Headlines

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು – Kannada News | 4 DRG personnel killed in IED Blast during demining operation in Chhattisgarh

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ…

Read More

Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ ವಿದ್ಯಾರ್ಥಿಗಳ…

Read More

ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Files Cyber Complaint: Darshan Wife Battles Online Hate and Fan Wars

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳು ಇದಕ್ಕೆ ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಈಗ ವಿಜಯಲಕ್ಷ್ಮೀ ಕೂಡ ಇದರಿಂದ ತೊಂದರೆ ಅನುಭವಿಸಿದ್ದಾರೆ. ಈ ಸಂಬಂಧ ಅವರು ದೂರು ಕೂಡ ದಾಖಲು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್ ಹಾಗೂ ಮೆಸೇಜ್​​ಗಳ ಸ್ಕ್ರೀನ್​ಶಾಟ್​​ಗಳನ್ನು ಸೈಬರ್ ಪೊಲೀಸರಿಗೆ ನೀಡುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ಸುದೀಪ್ ಅವರು ಇತ್ತೀಚೆಗೆ ‘ಸಿನಿಮಾ ರಿಲೀಸ್ ವೇಳೆ ಒಂದು ಪಡೆ ಯುದ್ಧಕ್ಕೆ ರೆಡಿ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಎಲ್ಲದಕ್ಕೂ ಅತಿಯಾಗಿ ಬಳಸಿಕೊಳ್ಳುವರು – Kannada News | Horoscope May 15 Friday 2026; Dina Rashi Bhavishya Today, Checkout the details here

ಮೇಷ ರಾಶಿ: ಇಷ್ಟವಿಲ್ಲದ ವಿಚಾರಗಳೇ ನಿಮ್ಮ ಸುತ್ತ ಮಾತನಾಡಿ ಮಾನಸಿಕ ಹಿಂಸೆ ಕೊಡುವರು. ಇಂದು ಸ್ವಲ್ಪ ಮಟ್ಟಿಗೆ ಆರ್ಥಿಕ ಬೆಳವಣಿಗೆ ಕಾಣಿಸಿ ಸಮಾಧಾನವಾಗುವುದು. ಹಣಕಾಸು ಯೋಜನೆಗಳಲ್ಲಿ ಸ್ಪಷ್ಟತೆ ಇರಲಿ. ನಿದ್ದೆಯ ಕೊರತೆ ದೈನಂದಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವರ‌ ಮಾತಿನಿಂದ ನಿಮ್ಮ ವ್ಯಕ್ತಿತ್ವವು ಬದಲಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ವೃಷಭ ರಾಶಿ: ಆಹಾರ ವ್ಯತ್ಯಾಸದಿಂದ ಉದರ ಬಾಧೆ ಹೆಚ್ಚಾಗುವುದು. ಹಿರಿಯರ‌ ಸೇವೆಯ ಬಗ್ಗೆ ಹೆಮ್ಮೆ ಇರಲಿದೆ….

Read More

ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ – Kannada News | Sonal Monteiro Tharun Sudhir New Home video And Photos Sharan Wish him Best of Luck

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ (Sonal) ಅವರು ವಿವಾಹ ಆಗಿ ವರ್ಷದ ಬಳಿಕ ಹೊಸ ಮನೆ ಪ್ರವೇಶಿಸಿದ್ದಾರೆ. ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದು, ಅದಕ್ಕೆ ಗೃಹಪ್ರವೇಶ ನಡೆದಿದೆ. ಆ ಸಂದರ್ಭದ ವಿಡಿಯೋನ ಸೋನಲ್ ಹಂಚಿಕೊಂಡಿದ್ದಾರೆ. ಮನೆಯಲ್ಲಿ ಸುಧೀರ್ ಫೋಟೋ ಇಟ್ಟು ಪೂಜೆ ಮಾಡಲಾಗಿದೆ. ಮನೆಗೆ ತರುಣ್ ಗೆಳೆಯ ಶರಣ್, ಶ್ರುತಿ ಮೊದಲಾದವರು ಆಗಮಿಸಿದ್ದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Weekly Horoscope: ವಾರ ಭವಿಷ್ಯ; ಮಾರ್ಚ್ 30 ರಿಂದ ಏಪ್ರಿಲ್ 5 ರ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗಿನ ವಾರ ಭವಿಷ್ಯವನ್ನು ತಿಳಿಸಿದ್ದಾರೆ. ಈ ವಾರವು ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಮತ್ತು ಕೃಷ್ಣ ಪಕ್ಷಗಳನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಸೋಮ ಪ್ರದೋಷ, ನಂಜನಗೂಡು ಜಾತ್ರಾ ಮಹೋತ್ಸವ, ಮಹಾವೀರ ಜಯಂತಿ, ಚೈತ್ರ ಪೌರ್ಣಿಮೆ, ಸಂಕಷ್ಟ ಚತುರ್ಥಿ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗ್ರಹಗಳ ಸ್ಥಿತಿಯಲ್ಲಿ ಮಹತ್ವದ ಬದಲಾವಣೆಗಳಿದ್ದು,…

Read More

ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ – Kannada News | Silent Diseases: Health Problems With No Early Warning Signs

ಸಾಮಾನ್ಯವಾಗಿ ದೇಹದಲ್ಲಿ ನೋವು, ದಣಿವು ಅಥವಾ ಕಿರಿಕಿರಿ ಆಗುತ್ತಿದ್ದರೆ ಆರೋಗ್ಯ ಸರಿ ಇಲ್ಲ ಎಂದು ಭಾವಿಸುತ್ತೇವೆ. ಆದರೆ ವೈದ್ಯರ ಪ್ರಕಾರ, ಕೆಲವು ಕಾಯಿಲೆಗಳು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ನಿಧಾನವಾಗಿ ಬೆಳೆಯುತ್ತವೆ. ಇವುಗಳನ್ನು “ಸೈಲೆಂಟ್ ಡಿಸೀಸ್” (Silent Diseases) ಎಂದು ಕರೆಯಲಾಗುತ್ತದೆ. ಈ ರೀತಿಯ ಕಾಯಿಲೆಗಳು ದೀರ್ಘಕಾಲ ದೇಹದೊಳಗೆ ಹಾನಿ ಉಂಟುಮಾಡಿ, ತಡವಾಗಿ ಪತ್ತೆಯಾಗುವ ಅಪಾಯವಿರುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ, ಈ ರೀತಿ ಕಾಯಿಲೆಗಳು ಬರದಂತೆ ತಡೆಯಲು ಯಾವ ರೀತಿ…

Read More

‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ನಟ ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ…

Read More

ಕೋರ್ಟ್​ನಲ್ಲಿ ಪತಿಯ ಅಕ್ಕನನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ಪತಿಗೆ ಗೊತ್ತಿಲ್ಲದಂತೆ ವಿಚ್ಛೇದನ ಪಡೆದ ಚಾಲಾಕಿ ಪತ್ನಿ – Kannada News | Shocking Gwalior Divorce: Wife Deceived Court Using Sister in Law as Second Wife

ಗ್ವಾಲಿಯರ್, ಏಪ್ರಿಲ್ 27: ಸುಮಾರು 27 ವರ್ಷಗಳ ದಾಂಪತ್ಯ ಜೀವನದ ನಂತರ ವಿಚ್ಛೇದನ(Divorce) ಪಡೆಯಲು ಮಹಿಳೆಯೊಬ್ಬಳು ಅನುಸರಿಸಿದ ದಾರಿ ಕೇಳಿದರೆ ನ್ಯಾಯಮೂರ್ತಿಗಳೇ ದಂಗಾಗುವಂತಿದೆ. ತನ್ನ ಪತಿಯ ಅಕ್ಕನನ್ನೇ (ಅತ್ತಿಗೆ) ಎರಡನೇ ಹೆಂಡತಿ ಎಂದು ಬಿಂಬಿಸಿ ಆಕೆ ಏಕಪಕ್ಷೀಯ ವಿಚ್ಛೇದನ ಪಡೆಯುವಲ್ಲಿ ಯಶಸ್ವಿಯಾಗಿದ್ದಾಳೆ. 1998ರಲ್ಲಿ ವಿವಾಹವಾಗಿದ್ದ ಈ ದಂಪತಿ ನಡುವೆ 2015ರಿಂದ ಭಿನ್ನಾಭಿಪ್ರಾಯ ಶುರುವಾಗಿತ್ತು. ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪತಿ ಕೆಲಸದ ನಿಮಿತ್ತ ಹೊರಗಡೆ ಇರುತ್ತಿದ್ದರಿಂದ ಜಗಳಗಳು ಹೆಚ್ಚಾಗಿ, ಪತ್ನಿ ತನ್ನ ಪತಿಯಿಂದ ದೂರ ವಾಸಿಸುತ್ತಿದ್ದರು. ಆದರೆ…

Read More

ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ – Kannada News | Iranian drone strike hit Kuwait International Airport flight Canceled Amid Iran Attacks

ನವದೆಹಲಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್ ಸೇರಿ ತಮ್ಮ ದೇಶದ ಮೇಲೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಇರಾನ್ (Iran War) ಕಂಡ-ಕಂಡ ದೇಶಗಳ ಮೇಲೆಲ್ಲ ವೈಮಾನಿಕ ದಾಳಿ ನಡೆಸುತ್ತಿದೆ. ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್ ಅಮಾಯಕ ಜನರಿರುವ ಸ್ಥಳಗಳನ್ನು ಕೂಡ ಗುರಿಯಾಗಿಸಿಕೊಂಡಿದೆ. ಇರಾನ್‌ನಿಂದ ಹಾರಿಸಲಾದ ಡ್ರೋನ್ ಕುವೈತ್…

Read More