ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ – Kannada News | Kolar KGF Police Raid Rowdy Sheeters Homes, Seize Weapons

ಕೋಲಾರ, ಏಪ್ರಿಲ್​​ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು….

Read More

IND vs NZ: ಕಿವೀಸ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 1 ಬದಲಾವಣೆ – Kannada News | IND vs NZ 4th T20: Surya wins toss, India bowls first; Arshdeep in for injured Kishan

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಎರಡೂ ತಂಡಗಳು ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಉಳಿದೆರಡು ಪಂದ್ಯಗಳನ್ನು ಗೆದ್ದು ಸೋಲಿನ ಅಂತರವನ್ನು ಕಡಿಮೆ ಮಾಡಲು ಯತ್ನಿಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು…

Read More

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು – Kannada News | Mahesh Babu visited Bengaluru to see his AMB Cinemas that started in city

ಟಾಲಿವುಡ್ ಸೂಪರ್‌ ಸ್ಟಾರ್ ಮಹೇಶ್ ಬಾಬು (Mahesh Babu) ಇಂದು (ಫೆಬ್ರವರಿ 20, 2026) ಬೆಂಗಳೂರಿಗೆ ನೀಡಿದ್ದರು. ತಮ್ಮ ಒಡೆತನದ ನೂತನ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್ ಕಪಾಲಿ’ ಗೆ ಅವರು ಭೇಟಿ ನೀಡಿದ್ದು, ನೆಚ್ಚಿನ ನಟನನ್ನು ನೋಡಲು ಗಾಂಧಿನಗರದ ಚಿತ್ರಮಂದಿರದ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ದಕ್ಷಿಣ ಭಾರತದ ಮೊದಲ ‘ಡಾಲ್ಬಿ ಸಿನಿಮಾ’ ತಂತ್ರಜ್ಞಾನವನ್ನು ಹೊಂದಿರುವ ಈ ಚಿತ್ರಮಂದಿರದ ಕಾರ್ಯವೈಖರಿ ಮತ್ತು ಗುಣಮಟ್ಟವನ್ನು ಪರಿಶೀಲಿಸಲು ಮಹೇಶ್ ಬಾಬು ಇಂದು ಖುದ್ದಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಮಲ್ಟಿಪ್ಲೆಕ್ಸ್‌ಗೆ…

Read More

ಪೋಸ್ಟ್ ಆಫೀಸ್ ಆವರ್ತನ ಠೇವಣಿ ಯೋಜನೆಯಲ್ಲಿ ತಿಂಗಳಿಗೆ 5,000 ರೂ ಹೂಡಿಕೆಯಿಂದ ಎಷ್ಟು ರಿಟರ್ನ್ಸ್? – Kannada News | Post Office National Savings Recurring Deposit Account, investment, interest and other scheme details

ಅಂಚೆ ಕಚೇರಿಯಲ್ಲಿ ಲಭ್ಯ ಇರುವ ಕೆಲ ಸಣ್ಣ ಉಳಿತಾಯ ಯೋಜನೆಗಳಲ್ಲಿ ರಿಕರಿಂಗ್ ಡೆಪಾಸಿಟ್ ಸ್ಕೀಮ್ (Post Office National Savings Recurring Deposit Account) ಒಂದು. ಇದು ಬ್ಯಾಂಕುಗಳಲ್ಲಿರುವ ಆರ್​ಡಿ ಪ್ಲಾನ್​ಗಳಂತೆ. ಮಾಸಿಕವಾಗಿ ನಿರ್ದಿಷ್ಟ ಹಣವನ್ನು ಡೆಪಾಸಿಟ್ ಆಗಿ ಇಡಲು ಅವಕಾಶ ಕೊಡುವ ಯೋಜನೆ ಇದು. ಬ್ಯಾಂಕ್​ಗಳ ರೆಕರಿಂಗ್ ಡೆಪಾಸಿಟ್​ಗಳಲ್ಲಿ ಸಿಗುವುದಕ್ಕಿಂತ ಹೆಚ್ಚಿನ ಬಡ್ಡಿಯನ್ನು ಪೋಸ್ಟ್ ಆಫೀಸ್ ಆರ್​ಡಿಯಲ್ಲಿ ಗಳಿಸಬಹುದು. ಪೋಸ್ಟ್ ಆಫೀಸ್ ಆರ್​ಡಿ ಯೋಜನೆಯ ವಿವರ ಅರ್ಹತೆ: ಹತ್ತು ವರ್ಷ ಮೇಲ್ಪಟ್ಟ ಯಾವುದೇ ಭಾರತೀಯ ವ್ಯಕ್ತಿ…

