‘ಆಲ್ಫಾ’ ಚಿತ್ರದ ಮೂಲಕ ಆ್ಯಕ್ಷನ್​​ಗೆ ಇಳಿದ ನಟಿ ಆಲಿಯಾ ಭಟ್; ಇಲ್ಲಿದೆ ಟೀಸರ್ – Kannada News

ನಟಿ ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆಗಿರಬಹುದು, ಆದರೆ, ತಮ್ಮನ್ನು ತಾವು ಸ್ಟಾರ್ ಕಿಡ್ ರೀತಿ ತೋರಿಸಿಕೊಂಡಿಲ್ಲ. ಅವರು ಕೇವಲ ಪಕ್ಕದ ಮನೆ ಹುಡುಗಿ ಪಾತ್ರ ಮಾಡದೆ, ಆ್ಯಕ್ಷನ್ ಸಿನಿಮಾಗಳ ಮೂಲಕವೂ ಮಿಂಚುತ್ತಾರೆ. ಸಾಕಷ್ಟು ಶ್ರಮ ಹಾಕಿ ಈ ಹಂತಕ್ಕೆ ಬಂದಿದ್ದಾರೆ. ಈಗ ಇದಕ್ಕೆ ಹೊಸ ಸೇರ್ಪಡೆ ‘ಆಲ್ಫಾ’. ಈ ಮಹಿಳಾ ಪ್ರಧಾನ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸ್ಪೈ ಯೂನಿವರ್ಸ್ ರಚನೆ ಮಾಡಿದೆ. ಇದರ ಅಡಿಯಲ್ಲಿ‘ವಾರ್ 2’ ಸಿನಿಮಾ ರಿಲೀಸ್ ಆಗಿತ್ತು. ಈ ಚಿತ್ರದ ಕ್ಲೈಮ್ಯಾಕ್ಸ್​​ನಲ್ಲಿ ‘ಆಲ್ಫಾ’ ಸಿನಿಮಾ ಬರಲಿದೆ ಎಂಬ ಸೂಚನೆ ನೀಡಲಾಗಿತ್ತು. ಈಗ ಟೀಸರ್ ಅನಾವರಣ ಮಾಡುವ ಮೂಲಕ ಆಲಿಯಾ ಭಟ್ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಲಾಗಿದೆ.

ಬಾಬಿ ಡಿಯೋಲ್ ಹಾಗೂ ಆಲಿಯಾ ಭಟ್ ತಂದೆ-ಮಗಳ ಪಾತ್ರ ಮಾಡಿದ್ದಾರೆ. ಆಲಿಯಾ 18ನೇ ವಯಸ್ಸಿಗೆ ಕಾಲಿಡುತ್ತಿದ್ದಂತೆ ಬಾಬಿ ಡಿಯೋಲ್ ಪಾರ್ಟಿ ನೀಡುತ್ತಾರೆ. ಇಷ್ಟು ವರ್ಷ ನಡೆಸಿದ ಸಿದ್ಧತೆಯ ಕಾರಣ ಏನು ಎಂಬುದು ಅಲ್ಲಿ ರಿವೀಲ್ ಆಗುತ್ತದೆ. ಮಿಷನ್ ಒಂದಕ್ಕಾಗಿ ಆಲಿಯಾ ಅವರನ್ನ ಬಾಬಿ ಈ ರೀತಿ ಸಿದ್ಧ ಮಾಡಿರುತ್ತಾರೆ.

‘ಈ ಜಗತ್ತಲ್ಲಿ ಕುರಿ ಹಾಗೂ ನರಿ ಎರಡೇ ರೀತಿಯ ಜನ ಇರುತ್ತಾರೆ. ನಾನು ನರಿ. ನಿನ್ನದು ಯಾವ ವರ್ಗ’ ಎಂದು ಆಲಿಯಾಗೆ ಬಾಬಿ ಕೇಳುತ್ತಾರೆ. ಇದಕ್ಕೆ ನೇರವಾಗಿ ಉತ್ತರಿಸೋ ಆಲಿಯಾ, ‘ನರಿಯ ಮಗಳು ನರಿಯೇ ಆಗಿರುತ್ತಾಳೆ’ ಎನ್ನುತ್ತಾರೆ.

ಇದನ್ನೂ ಓದಿ: ‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ

ಟೀಸರ್ ಉದ್ದಕ್ಕೂ ಆಲಿಯಾ ಆ್ಯಕ್ಷನ್ ಮೆರೆದಿದ್ದಾರೆ. ಆಲ್ಫಾ ಅನ್ನೋದು ಸೀಕ್ರೇಟ್ ಮಿಷನ್ ಎಂಬ ರೀತಿಯಲ್ಲಿ ಟೀಸರ್ ತೋರಿಸಲಾಗಿದೆ. ವಿಶೇಷ ಎಂದರೆ ಜುಲೈ 3ರಂದು ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಶಿವ್ ರವೈಲ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ – Kannada News

ಉಂಡ ಮನೆಗೇ ಕನ್ನ ಹಾಕಿದ್ದ ದಂಪತಿ ಬಂಧನImage Credit source: The Times Of India

ಬೆಂಗಳೂರು, ಜೂನ್​​ 10: ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದ ಮನೆಗೇ ಕನ್ನ ಹಾಕಿದ್ದ ನೇಪಾಳಿ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬಂಧಿತರನ್ನು ಭುವನ್ ಬಿಸ್ತಾ ಅಲಿಯಾಸ್ ಪವನ್ ಬಿಸ್ತಾ (35) ಹಾಗೂ ಅವರ ಪತ್ನಿ ಸೀತಾ ಬಿಸ್ತಾ (33) ಎಂದು ಗುರುತಿಸಲಾಗಿದೆ. ಗುತ್ತಿಗೆದಾರರೊಬ್ಬರ ಮನೆಯಲ್ಲಿ ಗೃಹ ಸಹಾಯಕರು ಹಾಗೂ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಈ ದಂಪತಿ 25 ಲಕ್ಷ ನಗದು ಕದ್ದು ಪರಾರಿಯಾಗಿದ್ದರು. ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೇವಲ ಒಂದೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದು, ಕಳುವಾಗಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಹಣ ಕದ್ದು ಎಸ್ಕೇಪ್​​ ಆಗಿದ್ದ ಆರೋಪಿಗಳು

ಅರ್ಕಾವತಿ ಲೇಔಟ್ ನಿವಾಸಿ ಹಾಗೂ ಗುತ್ತಿಗೆದಾರ ಸಿ.ಎಚ್. ಸುಬ್ಬಾರೆಡ್ಡಿ ಅವರು ಕಾರ್ಮಿಕರಿಗೆ ವೇತನ ಪಾವತಿಸಲು ಇತ್ತೀಚೆಗೆ ಬ್ಯಾಂಕಿನಿಂದ ತಂದ 25 ಲಕ್ಷ ಹಣವನ್ನು ಮನೆಯ ಕಪಾಟಿನಲ್ಲಿ ಇಟ್ಟು ಬೀಗ ಹಾಕಿದ್ದರು. ಬಳಿಕ ಕಪಾಟಿನ ಕೀಲಿಯನ್ನು ಮತ್ತೊಂದು ಕಪಾಟಿನಲ್ಲಿದ್ದ ಬಟ್ಟೆಗಳ ಕೆಳಗೆ ಅಡಗಿಸಿಟ್ಟಿದ್ದರು. ಈ ನಡುವೆ ಮೇ 27ರಂದು ಸುಬ್ಬಾರೆಡ್ಡಿ ಅವರು ವೈಯಕ್ತಿಕ ಕೆಲಸಕ್ಕಾಗಿ ಹೊರಗೆ ಹೋಗಿದ್ದರೆ, ಅವರ ಪತ್ನಿ ಮನೆಯಲ್ಲಿದ್ದರು. ಸಂಜೆ ಮನೆಗೆ ಮರಳಿದಾಗ ಕೆಲಸಕ್ಕಿದ್ದ ದಂಪತಿ ಕಾಣೆಯಾಗಿದ್ದು, ಅವರಿಗೆ ನೀಡಲಾಗಿದ್ದ ಕೊಠಡಿ ತೆರೆದ ಸ್ಥಿತಿಯಲ್ಲಿರುವುದು ಗಮನಕ್ಕೆ ಬಂದಿತ್ತು. ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿದ್ದವು. ಇದರಿಂದ ಅನುಮಾನಗೊಂಡ ಅವರು ಕಪಾಟು ಪರಿಶೀಲಿಸಿದಾಗ 25 ಲಕ್ಷ ನಗದು ಕಳುವಾಗಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಕಸ್ಟಮ್ಸ್​​ ಅಧಿಕಾರಿಗಳ ಭರ್ಜರಿ ಬೇಟೆ; ಬೆಂಗಳೂರು ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ

ಈ ಸಂಬಂಧ ಮೇ 28ರಂದು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದ ಸಿ.ಎಚ್. ಸುಬ್ಬಾರೆಡ್ಡಿ ಅವರು, ಕಳೆದ ಒಂದು ತಿಂಗಳಿಂದ ನೇಪಾಳ ಮೂಲದ ದಂಪತಿ ತಮ್ಮ ಮನೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಗೃಹ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು ಎಂಬುದನ್ನು ಉಲ್ಲೇಖಿಸಿದ್ದರು. ಕೂಡಲೇ ಪ್ರಕರಣ ದಾಖಲಿಸಿಕೊಂಡ ಅಮೃತಹಳ್ಳಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇನ್ಸ್‌ಪೆಕ್ಟರ್ ಬಾಲಾಜಿ ವಿ ನೇತೃತ್ವದ ತಂಡಕ್ಕೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮೇ 28ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಶಿರ್ಕೆ ಲೇಔಟ್‌ನಲ್ಲಿರುವ ಆರೋಪಿಗಳ ಸಂಬಂಧಿಕರ ಮನೆಯಲ್ಲಿ ದಾಳಿ ನಡೆಸಿ ದಂಪತಿಯನ್ನು ಬಂಧಿಸಲಾಗಿದೆ. ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಕಳ್ಳತನ ಎಸಗಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ದಂಪತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:41 pm, Wed, 10 June 26

Source link

Video: ಇದು ದೇಸಿ ಕ್ರೀಡೆಯ ಕರಾಮತ್ತು; ಸೀರೆಯುಟ್ಟ ನಾರಿಮಣಿಗಳ ಕಬಡ್ಡಿ ಆಟ ಹೇಗಿದೆ ನೋಡಿ – Kannada News

ಹಳ್ಳಿ ಬದುಕು (Village life) ನಿಜಕ್ಕೂ ಸುಂದರ. ನೆಮ್ಮದಿಯ ನಿದ್ರೆಗಾಗಿ ಒಂದು ಪುಟ್ಟ ಮನೆ. ಬದುಕಿಗಾಗಿ ಕೃಷಿ ಕಾಯಕ. ಬೀಜ ಬಿತ್ತಿ ಪೈರು ಬರುತ್ತಿದ್ದಂತೆ, ಕಟಾವು, ಹೀಗೆ ಬಿಡುವಿಲ್ಲದ ಕೃಷಿ ಕೆಲಸಗಳು. ವಿರಾಮದ ಸಮಯದಲ್ಲಿ ಊರ ಮಂದಿ ಜತೆಗೆ ಹರಟೆ, ಹೀಗೆ ಹಳ್ಳಿ ಜನರು ಪ್ರತಿಯೊಂದು ಕ್ಷಣವನ್ನು ಆನಂದಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಇದೀಗ ಕೆಲಸದ ಒತ್ತಡವನ್ನು ಬದಿಗಿರಿಸಿ ಕಬಡ್ಡಿ (kabaddi) ಆಡೋದ್ರಲ್ಲಿ ಬ್ಯುಸಿಯಾಗಿರುವ ಹಳ್ಳಿಯ ಮಹಿಳಾಮಣಿಗಳ ವಿಡಿಯೋ ವೈರಲ್ ಆಗಿದೆ. ದೇಸಿ ಕ್ರೀಡೆಯನ್ನು ಎಂಜಾಯ್ ಮಾಡುತ್ತಿರುವ ಮಹಿಳಾಮಣಿಗಳಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲೋಕ ಪಯಣ (loka payana) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಳ್ಳಿ ಬದುಕಿನ ಖುಷಿಯ ಕ್ಷಣವನ್ನು ತೆರೆದಿಟ್ಟಿದ್ದಾರೆ. ಹಳ್ಳಿಯ ನಾರಿಮಣಿಗಳು ತಮ್ಮ ಕೆಲಸದ ಒತ್ತಡಕ್ಕೆ ಬ್ರೇಕ್ ಹಾಕಿ ಕಬಡ್ಡಿ ಆಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಒಬ್ಬರಿಗೊಬ್ಬರು ಪೈಪೋಟಿ ನೀಡುವಂತೆ ಆಟವನ್ನು ಆಡುತ್ತಿರುವ ದೃಶ್ಯವನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್‌

ಈ ವಿಡಿಯೋ ಅರವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಮ್ಮ ಹಳ್ಳಿಯ ಸೂಪರ್ ಪ್ರತಿಭೆಗಳು ಇವರು ಎಂದಿದ್ದಾರೆ. ಇನ್ನೊಬ್ಬರು, ಇವರಲ್ಲಿರೊ ನೆಮ್ಮದಿ ಸಂತೋಷ ಎಷ್ಟು ಶ್ರೀಮಂತನಿಗೂ ಸಿಗಲ್ಲ ಹಣ ಆಸ್ತಿ ಇದ್ದರೆ ಏನು ಮನಸಿಗೆ ನೆಮ್ಮದಿ ಸಂತೋಷ ಮುಖ್ಯ ಈ ವಿಡಿಯೋ ನನಗೆ ತುಂಬಾ ಇಷ್ಟ ಆಯ್ತು ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರ, ನಾವೇನು ಯಾರಿಗೂ ಕಮ್ಮಿ ಇಲ್ಲ, ಸ್ಫೂರ್ತಿದಾಯಕ ವಿಡಿಯೋ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Shigella Infection: ಏನಿದು ಶಿಗೆಲ್ಲೋಸಿಸ್ ಸೋಂಕು? ಕೇರಳದಲ್ಲಿ ಹೊಸ ವೈರಲ್ ಸೋಂಕಿಗೆ ಜನ ಹೆದರುತ್ತಿರುವುದಕ್ಕೆ ಕಾರಣವೇನು? – Kannada News

