2 ಸರಣಿಗಳಿಂದ ಟೀಮ್ ಇಂಡಿಯಾ ಆಟಗಾರ ಔಟ್! – Kannada News | Nitish Kumar Reddy Ruled Out Of Ireland England Tour
ಟೀಮ್ ಇಂಡಿಯಾದ ಉದಯೋನ್ಮುಖ ಆಲ್-ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಳಿಂದ ಹೊರಬಿದ್ದಿದ್ದಾರೆ. ಎಡಗಾಲಿನ ಸ್ನಾಯು ಸೆಳೆತದ ಗಾಯದ ಸಮಸ್ಯೆಯ ಕಾರಣದಿಂದಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅಫ್ಘಾನಿಸ್ತಾನ್ ವಿರುದ್ಧದ ಸರಣಿಯ ವೇಳೆ ಅವರು ತೊಡೆಯ ನೋವಿನ ಸಮಸ್ಯೆ ಎದುರಿಸಿದ್ದರು. ಆ ಬಳಿಕ ಅವರ ಗಾಯದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ಈ ಸಮಸ್ಯೆಯ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿತೀಶ್ ಅವರ ಎಡಗಾಲಿನ ಸ್ನಾಯುವಿನಲ್ಲಿ ತೀವ್ರವಾದ ಊತ ಮತ್ತು ಹಾನಿಯಾಗಿರುವುದು ಎಂಆರ್‌ಐ…