Read More

ಗಣರಾಜ್ಯೋತ್ಸವ 2026: ಪರಪ್ಪನ ಅಗ್ರಹಾರದ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ – Kannada News | Snacks and Bakery Items Prepared by Prison Inmates Distributed During Republic Day Celebration at Manekshaw Parade Ground

ಬೆಂಗಳೂರು, ಜನವರಿ 25: 77ನೇ ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಷಾ ಪರೇಡ್‌ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೆಳಗ್ಗ 8.55ಕ್ಕೆ ರಾಜ್ಯಪಾಲರು ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪೊಲೀಸ್ ಬ್ಯಾಂಡ್ ತಂಡದಿಂದ ರಾಷ್ಟ್ರಗೀತೆ ನಡೆದು, ರಾಜ್ಯಪಾಲರು ತೆರೆದ ಜೀಪಿನಲ್ಲಿ ಪರೇಡ್‌ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ. ಬಳಿಕ ರಾಜ್ಯಪಾಲರ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ನಾಳೆ ಬೆಳಿಗ್ಗೆ…

Read More

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್ – Kannada News | Digital detox: A Karnataka village switches off TVs, mobiles every evening In halaga Belagavi District

ಬೆಳಗಾವಿ, (ಡಿಸೆಂಬರ್ 21): ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್‌ಸೀರಿಸ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್‌ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ…

Read More

ಗದಗದಲ್ಲಿ ಚಿನ್ನದ ನಿಧಿ: ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ – Kannada News | Beyond Gold: A Locals 45 Year Insight into Lakkundis Historical Finds

ಗದಗ, ಜ.14: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮವು ಪುರಾತನ ಕಾಲದ ನಿಧಿಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚೆಗೆ ಲಕ್ಕುಂಡಿಯಲ್ಲಿ ಚಿನ್ನ ಪತ್ತೆಯಾದ ನಂತರ ಇಲ್ಲಿನ ಇನ್ನು ಇಂತಹ ಚಿನ್ನ ಸಿಗುವ ಸ್ಥಳಗಳು ಇವೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಲಕ್ಕುಂಡಿಯ ನಿಧಿಗಳ ಬಗ್ಗೆ ಸ್ಥಳೀಯರಾದ ಬಸಪ್ಪ ಬಡಿಗೇರ ಅವರು ಟಿವಿ9 ಕನ್ನಡಕ್ಕೆ ಹಲವು ಆಸಕ್ತಿದಾಯಕ ಮಾಹಿತಿಗಳನ್ನು ನೀಡಿದ್ದಾರೆ. ಬಸಪ್ಪ ಬಡಿಗೇರರ ಪ್ರಕಾರ, ಲಕ್ಕುಂಡಿಯಲ್ಲಿ ಮುತ್ತು, ರತ್ನ, ಹವಳಗಳಲ್ಲದೆ ಚಿನ್ನವೂ ದೊರೆಯುತ್ತದೆ. ರಾಜಮಹಾರಾಜರ ಕಾಲದಲ್ಲಿ ನಡೆದ ಭೀಕರ ಯುದ್ಧಗಳಲ್ಲಿ ಮಡಿದವರ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

ನಿಮ್ಮ ಮನೆಯಲ್ಲಿ ಇರುವಂಥ ಈಶ್ವರ ವಿಗ್ರಹ ಅಥವಾ ಚಿತ್ರಪಟಕ್ಕೆ ಸಕ್ಕರೆ ಅಥವಾ ಹಣ್ಣನ್ನು ನೈವೇದ್ಯ ಮಾಡಿ ಪ್ರಸಾದವಾಗಿ ಸ್ವೀಕರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮುಂದೆ ನಡೆಯುವ ಸಂಗತಿಗಳ ಬಗ್ಗೆ ಸುಳಿವು ದೊರೆಯಲಿದೆ. ನಿಮ್ಮ ಮಾತು ಬಹಳ ಪ್ರಭಾವಿ ಆಗಿರುತ್ತದೆ. ಹಲವರು ಅದರಿಂದ ಸಹಾಯ ಪಡೆಯುವ ಅವಕಾಶಗಳಿವೆ. ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಾದರೆ ನಿಮ್ಮ ಬೆಂಬಲಿಗರು, ಅನುಯಾಯಿಗಳು ಹಲವು ರೀತಿಯಲ್ಲಿ ಅನುಕೂಲ ಮಾಡಿಕೊಡಲಿದ್ದೀರಿ. ಅದು ಉತ್ತಮ ಹುದ್ದೆಗಳನ್ನು…

Read More

ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ? – Kannada News | Karnataka Power Tussle: DK Shivakumar, DK Suresh Meet Mallikarjun Kharge in Delhi; Major Announcement Likely in May

ನವದೆಹಲಿ, ಏಪ್ರಿಲ್ 25: ಕರ್ನಾಟಕ ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ‘ಕೇವಲ ಗಾಳಿ ಸೇವನೆಗೆ ಇಲ್ಲಿಗೆ ಬಂದಿಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿರುವ ಮಾತು, ಅವರ ಭೇಟಿಯ ಹಿಂದಿನ ರಾಜಕೀಯ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಮೇ ಮೊದಲ ವಾರದಲ್ಲಿ ಕೆಲವು ಪ್ರಮುಖ ನಿರ್ಧಾರಗಳು ಹೊರಬರಬಹುದು. ರಾಜ್ಯ ನಾಯಕರನ್ನು ಹೈಕಮಾಂಡ್ ದೆಹಲಿಗೆ ಕರೆದು ಮಾತುಕತೆ ನಡೆಸಬಹುದು ಎಂದು ಡಿಕೆ ಸಹೋದರರು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆ ಭೇಟಿಯ ಪೂರ್ವಭಾವಿಯಾಗಿ ಅವರು…

Read More

ಹಲವು ಜವಾಬ್ದಾರಿಗಳ ನಡುವೆ ಜನಗಣತಿಗೂ ಶಿಕ್ಷಕರ ನಿಯೋಜನೆ: ನಿರ್ಧಾರಕ್ಕೆ ವ್ಯಾಪಕ ವಿರೋಧ

ಬೆಂಗಳೂರು, ಏಪ್ರಿಲ್​​ 03: ಜಾತಿ ಗಣತಿ, ಪಾಠ, ಬಿಸಿಯೂಟ ಹೀಗೆ ನಾನಾ ಜವಾಬ್ದಾರಿಗಳು ಮತ್ತು ಹೊಣೆ ನಿಭಾಯಿಸಿ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರನ್ನು ಏಪ್ರಿಲ್ 16ರಿಂದ ಜನಗಣತಿ ಕಾರ್ಯಕ್ಕೂ ರಾಜ್ಯದಲ್ಲಿ ನಿಯೋಜನೆ ಮಾಡಲಾಗ್ತಿದೆ. ರಾಜ್ಯದಲ್ಲಿ 2027ರ ಜನಗಣತಿ ಕಾರ್ಯಕ್ಕಾಗಿ ಒಂದು ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತಿದ್ದು, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಏಪ್ರಿಲ್ 1ರಿಂದ ಸ್ವಯಂ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇದು ಏಪ್ರಿಲ್ 15ರವರೆಗೆ ಮುಂದುವರಿಯಲಿದೆ. ಇನ್ನು…

Read More