ಕೇರಳದಲ್ಲಿ ಶಿಗೆಲ್ಲೋಸಿಸ್ (Shigellosis) ಎಂಬ ಅತಿಸಾರ ಸಂಬಂಧಿತ ಬ್ಯಾಕ್ಟೀರಿಯಾ ಸೋಂಕಿನ ಪ್ರಕರಣಗಳ ಜೊತೆಗೆ ವೆಸ್ಟ್ ನೈಲ್ ಜ್ವರ ಕೂಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದೆ. ಈ ಎರಡೂ ಕಾಯಿಲೆಗಳಿಗೆ ಪರಸ್ಪರ ಸಂಬಂಧವಿಲ್ಲವಾದರೂ ಜನರು ಜಾಗರೂಕರಾಗಿರಬೇಕು ಎಂದು ತಜ್ಞರು ಹೇಳಿದ್ದಾರೆ. ಅದರಲ್ಲಿಯೂ ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕು ಅತ್ಯಂತ ವೇಗವಾಗಿ ಹರಡುವ ಗುಣ ಹೊಂದಿದ್ದು ಕಲುಷಿತ ಆಹಾರ, ನೀರು ಹಾಗೂ ಅಸ್ವಚ್ಛತೆಯ ಮೂಲಕ ಸೋಂಕು ಹರಡಬಹುದಾಗಿದೆ. ಹಾಗಾಗಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ. ದಿ ಹಿಂದೂ ವರದಿ ಮಾಡಿರುವ ಪ್ರಕಾರ ಕೇರಳದಲ್ಲಿ ಜೂನ್ 7ರ ವರೆಗೆ 85 ಶಿಗೆಲ್ಲೋಸಿಸ್ ಪ್ರಕರಣಗಳು ದೃಢಪಟ್ಟಿದ್ದು 70ಕ್ಕೂ ಹೆಚ್ಚು ಶಂಕಿತ ಪ್ರಕರಣಗಳು ದಾಖಲಾಗಿವೆ. ವಯನಾಡು ಕೋಝಿಕ್ಕೋಡ್ ಅಲಪ್ಪುಝಾ, ಮಲಪ್ಪುರಂ ಜಿಲ್ಲೆಗಳಲ್ಲಿ ಸೋಂಕು ಹೆಚ್ಚು ಕಂಡುಬರುತ್ತಿದೆ. ವಯನಾಡಿನ ಮಾರ್ಬಾಸೆಲಿಯೋಸ್ ಶಾಲೆಯಲ್ಲಿ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಇನ್ನೂ ಕೆಲವರಿಗೆ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.

ಮಕ್ಕಳಿಗೆ ಹೆಚ್ಚಿನ ಅಪಾಯ:

ಆರೋಗ್ಯಕರ ವಯಸ್ಕರಲ್ಲಿ ಈ ಸೋಂಕು ಸಾಮಾನ್ಯವಾಗಿ ಸ್ವಯಂ ನಿಯಂತ್ರಿತವಾಗಿದ್ದರೂ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇದು ಅಪಾಯಕಾರಿಯಾಗಬಹುದು. ವೃದ್ಧರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಹೆಚ್ಚಿನ ಅಪಾಯವಿದೆ. ಈ ವರ್ಷ ಈಗಾಗಲೇ ಇಬ್ಬರು ಮಕ್ಕಳ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಶಿಗೆಲ್ಲೋಸಿಸ್ ಲಕ್ಷಣಗಳು ಯಾವುವು?

ಸೋಂಕು ತಗುಲಿದ ಒಂದು ಅಥವಾ ಎರಡು ದಿನಗಳೊಳಗೆ ಲಕ್ಷಣಗಳು ಕಾಣಿಸಬಹುದು. ಮುಖ್ಯ ಲಕ್ಷಣಗಳು:

  • ಜ್ವರ
  • ಅತಿಸಾರ
  • ವಾಂತಿ
  • ವಾಕರಿಕೆ
  • ಮಲದಲ್ಲಿ ರಕ್ತ
  • ಹೊಟ್ಟೆನೋವು
  • ಪದೇ ಪದೇ ಶೌಚಕ್ಕೆ ಹೋಗಬೇಕು ಎನಿಸುವುದು

ತಡೆಗಟ್ಟಲು ಏನು ಮಾಡಬೇಕು?

ಆರೋಗ್ಯ ಇಲಾಖೆ ಕೈಗಳನ್ನು ಸಾಬೂನಿನಿಂದ ಕನಿಷ್ಠ 20 ಸೆಕೆಂಡುಗಳ ಕಾಲ ತೊಳೆಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದೆ. ವಿಶೇಷವಾಗಿ ಊಟ ಮಾಡುವ ಮೊದಲು ಹಾಗೂ ಶೌಚಾಲಯ ಬಳಕೆ ನಂತರ ಸ್ವಚ್ಛತೆ ಕಾಪಾಡಬೇಕು. ಸೋಂಕಿತ ವ್ಯಕ್ತಿಗಳ ಬಟ್ಟೆ, ಪಾತ್ರೆ ಮತ್ತು ಹಾಸಿಗೆಗಳನ್ನು ಪ್ರತ್ಯೇಕವಾಗಿ ಬಳಸಬೇಕು. ಲಕ್ಷಣಗಳು ಕಡಿಮೆಯಾದ ಬಳಿಕವೂ ಕನಿಷ್ಠ ಎರಡು ವಾರಗಳ ಕಾಲ ಸಾರ್ವಜನಿಕ ಆಹಾರ ವಿತರಣೆ ಅಥವಾ ಹೋಟೆಲ್ ಆಹಾರವನ್ನು ತಪ್ಪಿಸುವುದು ಒಳಿತು. ಕುಡಿಯುವ ನೀರನ್ನು ಕಡ್ಡಾಯವಾಗಿ ಕುದಿಸಿ ಬಳಸಬೇಕು. ಬೇಯಿಸದ ಆಹಾರ ಮತ್ತು ನಿನ್ನೆ, ಮೊನ್ನೆ ಮಾಡಿಟ್ಟ ಆಹಾರ ಸೇವನೆ ಮಾಡುವುದನ್ನು ತಪ್ಪಿಸಬೇಕು, ಮನೆಯಲ್ಲೇ ತಯಾರಿಸಿದ ಆಹಾರ ಸೇವಿಸುವುದು ಉತ್ತಮ. ಮಳೆಗಾಲದಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆಯಲ್ಲೇ ಪ್ಯಾಕಿಂಗ್ ಕೆಲಸ ಅಂತ ನಂಬಿಸಿ 10 ಕೋಟಿ ರೂ. ಎಗರಿಸಿದ್ರು: ಹಾವೇರಿಯ ‘SLV ಮಹಿಳಾ ಮಾರ್ಟ್’ ಮಾಲೀಕರ ಮಹಾಮೋಸ – Kannada News

ಹಾವೇರಿ, ಜೂ.10: “ಮನೆಯಲ್ಲೇ ಕುಳಿತು ಕೈತುಂಬಾ ಸಂಪಾದಿಸಿ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಆಘಾತಕಾರಿ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿರುವ ‘SLV ಮಹಿಳಾ ಮಾರ್ಟ್’ ಎಂಬ ಹೆಸರಿನ ಕಂಪನಿಯು ಸ್ವಯಂ ಉದ್ಯೋಗ ನೀಡುವ ಆಸೆ ತೋರಿಸಿ, ರಾಜ್ಯದ ಮೂಲೆ ಮೂಲೆಗಳಿಂದ ಬಂದ ಜನರಿಂದ ಬರೋಬ್ಬರಿ 5 ರಿಂದ 10 ಕೋಟಿ ರೂಪಾಯಿ ಹಣವನ್ನು ದೋಚಿ ರಾತ್ರೋರಾತ್ರಿ ಪರಾರಿಯಾಗಿದೆ.

ವಿನಾಯಕ ಆನ್ವೇರಿ ಹಾಗೂ ರಮ್ಯ ಎಂಬುವವರು ಈ SLV ಮಹಿಳಾ ಮಾರ್ಟ್ ಕಂಪನಿಯ ಮಾಲೀಕರಾಗಿದ್ದು, “ಮನೆಯಲ್ಲೇ ಕುಳಿತು ಅಗರಬತ್ತಿ, ಕಸಬರಗಿ (ರೊಟ್ಟಿ ಕಸಬರಗಿ) ಹಾಗೂ ಮೇಣದಬತ್ತಿಗಳನ್ನು ಪ್ಯಾಕ್ ಮಾಡುವ ಗೃಹ ಕೆಲಸ ನೀಡುತ್ತೇವೆ. ಇದಕ್ಕೆ ಲಕ್ಷ ಲಕ್ಷ ಬಂಡವಾಳ ಹೂಡಿಕೆ ಮಾಡಬೇಕು” ಎಂದು ಈ ವಂಚಕರು ನಂಬಿಸಿದ್ದರು. ಆರಂಭದ ಒಂದೆರಡು ತಿಂಗಳು ಹೂಡಿಕೆ ಮಾಡಿದವರಿಗೆ ಸರಿಯಾಗಿ ಹಣ ಹಾಗೂ ಕಮಿಷನ್ ನೀಡುವ ನಾಟಕವಾಡಿ ಸಾರ್ವಜನಿಕರಲ್ಲಿ ನಂಬಿಕೆ ಹುಟ್ಟಿಸಿದ್ದರು.

ಕಂಪನಿಯ ನಂಬಿಕೆ ಹೆಚ್ಚಾಗುತ್ತಿದ್ದಂತೆ ಹಾವೇರಿ ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ನೂರಾರು ಮಹಿಳೆಯರು ಲಕ್ಷಾಂತರ ರೂಪಾಯಿ ಹಣವನ್ನು ತಂದು ಹೂಡಿಕೆ ಮಾಡಿದ್ದಾರೆ. ಹೀಗೆ ಒಟ್ಟಾರೆ ಅಂದಾಜು 5 ರಿಂದ 10 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹವಾಗುತ್ತಿದ್ದಂತೆಯೇ ಮಾಲೀಕರಾದ ವಿನಾಯಕ ಮತ್ತು ರಮ್ಯ ಕಂಪನಿಗೆ ಬೀಗ ಜಡಿದು ರಾತ್ರೋರಾತ್ರಿ ನಾಪತ್ತೆಯಾಗಿದ್ದಾರೆ. ಇತ್ತ ತಾವು ಕಷ್ಟಪಟ್ಟು ಹೂಡಿಕೆ ಮಾಡಿದ ಅಸಲು ಹಣವೂ ಸಿಗದೆ, ಇತ್ತ ಕೆಲಸ ಮಾಡಿದ ಕೂಲಿಯೂ ಸಿಗದೆ ನೂರಾರು ಮಹಿಳೆಯರು ಬೀದಿಗೆ ಬಿದ್ದಿದ್ದಾರೆ.

ಇದನ್ನೂ ಓದಿ: ಐಶಾರಾಮಿ ಜೀವನಕ್ಕಾಗಿ ಉಂಡ ಮನೆಗೇ ಕನ್ನ: 25 ಲಕ್ಷ ಹಣ ಕದ್ದು ಜೈಲುಪಾಲಾದ ನೇಪಾಳಿ ದಂಪತಿ

ಹಣ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ನೂರಾರು ಮಹಿಳೆಯರು ಹಾವೇರಿ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ವಂಚಕ ಕಂಪನಿ ಹಾಗೂ ಅದರ ಮಾಲೀಕರ ವಿರುದ್ಧ ಅಧಿಕೃತ ದೂರು ದಾಖಲಿಸಿದ್ದಾರೆ. ಕಣ್ಣೀರು ಹಾಕುತ್ತಲೇ SLV ಮಹಿಳಾ ಮಾರ್ಟ್ ಕಂಪನಿಗೆ ಹಿಡಿಶಾಪ ಹಾಕುತ್ತಿರುವ ನೊಂದ ಮಹಿಳೆಯರು, “ನಮ್ಮ ಜೀವಮಾನದ ಉಳಿತಾಯದ ಹಣವನ್ನು ನಂಬಿಸಿ ದೋಚಿದ್ದಾರೆ. ಪೊಲೀಸರು ತಕ್ಷಣವೇ ಆ ಮೋಸಗಾರರನ್ನು ಬಂಧಿಸಿ ನಮಗೆ ನ್ಯಾಯ ಒದಗಿಸಬೇಕು ಮತ್ತು ನಮ್ಮ ಹಣವನ್ನು ವಾಪಸ್ ಕೊಡಿಸಬೇಕು” ಎಂದು ಒತ್ತಾಯಿಸಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತಂಡ ರಚಿಸಿದ್ದಾರೆ.

ವರದಿ: ಅಣ್ಣಪ್ಪ ಬರ್ಕಿ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:54 pm, Wed, 10 June 26

Source link

ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ – Kannada News

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದ ಬಳಿಕ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಒಳಗಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಸಾಲು ಸಾಲು ಸಂಸದರು, ಶಾಸಕರು ಟಿಎಂಸಿಗೆ ರಾಜೀನಾಮೆ ನೀಡುತ್ತಿದ್ದಾರೆ. ಇದು 15 ವರ್ಷಗಳ ಕಾಲ ಬಂಗಾಳವನ್ನು ಆಳಿದ ಮಮತಾ ಬ್ಯಾನರ್ಜಿಗೆ (Mamata Banerjee) ದೊಡ್ಡ ಹೊಡೆತ ನೀಡಿದೆ. ಇದೀಗ ಟಿಎಂಸಿಯ ಆಂತರಿಕ ಬಂಡಾಯದ ನಡುವೆಯೇ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್ ಇಂದು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಪತ್ರದ ಮೂಲಕ ಸುಶ್ಮಿತಾ ದೇವ್ ರಾಜೀನಾಮೆ ಸಲ್ಲಿಸಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಅವರ ರಾಜಕೀಯ ಭವಿಷ್ಯದ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸುಶ್ಮಿತಾ ದೇವ್ ದೆಹಲಿಯ ನಿವಾಸದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರೊಂದಿಗೆ ಮುಗುಳ್ನಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ರೆಕ್ಕೆಪುಕ್ಕ ಬಂದಿದೆ.

