ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ? – Kannada News | Did DK Shivakumar Drop a Big Hint After Rahul Gandhi Meeting? Cryptic Post Sparks Karnataka Political Buzz
ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ (DK Shivakumar) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ…