ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು? – Kannada News | Raichur: Chaos during landing of CM Siddaramaiah helicopter; what exactly happened
ರಾಯಚೂರು, ಫೆಬ್ರವರಿ 08: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿಯಾಗಿದ್ದ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್ನಲ್ಲಿ ಲ್ಯಾಂಡಿಂಗ್ ಆಗುವ ಮೂಲಕ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಕುಟುಂಬದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ ಕಲಬುರಗಿ ರಸ್ತೆ ಹೆಲಿಪ್ಯಾಡ್ನಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಸದ್ಯ ಭದ್ರತಾ ವೈಫಲ್ಯದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ….