Headlines

ಕುಡಿದ ಮತ್ತಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಹೋದರರ ಫೈಟ್​​: ಕಲ್ಲಿಂದ ಜಜ್ಜಿ ತಮ್ಮನನ್ನೇ ಕೊಂದ ಅಣ್ಣ! – Kannada News | Tumakuru Tragedy: Elder Brother Murders Younger Sibling in Drunken Brawl

ತುಮಕೂರು, ಏಪ್ರಿಲ್​​ 28: ಕ್ಷುಲ್ಲಕ ವಿಚಾರಕ್ಕೆ ಒಡಹುಟ್ಟಿದವರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಮಧುಗಿರಿ ತಾಲೂಕಿನ ನಿಟ್ಟರಹಳ್ಳಿ ನಿವಾಸಿ ಗಂಗರಾಜು ಮೃತನಾಗಿದ್ದು, ಕಲ್ಲಿನಿಂದ ಜಜ್ಜಿ ಸಹೋದರನ ಹತ್ಯೆಗೈದ ಆರೋಪಿ ನರಸಿಂಹಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕೋಪದ ಕೈಗೆ ಬುದ್ಧಿಕೊಟ್ಟ ಅಣ್ಣ ಜೈಲು ಸೇರಿದ್ದರೆ, ಮದ್ಯಕ್ಕೆ ದಾಸನಾಗಿದ್ದ ತಮ್ಮ ಇಹಲೋಕವನ್ನೇ ತೊರೆದಿದ್ದಾನೆ. ಭೀಕರ ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದು, ಮೃತ ಗಂಗರಾಜು ಅವಿವಾಹಿತ ಎಂಬುದು ಕೂಡ ಗೊತ್ತಾಗಿದೆ. ಇನ್ನು…

Read More

‘ಕೆಡಿ’ ಟ್ರೇಲರ್​​ನಲ್ಲಿ ಪುನೀತ್ ರಾಜ್​​ಕುಮಾರ್ ಚಿತ್ರದ ಡೈಲಾಗ್; ಅಪ್ಪುಗೆ ಪ್ರೇಮ್ ಗೌರವ – Kannada News | KD Trailer: Dhruva Sarja’s Dialogue Echoes Puneeth Rajkumar, Prem’s Tribute Revealed

‘ಕೆಡಿ’ಸಿನಿಮಾ ಏಪ್ರಿಲ್ 30ರಂದು ವಿಶ್ವಾದ್ಯಂತ ತೆರೆಗೆ ಬರಲು ರೆಡಿ ಇದೆ. ಹೀಗಿರುವಾಗಲೇ ಚಿತ್ರದ ಟ್ರೇಲರ್ ಏಪ್ರಿಲ್ 22ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾಳಿ ಪಾತ್ರದಲ್ಲಿ ಧ್ರುವ ಸರ್ಜ ಮಿಂಚಿದ್ದಾರೆ. ಮತ್ತೊಮ್ಮೆ ರಗಡ್ ಪಾತ್ರದ ಮೂಲಕ ಅವರು ಬಂದಿದ್ದಾರೆ. ಪ್ರೇಮ್ ಅವರು ರಾ ಆಗಿ ಸಿನಿಮಾ ಮಾಡಿದ್ದಾರೆ. ಈಗ ‘ಕೆಡಿ’ ಸಿನಿಮಾದ ಟ್ರೇಲರ್ ಅಲ್ಲಿ ಬರುವ ಡೈಲಾಗ್ ಗಮನ ಸೆಳೆದಿದೆ. ಪುನೀತ್ ಅವರ ಸಿನಿಮಾ ಒಂದರ ಡೈಲಾಗ್ ಕೂಡ ಸೇಮ್ ಟು ಸೇಮ್ ಇತ್ತು ಎಂಬುದನ್ನು ಫ್ಯಾನ್ಸ್…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More

Chanakya Niti: ಈ ಗುಣಗಳಿರುವ ಸ್ನೇಹಿತರು ಎಂದಿಗೂ ಮೋಸ ಮಾಡಲಾರರು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: According to Acharya Chanakya, friends with these qualities are very good

ಸ್ನೇಹ (Friendship) ಎನ್ನುವುದು ಭಾಷೆ, ಜಾತಿ, ಧರ್ಮ ಎಲ್ಲವನ್ನು ಮೀರಿದ ಸುಂದರ ಬಂಧ. ಪ್ರತಿಯೊಬ್ಬರ ಜೀವನದಲ್ಲೂ ಫ್ರೆಂಡ್ಸ್‌ ಇದ್ದೇ ಇರುತ್ತಾರೆ. ಸ್ನೇಹಿತರು ನಮ್ಮ ಇಡೀ ಜೀವನವನ್ನು ಸುಂದರವಾಗಿಸಬಲ್ಲರು. ಅಲ್ಲದೆ ನಮ್ಮ ಜೀವನವನ್ನು ಉತ್ತಮವಾಗಿಸಬಲ್ಲರು. ಅದೇ ರೀತಿ ಕೆಲವು ಸ್ನೇಹಿತರು ಸ್ವಾರ್ಥ ಮತ್ತು ದುರಾಸೆಯಿಂದ ಇನ್ನೊಬ್ಬರ ಜೀವನವನ್ನೇ ಹಾಳು ಮಾಡಬಲ್ಲರು. ಇನ್ನೂ ಕೆಲ ಸ್ನೇಹಿತರು ಪ್ರತಿಯೊಂದು ಹಂತದಲ್ಲೂ ನಿಮಗೆ ಬೆಂಬಲವಾಗಿ ನಿಲ್ಲುತ್ತಾರೆ. ಅವರು ಎಂದಿಗೂ ಮೋಸ ಮಾಡಲಾರರು ಎಂದು ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಾವ ಗುಣಗಳನ್ನು ಹೊಂದಿರುವ ಸ್ನೇಹಿತರು…

