ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಪೋಸ್ಟ್: ರಾಹುಲ್ ಹೆಸರು ಉಲ್ಲೇಖಿಸಿ ಬಿಜೆಪಿ ಗುದ್ದು – Kannada News | Karnataka bjp counters siddaramaiahs remarks on pm narendra modi
ಮೋದಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ವಿಜಯೇಂದ್ರ ಕೌಂಟರ್Image Credit source: Tv9 Kannada ಬೆಂಗಳೂರು, ಫೆಬ್ರವರಿ 10: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾಡಿರುವ ಎಕ್ಸ್ ಪೋಸ್ಟ್ ವಿಚಾರವೀಗ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಪೋಸ್ಟ್ ಕಂಡು ಕೆರಳಿರುವ ರಾಜ್ಯದ ಕೆಸರಿ ಪಡೆ ರಾಹುಲ್ ಗಾಂಧಿ ಹೆಸರು ಉಲ್ಲೇಖಿಸಿ ಕೌಂಟರ್ ಕೊಟ್ಟಿದೆ. ಸಿಎಂ ಪದವಿ ವಿಚಾರವಾಗಿ ಕಿತ್ತಾಡುತ್ತಿರುವ ನೀವು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಮೊದಲು ರಾಹುಲ್ ಗಾಂಧಿಯವರು ಎಲ್ಲಿದ್ದಾರೋ ಹುಡುಕಿಕೊಳ್ಳಿ…