ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ! ಶುರುವಾಯ್ತು ಚರ್ಚೆ – Kannada News | CM Siddaramaiah Refuses Fan’s Mantralayam Raghavendra Swamy Photo, Sparks Political Row, Watch Video
ಬೆಂಗಳೂರು, ಜನವರಿ 19: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ನೀಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ…