Headlines

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!

ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ…

Read More

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು – Kannada News | Chennai Central Express Derailment Reported Near Odisha’s Jakhapura

ಜಾಜ್​ಪುರ, ಫೆಬ್ರವರಿ 05: ಒಡಿಶಾದ ಜಾಜ್​ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಚೆನ್ನೈ ಸೆಂಟ್ರಲ್ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದೆ. ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ರೈಲು ಭುವನೇಶ್ವರದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ಮಾಧ್ಯಮ ವರದಿಗಳ ಪ್ರಕಾರ, ಭದ್ರಕ್‌ನಿಂದ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಧಿಕಾರಿಗಳು  ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಬೋಗಿಗಳಿಗೂ ಅಷ್ಟಾಗಿ ಹಾನಿಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಘಟನೆಯ ನಂತರ ರೈಲು ಮಾರ್ಗದ ಹಾನಿಗೊಳಗಾದ ಭಾಗದಲ್ಲಿ ಮರುಸ್ಥಾಪನೆ ಕಾರ್ಯ ಪ್ರಾರಂಭವಾಯಿತು. ಏತನ್ಮಧ್ಯೆ,…

Read More

ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ…

Read More

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ. ಮುಖ್ಯಾಂಶಗಳು ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು…

Read More

ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ‘ಪೊಲೀಸ್ ಕಂಪ್ಲೈಂಟ್’ ಜೂನ್ 12ಕ್ಕೆ ಬಿಡುಗಡೆ – Kannada News

ಮಹಿಳಾ ಪ್ರಧಾನ ಕಥಾಹಂದರ ಇರುವ ಸಿನಿಮಾಗಳಿಗೆ ಅದರದ್ದೇ ಆದ ಪ್ರೇಕ್ಷಕರ ವರ್ಗವಿದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಅಂಥ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಮತ್ತು ವರಲಕ್ಷ್ಮೀ ಶರತ್ ಕುಮಾರ್ ಅಭಿನಯಿಸಿರುವ ಮಹಿಳಾ ಪ್ರಧಾನ ಸಿನಿಮಾ ‘ಪೊಲೀಸ್ ಕಂಪ್ಲೈಂಟ್’ ಬಿಡುಗಡೆಗೆ ಸಜ್ಜಾಗಿದೆ. ಜೂನ್ 12ರಂದು ಈ ಚಿತ್ರ ರಿಲೀಸ್ ಆಗಲಿದೆ. ನವೀನ್ ಚಂದ್ರ, ಕೃಷ್ಣ ಸಾಯಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್…

Read More

ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು – Kannada News | Pakistan Wedding Bombing: Khyber Pakhtunkhwa Suicide Attack Kills 7

ಪಾಕಿಸ್ತಾನ , ಜ.24: ಪಾಕಿಸ್ತಾನದ (Pakistan) ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಹತ್ತು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಪಾಕ್​​ನಲ್ಲಿ ನಡೆಯುತ್ತಿದ್ದ ಮದುವೆ ಮನೆಯಲ್ಲಿ ಬಾಂಬ್​​​​​​ ಸ್ಫೋಟಗೊಂಡಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕುರೇಶಿ ಮೋರ್ ಸಮೀಪವಿರುವ ಶಾಂತಿ ಸಮಿತಿ (Peace Committee) ನಾಯಕ ನೂರ್ ಆಲಂ ಮೆಹ್ಸೂದ್ ಅವರ ಮನೆಯಲ್ಲಿ ಈ ದಾಳಿ ನಡೆದಿದೆ. ಮದುವೆ ಸಮಾರಂಭದಲ್ಲಿದ್ದ ಮನೆಯವರಿಗೆ ಇದು…

Read More

ಇಂಧನ ಕಡಿಮೆ ಬಳಸಿ ಎನ್ನುತ್ತಿರೋದು ಮೋದಿ ಮಾತ್ರವಲ್ಲ, ವಿವಿಧ ದೇಶಗಳು ಜಾರಿಗೊಳಿಸಿರುವ ಸಂಗತಿಗಳೇ – Kannada News | Energy Saving Strategies: India & World’s Urgent Response to Global Fuel Crisis

ನವದೆಹಲಿ, ಮೇ 13: ಸದ್ಯದ ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂಧನ ಉಳಿತಾಯ ಮತ್ತು ಪ್ರಯಾಣದ ಮಿತಿಯ ಬಗ್ಗೆ ನೀಡಿದ ಕರೆ ವಿವಾದಾತ್ಮಕವಾಗಲಿ ಅಥವಾ ಅತಿಯಾದುದಾಗಲಿ ಅಲ್ಲ. ವಾಸ್ತವವಾಗಿ, ಇದು ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಅನುಸರಿಸುತ್ತಿರುವ ಅನಿವಾರ್ಯ ಕ್ರಮಗಳ ಭಾಗವಾಗಿದೆ. 2026ರ ತೈಲ ಬಿಕ್ಕಟ್ಟನ್ನು ಎದುರಿಸಲು ಇಂದು ವಿಶ್ವದ 40ಕ್ಕೂ ಹೆಚ್ಚು ದೇಶಗಳು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿವೆ. ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (IEA) ನೀಡಿರುವ ಅಂಕಿ-ಅಂಶಗಳ ಪ್ರಕಾರ,…