Read More

ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ – Kannada News | Siddaramaiah’s Clarification Over Viral Photo with PM Narendra Modi

ಮೈಸೂರು, ಏಪ್ರಿಲ್​​ 20: ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ಮೋದಿ ಸ್ವಾಗತದ ವೇಳೆ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವ ಫೋಟೋವೊಂದು ಭಾರಿ ವೈರಲ್​​ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತಾ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ. ಅದು ಬಿಟ್ಟು ಬೇರೆ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ. ಮತ್ತಷ್ಟು…

Read More

ಹ್ಯಾಂಡ್​ಶೇಕ್ ಮಾಡ್ತೀರಾ?… “ನಾವಿಲ್ಲಿ ಬಂದಿರುವುದು ಕ್ರಿಕೆಟ್ ಆಡಲು ಮಾತ್ರ!” – Kannada News | IND vs PAK: Harmanpreet Blunts Pakistan Handshake Row

ಮಹಿಳಾ ಟಿ20 ವಿಶ್ವಕಪ್​ನ (Women’s T20 World Cup 2026) ಆರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ಇಂದು (ಜೂ.14) ನಡೆಯಲಿರುವ ಈ ಪಂದ್ಯದ ವೇಳೆ ಉಭಯ ತಂಡಗಳ ಆಟಗಾರ್ತಿಯರು ‘ಹ್ಯಾಂಡ್‌ಶೇಕ್’ ಮಾಡಲಿದ್ದಾರೆಯೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಯನ್ನು ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಅವರ ಮುಂದಿಡಲಾಗಿದೆ. ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿರುವ ಹರ್ಮನ್​ಪ್ರೀತ್ ಕೌರ್​ಗೆ, “ಭಾರತ ತಂಡವು ಪಾಕಿಸ್ತಾನ್ ಆಟಗಾರ್ತಿಯರೊಂದಿಗೆ ಪಂದ್ಯದ ಆರಂಭದಲ್ಲಿ ಮತ್ತು…

Read More

Bengaluru Air Quality: ಮುಂಗಾರು ಮಳೆಗೆ ಸುಧಾರಿಸಿದ ಗಾಳಿಯ ಗುಣಮಟ್ಟ, ಬೆಂಗಳೂರಿನಲ್ಲಿ ಮಾಲಿನ್ಯ ಇಳಿಕೆ! – Kannada News | Karnataka AQI Update June 29: Air Quality Improves Across Bengaluru and Major Cities

ಬೆಂಗಳೂರು, ಜೂನ್ 29: ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ಹೆಚ್ಚಾಗಿರುವುದರಿಂದ ಕರಾವಳಿ ಮತ್ತು ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಹಾಗೂ ಬಲವಾದ ಗಾಳಿಯ ಕಾರಣದಿಂದಾಗಿ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) ಉತ್ತಮ ಮಟ್ಟದಲ್ಲಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟವು ಅತ್ಯಂತ ತೃಪ್ತಿಕರವಾಗಿದೆ. ಇಂದಿನ ಅಧಿಕೃತ ದಾಖಲಾತಿಗಳ ಪ್ರಕಾರ, ಬೆಂಗಳೂರಿನ ಸರಾಸರಿ AQI 18…

Read More

ದರ್ಶನ್ ಇಲ್ಲದೆ ನೋವು ಅನುಭವಿಸುತ್ತಿರುವ ವಿಜಯಲಕ್ಷ್ಮೀ; ಒಡೆದ ಹೃದಯ ಪೋಸ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಕಾನೂನು ಹೋರಾಟದಲ್ಲಿ ನಟ ದರ್ಶನ್‌ಗೆ ಮತ್ತೊಮ್ಮೆ ಭಾರಿ ಹಿನ್ನೆಡೆಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿಯೂ ಜಾಮೀನು ಸಿಗದೇ ದರ್ಶನ್ ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿರುವುದು ಇಡೀ ಕುಟುಂಬಕ್ಕೆ ತೀವ್ರ ನಿರಾಸೆ ಮೂಡಿಸಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ಪತಿ ದರ್ಶನ್ ಅವರನ್ನು ನೆನೆದು ಪತ್ನಿ…

Read More

ವರುಣಾರ್ಭಟಕ್ಕೆ 6 ವರ್ಷದ ಕಂದಮ್ಮ ಬಲಿ: ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್ ಮರಗಳು, ವಿಮಾನ ಸಂಚಾರದಲ್ಲಿ ವ್ಯತ್ಯಯ – Kannada News | Bengaluru, Bidar Rain: 6 Year Old Child Killed in Roof Collapse, Trees Uprooted, and KIA Airport Terminal Flooded

ಬೆಂಗಳುರಿನಲ್ಲಿ ರಸ್ತೆಗೆ ಬೃಹತ್ ಮರ ಬಿದ್ದಿರುವುದುImage Credit source: tv9 ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಮುಂಗಾರು (Monsoon) ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ತತ್ತರಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದ್ದು, 6 ವರ್ಷದ ಕಂದಮ್ಮ ಪ್ರಾಣ ಕಳೆದುಕೊಂಡಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬೀಸಿದ ಗಾಳಿಗೆ ಬೃಹತ್ ಮರಗಳು ರಸ್ತೆಗಳ ಮೇಲೆ ಬಿದ್ದವು. ಸಂಜೆಯಾಗುತ್ತಿದ್ದಂತೆ…

Read More

‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ….

Read More