ಇದನ್ನೂ ಓದಿ: ಟಿಎಂಸಿಯಲ್ಲೇ ಇದ್ದಿದ್ದರೆ ನನ್ನ ಕೊಲ್ಲುತ್ತಿದ್ದರು; ಮಮತಾ ಬ್ಯಾನರ್ಜಿ ವಿರುದ್ಧ ಸುಖೇಂದು ಶೇಖರ್ ರಾಯ್ ಗಂಭೀರ ಆರೋಪ

“ನಾನು ಟಿಎಂಸಿ ರಾಜ್ಯಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ದಯವಿಟ್ಟು ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಬೇಕು. ರಾಜ್ಯಸಭಾ ಸದಸ್ಯೆಯಾಗಿ ನನ್ನ ಅಧಿಕಾರಾವಧಿಯಲ್ಲಿ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರವನ್ನು ನೀಡಿದ ಉಪರಾಷ್ಟ್ರಪತಿಗಳು, ಗೌರವಾನ್ವಿತ ಉಪಸಭಾಪತಿಗಳು ಮತ್ತು ರಾಜ್ಯಸಭಾ ಸಚಿವಾಲಯದ ಎಲ್ಲಾ ಪದಾಧಿಕಾರಿಗಳಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ಸುಶ್ಮಿತಾ ದೇವ್ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರೊಂದಿಗಿನ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಶ್ಮಿತಾ ದೇವ್, ರಾಜೀನಾಮೆ ನೀಡುವ ನಿರ್ಧಾರ ಸಂಪೂರ್ಣವಾಗಿ ನನ್ನದೇ ಆಗಿದ್ದು, ಇದಕ್ಕೆ ಯಾರ ಪ್ರಭಾವವೂ ಇಲ್ಲ ಎಂದು ತಿಳಿಸಿದ್ದಾರೆ. ತಮ್ಮ ಈ ಹೆಜ್ಜೆಯ ಹಿಂದೆ ಹಲವು ಕಾರಣಗಳಿವೆಯಾದರೂ, ಅವುಗಳನ್ನೆಲ್ಲಾ ಸಾರ್ವಜನಿಕವಾಗಿ ಬಹಿರಂಗಪಡಿಸುವ ಅಗತ್ಯವಿಲ್ಲ. ಅದೊಂದು ದೊಡ್ಡ ಕತೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ಈ ರಾಜೀನಾಮೆಯು ತೃಣಮೂಲ ಕಾಂಗ್ರೆಸ್‌ಗೆ ಒಂದೇ ವಾರದಲ್ಲಿ ಎದುರಾಗಿರುವ ಎರಡನೇ ರಾಜ್ಯಸಭಾ ಹಿನ್ನಡೆಯಾಗಿದೆ. ಕಳೆದ 13 ವರ್ಷಗಳಿಂದ ಮೇಲ್ಮನೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಖೇಂದು ಶೇಖರ್ ರಾಯ್ ಅವರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಪತ್ರ ಬರೆದು ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಸುಶ್ಮಿತಾ ದೇವ್ ಕೂಡ ರಾಜೀನಾಮೆ ನೀಡಿದ್ದಾರೆ. ಇದು ಪಕ್ಷಕ್ಕೆ ದೊಡ್ಡ ಆಘಾತವಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಭುಗಿಲೆದ್ದ ಬಂಡಾಯದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ವಿಧಾನಸಭೆಯಲ್ಲಿ ಟಿಎಂಸಿಯ 58 ಶಾಸಕರು ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಬೆಂಬಲಿಸಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂನ ಸಿಲ್ಚಾರ್ ಲೋಕಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಸಂಸದರಾಗಿದ್ದ ಸುಶ್ಮಿತಾ ದೇವ್ ಅವರು, 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ನಂತರ 2021ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಸೇವೆ ಸಲ್ಲಿಸುತ್ತಾ, ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ICC Test Rankings: ಟಾಪ್ 10 ರೊಳಗೆ ಇಬ್ಬರು ಭಾರತೀಯರು; ಅಗ್ರಸ್ಥಾನದಲ್ಲಿ ಉಳಿದ ಬುಮ್ರಾ

Source link

ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ, ವಿಡಿಯೋ ವೈರಲ್

ಕಲಬುರಗಿ, (ಜೂನ್ 10): ಗ್ರಾಮೀಣ ಭಾಗದ ಬಡ ಮಕ್ಕಳಿಗಾಗಿ ಅನೂಕೂಲವಾಗಲೆಂದು ಸರ್ಕಾರಗಳು ವಸತಿ ನಿಲಯಗಳನ್ನು (ಹಾಸ್ಟೆಲ್​) ನಿರ್ಮಿಸುತ್ತಿವೆ. ಆದ್ರೆ, ಕಲಬುರಗಿಯಲ್ಲಿ (Kalaburagi) ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಂದಾಸ್ ಆಗಿ ಮಧ್ಯ ಸೇವೆನೆ ಮಾಡಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. ಹೌದು… ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ. ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವೈರಲ್ ಬೆನ್ನಲ್ಲೇ ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ ಮುಚ್ಚಿಹಾಕಲು ಹಣ ವಸೂಲಿಳಿದಿದ್ದಾರೆ. ಅಲ್ಲದೇ ಮೂರ್ನಾಲ್ಕು ವಾರ್ಡನ್​​ಗಳು ವಿದ್ಯಾರ್ಥಿನಿಯರನ್ನು ದುರ್ಬಳಿಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಸಹ ಕೇಳಿಬಂದಿದೆ. ಇನ್ನು ವಾರ್ಡನ್ ಹಾಗೂ ವಿದ್ಯಾರ್ಥಿನಿಯ ಆಡಿಯೋ ಕೂಡಾ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟಿಸಿಎಸ್​ನಲ್ಲಿ 3 ವರ್ಷದಲ್ಲಿ ಎಐ ಏಜೆಂಟ್​ಗಳು ಉದ್ಯೋಗಿಗಳ ಸಮಕ್ಕೆ ಬರಲಿವೆಯಂತೆ – Kannada News

ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್Image Credit source: Tata Group

