ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಿಂದ ಭಾರತದ ರೈತರು, ಎಂಎಸ್‌ಎಂಇಗಳಿಗೆ ತೊಂದರೆಯಾಗುವುದಿಲ್ಲ; ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ – Kannada News | India US Trade Deal will not Hurt Farmers and MSMEs Piyush Goyal clarifies
ನವದೆಹಲಿ, ಫೆಬ್ರವರಿ 7: ಭಾರತ ಮತ್ತು ಅಮೆರಿಕದ ನಡುವೆ ನಡೆದ ವ್ಯಾಪಾರ ಒಪ್ಪಂದದ (Trade Deal) ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ, ವಿಪಕ್ಷಗಳಿಂದ ಆಕ್ಷೇಪವೂ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದವನ್ನು ಶ್ಲಾಘಿಸಿದ್ದಾರೆ. ಈ ಒಪ್ಪಂದದ ವಿವರಗಳನ್ನು ಬಹಿರಂಗಪಡಿಸಿದ ಪಿಯೂಷ್ ಗೋಯಲ್, “ಅಮೆರಿಕ ಈಗ ರಫ್ತಿಗೆ ಹೆಚ್ಚು ಆದ್ಯತೆಯ ದೇಶವಾಗಿದೆ. ಭಾರತೀಯ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಶ್ವದ ಅತಿದೊಡ್ಡ…