ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತವಾಗಿ 41 ಜನ ಮೃತಪಟ್ಟಿದ್ದ ಕರೂರ್ನಲ್ಲಿ ಗೆಲ್ಲೋದು ಯಾರು? – Kannada News | Who is winning in Karur Assembly the constituency 41 dead after Vijay rally stampede last year
ಕರೂರ್, ಮೇ 4: ತಮಿಳುನಾಡಿನ ಕರೂರ್ನಲ್ಲಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ (Vijay) ಚುನಾವಣಾ ಪ್ರಚಾರ ನಡೆಸುವಾಗ ನಿರೀಕ್ಷೆಗೂ ಮೀರಿದ ಜನರು ಸೇರಿದ್ದರು. ಇದರಿಂದ ಕಾಲ್ತುಳಿತ ಉಂಟಾಗಿ 41 ಜನರು ಪ್ರಾಣ ಕಳೆದುಕೊಂಡರು. ಕಳೆದ ವರ್ಷ ಈ ಘಟನೆ ನಡೆದಿತ್ತು. ವಿಜಯ್ ಅವರ ರ‍್ಯಾಲಿಯಿಂದ ಕಾಲ್ತುಳಿತ ಉಂಟಾಗಿದ್ದ ಕರೂರಿನಲ್ಲಿ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ಹಿನ್ನಡೆ ಸಾಧಿಸಿದೆ. ಈ ಕ್ಷೇತ್ರದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಹೊಸದಾಗಿ ರಾಜಕೀಯ ಪಕ್ಷವನ್ನು ಘೋಷಿಸಿದ್ದ…