ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಚಿನ್ನದ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!
ಬಳ್ಳಾರಿ, ಏಪ್ರಿಲ್ 8: ಗಣಿನಾಡು ಬಳ್ಳಾರಿಯಲ್ಲಿ (Ballari) ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ (Lokayukta Raid) ಮುಂದುವರಿದಿದೆ. ಏಪ್ರಿಲ್ 7ರ ಮಂಗಳವಾರ ಬೆಳ್ಳಂಬೆಳಿಗ್ಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದಾರೆ. ಶಿವಣ್ಣ ಕಳೆದ ಹತ್ತು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಹತ್ತಕ್ಕೂ ಹೆಚ್ಚು ಭ್ರಷ್ಟಾಚಾರದ ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಬಳ್ಳಾರಿ…