ನವದೆಹಲಿ, ಜೂನ್ 10: ಭಾರತದ ಐಟಿ ಕಂಪನಿಗಳು ಎಐ ಅಬ್ಬರಕ್ಕೆ ಬೇಗ ಹೊಂದಿಕೊಳ್ಳುತ್ತಿರುವಂತಿವೆ. ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನಲ್ಲಿ (TCS- Tata Consultancy Services) ಮುಂದಿನ ವರ್ಷದಲ್ಲಿ ಇರುವ ಒಟ್ಟು ಉದ್ಯೋಗಿಗಳ ಸಂಖ್ಯೆಗೆ ಸಮವಾಗಿ ಎಐ ಏಜೆಂಟ್​ಗಳ ಸಂಖ್ಯೆ ಇರುತ್ತದಂತೆ. ಹಾಗಂತ, ಸಂಸ್ಥೆಯ ಛೇರ್ಮನ್ ಅವರೇ ಖುದ್ದಾಗಿ ಈ ಮಾಹಿತಿ ನೀಡಿದ್ದಾರೆ. ಟಿಸಿಎಸ್​ನ ವಾರ್ಷಿಕ ಮಹಾಸಭೆಯಲ್ಲಿ (AGM) ಚೇರ್ಮನ್ ಎನ್. ಚಂದ್ರಶೇಖರನ್ ಅವರು ಎಐ ಏಜೆಂಟ್​ಗಳ ನಿಯುಕ್ತಿ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಸದ್ಯ ಟಿಸಿಎಸ್‌ನಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಮುಂದಿನ 3 ವರ್ಷಗಳಲ್ಲಿ ಕಂಪನಿಯು ಅಷ್ಟೇ ಸಂಖ್ಯೆಯ, ಅಂದರೆ 5 ಲಕ್ಷ ಎಐ ಏಜೆಂಟ್‌ಗಳನ್ನು ಹೊಂದಿರಲಿದೆ. “ಆ ದಿನ ತೀರಾ ದೂರವಿಲ್ಲ. ಟಿಸಿಎಸ್‌ನಲ್ಲಿ ಭೌತಿಕ ಕಾರ್ಮಿಕರಷ್ಟೇ ಎಐ ಕಾರ್ಮಿಕರೂ ಇರಲಿದ್ದಾರೆ. ಭವಿಷ್ಯದಲ್ಲಿ ಇಬ್ಬರೂ ಜೊತೆಯಾಗಿ ಕೆಲಸ ಮಾಡಲಿದ್ದಾರೆ,” ಎಂದು ಚಂದ್ರಶೇಖರನ್ ಷೇರುದಾರರಿಗೆ ತಿಳಿಸಿದ್ದಾರೆ.

ಉದ್ಯೋಗ ನೇಮಕಾತಿಯಲ್ಲಿ ಕುಸಿತ

ಟಿಸಿಎಸ್ ಎಂದರೆ ನೇಮಕಾತಿಗಳಿಗೆ ಹೆಸರುವಾಸಿ. ಅತಿಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಐಟಿ ಸಂಸ್ಥೆಯದು. ಭಾರತದಲ್ಲಿ ಅತಿಹೆಚ್ಚು ಉದ್ಯೋಗಿಗಳಿರುವ ಸಂಸ್ಥೆಗಳ ಪೈಕಿ ಒಂದು. ಆದರೆ, ಈಗ ಎಐ ಏಜೆಂಟ್‌ಗಳ ಆಗಮನದಿಂದಾಗಿ ಕಂಪನಿಯು ಈ ಹಿಂದೆ ಮಾಡಿಕೊಳ್ಳುತ್ತಿದ್ದ ಬೃಹತ್ ಪ್ರಮಾಣದ ಉದ್ಯೋಗ ನೇಮಕಾತಿಯನ್ನು ಗಣನೀಯವಾಗಿ ಕಡಿಮೆ ಮಾಡಲಿದೆ.

ಇದನ್ನೂ ಓದಿ: ವಿಶ್ವದಾಖಲೆ ಸನಿಹದಲ್ಲಿ 23 ವರ್ಷದ ಆದಿತ್ ಪಲಿಚಾ; ಲಿಸ್ಟೆಡ್ ಕಂಪನಿಯ ಅತಿ ಕಿರಿಯ ಸಿಇಒ ಎನಿಸಲಿದ್ದಾರೆ ಝೆಪ್ಟೋ ಸಂಸ್ಥಾಪಕ

ಎಚ್‌ಆರ್ ಮೆಟ್ರಿಕ್ ಬದಲಾವಣೆ: “ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಎಚ್‌ಆರ್ (HR) ವಿಭಾಗದ ಹಳೆಯ ಪದ್ಧತಿ ಇನ್ಮುಂದೆ ಇರುವುದಿಲ್ಲ” ಎಂದು ಎನ್ ಚಂದ್ರಶೇಖರನ್ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಸಂಪೂರ್ಣವಾಗಿ ನೇಮಕಾತಿ ನಿಲ್ಲುವುದಿಲ್ಲ; ಎಐ ತಂತ್ರಜ್ಞಾನಕ್ಕೆ ತಕ್ಕಂತೆ ಹೊಂದಿಕೊಳ್ಳಬಲ್ಲ ನುರಿತ ಪ್ರತಿಭೆಗಳ ಹುಡುಕಾಟ ಮುಂದುವರಿಯಲಿದೆಯಂತೆ.

ಲೇ-ಆಫ್ ಇಲ್ಲ, ಆದರೆ ಕೌಶಲ್ಯ ಅತ್ಯಗತ್ಯ

ಎಐ ಬಳಕೆಯಿಂದಾಗಿ ಈಗಿರುವ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ (Downsizing) ಯಾವುದೇ ಉದ್ದೇಶ ಕಂಪನಿಗೆ ಇಲ್ಲ. ಭವಿಷ್ಯದಲ್ಲಿ ಉದ್ಯೋಗ ಮಾರುಕಟ್ಟೆಯಲ್ಲಿ ಉಳಿಯಬೇಕಾದರೆ ಉದ್ಯೋಗಿಗಳು ಕಡ್ಡಾಯವಾಗಿ ಎಐ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಎಐ ವ್ಯವಸ್ಥೆಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ಸಿಗಲಿದೆ.

ಎಐ ಮೂಲಕ ಹೆಚ್ಚುತ್ತಿರುವ ಆದಾಯ

ಟಿಸಿಎಸ್ ಸಂಸ್ಥೆಯು ಎಐ ತಂತ್ರಜ್ಞಾನದಿಂದ ಭಾರೀ ಆದಾಯ ಗಳಿಸುತ್ತಿದೆ. ಕಳೆದ ಆರ್ಥಿಕ ವರ್ಷದ (FY26) ಕೊನೆಯ ತ್ರೈಮಾಸಿಕದಲ್ಲಿ ಕಂಪನಿಯ ವಾರ್ಷಿಕ ಎಐ ಆದಾಯವು ಸುಮಾರು 2.5 ಬಿಲಿಯನ್ ಡಾಲರ್ (ಅಂದಾಜು ₹20,000 ಕೋಟಿಗೂ ಅಧಿಕ) ತಲುಪಿದೆ. ಇದು ಪ್ರತಿ ತ್ರೈಮಾಸಿಕದಲ್ಲಿ ಶೇ. 22 ಕ್ಕಿಂತಲೂ ಹೆಚ್ಚು ಪ್ರಗತಿ ಕಾಣುತ್ತಿದೆ.

2028 ರಿಂದ 2030ರ ವೇಳೆಗೆ ಕಂಪನಿಯ ಶೇಕಡಾ 100ರಷ್ಟು ಆದಾಯವು ಯಾವುದಾದರೂ ಒಂದು ರೂಪದಲ್ಲಿ ಎಐ ತಂತ್ರಜ್ಞಾನದ ಅಂಶವನ್ನು ಒಳಗೊಂಡಿರುತ್ತದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಶಾಪಿಂಗ್ ಮಾಡುವ ಹೆಚ್ಚಿನವರಿಗೆ ಟೊಪ್ಪಿಹಾಕುತ್ತಿವೆ ಡಾರ್ಕ್ ಪ್ಯಾಟರ್ನ್ಸ್; ಬೆಚ್ಚಿಬೀಳಿಸುತ್ತಿದೆ ಈ ವರದಿ

ಚಂದ್ರಶೇಖರನ್ ಅವರು ಗುರುತಿಸಿದ 5 ಪ್ರಮುಖ ಎಐ ಅವಕಾಶಗಳು

ಐಟಿ ವಲಯಕ್ಕೆ ಎಐ ಕೇವಲ ಒಂದು ಸವಾಲಲ್ಲ, ಬದಲಾಗಿ ಅದೊಂದು ಬಹುದೊಡ್ಡ ವ್ಯವಹಾರಿಕ ಅವಕಾಶ ಎಂದು ಚಂದ್ರಶೇಖರನ್ ವಾದಿಸಿದ್ದಾರೆ. ಅವರು ಪ್ರಮುಖವಾಗಿ 5 ಕ್ಷೇತ್ರಗಳನ್ನು ಪಟ್ಟಿ ಮಾಡಿದ್ದಾರೆ:

  1. ಲೆಗಸಿ ಸಿಸ್ಟಮ್ಸ್ ಆಧುನೀಕರಣ: ಹಳೆಯ ಐಟಿ ಮೂಲಸೌಕರ್ಯ ಮತ್ತು ಚದುರಿಹೋಗಿರುವ ಡೇಟಾ ವ್ಯವಸ್ಥೆಗಳನ್ನು ಎಐ ಮೂಲಕ ಆಧುನೀಕರಿಸುವುದು.
  2. ಬಿಸಿನೆಸ್ ಪ್ರೊಸೆಸ್ ಮರುವಿನ್ಯಾಸ: ಕಂಪನಿಗಳ ಸಪ್ಲೈ ಚೈನ್ ಮತ್ತು ಗ್ರಾಹಕರ ಸಂಪರ್ಕ ಪ್ರಕ್ರಿಯೆಗಳನ್ನು ಎಐ ತಂತ್ರಜ್ಞಾನದ ಮೂಲಕ ಸುಧಾರಿಸುವುದು.
  3. ಎಐ ಗವರ್ನೆನ್ಸ್ ಮತ್ತು ಮ್ಯಾನೇಜ್‌ಮೆಂಟ್: ಎಐ ಏಜೆಂಟ್‌ಗಳ ಸುರಕ್ಷತೆ, ವೆಚ್ಚ ಮತ್ತು ನಿಯಮಾವಳಿಗಳ ಉಸ್ತುವಾರಿ ವಹಿಸುವುದು.
  4. ಸೊವರೀನ್ ಎಐ (Sovereign AI): ಸರ್ಕಾರಗಳು ಮತ್ತು ಕಟ್ಟುನಿಟ್ಟಾದ ನಿಯಂತ್ರಣ ಹೊಂದಿರುವ ಸಂಸ್ಥೆಗಳಿಗಾಗಿ ಡೇಟಾ ಭದ್ರತೆಯುಳ್ಳ ಪ್ರತ್ಯೇಕ ಎಐ ಮೂಲಸೌಕರ್ಯ ನಿರ್ಮಿಸುವುದು. ಟಿಸಿಎಸ್ ಈಗಾಗಲೇ ಭಾರತ ಮತ್ತು ಯುರೋಪ್‌ನಲ್ಲಿ ಇಂತಹ ಯೋಜನೆಗಳನ್ನು ಆರಂಭಿಸಿದೆ.
  5. ಫಿಸಿಕಲ್ ಎಐ (Physical AI): ಕಾರ್ಖಾನೆಗಳು, ಗೋದಾಮುಗಳು ಮತ್ತು ವಾಹನಗಳಲ್ಲಿ ರೋಬೋಟಿಕ್ಸ್ ಹಾಗೂ ಎಐ ತಂತ್ರಜ್ಞಾನವನ್ನು ಸಮಿಶ್ರಗೊಳಿಸುವುದು.

ಟಿಸಿಎಸ್ ಸಿಇಒ ಕೆ. ಕೃತಿವಾಸನ್ ಅವರ ಪ್ರಕಾರ, ಕಂಪನಿಯು ಜಗತ್ತಿನ ಅತಿ ದೊಡ್ಡ ‘ಎಐ ಆಧಾರಿತ ತಂತ್ರಜ್ಞಾನ ಸೇವಾ ಸಂಸ್ಥೆ’ಯಾಗುವ ಗುರಿ ಹೊಂದಿದೆ. ಐಟಿ ಉದ್ಯಮದಲ್ಲಿ ಮಾನವ ಶ್ರಮ ಮತ್ತು ಕೃತಕ ಬುದ್ಧಿಮತ್ತೆ (AI) ಒಟ್ಟಾಗಿ ಸಾಗುವ ಹೊಸ ಯುಗಕ್ಕೆ ಟಿಸಿಎಸ್ ಮುನ್ನುಡಿ ಬರೆಯುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವೈದ್ಯನ ಪಾತ್ರದಲ್ಲಿ ರಜನೀಕಾಂತ್, ಈ ಬಾರಿ ಮಾಸ್ ಅಲ್ಲ ಕ್ಲಾಸ್? – Kannada News

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಸದ್ಯಕ್ಕೆ ತಮ್ಮ ಬಹುನಿರೀಕ್ಷಿತ ಚಿತ್ರ ‘ತಲೈವರ್ 173’ ಗಾಗಿ ಸಜ್ಜಾಗುತ್ತಿದ್ದಾರೆ. ಯುವ ನಿರ್ದೇಶಕ ಅಶ್ವತ್ಥ್ ಮಾರಿಮುತ್ತು ಅವರು ರಜನೀಕಾಂತ್ ಅವರು ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಇತ್ತೀಚೆಗಷ್ಟೆ ಹೊರ ಬಿದ್ದಿದೆ. ಅಶ್ವತ್ಥ್ ಮಾರಿಮುತ್ತು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ವಿಡಿಯೋ ಹಂಚಿಕೊಳ್ಳುವ ಮೂಲಕ ನಿರ್ಮಾಣ ಸಂಸ್ಥೆಯು ಅವರೇ ಈ ಚಿತ್ರದ ನಿರ್ದೇಶಕರು ಎಂಬುದನ್ನು ಅಧಿಕೃತವಾಗಿ ಖಚಿತಪಡಿಸಲಾಗಿದೆ. ಈಗ ಬಂದಿರುವ ಹೊಸ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಮಾಡಲಿರುವ ಪಾತ್ರದ ಬಗ್ಗೆ ಒಂದು ಆಸಕ್ತಿದಾಯಕ ಅಪ್‌ಡೇಟ್ ಹೊರಬಿದ್ದಿದೆ.

