್ ಹೆಸರು ತಳಕುಹಾಕಿಕೊಂಡಿದೆ….