ಮೈಸೂರು ಪಾಲಿಕೆಯಿಂದಲೇ ಫುಟ್‌ಪಾತ್ ಒತ್ತುವರಿ! ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್
ಮೈಸೂರು, ಮಾರ್ಚ್ 18: ಮೈಸೂರು (Mysuru) ಅಂದರೆ ಅದು ಪಾರಂಪರಿಕ ಕಟ್ಟಡಗಳ ತವರು. ಇಲ್ಲಿನ ಪ್ರತಿ ರಸ್ತೆಯಿಗೂ ಒಂದು ಇತಿಹಾಸವಿದೆ. ಆದರೆ ಈಗ ಅದೇ ಇತಿಹಾಸಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ‘ಸ್ವದೇಶ್ ದರ್ಶನ 2.0’ ಯೋಜನೆಯಡಿ ನಗರದ 10 ಕಡೆ ಟಾಂಗಾ ಸ್ಟ್ಯಾಂಡ್ ನಿರ್ಮಿಸಲು ಪಾಲಿಕೆ ಮುಂದಾಗಿದೆ. ಆದರೆ ಈ ಯೋಜನೆ ಈಗ ವಿವಾದದ (Tonga stand controversy) ಕೇಂದ್ರಬಿಂದುವಾಗಿದೆ. ಅರಮನೆ ಮುಂಭಾಗದ ಚಾಮರಾಜೇಂದ್ರ ವೃತ್ತದ ಬಳಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಮಾರ್ಗವನ್ನು ಒಡೆದು, ಫುಟ್‌ಪಾತ್…