ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ, ಮನೆಗೆ ಮರುಳುತ್ತಿದ್ದ ಆಟೋ ಚಾಲಕನನ್ನು ಇರಿದು ಕೊಂದ ದುಷ್ಕರ್ಮಿಗಳು – Kannada News | Bangladesh: Hindu Auto Driver Murdered Amidst Escalating Minority Attacks
ಢಾಕಾ, ಜನವರಿ 13: ಬಾಂಗ್ಲಾದೇಶದಲ್ಲಿ ಹಿಂದೂ(Hindu)ಗಳ ಮುಂದುವರೆದಿದೆ. ದಕ್ಷಿಣ ಬಾಂಗ್ಲದ ಫೆನಿ ಜಿಲ್ಲೆಯ ಧಗನ್ಭುಯಾನ್ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ಹತ್ಯೆ ಮಾಡಿದ್ದಾರೆ.ಸಮೀರ್ ಕುಮಾರ್ ದಾಸ್ ಮೃತ ವ್ಯಕ್ತಿ. ಆಟೋ ಚಾಲಕನನ್ನು ಕೊಂದು ಆಟೋವನ್ನು ಕೂಡ ಕಳವು ಮಾಡಲಾಗಿದೆ. ಕುಟುಂಬದವರ ಪ್ರಕಾರ, ಸಮೀರ್ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟಿದ್ದರು, ತಡರಾತ್ರಿಯಾದರೂ ಅವನು ಹಿಂತಿರುಗದಿದ್ದಾಗ, ಕುಟುಂಬದವರು ಅವರನ್ನು ಹುಡುಕಲು ಪ್ರಾರಂಭಿಸಿದ್ದರು. ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಜಗತ್ಪುರ…