ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ಕೇವಲ 1 ರನ್ನಿಂದ ಸೋತಿದೆ. ಗೆಲುವಿನ ಹೊಸ್ತಿಲಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಡೇವಿಡ್ ಮಿಲ್ಲರ್ ಅವರ ಒಂದು ನಿರ್ಧಾರದಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು ಎಂದರೆ ತಪ್ಪಾಗಲಾರದು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 210 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ…