‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಿಂದ ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ (Gangs of UK) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಒರಟ ಪ್ರಶಾಂತ್, ಪದ್ಮಾ ವಾಸಂತಿ, ಪ್ರವೀಣ್, ಮುನಿ, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ವಿಕಾಸ್, ಉಮೇಶ್, ಅಮೋಘ್ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರದ ಟ್ರೇಲರ್ ಸಖತ್ ಮಾಸ್ ಆಗಿದೆ. ಏಪ್ರಿಲ್ 10ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು….