RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಸಿದ್ದರಾಮಯ್ಯಗೆ ಜೋಶಿ ತಿರುಗೇಟು – Kannada News | ‘RSS and BJP Don’t Need to Create a Hindu Rashtra, It Already Exists’: Pralhad Joshi sparks on Siddaramaiah
ಹುಬ್ಬಳ್ಳಿ, ಜೂನ್ 21: ಆರ್‌ಎಸ್‌ಎಸ್ ಮತ್ತು ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹೊರಟಿವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್, ಬಿಜೆಪಿ ಹಿಂದೂ ರಾಷ್ಟ್ರವನ್ನು ಮಾಡಲು ಹೊರಟಿಲ್ಲ. ಈ ದೇಶ ಹಿಂದೂ ರಾಷ್ಟ್ರನೇ ಇದೆ. ಸಿದ್ದರಾಮಯ್ಯನವರಿಗೆ ಇದು ಗೊತ್ತಿಲ್ಲ ಎಂದಿದ್ದಾರೆ. ಈ ದೇಶ ಹಿಂದೂ ರಾಷ್ಟ್ರ ಇಲ್ಲ ಎಂದು ಅಂದಿದ್ದರೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ. ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಉದಾಹರಣೆ ನೀಡಿದ ಅವರು, ಹಿಂದೂ ಬಹುಸಂಖ್ಯಾ…