ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ – Kannada News | Water Crisis: Thumbay Dam Levels Drop, Bi Daily Supply From May 1st
ಮಂಗಳೂರು, ತುಂಬೆ ವೆಂಟೆಡ್ ಡ್ಯಾಂImage Credit source: tv9 kannada ಮಂಗಳೂರು, ಏಪ್ರಿಲ್ 25: ರಾಜ್ಯದಲ್ಲಿ ಕುಡಿಯುವ ನೀರಿಗೆ (drinking water) ಬರ ಎದುರಾಗಿದೆ. ಕಡಲನಗರಿ ಮಂಗಳೂರಿನಲ್ಲೂ (mangaluru) ನೀರಿನ ಕೊರತೆ ಕಂಡುಬಂದಿದೆ. ನಗರಕ್ಕೆ ನೀರು ಪೊರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿತವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಎರಡು ದಿನಕ್ಕೊಮ್ಮೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿರ್ಧಾರ ಮಾಡಿದೆ. ಕರಾವಳಿಯಲ್ಲಿ ಸದ್ಯ ಬಿಸಿಲ ಝಳ ಹೆಚ್ಚುತ್ತಿದೆ. ಬೇಸಿಗೆಯ ಬೇಗೆಯಿಂದ ಜನ…