ರಜನೀಕಾಂತ್ ತಮ್ಮ ಮುಂದಿನ ಸಿನಿಮಾನಲ್ಲಿ ಹಿರಿಯ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಮಾಸ್ ಪಾತ್ರಗಳಿಂದ ಅಭಿಮಾನಿಗಳ ಮನಗೆದ್ದಿರುವ ರಜನೀಕಾಂತ್ ಇದೀಗ ಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅವರ 173ನೇ ಸಿನಿಮಾ ಕಮರ್ಶಿಯಲ್ ಮಾಸ್ ಸಿನಿಮಾ ಆಗಿರುವುದಿಲ್ಲ ಬದಲಿಗೆ ಫ್ಯಾಮಿಲಿ ಡ್ರಾಮಾ ಜೊತೆಗೆ ಹಾಸ್ಯ ಪ್ರಧಾನವೂ ಆಗಿರಲಿದೆ ಎನ್ನಲಾಗುತ್ತಿದೆ. ಒಂದರ ಹಿಂದೊಂದು ಕಮರ್ಶಿಯಲ್, ಮಾಸ್ ಸಿನಿಮಾಗಳನ್ನೇ ಮಾಡಿಕೊಂಡು ಬರುತ್ತಿದ್ದ ರಜನೀಕಾಂತ್ ಖುದ್ದು ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಂಡಿದ್ದಾರೆ.

‘ಓ ಮೈ ಕಡವುಲೆ’ ಮತ್ತು ‘ಡ್ರಾಗನ್’ ಸಿನಿಮಾಗಳನ್ನು ನಿರ್ದೇಶಿಸಿರುವ ಅಶ್ವತ್ ಮಾರಿಮುತ್ತು ಸಿದ್ಧಪಡಿಸಿರುವ ಈ ಚಿತ್ರಕಥೆಯು, ಲಘು ಹಾಸ್ಯಭರಿತ ಕಮರ್ಷಿಯಲ್ ಎಂಟರ್‌ಟೈನ್‌ಮೆಂಟ್ ಜೊತೆಗೆ ಬಲವಾದ ಭಾವನಾತ್ಮಕ ಕಥಾಹಂದರವನ್ನು ಹೊಂದಿರಲಿದೆ ಎಂದು ಹೇಳಲಾಗುತ್ತಿದೆ. ಕತೆ ಕೇಳಿದ ಬಳಿಕ ಸೂಪರ್‌ಸ್ಟಾರ್ ರಜನೀಕಾಂತ್​​ ಅವರಿಗೆ ಕತೆ ಬಹಳ ಇಷ್ಟವಾಗಿದ್ದು ಸಂಪೂರ್ಣವಾಗಿ ಮಾರುಹೋಗಿದ್ದರು ಮತ್ತು ಮುಖ್ಯವಾಗಿ ಚಿತ್ರದ ವಿಲನ್ ಪಾತ್ರವನ್ನು ವಿನ್ಯಾಸಗೊಳಿಸಿದ ರೀತಿಗೆ ಅಪಾರ ಪ್ರಶಂಸೆ ವ್ಯಕ್ತಪಡಿಸಿದ್ದರು ಎಂದು ನಿರ್ದೇಶಕರು ತಿಳಿಸಿದ್ದಾರೆ. ಅಶ್ವತ್ ಅವರು ಈ ಹಿರಿಯ ನಟನನ್ನು ಸಂಪೂರ್ಣ ಹೊಸ ರೂಪದಲ್ಲಿ ಹೇಗೆ ತೋರಿಸಲಿದ್ದಾರೆ ಎಂಬುದನ್ನು ನೋಡಲು ಅಭಿಮಾನಿಗಳು ಈಗಾಗಲೇ ತೀವ್ರ ಉತ್ಸುಕರಾಗಿದ್ದಾರೆ.

ಇದನ್ನೂ ಓದಿ:ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

‘ತಲೈವರ್ 173’ ಚಿತ್ರವನ್ನು ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಇದೇ ಪ್ರಾಜೆಕ್ಟ್​​ಗೆ ಈ ಹಿಂದೆ ಇಬ್ಬರು ನಿರ್ದೇಶಕರು ಬದಲಾಗಿದ್ದು, ಅಶ್ವತ್ಥ್ ಅವರು ಅಂತಿಮಗೊಂದಿದ್ದಾರೆ. ಇದಕ್ಕೂ ಮೊದಲು ನಿರ್ದೇಶಕರಾದ ಸುಂದರ್ ಸಿ ಮತ್ತು ಸಿಬಿ ಚಕ್ರವರ್ತಿ ಈ ಚಿತ್ರವನ್ನು ನಿರ್ದೇಶಿಸಬೇಕಿತ್ತಾದರೂ, ಬೇರೆ ಬೇರೆ ಕಾರಣಕ್ಕೆ ಈ ನಿರ್ದೇಶಕರು ಬದಲಾದರು. ಸದ್ಯಕ್ಕೆ, ಅಶ್ವತ್ ಅವರು ಚಿತ್ರಕಥೆಯ ಸಂಪೂರ್ಣ ಡ್ರಾಫ್ಟ್ ಮುಗಿಯುವವರೆಗೂ ಯಾವುದೇ ದೊಡ್ಡ ಅಧಿಕೃತ ಪ್ರಕಟಣೆಗಳನ್ನು ಮಾಡದಂತೆ ನಿರ್ಮಾಪಕರಲ್ಲಿ ವಿನಂತಿಸಿದ್ದಾರೆ ಎನ್ನಲಾಗುತ್ತಿದೆ.

‘ತಲೈವರ್ 173’ ಮಾತ್ರವೇ ಅಲ್ಲದೆ ರಜನಿಕಾಂತ್ ಅವರು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ಸಿದ್ದವಾಗಿದೆ. ಸಿನಿಮಾ ಇದೇ ವರ್ಷದ ಅಂತ್ಯದ ವೇಳೆಗೆ ತೆರೆಗೆ ಬರಲು ಸಜ್ಜಾಗಿದೆ. ಇದರ ಜೊತೆಗೆ ಕಮಲ್ ಹಾಸನ್ ಜೊತೆಗೆ ರಜನೀಕಾಂತ್ ಅವರು ಸಿನಿಮಾ ಒಂದರಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಸಹ ನೆಲ್ಸನ್ ಅವರೇ ನಿರ್ದೇಶನ ಮಾಡಲಿದ್ದಾರೆ. ‘ತಲೈವರ್ 173’ ಸಿನಿಮಾದ ಬಳಿಕ ಆ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version