ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಶ್ವಿನಿ ವೈಷ್ಣವ್ – Kannada News | Bengaluru Mangaluru Vande Bharat, High Speed Rail and Electrification: Ashwini Vaishnaw’s Vision
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಮತ್ತು ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಮಂಗಳೂರು ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ರೈಲು (Bengaluru-Mangaluru Vande Bharat) ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ. ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಪ್ರೀಮಿಯಂ ರೈಲು ಕಾರ್ಯಾಚರಣೆ ಆರಂಭಿಸಲಿದ್ದು, ಪುಣೆ-ಬೆಂಗಳೂರು ರೈಲು ಕಾರಿಡಾರ್ನ ಕಾರ್ಯಯೋಜನೆಯನ್ನು ನಡೆಸಲಾಗಿದೆ ಎಂದು ಹೇಳಿದ್ದಾರೆ….