ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಪ್ರತ್ಯಕ್ಷ! – Kannada News | Drones sighted along LoC in Jammu and Kashmir again hours after Army Chief warning to Pakistan
ನವದೆಹಲಿ, ಜನವರಿ 13: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನದ ಡ್ರೋನ್‌ಗಳು (Drone) ಮತ್ತೆ ಕಾಣಿಸಿಕೊಂಡಿವೆ. ರಾಜೌರಿ ಸೆಕ್ಟರ್‌ನ ನಿಯಂತ್ರಣ ರೇಖೆಯ ಉದ್ದಕ್ಕೂ ಇಂದು ರಾತ್ರಿ ಅನುಮಾನಾಸ್ಪದ ಡ್ರೋನ್‌ಗಳು ಕಂಡುಬಂದ ನಂತರ ಭದ್ರತಾ ಪಡೆಗಳನ್ನು ಎಚ್ಚರಿಸಲಾಯಿತು. ಕೇವಲ 48 ಗಂಟೆಗಳಲ್ಲಿ ಎರಡನೇ ಬಾರಿಗೆ ಡ್ರೋನ್‌ಗಳು ಪತ್ತೆಯಾದ ನಂತರ ಭಾರತೀಯ ಸೇನೆಯು ಬಲವಾಗಿ ಅದಕ್ಕೆ ಪ್ರತಿದಾಳಿ ನಡೆಸಿತು. ಇದರಿಂದ ಗಡಿಯಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ವಹಿಸಲಾಗಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಗಡಿಯಾಚೆಗಿನ…