Read More

ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ – Kannada News | We have no objection to Women Reservation Bill: says CM Siddaramaiah

ಬೆಂಗಳೂರು, ಏಪ್ರಿಲ್​ 18: ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಸೋಲಾಗಿದೆ. ಸದ್ಯ ಇದೇ ವಿಚಾರ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಕಿತ್ತಾಟಕ್ಕೂ ಕಾರಣವಾಗಿದೆ. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿದ್ದು, ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ. 2023ರಲ್ಲೇ ಸಂಸತ್​ನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು, ಆದರೆ ಕೇಂದ್ರ ಸರ್ಕಾರ ಇದುವರೆಗೆ ಏಕೆ ಅನುಷ್ಠಾನಕ್ಕೆ ತಂದಿಲ್ಲ ಎಂದು ಪ್ರಶ್ನಿಸಿದರು. 3 ವಿಧೇಯಕ…

Read More

ಹಿಮಪಾತದಿಂದ ಉತ್ತರಾಖಂಡದ 77 ಗ್ರಾಮಗಳಿಗೆ ಸಂಕಷ್ಟ, ರಸ್ತೆಗಳು ಬಂದ್, ಪ್ರವಾಸಿಗರು ಕಂಗಾಲು – Kannada News | Snowfall in Uttarakhand 77 villages affected roads blocked in Chamoli

ಡೆಹ್ರಾಡೂನ್, ಜನವರಿ 29: ಉತ್ತರಾಖಂಡದಲ್ಲಿ ಹಿಮಪಾತದ (Snowfall) ಪರಿಣಾಮದಿಂದ ಅನೇಕ ಪ್ರವಾಸಿಗರು ಮಧ್ಯದಲ್ಲೇ ಸಿಲುಕಿಕೊಂಡಿದ್ದಾರೆ. ಚಮೋಲಿಯಲ್ಲಿ 77 ಗ್ರಾಮಗಳು ಹಿಮಪಾತದಿಂದ ತೊಂದರೆಗೆ ಸಿಲುಕಿವೆ, ರಸ್ತೆಗಳ ಸಂಪರ್ಕ ಸ್ಥಗಿತಗೊಂಡಿದೆ, ಪ್ರವಾಸಿಗರು ತಮ್ಮ ಊರನ್ನು ತಲುಪಿದರೆ ಸಾಕಪ್ಪ ಎಂದು ಚಡಪಡಿಸುತ್ತಿದ್ದಾರೆ. ಭಾರೀ ಹಿಮಪಾತವಾಗುತ್ತಿರುವುದರಿಂದ ಪ್ರವಾಸಿಗರು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚಿಸಿದೆ. ಕಳೆದ 4 ದಿನಗಳಿಂದ ಉತ್ತರಾಖಂಡದಲ್ಲಿ ಹವಾಮಾನ ಅಸ್ಥಿರವಾಗಿದ್ದು, ತಡರಾತ್ರಿಯ ಮಳೆ, ಆಲಿಕಲ್ಲು ಮಳೆ ಮತ್ತು ಭಾರೀ ಹಿಮಪಾತವು ಹಲವಾರು ಜಿಲ್ಲೆಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅವುಗಳಲ್ಲಿ ಚಮೋಲಿ ಅತ್ಯಂತ…

Read More

ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

ದೇವನಹಳ್ಳಿ, ಮಾರ್ಚ್​ 19: ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಿನಲ್ಲಿ ಬಂದ ಕೆಲ ಯುವಕರು ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡಿ ಅಟ್ಟಹಾಸ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಹೆದ್ದಾರಿಯ ಮಧ್ಯೆಯೇ ಗುಂಪು ಗುಂಪಾಗಿ ಬೈಕ್‌ಗಳನ್ನು ನಿಲ್ಲಿಸಿ ವ್ಹೀಲಿಂಗ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು, ವಾಹನಗಳ ಸಂಚಾರ ಮಧ್ಯೆಯೇ ಒಂದೇ ರಸ್ತೆಯಲ್ಲಿ ಎರಡೂ ಕಡೆಯಿಂದ ವ್ಹೀಲಿಂಗ್ ನಡೆಸಲಾಗಿದೆ. ಕೆಲವರು ಆಟೋ,…

Read More