Headlines

11 ವರ್ಷ ಮಕ್ಕಳಿಲ್ಲದ ದಂಪತಿಗೆ ನಕಲಿ ದಾಖಲೆ ಸೃಷ್ಟಿಸಿ ಮಗು ಮಾರಿದ್ದ ಖ್ಯಾತ ವೈದ್ಯ ಅರೆಸ್ಟ್! – Kannada News | Udupi Baby Trafficking Case: Reputed Doctor Arrested for Illegal Adoption Setup

ಉಡುಪಿ, ಜೂನ್ 23: ಜಿಲ್ಲೆಯಲ್ಲಿ ದಂಪತಿಗೆ ಕಾನೂನುಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ದತ್ತು ನೀಡಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಈ ದಂಧೆಗೆ ಸಂಬಂಧಿಸಿದಂತೆ ಉಡುಪಿಯ ಪ್ರಸಿದ್ಧ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಸೇರಿದಂತೆ ಇಬ್ಬರನ್ನು ಉಡುಪಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು…

Read More

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! – Kannada News | Maharashtra RTO Officer Threatened in Bengaluru for Crackdown on Unregistered Autos

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! ನೆಲಮಂಗಲ, ಏಪ್ರಿಲ್ 18: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಟೂರ್ನಮೆಂಟ್​ಗೆ ಬಂದಿದ್ದ ಅಧಿಕಾರಿ…

Read More

IPL 2026: RCB ತಂಡದ ಮುಂದಿನ ಪಂದ್ಯಗಳ ಮಾಹಿತಿ ಇಲ್ಲಿದೆ – Kannada News | Ipl 2026 rcb next match vs lsg

ಐಪಿಎಲ್ 2026ರ ಆವೃತ್ತಿಯು ರೋಚಕ ಹಂತಕ್ಕೆ ತಲುಪಿದೆ. ಹಾಲಿ ಚಾಂಪಿಯನ್ಸ್ ಪಟ್ಟದೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಈ ಸೀಸನ್‌ನಲ್ಲಿ ಏರಿಳಿತದ ಹಾದಿ ಸವಿಯುತ್ತಿದೆ. ಏಪ್ರಿಲ್ 30ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅನುಭವಿಸಿದ ಸೋಲು ತಂಡಕ್ಕೆ ಸ್ವಲ್ಪ ಹಿನ್ನಡೆ ತಂದಿದ್ದರೂ, ಪ್ಲೇ-ಆಫ್​ಗೇರಲು ಮುಂದಿನ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ. ಅದರಲ್ಲೂ ಮುಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ತಂಡದ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಮುಂದಿನ ಪಂದ್ಯದ ಬಳಿಕ ಆರ್​ಸಿಬಿ 4…

Read More

ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ! – Kannada News | Lokayukta Arrests FDA Caught Red Handed Taking Bribe

ಕಲಬುರಗಿ, ಜನವರಿ 18:  ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ (Bribe) ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶಶಿಕುಮಾರ್, ಪುಟ್ಟ ಕಿಶನ್ ರಾಥೋಡ್ ಎಂಬುವವರಿಂದ ಹಣ ಸ್ವೀಕರಿಸುತ್ತಿದ್ದರು. ಶಶಿಕುಮಾರ್ ಅವರು ದಾಖಲೆ ಪತ್ರಗಳನ್ನು ನೀಡಲು 20,000 ರೂ.ಗಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ಕಿಶನ್ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳೊಂದಿಗೆ ದಾಳಿ ನಡೆಸಿದ ಪೊಲೀಸರು, ಹಣ ಪಡೆಯುತ್ತಿದ್ದಾಗಲೇ…

Read More

New Year 2026: ಹೊಸ ವರ್ಷವನ್ನು ವಿಶೇಷ ಡೂಡಲ್‌ನೊಂದಿಗೆ ಸ್ವಾಗತಿಸಿದ ಗೂಗಲ್ – Kannada News | New Year 2026: Google welcomes the New Year with a meaningful doodle

2025ಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು (New Year) ಸ್ವಾಗತಿಸಿದ್ದಾಗಿದೆ. ಹಳೆಯ ವರ್ಷದ ಕಹಿ ಘಟನೆಗಳು ಮರೆತು ಹೊಸ ಭರವಸೆ, ಹೊಸ ಕನಸುಗಳೊಂದಿಗೆ ಆರಂಭಿಸುವ ಹುರುಪು ಎಲ್ಲರಲ್ಲೂ ತುಂಬಿದೆ. ಈ ನಡುವೆ ಹೊಸ ವರ್ಷವನ್ನು ಗೂಗಲ್​ ಕೂಡ ವಿಶೇಷವಾಗಿ ಸ್ವಾಗತಿಸಿದೆ. ಗೂಗಲ್ ಹೊಸ ಆರಂಭವನ್ನು ಸೂಚಿಸುವ ಹಾಗೂ ಚೈತನ್ಯವನ್ನು ಮೂಡಿಸುವ ಗೂಗಲ್ ಡೂಡಲ್ (Google Doodle) ಹಂಚಿಕೊಂಡಿರುವುದು ವಿಶೇಷ. ಗೂಗಲ್ ಹೊಸ ವರ್ಷವನ್ನು ರೋಮಾಂಚಕ ಡೂಡಲ್‌ನೊಂದಿಗೆ ಸ್ವಾಗತಿಸಿದ್ದು, ಕಸ್ಟಮೈಸ್ಡ್ ಆ್ಯನಿಮೆಟೇಡ್ ಡೂಡಲ್ ಇದೀಗ ಗೂಗಲ್ ಪೇಜ್‌ನಲ್ಲಿ…

Read More

ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ – Kannada News | Some Political Developments In Karnataka after May 5th By Election Result Says HD Kuamraswamy

ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ….

Read More

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು, 13 ಜನರಿಗೆ ಗಾಯ – Kannada News | Surajkund Fair tragedy Police dead 13 injured after swing collapses in Faridabad

ಫರಿದಾಬಾದ್, ಫೆಬ್ರವರಿ 7: ಹರಿಯಾಣದ ಫರೀದಾಬಾದ್​ನಲ್ಲಿ ನಡೆಯುತ್ತಿದ್ದ ಸೂರಜ್‌ಕುಂಡ್ ಜಾತ್ರೆಯಲ್ಲಿ ದುರಂತ ಸಂಭವಿಸಿದೆ. ಎಲ್ಲ ಜಾತ್ರೆಗಳಲ್ಲೂ ಇರುವಂತೆ ಆ ಜಾತ್ರೆಯಲ್ಲೂ ಜಾಯಿಂಟ್ ವೀಲ್, ಜೋಕಾಲಿ ಮತ್ತಿತರ ಸ್ವಿಂಗ್​ಗಳನ್ನು ಹಾಕಲಾಗಿತ್ತು. ಈ ವೇಳೆ ಸುನಾಮಿ ಸ್ವಿಂಗ್ ತುಂಡಾಗಿ ಬಿದ್ದಿದೆ. ಅದರಲ್ಲಿ ಕುಳಿತಿದ್ದವರು ಕೆಳಗೆ ಬೀಳಲಾರಂಭಿಸಿದರು. ಜಾತ್ರೆಯಲ್ಲಿ ವಿಪರೀತ ಜನ ಸೇರಿದ್ದರಿಂದ ಏನಾಯಿತು ಎಂದು ಅಲ್ಲಿದ್ದವರಿಗೆ ಗೊತ್ತಾಗುವಷ್ಟರಲ್ಲಿ ಮೇಲಿನಿಂದ ಬಿದ್ದು ಪೊಲೀಸ್ ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಸಮಯದಲ್ಲಿ ಉಯ್ಯಾಲೆಯಲ್ಲಿ 18 ಜನರಿದ್ದರು. ಈ…

Read More

ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ: ಪ್ರಲ್ಹಾದ್ ಜೋಶಿ ಅಭಯ – Kannada News | No Need to Panic, All Indians Will Be Brought Back Safely from Iran Israel War Zone: Pralhad Joshi Assures

ನವದೆಹಲಿ, ಮಾರ್ಚ್ 2: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ತಿಳಿಸಿದ್ದಾರೆ. ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ….

Read More

ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು – Kannada News | Bengaluru Husband Suraj Also Commits Suicide In nagpur after Wife Ganvi Death In bengaluru

ಬೆಂಗಳೂರು, (ಡಿಸೆಂಬರ್ 27): ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌ ಸಹೋದರ ಸಂಜಯ್‌ ಮಹಾರಾಷ್ಟ್ರದ ನಾಗ್ಪುರಕ್ಕೆ(Nagpura) ತೆರಳಿದ್ದು ನಿನ್ನೆ ಸಂಜೆ ಜಯಂತಿ, ಸೂರಜ್ ಸೋನೆಗಾಂವ್‌ನಲ್ಲಿರುವ ರಾಯಲ್‌ ವಿಲ್ಲಾ ಹೋಟೆಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸೂರಜ್‌ ಮೃತಪಟ್ಟಿದ್ದರೆ, ಜಯಂತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೂರಜ್…

Read More

‘ಕರ್ಣ’ ಧಾರಾವಾಹಿಯಲ್ಲಿ ಮಹಾ ತಿರುವು; ಕರ್ಣನ ತಂದೆ ರಿವೀಲ್

‘ಕರ್ಣ’ ಧಾರಾವಾಹಿ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ಟಿಆರ್​​​ಪಿಯಲ್ಲೂ ನಂಬರ್ 1 ಸ್ಥಾನದಲ್ಲಿ ಇದೆ. ಹೀಗಿರುವಾಗಲೇ ‘ಕರ್ಣ’ ಧಾರಾವಾಹಿಯಲ್ಲಿ ಒಂದು ಕಟು ಸತ್ಯವೂ ರಿವೀಲ್ ಆಗಿದೆ ಎನ್ನಬಹುದು. ಕರ್ಣನು ರಮೇಶ್ ಮಗ ಎಂಬ ಕಟು ಸತ್ಯವನ್ನು ರಮೇಶ್ ತಂಗಿ ತಾರಾ ರಿವೀಲ್ ಮಾಡಿದ್ದಾಳೆ. ಇದು ಶಾಕಿಂಗ್ ಎನಿಸಿದೆ. ಇದು ಧಾರಾವಾಹಿಯಲ್ಲಿ ದೊಡ್ಡ ತಿರುವಿಗೆ ಕಾರಣ ಆಗಬಹುದು ಎಂದು ಊಹಿಸಲಾಗಿದೆ. ಮುಂದಿನ ಕಥೆ ಮತ್ತಷ್ಟು ರೋಚಕವಾಗಿದೆ. ‘ಕರ್ಣ’ ಧಾರಾವಾಹಿಯಲ್ಲಿ ಹಲವು ತಿರುವುಗಳು ಎದುರಾಗಿವೆ. ಇದರಲ್ಲಿ…

Read More